Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ | ೨.೯೨ ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಮುಖವಾಗಿ ೫ ವರ್ಷದೊಳಗಿನ ಒಟ್ಟು ೨,೯೨,೪೯೫ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.ಗ್ರಾಮೀಣ ಪ್ರದೇಶದ ೨,೨೧,೯೯೬ ಮಕ್ಕಳು ಹಾಗೂ ನಗರ ಪ್ರದೇಶದ ೭೦,೪೯೯ ಮಕ್ಕಳು ಸೇರಿದ್ದಾರೆ. ಜಿಲ್ಲೆಯ ಒಟ್ಟು ೪,೭೮,೨೮೩ ಮನೆಗಳಿಗೆ ಲಸಿಕಾ ಕಾರ್ಯಕರ್ತರು ಭೇಟಿ ನೀಡಲಿದ್ದು, ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಜುಲೈ ೧ ರಿಂದ ೩೧ರವರೆಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಭಿಯಾನದಡಿ ಜಿಲ್ಲೆಯ ಅರ್ಹ ಹಿರಿಯ ನಾಗರಿಕರನ್ನು ಗುರುತಿಸಿ, ಸೇವಾಸಿಂಧು ಪೋರ್ಟಲ್ ಮೂಲಕ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಿ, ಗುರುತಿನ ಚೀಟಿಗಳನ್ನು ವ್ಯವಸ್ಥಿತವಾಗಿ ಹಾಗೂ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿತರಿಸಲಾಗುವುದು. ಈ ಅವಧಿಯಲ್ಲಿ ಎಲ್ಲಾ ಹಿರಿಯ ನಾಗರಿಕರ ಹೊಸದಾಗಿ ಅರ್ಜಿ ಸಲ್ಲಿಸಲು, ಅಗತ್ಯ ದಾಖಲೆಗಳ ಪರಿಶೀಲನೆಗೆ ಹಾಗೂ ಸಂಬಂಧಿತ ಸೇವೆಗಳನ್ನು ಸುಲಭವಾಗು ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಹಿರಿಯ ನಾಗರಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಗುರುತಿನ ಚೀಟಿ ಅತ್ಯಗತ್ಯವಾಗಿದ್ದು, ಇನ್ನೂ ಗುರುತಿನ ಚೀಟಿ ಪಡೆಯದ ಎಲ್ಲಾ ಅರ್ಹ ಹಿರಿಯ ನಾಗರಿಕರು ಈ ವಿಶೇಷ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಚಿಗುರು, ಯುವಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಉದ್ದೇಶದಿಂದ ಇಲಾಖೆಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.ಚಿಗುರು, ಯುವ ಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಚಿಗುರು ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ೮ ರಿಂದ ೧೪ ವಯೋಮಾನದವರು,ಯುವಸೌರಭ ಕಾರ್ಯಕ್ರಮದಲ್ಲಿ ಭಾಗವಹಿಸುವವರು ೧೫ ರಿಂದ ೩೦ ವರ್ಷದ ಪ್ರತಿಭಾವಂತ ಯುವ ಕಲಾವಿದರಾಗಿರಬೇಕು.ಆಕಾಶವಾಣಿ ವಿವಿಧ ಗ್ರೇಡಗಳ ಕಲಾವಿದರನ್ನು ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರನ್ನು ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತದೆ.ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಚಿಸುವ ಕಲಾವಿದರು ಅಗತ್ಯ ದಾಖಲೆ ಸಹಿತ ಅರ್ಜಿಯನ್ನು ಜುಲೈ ೦೧ ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ,ಸ್ಟೇಶನ್ ರಸ್ತೆ ಇಲ್ಲಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨೨೫೧೨೬೧ ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕೃತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಂಡಾಂತರ ಗರ್ಭಿಣಿಯರ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ಒಳಪಡಿಸಬೇಕು. ಆರಂಭಿಕ ಹಂತದಲ್ಲಿ ಅನೀಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ನೀಡವಂತಾಗಬೇಕು. ಕೈಗೊಳ್ಳುವ ಈ ಉಪಕ್ರಮದಿಂದ ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತರಲು ಸೂಚಿಸಿದರು.ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ, ಸಭಾ ಭವನದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್. ಪೊರ್ಟಲ್ ಮೂಲಕ ಗರ್ಭಿಣಿಯರಿಗೆ ಕಾಲಕಾಲಕ್ಕೆ ಆರೋಗ್ಯ ಮಾಹಿತಿ ಒದಗಿಸುವ ಜೊತೆಗೆ ತಾಯಿ-ಶಿಶು ಮರಣ ತಡೆಯಲು ಸರ್ಕಾರ ಹತ್ತಾರು ಕಾರ್ಯಕ್ರಮ ರೂಪಿಸಿ ಜಾರಿಗೊಳಿಸುತ್ತಿದೆ. ಈ ಬಗ್ಗೆ ಜಾಗೃತಿಗೆ ಮಹತ ನೀಡಿ ಮಾಹಿತಿ ನೀಡುವರಿಂದ ಹೆರಿಗೆಯಾಗಿ ಮಗುವಿಗೆ ಒಂದು ವರ್ಷ ಪೂರ್ಣಗೊಳ್ಳುವವರೆಗ ಪಡೆಯಬೇಕಾದ ಚಿಕಿತ್ಸೆ, ಲಸಿಕೆ ಸೌಲಭ್ಯಗಳ ಪ್ರತಿ ತಿಂಗಳ ಮಾಹಿತಿಯನ್ನು ಕಾಲೋಚಿತಗೊಳಿಸಬೇಕು. ಜೊತೆಗೆ ಆರೋಗ್ಯ ಸೇವಾ ಸೌಲಭ್ಯಗಳನ್ನು…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ನಭೋಮಂಡಲದಲ್ಲಿ ಶನಿವಾರ ಬೆಳಗ್ಗೆ 10:30 ಕ್ಕೆ ತಾಲ್ಲೂಕಿನ ಘೋಣಸಗಿ ಗ್ರಾಮದಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರವಾಗಿ ಕಾಮನಬಿಲ್ಲಿನಂತೆ ಉಂಗುರಾಕಾರ ಕಾಣಿಸಿಕೊಂಡಿತು. ಪ್ರಕೃತಿ ವಿಸ್ಮಯದ ಕೌತುಕವನ್ನು ಕಣ್ಣಾರೆ ಕಂಡು ಯುವಕರು, ಶಾಲಾ ಮಕ್ಕಳು ಹಳ್ಳಿಯ ಜನರು ಕಣ್ಣು ಕುಕ್ಕಿಸುವ ಸೂರ್ಯನ ಕಿರಣಗಳು ಪ್ರಕಾಶಮಾನವಾಗಿದ್ದರೂ ಈ ಕೌತುಕವನ್ನು ನೋಡಿ ನಿಬ್ಬೆರಗಾದರು.ಏಳು ಬಣ್ಣಗಳ ಕಾಮನಬಿಲ್ಲಿನ ಕುರಿತು ಹಾಗೂ ನಕ್ಷತ್ರಗಳು ಮತ್ತು ಉಪಗ್ರಹಗಳ ಸೂತ್ತಲೂ ಆವರಿಸುವ ಉಂಗುರ ವ್ಯವಸ್ಥೆ ಕುರಿತು ಪಠ್ಯ ಪುಸ್ತಕಗಳಲ್ಲಿ ವಿಧ್ಯಾರ್ಥಿಗಳು ಅರಿತುಕೊಳ್ಳುತ್ತಿದ್ದರು. ಶಾಲಾ ಮಕ್ಕಳು ಶಾಲಾ ಆವರಣದಲ್ಲೆ ಕಾಣುವ ಈ ನೈಜ ಪ್ರಕೃತಿ ವಿಸ್ಮಯ ಕಂಡು ಶಿಕ್ಷಕರಿಂದ ಮಾಹಿತಿ ಪಡೆದಕೊಂಡರು.ವಾತಾವರಣದ ಮೇಲ್ಭಾಗದಲ್ಲಿರುವ ಹನಿಗಳು ಮತ್ತು ಮಂಜಿನ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ ವಕ್ರೀಭವನಗೊಂಡು ಈ ರೀತಿಯ ‘ಸನ್ ಹ್ಯಾಲೋ (Sun Halo)’ ಅಥವಾ ಸೂರ್ಯನ ಉಂಗುರ ಸೃಷ್ಟಿಯಾಗುತ್ತದೆ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯುತ್ ಇಲಾಖೆಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಇತರೆ ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡ ಕೂಡದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ಕೈಗೊಂಡು ತಹಶೀಲ್ದಾರ ನಿಂಗಣ್ಣ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಸಭೆ ಸೇರಿದ ರೈತ ಸಮುದಾಯ ವಿದ್ಯುತ್ ವಿತರಣಾ ಕೇಂದ್ರಗಳನ್ನು ಖಾಸಗೀಕರಣ ಮಾಡುವುದರ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು ಮೊಹರೆ ಹಣಮಂತ್ರಾಯ ವೃತ್ತ, ಡಾ.ಅಂಬೇಡ್ಕರ್ ವೃತ್ತದ ಮೂಲಕ ಇಂಡಿ ರಸ್ತೆಯಲ್ಲಿನ ತಹಶೀಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು.ನಂತರ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ ಸುಲಾಖೆ ಅವರಿಗೂ ಸಹ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಪ್ರಮುಖರಾದ ಸಿದ್ಧನಗೌಡ ಪಾಟೀಲ, ಸೋಮಶೇಖರ ಹಿರೇಮಠ, ರಾಮು ದೇಸಾಯಿ ಮಾತನಾಡಿದರು.ರೈತ ಪ್ರಮುಖರಾದ ಅಜೀಜ್ ಯಲಗಾರ, ಶಾಂತಪ್ಪ ದೇವೂರ, ಸಂಪತ ಜಮಾದಾರ, ರಾವುತ ಅಗಸರ, ಗುರು ಜಡಗೊಂಡ, ಕಾಶೀನಾಥ ಕೋರಿ, ಮುನೀರ್…
ಜೂ.೨೪ ಹಾಗು ೨೫ರಂದು ಸ್ಥಳ ಪರಿಶೀಲಿಸಲಿರುವ ವಿಶೇಷ ತಂಡ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಇಂಡಿಯನ್ ಹೆರಿಟೇಜ್ ಸಿಟಿ ನೆಟ್ ವರ್ಕ್ ಫೌಂಡೇಶನ್ ಸಂಸ್ಥೆ (ಡಿಪಿಆರ್) ಕ್ರಿಯಾ ಯೋಜನೆ ಸಿದ್ಧಪಡಿಸಲು ಜೂ.೨೪ ಹಾಗು ೨೫ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ವೆಂಟ್ ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಗರದಲ್ಲಿರುವ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಬೇಕೆಂಬ ಹಿನ್ನೆಲೆಯಲ್ಲಿ ಕರೇಜ್ ಮಾರ್ಗದಲ್ಲಿ ಕೈಗೊಳ್ಳಬೇಕಾಗಿರುವ ಸುರಕ್ಷತಾ ಕ್ರಮಗಳ ಕುರಿತು ಇಟಗಿ ಪೆಟ್ರೋಲ್ ಬಂಕ್ ಹತ್ತಿರ ಕರೇಜ್ ವೆಂಟ್ಸ್ ಹಾಗೂ ಮಾರ್ಗ ಪರಿಶೀಲಿಸಿ ಅವರು ಮಾತನಾಡಿದರು.ಚರಂಡಿ ನೀರು ವೆಂಟ್‌ನಲ್ಲಿ ಹರಿಯುವುದನ್ನು ತಡೆಗಟ್ಟಲು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರ ಪ್ರದೇಶದಲ್ಲಿರುವ ಐತಿಹಾಸಿಕ ಕರೇಜ್ -ನೀರು ಸರಬರಾಜು ಸುರಂಗ ಮಾರ್ಗ…
ಜೂ.೨೪ ಹಾಗು ೨೫ರಂದು ಸ್ಥಳ ಪರಿಶೀಲಿಸಲಿರುವ ವಿಶೇಷ ತಂಡ | ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಇಂಡಿಯನ್ ಹೆರಿಟೇಜ್ ಸಿಟಿ ನೆಟ್ ವರ್ಕ್ ಫೌಂಡೇಶನ್ ಸಂಸ್ಥೆ (ಡಿಪಿಆರ್) ಕ್ರಿಯಾ ಯೋಜನೆ ಸಿದ್ಧಪಡಿಸಲು ಜೂ.೨೪ ಹಾಗು ೨೫ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ವೆಂಟ್ ಸ್ವಚ್ಛಗೊಳಿಸುವಂತೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ನಗರದಲ್ಲಿರುವ ಐತಿಹಾಸಿಕ ಕರೇಜ್ ವ್ಯವಸ್ಥೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಬೇಕೆಂಬ ಹಿನ್ನೆಲೆಯಲ್ಲಿ ಕರೇಜ್ ಮಾರ್ಗದಲ್ಲಿ ಕೈಗೊಳ್ಳಬೇಕಾಗಿರುವ ಸುರಕ್ಷತಾ ಕ್ರಮಗಳ ಕುರಿತು ಇಟಗಿ ಪೆಟ್ರೋಲ್ ಬಂಕ್ ಹತ್ತಿರ ಕರೇಜ್ ವೆಂಟ್ಸ್ ಹಾಗೂ ಮಾರ್ಗ ಪರಿಶೀಲಿಸಿ ಅವರು ಮಾತನಾಡಿದರು.ಚರಂಡಿ ನೀರು ವೆಂಟ್‌ನಲ್ಲಿ ಹರಿಯುವುದನ್ನು ತಡೆಗಟ್ಟಲು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರ ಪ್ರದೇಶದಲ್ಲಿರುವ ಐತಿಹಾಸಿಕ ಕರೇಜ್ -ನೀರು ಸರಬರಾಜು ಸುರಂಗ ಮಾರ್ಗ…
ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಸಿರು ಸೇನೆ ಮನವಿ ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ರಾಜ್ಯದ ಸಮಸ್ತ ರೈತರ ಪರವಾಗಿ, ಗ್ರಾಹಕರ ಪರವಾಗಿ, ನೌಕರರ ಹಿತದೃಷ್ಠಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಹೆಸ್ಕಾಂ ವಿದ್ಯುತ್ ಸಂಸ್ಥೆಯನ್ನು ಟಾಟಾ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರ ಮಾಡುತ್ತಿರುವುದನ್ನು ಮತ್ತು ವಿದ್ಯುತ್ ವಿತರಣಾ ಪರವಾನಿಗೆಯನ್ನು ನೀಡುತ್ತಿರುವುದನ್ನು ಕೂಡಲೇ ಕೈಬಿಟ್ಟು ಸರಕಾರವೇ ನಡೆಸಿಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ವತಿಯಿಂದ ತಹಶಿಲ್ದಾರರು ಹಾಗೂ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭೀಯಂತರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹ ಮಾಡಲಾಯಿತು.ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಹೆಸ್ಕಾಂ ಇಲಾಖೆಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಇತರೆ ಖಾಸಗಿ ಸಂಸ್ಥೆಗಳಿಗೆ ರಾಜ್ಯದ ೧೫ ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಿಗೆ ನೀಡಲು ನಿರ್ಧರಿಸಿರುವುದನ್ನು ಈ ಕೂಡಲೇ ಕೈಬಿಡಬೇಕು, ಈಗಾಗಲೇ ರಾಜ್ಯದ ೩೧ ಜಿಲ್ಲೆಗಳ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸಾವಿರಾರು ರೈತರು ವಿರೋಧವನ್ನು ವ್ಯಕ್ತಪಡಿಸಿ ಮನವಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತೀಯ ಜನತಾ ಪಕ್ಷದ ಚಡಚಣ ಮಂಡಲ ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳು ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನ ಕುರಿತು ಮಹತ್ವದ ಸಭೆ ಶನಿವಾರ ಚಡಚಣ ಚೌಡೇಶ್ವರಿ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.ಶ್ರೀ ಯೋಗಾನಂದ ಸ್ವಾಮಿಗಳಿಂದ ಸಸಿಗೆ ನೀರುಣಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಚಡಚಣ ಮಂಡಲ ಅಧ್ಯಕ್ಷ ಚಂದ್ರಕಾಂತ ಗೌಡ ಪಾಟೀಲ ವಹಿಸಿದ್ದರು.ಸಭೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದ ರಮೇಶ್ ಜಿಗಜಿಣಗಿ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.ಬಡವರ ಕಲ್ಯಾಣ, ರೈತರ ಸಬಲೀಕರಣ, ಮಹಿಳಾ ಸಶಕ್ತೀಕರಣ, ಡಿಜಿಟಲ್ ಭಾರತ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಲಾಗಿದೆ ಎಂದು ವಿವರಿಸಿದರು.ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಕುರಿತು ಕಾರ್ಯಕರ್ತರಿಗೆ…
