Author: editor.udayarashmi@gmail.com

ವಿಜಯಪುರ: ಜಿಲ್ಲೆಯ ನಿಡಗುಂದಿ ೧೧೦ಕೆವ್ಹಿ ಉಪಕೇಂದ್ರದಲ್ಲಿ ೧೦ ಎಂವಿಎ ಪರಿವರ್ತಕ ಬದಲಾಯಿಸಿ ೨೦ ಎಂವಿಎ ಪರಿವರ್ತಕ ಅಳವಡಿಸುವ ಕಾಮಗಾರಿ ಹಾಗೂ ತ್ರೆöÊಮಾಸಿಕ ದುರಸ್ಥಿ ಕಾಮಗಾರಿಯನ್ನು ಫೆ.೨೯ರಂದು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ಉಪ ಕೇಂದ್ರಗಳಿಂದ ಸರಬರಾಜಾಗುವ ೩೩ಕೆವ್ಹಿ ಮಾರ್ಗಗಳೂ ಹಾಗೂ ೧೧ಕೆವ್ಹಿ ನಿರಂತರ ಜ್ಯೋತಿ ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು, ನಿಡಗುಂದಿ ಪಟ್ಟಣ, ಆಲಮಟ್ಟಿ ಹಾಗೂ ಬಸವನಬಾಗೇವಾಡಿ, ಇಂಗಳೇಶ್ವರ ಬಹುಹಳ್ಳಿ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಅಂದು ಬೆಳಿಗ್ಗೆ ೮ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ವಿಜಯಪುರ ರೇಲ್ವೆ ಪೊಲೀಸ್ ಠಾಣೆಯಲ್ಲಿ ಅಂದಾಜು ೫೦ ರಿಂದ ೫೫ ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಯಾದ ವ್ಯಕ್ತಿಯ ವಾರಸುದಾರರ ಪತ್ತೆಗೆ ರೇಲ್ವೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಪತ್ತೆಯಾದ ವ್ಯಕ್ತಿಯು ೫.೬ ಅಡಿ ಎತ್ತರ, ಸಾದಗಪ್ಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಕೋಲುಮುಖ, ನೇರವಾದ ಮೂಗು, ತಲೆಯಲ್ಲಿ ೨ ಇಂಚು ಬಿಳಿ-ಕಪ್ಪು ಬಣ್ಣದ ಮಿಶ್ರಿತ ಕೂದಲು, ಅರ್ಧ ಇಂಚು ಬಿಳಿ ಬಣ್ಣದ ಕುರುಚಲ ದಾಡಿ, ಮೀಸೆವುಳ್ಳವನಾಗಿದ್ದು, ಚಾಕಲೇಟ್ ಬಣ್ಣದ ಅರ್ಧ ತೊಳಿನ ರೇಡಿಮಢ್ ಅಂಗಿ, ಚಾಕಲೇಟ್ ಬಣ್ಣದ ಪ್ಯಾಂಟ್ ಧರಿಸಿದ್ದು, ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಆರಕ್ಷಕ ಉಪನಿರೀಕ್ಷಕರು, ರೇಲ್ವೆ ಪೊಲೀಸ್ ಠಾಣೆ. ವಿಜಯಪುರ : ೦೮೩೫೨-೨೫೦೮೮೩, e-mail address:- bijapurrly@ksp.gov.in ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ ೦೮೦-೨೨೮೭೧೨೯೧, ಇ-ಮೇಲ್ : dcrly@ksp.gov.inಮಾಹಿತಿ ನೀಡಲು ಕೋರಿದೆ.

Read More

ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಎಂಸಿಎ ಡಾ.ಫಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆಯ ನಂತರ ಖಾಲಿ ಉಳಿದಿರುವ ೨೦೨೩-೨೪ನೇ ಸಾಲಿನ ಸೀಟುಗಳನ್ನು ಭರ್ತಿ ಮಾಡಲು ವಿಶ್ವವಿದ್ಯಾನಿಲಯದ ಸಾಮಾನ್ಯ ಪರೀಕ್ಷೆಯನ್ನು ಮಾ.೪ರಂದು ನಡೆಸಲಾಗುತ್ತಿದೆ.ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು www.rcub.ac.in ನಿಂದ ಡೌನಲೋಡ್ ಮಾಡಿಕೊಂಡು ಧೃಡೀಕೃತ ದಾಖಲೆಗಳೊಂದಿಗೆ ಮಾರ್ಚ ೧ರ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿ ದೃಢೀಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಗಣಕ ವಿಜ್ಞಾನ ವಿಭಾಗಕ್ಕೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯ ಅಂತರ್ಜಾಲ ಅಥವಾ ಡಾ.ಫಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರವನ್ನು (೦೮೩೧-೨೫೬೫೨೪೪)ನ್ನು ಸಂಪರ್ಕಿಸಬಹುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ೧೦ ತಿಂಗಳುಗಳ ಕಾಲ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ರೈತರ ಮಕ್ಕಳಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ.ವಿಜಯಪುರ ಜಿಲ್ಲೆಯಿಂದ ಒಟ್ಟು ೧೭ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿಯ ಹಿಡಕಲ್ ಡ್ಯಾಂ ತೋಟಗಾರಿಕೆ ಇಲಾಖೆಯಲ್ಲಿ ತರಬೇತಿ ನೀಡಲಾಗುತ್ತದೆ.ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಅಥವಾ ಇಲಾಖೆ ವೆಬ್ ಸೈಟ್ www://horticulturedir.kar.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೧೫ ಸಾಮಾನ್ಯ ವರ್ಗದವರಿಗೆ ೩೦ರೂ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ : ೦೧-೦೪-೨೦೨೪ ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಎಪ್ರಿಲ್ ೬ ರಂದು ನಡೆಯಲಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ೧೭೫೦ರೂ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಇಲಾಖೆಯ ವಸತಿಗೃಹದಲ್ಲಿ ತಂಗುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಸೆಸೆಲ್ಸಿ ಪಾಸ್ ಆಗಿರಬೇಕು. ತಂದೆ ಅಥವಾ ತಾಯಿ ಅಥವ ಸ್ವತಹ ತಮ್ಮ ಹೆಸರಿನಲ್ಲಿ ಜಮಿನು ಇರುವ ದಾಖಲೆ ಹೊಂದಿರಬೇಕು.ಹೆಚ್ಚಿನ ಮಾಹಿತಿಗಾಗಿ ಹಿರಿಯ ತೋಟಗಾರಿಕೆ…

Read More

ವಿಜಯಪುರ: ಕೆಪಿಟಿಸಿಎಲ್ ಮೂಲಕ ೧೧೦/೧೧ ಕೆವಿ ಬಬಲೇಶ್ವರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ೧೧ಕೆವಿ ಮಾರ್ಗಗಳಲ್ಲಿ ಮಾರ್ಚ್ ೨ರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕೆಪಿಟಿಸಿಎಲ್ ಮೂಲಕ ೧೧೦/೧೧ ಕೆವಿ ತೊರವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ೧೧ಕೆವಿ ಮಾರ್ಗಗಳಲ್ಲಿ ಫೆ.೨೯ರ ಬೆಳಿಗ್ಗೆ ೯ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ವಿಜಯಪುರ ಜಿಲ್ಲೆಯ ಒಟ್ಟು ೫೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೦೧ ರಿಂದ ೨೨ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು, ಮಾರ್ಗಸೂಚಿಗಳನ್ವಯ ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ : ಜಿಲ್ಲೆಯ ೫೯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಪರೀಕ್ಷೆ ಮುಗಿಯುವರೆಗೆ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್…

Read More

ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಜಾಗೃತಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ಕರೆ ದೇವರಹಿಪ್ಪರಗಿ: ದೇಶದಲ್ಲಿ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಆಲಗೂರ ಹೇಳಿದರು.ಪಟ್ಟಣದಲ್ಲಿ ಬುಧವಾರ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಿದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಾದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ಧರಾಮಯ್ಯ ಚುನಾವಣೆ ಪೂರ್ವದಲ್ಲಿ ನುಡಿದಂತೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದು ಅನುಷ್ಠಾನಗೊಳಿಸಿದ್ದಾರೆ. ಇದನ್ನು ಲೋಕಸಭೆ ಚುನಾವಣೆಗೆ ಮುನ್ನ ಪ್ರತಿ ಮನೆಮನೆಗೆ ತಲುಪಿಸುವ ಕಾರ್ಯವಾಗಬೇಕು ಎಂದರು.ಸಿಂದಗಿ ಕ್ಷೇತ್ರದ ಮಾಜಿಶಾಸಕ ಶರಣಪ್ಪ ಸುಣಗಾರ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ, ಬ್ಲಾಕ್ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷೆ ಸರಿತಾ ನಾಯಿಕ್, ಮಡಿವಾಳಪ್ಪ ಬ್ಯಾಲ್ಯಾಳ, ಜಹಾಂಗೀರ ಶಿರಸಗಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದರು. ಪರಶುರಾಮ ದಿಂಡವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ದೇವರಹಿಪ್ಪರಗಿ ಹಾಗೂ ಹೂವಿನಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಶೀರ್ ಅಹ್ಮದ್…

Read More

ದೇವರಹಿಪ್ಪರಗಿ: ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪಾಲಕರ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್(ಚಬನೂರ) ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಇಂದುಮತಿ ಸಾವಳಗಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.ವಿದ್ಯೆಯೇ ನಿಜವಾದ ಸಂಪತ್ತು. ಮಕ್ಕಳಿಗಾಗಿ ನೀವು ಪಾಲಕರು ಯಾವದೇ ಸ್ಥಿರವಾದ ಆಸ್ತಿಗಳನ್ನು ಮಾಡದೇ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಿ ಉತ್ತಮ ಪ್ರಜೆಗಳನ್ನಾಗಿ ಮಾಡಿದರೇ ಅದುವೇ ಮಕ್ಕಳ ಪಾಲಿನ ದೊಡ್ಡ ಆಸ್ತಿ ಎಂದರು.ಕನ್ನೋಳ್ಳಿ ಹಿರೇಮಠದ ಶ್ರೀಸಿದ್ಧಲಿಂಗಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಮಕ್ಕಳ ಕಲಿಕೆಗೆ ಇಂದು ಪಾಲಕರು ಹೆಚ್ಚಿನ ಆಸಕ್ತಿ, ಜವಾಬ್ದಾರಿ ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳುತ್ತಾ, ಮುಂದಿನ ದಿನಗಳಲ್ಲಿ ಸಂಸ್ಥೆ ಇನ್ನೂ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಾಂತಪ್ಪ ಸಾವಳಗಿ ವಹಿಸಿಕೊಂಡು ಮಕ್ಕಳಿಗೆ ಪಾರಿತೋಷಕ ವಿತರಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಗೀತೆಗಳ ಮನರಂಜನೆಯ ಕಾರ್ಯಕ್ರಮಗಳು ಜರುಗಿದವು.ಸಂಸ್ಥೆಯ ಕಾರ್ಯದರ್ಶಿ ಸಂತೋಷ ಸಾವಳಗಿ, ಶಂಕರಗೌಡ…

Read More

ಬಸವನಬಾಗೇವಾಡಿ: ಆರೂಢ ಮಹಾರಾಜಿ ಕೀ ಜೈ… ಎನ್ನುವ ಮುಗಿಲು ಮುಟ್ಟುವ ಜಯಘೋಷದೊಂದಿಗೆ ಭಕ್ತಾಧಿಗಳ ಸಮ್ಮುಖದಲ್ಲಿ ತಾಲ್ಲೂಕಿನ ಸುಕ್ಷೇತ್ರ ಆರೂಢರ ಐಕ್ಯಸ್ಥಳ ಆರೂಢ ನಂದಿಹಾಳದ ಬ್ರಹ್ಮಸ್ವರೂಪಿ ಶ್ರೀಗುರು ಆರೂಢರ ೪೨ನೇ ಜಾತ್ರಾ ಮಹೋತ್ಸವ ನಿಮಿತ್ಯ ರಥೋತ್ಸವ ಭಾರತ ಹುಣ್ಣಿಮೆಯ ದ್ವಿತೀಯ ದಿನವಾದ ಸೋಮವಾರ ಸಂಜೆ ವಿಜೃಂಭಣೆಯಿಂದ ಜರುಗಿತು.ಜಾತ್ರಾ ದಿನದಂದು ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಅಭೀಷೇಕದ ನಂತರ ಕಳಸವನ್ನು ಹೆಂಗಳೆಯರಿಂದ ಕಳಸದೊಂದಿಗೆ ಗಂಗಾಸ್ಥಳಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿ ಡೊಳ್ಳಿನ ಮೇಳದೊಂದಿಗೆ ಗ್ರಾಮದ ತುಂಬೆಲ್ಲಾ ಪಲ್ಲಕ್ಕಿ ಹಾಗೂ ಮಹಿಳೆಯರಿಂದ ಕುಂಭ ಮೆರವಣಿಗೆ ನಡೆಸಿ ಆರೂಢರು ಸಾಧನೆಗೈದ ಕೊಂಪಿಗೆ ಸಾಗಿ ಶ್ರೀಮಠಕ್ಕೆ ಆಗಮಿಸಿತು.ಗ್ರಾಮದ ಗುರುನಗೌಡ ಪಾಟೀಲ, ಬಸಯ್ಯ ಹಿರೇಮಠ, ರಾಮನಗೌಡ ಹಳ್ಳಿ, ಕೆಂಚು ವಾಲೀಕಾರ, ನಿಂಗಣ್ಣ ಮದರಿ ಅವರ ಮನೆಗಳಿಂದ ಕಳಸ, ಹಗ್ಗ, ಛತ್ರಿ ಛಾಮರಗಳನ್ನು ವಾದ್ಯ ವೈಭವಗಳೊಂದಿಗೆ ತರಲಾಯಿತು.ಸಂಜೆ ಪುಣೆ, ಗೋವಾ, ಮೈಸೂರು, ಹುಬ್ಬಳ್ಳಿ, ಬೆಂಗಳೂರು, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬಾಗಲಕೋಟೆ, ರಾಯಚೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಹಸ್ರ ಸಂಖ್ಯೆಯ…

Read More