Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಶುಕ್ರವಾರ ಜನತೆ ಶ್ರದ್ಧಾ-ಭಕ್ತಿಯಂದ ಆಚರಿಸಿದರು.ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನದಲ್ಲಿ ಭಕ್ತರು ಬೆಳಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಬಸವ ಜಯಂತಿಯಂಗವಾಗಿ ಮೂಲನಂದೀಶ್ವರ(ಬಸವೇಶ್ವರ) ಪಲ್ಲಕ್ಕಿ ಕಟ್ಟೆಯನ್ನು ಅಲಂಕರಿಸಲಾಗಿತ್ತು.ಸಂಪ್ರದಾಯದಂತೆ ಬಸವೇಶ್ವರ ದೇವಸ್ಥಾನದಿಂದ ವಿರಕ್ತಮಠಕ್ಕೆ ತೆರಳಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕ ಬರಮಾಡಿಕೊಳ್ಳಲಾಯಿತು. ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳು ಬಸವ ಜಯಂತಿಯಂಗವಾಗಿ ಹಮ್ಮಿಕೊಂಡಿದ್ದ ಶಿವಭಜನೆಗೆ ಪೂಜೆ ಸಲ್ಲಿಸಿ ಮಂಗಳಾರತಿ ಜರುಗಿದ ನಂತರ ಶಿವಭಜನೆ ಮುಕ್ತಾಯಗೊಳಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ ಶ್ರೀಗಳಿಂದ ಷಟ್ಸ್ಥಲ ಧ್ವಜಾರೋಹಣ ನೆರವೇರಿಸುವ ಮೂಲಕ ಬಸವ ಜಯಂತಿಗೆ ಚಾಲನೆ ನೀಡಿದರು. ನಂತರ ಶ್ರೀಗಳನ್ನು ಶ್ರೀಮಠಕ್ಕೆ ಮೆರವಣಿಗೆ ಮೂಲಕ ಬೀಳ್ಕೊಡಲಾಯಿತು.ಬೆಳಗ್ಗೆ ೧೧.೩೦ ಗಂಟೆಗೆ ಸುಮಾರಿಗೆ ಬಸವಜನ್ಮ ಸ್ಮಾರಕದಿಂದ ವಿರಕ್ತಮಠಕ್ಕೆ ತೆರಳಿ ಶ್ರೀಗಳನ್ನು ಬಸವ ಜನ್ಮಸ್ಮಾರಕಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ಶ್ರೀಗಳ ಆಗಮನದ ನಂತರ ಅವರ ಸಾನಿಧ್ಯದಲ್ಲಿ ಬೆಳ್ಳಿ ಬಾಲ ಬಸವ ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಮಹಿಳೆಯರು ನಾಮಕರಣ ಮಾಡುವ ಪದ್ಧತಿ ನೆರವೇರಿಸಿ…

Read More

ವಿಜಯಪುರ: ನಗರದ ಹೃದಯಭಾಗದಲ್ಲಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಶುಕ್ರವಾರ ಬಸವ ಜಯಂತಿಯಂದು ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮತ್ತು ವಿಜಯಪುರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Read More

ವಿಜಯಪುರ: ಕಾಶ್ಮೀರದ ಅರಸ ಪರ್ಷಿಯನ್ ಭಾಷೆ ಬಿಟ್ಟು ಕನ್ನಡ ಕಲಿತು ಶ್ರೇಷ್ಠ ವಚನಕಾರನೆನಿಸಲು ಬಸವಣ್ಣನವರ ನಡೆ – ನುಡಿಗಳೆ ಕಾರಣವಾದವು. ಧಾರ್ಮಿಕ ಜಿಡ್ಡು ತೊಳೆದು ವೈಚಾರಿಕ ನೆಲೆಗಟ್ಟಿನಲ್ಲಿ. ಲಿಂಗಾಯತ ಸಮಾಜ ನಿರ್ಮಿಸಿದ ಬಸವಣ್ಣ ವಿಶ್ವದ ಶ್ರೇಷ್ಠ ದಾರ್ಶನಿಕ ಎನಿಸಿದ್ದಾನೆ ಎಂದು ಜನಪದ ಸಾಹಿತಿ ಶಂಕರ ಬೈಚಬಾಳ ಹೇಳಿದರು.ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಆಶ್ರಯದಲ್ಲಿ ನಗರದ ಪರಿಷತ್ ಕಾರ್ಯಾಲಯದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಸವಾದಿ ಶಿವಶರಣರು ಜನಪದರ ಆಡು ನುಡಿಯಲ್ಲಿ ವಚನ ಬರೆದು ಜನಪದ ಸಾಹಿತ್ಯ ರಕ್ಷಿಸಿದರು . ವಚನ ಸಾಹಿತ್ಯ ಗ್ರಾಮೀಣ ಬದುಕಿನ ಪ್ರತಿಬಿಂಬವಾಗಿ ಕಾಣುತ್ತಿದೆ ಎಂದು ಹೇಳಿದರು.” ಸಾಮರಸ್ಯದ ಬದುಕಿಗೆ ಶರಣರ ವಚನಗಳು ” ಕುರಿತು ಉಪನ್ಯಾಸ ನೀಡಿದ ಚಿಂತಕ ಮೋಹನ ಕಟ್ಟಿಮನಿ, ಸತ್ಕಾರ್ಯ- ಸದ್ವಿಚಾರದ ಮೂಲಕ ಬಸವಣ್ಣನವರು ಸಮಾನತೆಯ ಸಮಾಜ ನಿರ್ಮಿಸುವ ಕನಸು ಕಂಡರು. ಶರಣರ ಸಹಕಾರದಿಂದ ವಚನ ಚಳುವಳಿ ನಡೆಸಿದರು. ಬಸವಣ್ಣನವರ ವಿಚಾರಧಾರೆಗಳು ಮೈಗೂಡಿಸಿಕೊಂಡು ನಡೆದರೆ ಬದುಕು ಸುಂದರವಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿ…

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಶಿಷ್ಟಾಚಾರದಂತೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರರಾದ ಶ್ರೀಮತಿ ಕವಿತಾ ಅವರು ಬಸವಣ್ಣನವರ ಹಾಗೂ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.ಇದಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಮುಖಂಡರುಗಳಾದ ಶರಣು ಸಬರದ, ಭೀಮರಾಯ ಜಿಗಜಿನ್ನಿ, ಹಣಮಂತ ಮಾಚಪ್ಪನವರ, ಸುರೇಶ ದೇಸಾಯಿ, ಕೆ.ಕೆ.ಬನ್ನೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕ ದತ್ತು ಪಡೆದು ಬಸವ ಜಯಂತಿ ಆಚರಿಸಿದ ದಂಪತಿ ವಿಜಯಪುರ: ನಗರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನನ್ನು ಶೈಕ್ಷಣಿಕ ದತ್ತು ಪಡೆದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಸಂಗಮೇಶ ಬಬಲೇಶ್ವರ ದಂಪತಿ ಮಾನವೀಯ ಕಳಕಳಿ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.ಶುಕ್ರವಾರ ಆಯೋಜಿಸಲಾದ ಈ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಕು.ಅಭಿಷೇಕ ಅಶೋಕ್ ಜಾದವ ಆಗಮಿಸಿದ್ದರು. ನಾಲ್ಕು ತಿಂಗಳ ಹಿಂದೆ ತಾಯಿಯನ್ನು ನಾಲ್ಕು ವರ್ಷದ ಹಿಂದೆ ತಂದೆಯನ್ನು ಕಳೆದುಕೊಂಡಿರುವ ಅಭಿಷೇಕ ತನ್ನ ಶಿಕ್ಷಣವನ್ನ ಮುಂದುವರಿಸುವುದು ಹೇಗೆ ಎಂಬ ಚಿಂತೆಯಲ್ಲಿರುವ ಸಂದರ್ಭದಲ್ಲಿಯೇ ಅಂತಹ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರಿಗೆ ಅವರ ಧರ್ಮಪತ್ನಿ ಶ್ವೇತಾ ಬಬಲೇಶ್ವರವರು ” ನಮ್ಮ ಮನೆಗೆ ಬರುವ ಅಜ್ಜಿಯೊಬ್ಬರು ಹೇಳುತ್ತಿದ್ದರು ಇದೇ ಸಂಗಮೇಶ್ವರ ಕಾಲೋನಿಯಲ್ಲಿಯೇ ಒಬ್ಬ ಮಗು ತಂದೆ ತಾಯಿಯನ್ನು ಕಳೆದುಕೊಂಡು ಮುಂದಿನ ಶಿಕ್ಷಣಕ್ಕಾಗಿ ತೊಂದರೆ ಅನುಭವಿಸುತ್ತಿರುವುದಾಗಿ ತಿಳಿಸಿದ್ದಾರೆ. ಆ ಮಗುವನ್ನು…

Read More

ಸ್ಯಾಮ್ ಪಿತ್ರೋಡಾ ಜನಾಂಗೀಯ ನಿಂದನೆ ಹೇಳಿಕೆಗೆ ಖಂಡನೆ | ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಬೆಂಗಳೂರು: ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಮ್‌ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ ಹಾಗೂ ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ. ಇದಕ್ಕೂ ಮುನ್ನವೇ ಹಿನ್ನೆಲೆ ಗಾಯಕರಾಗಿ ಡಿ.ಕೆ.ಸುರೇಶ್‌ ಈ ಮಾತನಾಡಿದ್ದರು. ಈಗ ದೇಶ ಒಡೆಯುವ, ಛಿದ್ರ ಮಾಡುವ ಮಾತನ್ನು ಪಿತ್ರೋಡಾ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸಿದ್ಧಾಂತವನ್ನು ತಿಳಿಸಿದ್ದಾರೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣದ ಗ್ಯಾರಂಟಿಯನ್ನು ನೀಡಿದ್ದಾರೆ. ಹಿಂದೆ ವರ್ಣಭೇದ ನೀತಿಯಿಂದ ಅನೇಕ ಸಾವು ನೋವುಗಳಾಗಿತ್ತು. ನೆಲ್ಸನ್‌ ಮಂಡೇಲ, ಮಹಾತ್ಮ ಗಾಂಧೀಜಿಯಿಂದ ಇದರ…

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ವಿಜಯಪುರ: ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಭಿನಂದನೆ ತಿಳಿಸಿದ್ದಾರೆ.ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ವಿಜಯಪುರ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 11 ನೇ ಸ್ಥಾನ (ಕಳೆದ ಬಾರಿಯೂ 11 ನೇ ಸ್ಥಾನ) ಪಡೆದಿದ್ದು, ಶೇ.79.31 ಫಲಿತಾಂಶ ಹೊಂದಿದೆ.ಪರೀಕ್ಷೆಗೆ ಹಾಜರಾದ ಒಟ್ಟು 40368 ವಿದ್ಯಾರ್ಥಿಗಳಲ್ಲಿ 15615 ಬಾಲಕರು, 16401 ಬಾಲಕಿಯರು ಸೇರಿ ಒಟ್ಟು 32016 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಜಿಲ್ಲೆಯಲ್ಲಿ ಈ ಬಾರಿಯ ಫಲಿತಾಂಶ ವೃದ್ಧಿಗಾಗಿ ಶಿಕ್ಷಣ ಇಲಾಖೆ ವತಿಯಿಂದ ಹಲವು ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲಾ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ದರು. ಡಿಸೆಂಬರ್ ವೇಳೆಗೆ ಎಲ್ಲಾ ವಿಷಯವಾರು ಭೋದನೆಯನ್ನು ಮುಕ್ತಾಯಗೊಳಿಸಿ, ಮಾರ್ಚ್…

Read More

ಆಲಮಟ್ಟಿ: ಆಲಮಟ್ಟಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲ್ಲಿರುವ 116 ಕೆರೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದರು.ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ ತಿಂಗಳು ಕಾಲುವೆಗೆ ನೀರು ಹರಿಸಿದಾಗ 116 ಕೆರೆಗಳ ಪೈಕಿ ಅರ್ಧದಷ್ಟು ಮಾತ್ರ ಕೆರೆಗಳಿಗೆ ನೀರು ಸೇರಿದ್ದು ಮಧ್ಯದಲ್ಲಿ ರೈತರು ಹಳ್ಳಕ್ಕೆ ನೀರು ಹರಿಸಿದ ಪರಿಣಾಮ ಕೆಲವೊಂದು ಭಾಗದಲ್ಲಿ ಕೆರೆಗಳಿಗೆ ನೀರು ತಲುಪಿಲ್ಲ ಇದರಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗಿದೆ ಪ್ರತಿ ಬಾರಿಯು ನೀರು ಹರಿಸಿದ ಸಂದರ್ಭದಲ್ಲಿ ಕಾಲುವೆ ಕೊನೆಯ ಅಂಚಿನವರೆಗೆ ನೀರು ತಲುಪುವದಿಲ್ಲ ಇದರಿಂದ ಕೊನೆಯ ಭಾಗದ ರೈತರು ನೀರಿನಿಂದ ವಂಚಿತರಾಗಿದ್ದಾರೆ.ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಿರುವದರಿಂದ ಬಹುತೇಕ ಕೆರೆಗಳಲ್ಲಿಯ ನೀರು ಬತ್ತಿ ಹೋಗಿವೆ ಜಲಾಶಯದಲ್ಲಿ ಇನ್ನು ಒಟ್ಟು ನೀರಿನ ಸಂಗ್ರಹ…

Read More

ವಿ.ಎಂ.ಎಸ್.ಗೋಪಿ ✍️ಸಾಹಿತಿ, ಬೆಂಗಳೂರು. ಮೇ -10 ರಂದು ಬಸವೇಶ್ವರ ಜಯಂತಿ ಮತ್ತು ಅಕ್ಷಯ ತೃತೀಯ ದಿನ. ಶುಭಕಾರ್ಯಗಳಿಗೆ ಶುಭ ಹಾಡುವ ಶುಭದಿನ ಅಕ್ಷಯ ತೃತೀಯ ಮತ್ತು ಅಕ್ಷಯ ತದಿಗೆಯನ್ನು ಸಡಗರದಿಂದ ಆಚರಿಸಲು ಚಿನ್ನದಂಗಡಿಗಳು ಶೃಂಗಾರಗೊಂಡಿವೆ. ಅಕ್ಷಯ ತೃತೀಯ ಸಂದರ್ಭದಲ್ಲಿ ಗ್ರಾಹಕರು ಕೊಳ್ಳಲು ಮುಂದಾಗುವುದು ಸಾಮಾನ್ಯವಾಗಿ ಚಿನ್ನ, ಬೆಳ್ಳಿ ಹಾಗೂ ವಜ್ರದ ಆಭರಣಗಳು ಮನೆಯಲ್ಲಿ ಚಿನ್ನದ ಆಭರಣದ ಪೆಟ್ಟಿಗೆ ತೆರೆದು ನೋಡಿದರೂ ಸಮಾಧಾನವಿಲ್ಲ. ಇನ್ನಷ್ಟು ಒಡವೆಗಳನ್ನು ಖರೀದಿಸುವ ಆಸೆ. ಪ್ರತಿ ವರ್ಷ ಅಕ್ಷಯ ತೃತೀಯದ ದಿನ ಖರೀದಿಸಿದ ಚಿನ್ನದ ಒಡವೆಗಳೆಲ್ಲ. ರಾಶಿ ರಾಶಿಯಾಗಿ ಪೆಟ್ಟಿಗೆಯಲ್ಲಿವೆ. ಈ ವರ್ಷವೂ ಯಾವುದೋ ಒಂದು ಚಿನ್ನದ ಆಭರಣ ಖರೀದಿಸಿ ಆ ಪೆಟ್ಟಿಗೆಯಲ್ಲಿ ಸೇರಿಸಿಟ್ಟರೆ ಸಮಾಧಾನ. ಅಕ್ಷಯ ತೃತೀಯದಂದು ಚಿನ್ನಾಭರಣ ವಾಹನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದರೆ. ಅದೃಷ್ಟ ದೊರೆಯುತ್ತದೆ. ಮತ್ತಷ್ಟು ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಯೋಗ ಬರುತ್ತದೆ. ಈ ದಿನದಂದು ಯಾವುದೇ ಶುಭಕಾರ್ಯಕ್ರಮ ಆರಂಭಿಸಿದರೂ ಅದರಲ್ಲಿ ಸಂಪೂರ್ಣ ಯಶಸ್ಸು ಸಿಗುತ್ತದೆ ಎಂದು ಜನರು ನಂಬುತ್ತಾರೆ.…

Read More