Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಕಿಡ್ನಿ ವೈಫಲ್ಯ ಮತ್ತು ಕಿಡ್ನಿ ಸಂಬಂದಿತ ಸಮಸ್ಯೆಗಳಾದ ಮೂತ್ರ ಕಡಿಮೆ ವಿಸರ್ಜನೆ, ರಕ್ತ ಹೀನತೆ, ರಕ್ತದೊತ್ತಡ (High blood pressure), ಧೀರ್ಘ ಕಾಲಿನ ಕಿಡ್ನಿ ವೈಫಲ್ಯ, ಹೈ ಕ್ರೀಯಾಟಿನ್ ಲೆವಲ್ಸ, ವಾಂತಿ, ಪಾದ ಉಜ್ಜುವಿಕೆ, ಸಕ್ಕರೆ ಕಾಯಿಲೆಯಿಂದ ಕಿಡ್ನಿ ವೈಫಲ್ಯ ಈ ರೀತಿಯ ಲಕ್ಷಣಗಳು ಹೊಂದಿರುವವರು ಜೂನ್ 23 ಹಾಗೂ ಜೂನ್ 24 ರಂದು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು 2 ದಿನಗಳ ಕಾಲ ನಡೆಯಲಿದೆ.ಇಂಥ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೊಬೈಲ್ ಸಂಖ್ಯೆ – 9513397413 ಮತ್ತು ಡಾ. ಅಶ್ವಿನಿ ಸಜ್ಜನ್ನವರ-7406737888 ಸಂಪರ್ಕಿಸಬಹುದಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದ ಪ್ರತಿನಿಧಿಯಾಗಿ ಭಾಗವಹಿಸಿ ಅಪೂರ್ವ ಸಾಧನೆ ತೋರಿದ್ದ ಕುಮಾರಿ ಶಿಫಾ ಜಮಾದಾರ ಈಗ ಹೊಸ ಸಾಧನೆಯ ನಗೆ ಬೀರಲು ಸಜ್ಜಾಗುತ್ತಿದ್ದಾರೆ.ಶಾಂತಿಯುತವಾಗಿ ಪರಮಾಣು ಬಳಕೆಯ ಉದಾತ್ತ ಧ್ಯೇಯದೊಂದಿಗೆ ಸ್ಥಾಪನೆಯಾಗಿರುವ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ(IಂಇA) ಹಾಗೂ ರಷ್ಯಾ ಸರ್ಕಾರ ಜಂಟಿಯಾಗಿ ರಷ್ಯಾ ದೇಶದ ಆಬ್ನಿನಿಸ್ಕ್ (ಔಃಓIಓSಏ) ಸ್ಥಳದಲ್ಲಿ ಪರಮಾಣು ಶಕ್ತಿಯ ಸದ್ಭಳಕೆ ಹಾಗೂ ಹಸಿವು ನಿವಾರಣೆ ಮೊದಲಾದ ಉತ್ತಮ ಉದ್ದೇಶಗಳಿಗಾಗಿ ಪರಮಾಣು ಬಳಕೆ ಕುರಿತಾದ ಚಿಂತನ-ಮಂಥನ ಹಾಗೂ ಶ್ವೇತ ಪತ್ರ ಬಿಡುಗಡೆ ವಿಶ್ವ ಸಮ್ಮೇಳನದಲ್ಲಿ ಇದೇ ದಿನಾಂಕ ೨೫ ರಿಂದ ಮೂರು ದಿನಗಳ ನಡೆಯಲಿದ್ದು, ಈ ಮಹೋನ್ನತ ಸಮಾವೇಶಲ್ಲಿ ವಿಜಯಪುರದ ಕು.ಶಿಫಾ ಜಮಾದಾರ ಭಾರತ ದೇಶದ ಪ್ರತಿನಿಧಿಯಾಗಿ ಭಾಗವಹಿಸಿ ವಿಚಾರ ಮಂಡಿಸಲಿದ್ದಾರೆ.ಜಾಗತಿಕ ಮಟ್ಟದ ಈ ಸಮಾವೇಶದಲ್ಲಿ ೧೨೦ ರಾಷ್ಟ್ರಗಳಿಂದ ತಲಾ ಒಬ್ಬರಂತೆ ಪ್ರತಿನಿಧಿಗಳು ಭಾಗವಹಿಸಲಿದ್ದು, ಭಾರತೀಯ ಪ್ರತಿನಿಧಿಯಾಗಿ ಕು.ಶಿಫಾ ಜಮಾದಾರ ಭಾಗವಹಿಸಲಿದ್ದಾರೆ.೨೦೨೪ ರಲ್ಲಿ ನೇಪಾಳ ರಾಜಧಾನಿ ಖಠ್ಮಂಡುವಿನಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ನಾಲ್ಕು ವರ್ಷಗಳ ಎಂಟು ಸೆಮಿಸ್ಟರಿನ ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್’ (ಬಿ.ವಿ.ಎ) ಪ್ರಥಮ ವರ್ಷದ ಪದವಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್ಗಳಲ್ಲಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್೨೨ರೊಳಗಾಗಿhttps://uucms.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಈ ಪ್ರವೇಶಾತಿಯಡಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನ ನಡೆಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ ೨೩ ರಂದು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ ಅನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ೧ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ) ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ.ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ೧ರಿಂದ ೮ನೇ ತರಗತಿ ವಿದ್ಯಾರ್ಥಿವೇತನಕ್ಕಾಗಿ ಎಸ್‌ಎಸ್‌ಪಿ ಪೋರ್ಟಲ್ https://ssp.postmatric.karnataka.gov.in/ssppre ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು.೨೦೨೫-೨೬ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ಅನುಮೋದನೆಗೊಂಡು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳ ಅರ್ಜಿಗಳನ್ನು ಆಟೋ ರಿನ್ಯೂವಲ್ ಎಂದು ಪರಿಗಣಿಸಲಾಗುವುದರಿಂದ ಅವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ, ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೧ನೇ ತರಗತಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ,ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್: hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್.೩೦ ಕೊನೆಯ ದಿನವಾಗಿದೆ.ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಸೇರಿ ರೂ.೨.೫೦ ಲಕ್ಷಗಳನ್ನು ಮೀರಿರಬಾರದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಕಚೇರಿ, ವಿಜಯಪುರ ದೂರವಾಣಿ ಸಂಖ್ಯೆ.೦೮೩೫೨-೨೯೫೫೨೩ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ವಿಜಯಪುರ ಮೊ.೮೧೨೩೭೧೦೭೬೬, ಬಸವನಬಾಗೇವಾಡಿ ಮೊ.೯೯೭೨೩೪೦೭೨೧, ಮುದ್ದೇಬಿಹಾಳ ಮೊ.೮೭೨೨೪೪೫೫೫೨, ಇಂಡಿ ಮೊ.೯೯೦೦೧೦೯೭೫೯ ಹಾಗೂ ಸಿಂದಗಿ ಮೊ.೯೦೩೫೫೫೮೬೦೯ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿ ೨೨೦/೧೧೦/೧೧ ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಂಡಿ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ೧೧೦ ಕೆ.ವ್ಹಿ ಝಳಕಿ, ೧೧೦ ಕೆ.ವ್ಹಿ ಚಡಚಣ, ೧೧೦ ಕೆ.ವ್ಹಿ ಇಂಚಗೇರಿ, ೧೧೦ ಕೆ.ವ್ಹಿ ಜಿಗಜೇವಣಗಿ, ೧೧೦ ಕೆ.ವ್ಹಿ ಕೆರೂರ, ೧೧೦ ಕೆ.ವ್ಹಿ ಉಮರಾಜ, ೧೧೦ ಕೆ.ವ್ಹಿ ಭೈರುಣಗಿ, ೧೧೦ ಕೆ.ವ್ಹಿ ಹಿರೇಬೆವನೂರ, ೧೧೦ ಕೆ.ವ್ಹಿ ರೋಡಗಿ, ೧೧೦ ಕೆ.ವ್ಹಿ ಇಂಡಿ, ೧೧೦ ಕೆ.ವ್ಹಿ ಲಚ್ಯಾಣ, ೧೧೦ ಕೆ.ವ್ಹಿ ಧೂಳಖೇಡ, ೧೧೦ ಕೆ.ವ್ಹಿ ಹಿರೇಮಸಳಿ ಹಾಗೂ ನಾದ ೧೧೦ ಕೆ.ವಿ ಉಪ ಕೇಂದ್ರಗಳ ಮೇಲೆ ಬರುವ ಎಲ್ಲಾ ೧೧ ಕೆ.ವಿ ಮಾರ್ಗಗಳಿಗೆ ಜೂನ್ ೨೨ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆ ತಿಳಿಸಿದೆ.
ಬಬಲೇಶ್ವರ ಕ್ಷೇತ್ರ: ಜೂನ್ ೨೦ ರಿಂದ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ೨೯-ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ,ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮೇಲ್ವಿಚಾರಕರ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ೨೦ ರಿಂದ ಜೂ.೨೯ ರವರೆಗೆ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ಹಾಗೂ ಎಲ್ಲ ಪಕ್ಷದವರು ಆಯ್ಕೆ ಮಾಡಿದ ಮತಗಟ್ಟೆ ಮಟ್ಟದ ಏಜಂಟರಿಗ ತರಬೇತಿ ಹಮ್ಮಿಕೊಳ್ಳಲಾಗಿದೆ.ತರಬೇತಿ ಪಡೆದ ಸಿಬ್ಬಂದಿಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯು ಜೂ.೩೦ ರಿಂದ ಜುಲೈ.೨೯ ರವರೆಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಮನೆ-ಮನೆಗೆ ಭೇಟಿ ನೀಡಿ, ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯ ನಡೆಸಲಿದ್ದಾರೆ.ಆದ್ದರಿಂದ, ಬಬಲೇಶ್ವರ ಕ್ಷೇತ್ರದ ಸಾರ್ವಜನಿಕರು ತಮ್ಮ ಮನೆಗೆ ಭೇಟಿ ನೀಡುವ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ,ನಿಖರವಾದ ವಿವರಗಳನ್ನು ಭರ್ತಿ ಮಾಡುವ ಮೂಲಕ ಈ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಸಹಕರಿಸಬೇಕೆಂದು ಬಬಲೇಶ್ವರ ತಹಶೀಲ್ದಾರರಾದ ಶ್ರೀಮತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ರೈತರು ಹಾಗೂ ಗ್ರಾಹಕರ ವಿದ್ಯುತ್ ಸಂಬAಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರ ಸಂವಾದ ಸಭೆಯನ್ನು ಜೂನ್೨೦, ರಂದು ಮಧ್ಯಾಹ್ನ ೩ ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಆಯೋಜಿಸಲಾಗಿದೆ.ಗ್ರಾಹಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ರೈತರು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಉಪ ವಿಭಾಗದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿದಳ ಧಾನ್ಯಗಳ ಮೌಲ್ಯವರ್ಧನೆ ಉತ್ತೇಜಿಸುವುದು ಹಾಗೂ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ ಅಭಿಯಾನ ಕಾರ್ಯಕ್ರಮದಡಿ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳು ಎಫ್‌ಪಿಒಎಸ್, ಕ್ಲಸ್ಟರ್ ಮಟ್ಟದ ಒಕ್ಕೂಟಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಪಿಎಸಿಎಸ್, ನೋಂದಾಯಿತ ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ವೈಯಕ್ತಿಕ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕನಿಷ್ಠ ೨೧ ವರ್ಷ ವಯೋಮಿತಿ ಹೊಂದಿರಬೇಕು. ಪ್ರತಿ ಕುಟುಂಬದಿಂದ ಪತಿ-ಪತ್ನಿ ಹಾಗೂ ಅವಿವಾಹಿತ ಮಕ್ಕಳು ಒಬ್ಬ ಅರ್ಹ ಫಲಾನುಭವಿಗೆ ಮಾತ್ರ ಸಹಾಯಧನ ಸೌಲಭ್ಯ ಅವಕಾಶವಿರುತ್ತದೆ. ಯೋಜನಾ ವೆಚ್ಚದ ಶೇ.೧೫ ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು.ಗುಂಪು ಫಲಾನುಭವಿಗಳಾದ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿಯಾಗಿರಬೇಕು ಹಾಗೂ ಕನಿಷ್ಠ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿರಬೇಕು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುವುದು. ಯೋಜನೆಯಡಿ ಅನುಮೋದಿತ ಯೋಜನಾ ವೆಚ್ಚದ ಶೇ.೩೩ ರಷ್ಟು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾಳಿಂಬೆ, ಲಿಂಬೆ ಹಾಗೂ ದ್ರಾಕ್ಷಿ ಬೆಳೆಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ.ಬೆಳೆಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ್ ಕಾರ್ಡ್ ಝರಾಕ್ಸ್, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರ, ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದಾಗಿದೆ.ದ್ರಾಕ್ಷಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿರುತ್ತದೆ. ರೈತರು ಪ್ರತಿ ಹೆಕ್ಟೆರಿಗೆ ಪಾವತಿಸಬೇಕಾದ ವಿಮಾ ಕಂತಿನ ಮೊತ್ತ ೧೪,೦೦೦ ರೂ.ಗಳಾಗಿದೆ. ದಾಳಿಂಬೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜೂನ್ ೩೦ ಕೊನೆಯ ದಿನವಾಗಿದ್ದು, ರೈತರು ೬,೩೫೦ರೂ.ಗಳನ್ನು ವಿಮಾ ಕಂತು ತುಂಬಬೇಕು. ಲಿಂಬೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಜೂನ್ ೩೦ ಕೊನೆಯ ದಿನವಾಗಿದ್ದು, ವಿಮಾ ಕಂತಿನ ಮೊತ್ತ ೨,೮೦೦ರೂ.ಗಳನ್ನು ಪಾವತಿಸಬೇಕು.ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರ, ಹತ್ತಿರದ…
