Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್. ಕೆ. ಬೆಂಗಳೂರು ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು..ಈ ರೀತಿ ಆಗಿದೆ ಎಂಬ ಸುಳಿವಿನ ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ, ಲಾಟಿಯಲ್ಲಿ ಬಾರಿಸುತ್ತಾ, ನಾಲ್ಕಾರು ಹೆಣ್ಣು ಮಕ್ಕಳ ಕೈಯಲ್ಲಿ ಚಪ್ಪಲಿ, ಪೊರಕೆಯಲ್ಲಿ ಹೊಡೆಸುತ್ತಾ, ಥೂ – ಛೀ ಎಂದು ಉಗಿಸುತ್ತಾ ಸ್ಟೇಷನ್ ಗೆ ಕರೆದುಕೊಂಡು ಹೋಗುತ್ತಿದ್ದರು..ಅನಂತರದಲ್ಲಿ, ಇಷ್ಟೆಲ್ಲಾ ದೊಡ್ಡ ಸಂಖ್ಯೆಯ ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಮಾಡಿದ್ದು ಬಯಲಾಗುತ್ತಿದ್ದಂತೆ ಬಹುತೇಕ ಎನ್ಕೌಂಟರ್ ಮಾಡುವ ಸಾಧ್ಯತೆ ಇತ್ತು. ಮಾಧ್ಯಮಗಳು ನನ್ನನ್ನು ಅತ್ಯಂತ ನೀಚನಂತೆ, ದುಷ್ಟ ಕ್ರಿಮಿಯಂತೆ, ಇಷ್ಟು ಕೆಳಮಟ್ಟದ ಮನುಷ್ಯ ಇಲ್ಲವೇನೋ ಎಂಬಂತೆ ಚಿತ್ರಿಸುತ್ತಿದ್ದರು. ರಾಜಕಾರಣಿಗಳು ಇದರಲ್ಲಿ ಯಾವುದೇ ರಾಜಕೀಯವಿದೆ ಎಂದು ಯಾರನ್ನೂ ದೂರುತ್ತಿರಲಿಲ್ಲ, ಪೆನ್ ಡ್ರೈವ್ ರೆಕಾರ್ಡ್ ಮಾಡಿದ್ದು ಯಾರು ? ಅದನ್ನು ಹಂಚಿದ್ದು ಯಾರು ? ಅದರಿಂದ…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್. ಕೆ, ಬೆಂಗಳೂರು? ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ..ಚುನಾವಣೆಗಳು, ಪರೀಕ್ಷಾ ಫಲಿತಾಂಶಗಳು, ಶೇರು ಮಾರುಕಟ್ಟೆ, ಬಂಗಾರದ ಬೆಲೆ, ಧಾರ್ಮಿಕ ಆಚರಣೆಗಳು, ಭ್ರಷ್ಟಾಚಾರ ಇದೆಲ್ಲವೂ ತದನಂತರ. ಮೊದಲು ಬದುಕು ಮುಖ್ಯವಲ್ಲವೇ, ಬದುಕೇ ಇಲ್ಲದೆ, ಆರೋಗ್ಯವೇ ಇಲ್ಲದ ಮೇಲೆ ಉಳಿದ ವಿಷಯಗಳನ್ನು ಚರ್ಚಿಸುವುದಾದರೂ ಹೇಗೆ, ಜೊತೆಗೆ ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಎಷ್ಟೋ ಕೆರೆಕಟ್ಟೆಗಳು ಒಣಗಿವೆ, ಕುಡಿಯಲು ಮನುಷ್ಯರಿಗೂ, ದನ ಕರುಗಳಿಗೂ, ಕಾಡುಪ್ರಾಣಿಗಳಿಗೂ ನೀರೇ ಇಲ್ಲ. ಬೆಳೆಗಳು ಸಂಪೂರ್ಣ ಒಣಗಿ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳ, ಸರ್ಕಾರಗಳ, ಆದ್ಯತೆ ಏನಾಗಿದೆ ಎಂಬುದೇ ನಾಚಿಕೆಗೇಡಿನ…
ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು | ಜ.1, 2021ರಿಂದ ಏ.25, 2024ರ ನಡುವೆ ಅತ್ಯಾಚಾರವೆಸಗಿರುವುದಾಗಿ ದೂರು ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.ಈ ನಡುವೆ ಮತ್ತೊಬ್ಬರು 44 ವರ್ಷದ ಮಹಿಳೆ ಪ್ರಜ್ವಲ್ ಗನ್ ಪಾಯಿಂಟ್ ಇಟ್ಟು ಬೆದರಿಸಿ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ದೂರು ನೀಡಿದ್ದಾರೆ.ಮಹಿಳೆಯ ದೂರು ಆಧರಿಸಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರು ನೀಡಿದ ಮಹಿಳೆ ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಹಾಗೂ ಜೆಡಿಎಸ್ ನಾಯಕಿ ಎಂದು ಹೇಳಲಾಗ್ತಿದೆ. ಜನವರಿ 1, 2021ರಿಂದ 25 ಏಪ್ರಿಲ್ 2024ರ ನಡುವೆ ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.ಮಹಿಳೆಯ ದೂರಿನಲ್ಲಿ ಏನಿದೆ?“ಜನ ಸೇವೆ ಮಾಡುವ ನಾನು ಆಗಾಗ ಶಾಸಕ,…
ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಭವಿಷ್ಯ ವಿಜಯಪುರ: ದೇಶದ ಸೇವಕ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಇದು ಸೂರ್ಯ-ಚಂದ್ರರಿರುವಷ್ಟೇ ಸತ್ಯ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಡಾ.ಗೌತಮ್ ಆರ್.ಚೌಧರಿ ಅಭಿಪ್ರಾಯಪಟ್ಟಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಸುಳ್ಳು ಹೇಳಿಕೆಗಳಿಂದ ಜನರ ದಾರಿ ತಪ್ಪಿಸಲು ಮಾಡುವ ಪ್ರಯತ್ನಗಳು ಫಲಕಾರಿಯಾಗುವದಿಲ್ಲ. ಇವರ ಸುಳ್ಳು ಆರೋಪಗಳಿಗೆ ದೇಶದ ಜನತೆ ಸೊಪ್ಪು ಹಾಕುವುದಿಲ್ಲ ಎಂದಿದ್ದಾರೆ.ಮೋದಿಯವರ ಅಭಿವೃದ್ಧಿ ಕಾರ್ಯಗಳು, ದೇಶದ ರಕ್ಷಣೆ, ಬಡವರ ರಕ್ಷಣೆ, ರೈತರ ಪರ ಕಾಳಜಿ, ಸ್ತ್ರೀಯರಿಗೆ ವಿಶೇಷ ಸೌಲಭ್ಯಗಳು ಮತ್ತು ಆಧುನಿಕ ಭಾರತದ ಕನಸಿನೊಂದಿಗೆ ಹೆಜ್ಜೆಹಾಕುತ್ತಿರುವ ಮೋದಿಜಿ ಅವರು ಹೋದಲ್ಲೆಲ್ಲಾ ವ್ಯಕ್ತವಾಗುತ್ತಿರುವ ಅಪಾರ ಪ್ರಮಾಣದ ಜನಬೆಂಬಲವೇ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಕ್ಕೆ ಮುನ್ಸೂಚನೆಯಾಗಿದೆ. ಮೋದಿಜಿ ಅವರು ಮೂರನೆಯ ಬಾರಿ ಈ ದೇಶದ ಪ್ರಧಾನಿಯಾಗುವುದರಲ್ಲಿ ಸಂದೇಹವೇ ಇಲ್ಲ ಎಂದು ಡಾ.ಗೌತಮ್ ಚೌಧರಿ ಭವಿಷ್ಯ ನುಡಿದಿದ್ದಾರೆ.
ಬಸವನಬಾಗೇವಾಡಿ: ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ ಆಯೇಗಾ ಅನ್ನುತ್ತಲೇ ಇದ್ದರೆ ಹೊರತು ಅಚ್ಛೇ ದಿನ ಇನ್ನೂ ಬಂದಿಲ್ಲ. ಜನಸಾಮಾನ್ಯರು ಬಳಕೆ ಮಾಡುವ ಎಲ್ಲ ವಸ್ತುಗಳ ಮೇಲೆ ಜಿಎಸ್ಟಿ ಹಾಕುವ ಮೂಲಕ ಎಲ್ಲ ವಸ್ತುಗಳ ಬೆಲೆ ಗಗನಕ್ಕೇರುವಂತೆ ಮಾಡಿರುವಂತೆ ಮೋದಿ ಅವರ ಸಾಧನೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಮತ ನೀಡಿದರೆ ಮತ್ತಷ್ಟು ಗ್ಯಾರಂಟಿಗಳ ಹಿತವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ದೇವರಹಿಪ್ಪರಗಿ ರಸ್ತೆಯ ಹೊರವಲಯದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇವರ ಆಡಳಿತದಲ್ಲಿ ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿದೆ.ಸರ್ವಜನಾಂಗದ ಹಿತ ಬಯಸುವ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ನೀಡಿದರೆ ದೇಶದ ಜನರಿಗೆ ಹಿತವಾಗಲಿದೆ. ನಮ್ಮ ಪಕ್ಷವು ಕೇಂದ್ರದಲ್ಲಿ ಆಡಳಿತಕ್ಕೆ ಬಂದರೆ ರೈತರ ಸಾಲ ಮನ್ನಾ ಆಗುವ ಜೊತೆಗೆ ಅವರ ಬೆಳೆಗೆ ಸೂಕ್ತ ಬೆಲೆ…
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅಭಿಮತ ವಿಜಯಪುರ: ೫ ಗ್ಯಾರಂಟಿಗಳನ್ನು ಘೋಷಣೆ ಮಾಡಿ, ನುಡಿದಂತೆ ನಡೆದ ಸರ್ಕಾರ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಸರಕಾರ. ಈಗಿನ ಬಿಜೆಪಿ ಸರ್ಕಾರದ ಸರ್ವಾಧಿಕಾರ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತ ಜನರ ಭಾವನೆ ಕೆರಳಿಸಿದ್ದಾರೆ. ಹೀಗಾಗಿ ದೇಶದ ಹಿತಕ್ಕಾಗಿ ಕೇಂದ್ರದಲ್ಲಿ ಈ ಬಾರಿ ಬದಲಾವಣೆ ಅಗತ್ಯವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಂಎಸ್‌ಪಿ, ನಿರುದ್ಯೋಗ ಯುವಕರಿಗೆ ೨ ಕೋಟಿ ಉದ್ಯೋಗ ಕೊಡುವುದು, ೧೫ ಲಕ್ಷ ರೂ ಕಪ್ಪುಹಣ ತರುವುದು ಸೇರಿದಂತೆ ಎಲ್ಲ ಆಶ್ವಾಸನೆಗೆ ನಮ್ಮ ಪ್ರಧಾನಿಗಳು ವಿಫಲರಾಗಿದ್ದಾರೆ. ಇವರ ಸಾಧನೆ ಶೂನ್ಯವಾಗಿದೆ. ಇಂದಿನ ಯುವಪೀಳಿಗೆ ಎಲ್ಲವನ್ನು ಅರಿತಿದ್ದು, ಈ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದರು.ವಿಜಯಪುರ ಜಿಲ್ಲೆಯ ಹಿಂದಿನ ಬಿಜೆಪಿ ಸಂಸದರು ಒಂದೂ ಸಲ ಸಂಸತ್‌ನಲ್ಲಿ ಭಾಗಿಯಾಗಿಲ್ಲ. ಸ್ಥಳಿಯ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸ್ಮಾರ್ಟಸಿಟಿ, ದತ್ತುಗ್ರಾಮದಂತಹ ಯೋಜನೆ ಅನುಷ್ಠಾನಗೊಳಿಸಿಲ್ಲ. ೩ ಬಾರಿ…
ಕಾಂಗ್ರೆಸ್ ಎಂಎಲ್ಸಿ ಸುನೀಲಗೌಡ ಪಾಟೀಲ ಗಂಭೀರ ಆರೋಪ | ಗೃಹ ಸಚಿವರಿಗೆ ದೂರು ವಿಜಯಪುರ: ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಹಾಗೂ ಅವರ ಬೆಂಬಲಿಗನೋರ್ವ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಆರೋಪಿಸಿದ್ದಾರೆ.ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ತಮಗೆ ಬೆದರಿಕೆ ಹಾಕಿದ ಪಂಜಾಬ್ ಮೂಲದ ಸರದಾರ್ಜಿ ಭಾವಚಿತ್ರ ಪ್ರದರ್ಶಿಸಿ, ಈ ಕುರಿತು ತಾವು ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮುಖ್ಯಮಂತ್ರಿ, ಗೃಹಸಚಿವ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿರುವುದಾಗಿ ವಿವರಿಸಿದರು.ಏ.28ರಂದು ನಗರದ ಮಹೇಶ್ವರಿ ಭವನದಲ್ಲಿ ನಡೆದ ಮದುವೆ ಮನೆಗೆ ನಾನು ಹೋಗಿದ್ದಾಗ ಕಾರಣವಿಲ್ಲದೇ ನನ್ನ ಮತ್ತು ನನ್ನ ಕಾರು ಚಾಲಕ, ಗನ್ ಮ್ಯಾನ್ ವಿರುದ್ಧ ವಿಜುಗೌಡ ಮತ್ತು ಸರ್ದಾರ್ ಇಬ್ಬರೂ ಸೇರಿ ಕುಲ್ಲಕ ಕಾರಣಕ್ಕೆ ಜಗಳ ತೆಗೆದು, ಶಸ್ತ್ರಾಸ್ತ್ರ ತೋರಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು…
ಚಡಚಣ: ತಾವೆಲ್ಲ ಚುನಾವಣೆ ದಿನ ಯಾರು ಕೂಡ ಮತದಾನದಿಂದ ಹಿಂದೆ ಉಳಿಯದೆ ನಿಮ್ಮ ಮತ ನಿಮ್ಮ ಹಕ್ಕು ತಪ್ಪದೇ ಮತ ಚಲಾಯಿಸಿ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕುಲದೀಪ ವ್ಹಿಪಿ ರವರು ಮತದಾರರಿಗೆ ಕರೆ ನೀಡಿದರು.ಚಡಚಣ ತಾಲೂಕು ಸ್ವೀಪ್ ಸಮಿತಿ ಹಾಗೂ ರೇವತಗಾಂವ ಗ್ರಾಪಂ ವತಿಯಿಂದ ಗುರುವಾರದಂದು ಹಾಲಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಬಾರಿ ಮತದಾನ ಹೆಚ್ಚಳದ ಗುರಿಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಗ್ರಾಮದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಮತದಾನ ಅನುಷ್ಠಾನ ಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ನೂರಕ್ಕೆ ನೂರರಷ್ಟು ಮತದಾನ ಮಾಡಬೇಕೆಂದು ಹೇಳಿದರು.ನಂತರ ಗ್ರಾಮದಲ್ಲಿ ೮೫ ವರ್ಷ ಮೇಲ್ಪಟ್ಟ ಮತದಾರರು ಮತ ಚಲಾಯಿಸಿದ ಮತದಾರರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಅಲ್ಲದೇ ಬರಗಾಲದ ಕುಡಿಯುವ ನೀರಿನ ಸಮಸ್ಯೆ ಅರಿಯಲು ಅಡವಿ ವಸ್ತಿಗಳಿಗೆ ಭೇಟಿ ನೀಡಿ ಸಮಸ್ಯೆಯನ್ನು ಅರಿತು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸಲು ಸೂಕ್ತಕ್ರಮ ಕೈಗೊಳ್ಳಲು…
ಸಿಂದಗಿ: ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ ಅಧ್ಯಕ್ಷ ಹಾಗೂ ಜಿಲ್ಲೆಯ ಕುರುಬ ಸಮಾಜದ ಮುಖಂಡ ಮಲ್ಲಪ್ಪ ಸಾಲಿ ಹೇಳಿದರು.ಶುಕ್ರವಾರ ಸಿಂದಗಿಯಲ್ಲಿ ನಡೆದ ಕುರುಬ ಸಮುದಾಯದ ಬೃಹತ್ ಸಭೆಯಲ್ಲಿ ಅವರು ಮಾತನಾಡಿದರು.ಆಲಗೂರರು ಚಳವಳಿ, ಹೋರಾಟದಿಂದ ಬಂದವರು. ನಮ್ಮಂತಹ ತಳ ಸಮುದಾಯದ ಜೊತೆ ಅವರು ಮೊದಲಿಂದ ಬೆರೆತಿದ್ದಾರೆ. ಅಹಿಂದ ಚಳವಳಿಗೆ ಅವರು ಬೆನ್ನೆಲುಬಾಗಿದ್ದರು. ಹಾಗಾಗಿ ನಮ್ಮ ಸಮುದಾಯ ಅವರ ಗೆಲುವಿಗೆ ಸಹಕರಿಸಬೇಕು ಎಂದು ಕೋರಿದರು.ರಾಜ್ಯ ಸರಕಾರದ ಸಾಧನೆಗೆ ಕಾರಣರಾಗಿರುವ ಸಿದ್ದರಾಮಯ್ಯರ ಕೈಬಲಪಡಿಸಲು ಆಲಗೂರರಿಗೆ ಮತ ಹಾಕಬೇಕು. ಜಾತಿ ರಹಿತ ಸಮಾಜಕ್ಕಾಗಿ ನಾವು ಒಟ್ಟಾಗಬೇಕು. ಲೋಕಸಭೆ ಕ್ಷೇತ್ರದಲ್ಲಿ ಈ ಸಲ ಬದಲಾವಣೆ ತರಲು ಕುರುಬ ಸಮಾಜ ಕಾರಣವಾಗಬೇಕು ಎಂದು ಹೇಳಿದರು.ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಮಾತನಾಡಿ, ಕುರುಬ ಸಮಾಜ ಒಟ್ಟಾಗಿ ಸಭೆ ನಡೆಸಿದ್ದು ಸಂತೋಷ. ಇಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ದೇಶಕ್ಕೆ ಒಳ್ಳೆಯದಾಗಲು ಈ ಸಭೆ…
