Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ ಇವರ ಸಹಯೋಗದಿಂದ ನಮ್ಮ ಸರಕಾರಿ ಪಾಲಿಟೆಕ್ನಿಕ್ ಹಾಗೂ ಯುವರೆಡ್ ಕ್ರಾಸ್ ಘಟಕದಿಂದ ಇತ್ತೀಚೆಗೆ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ತö್ಯ ಕಾರ್ಯಕ್ರಮದಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು.ಅರೋಗ್ಯ ತಪಾಸಣೆ ಶಿಬಿರದಲ್ಲಿ ಆರ್.ಕೆ.ಎಸ್.ಕೆ.ತಂಡದಿಂದ ಸಂಸ್ಥೆಯ ೭೮೦ ವಿದ್ಯಾರ್ಥಿಗಳಿಗೆ ಹೆಚ್‌ಬಿ ತಪಾಸಣೆ ನಡೆಸಲಾಯಿತು. ೩೪ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಭಾಗವಹಿಸಿದ್ದ ೭೮೦ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕಾರ್ಯಕ್ರಮದಲ್ಲಿ ಆಯುಷ್‌ಮಾನ ಭಾರತ ಕಾರ್ಡ ಮಾಡಿಸಲಾಯಿತು.ಕಾರ್ಯಕ್ರಮವನ್ನು ಆರ್.ಸಿ.ಹೆಚ್ ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಬಸವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮನೋರೋಗ ತಜ್ಞ ಡಾ.ಮಂಜುನಾಥ ಮಸಳಿ, ರಕ್ತ ಕೇಂದ್ರ ವೈದ್ಯಾಧಿಕಾರಿ ಡಾ.ಸುಮಾ ಮಮದಾಪುರ, ಆರ್.ಕೆ.ಎಸ್.ಕೆ. ಜಿಲ್ಲಾ ಸಂಯೋಜಕರಾದ ಶ್ರೀಮತಿ ಸಾವಿತ್ರಿ ಹಿಪ್ಪರಗಿ, ಡಾ.ಮಂಜುನಾಥ ಪೋಳ, ಯುವರೆಡ್ ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಕ್ರಮಾಧಿಕಾರಿ ಸಂತೋಷ ರಾಠೋಡ ಉಪಸ್ಥಿತರಿದ್ದರು.
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಯ್ಯ-ವ್ಯಯ (ಬಜೆಟ್) ಅಂದಾಜು ಪತ್ರಿಕೆ ತಯಾರಿಸಲು ಸಾರ್ವಜನಿಕರಿಂದ ಸಲಹೆ -ಸೂಚನೆ ಪಡೆದುಕೊಳ್ಳಲು ಫೆ.೧೪ ರಂದು ಮಧ್ಯಾಹ್ನ ೪ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಆಯ್ಯವ್ಯಯ ಪ್ರಥಮ ಸಾರ್ವಜನಿಕ ೨ನೇ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಸದರಿ ಸಭೆಗೆ ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಗಣ್ಯರು ಸಭೆಗೆ ಭಾಗವಹಿಸಿ ಸೂಕ್ತವಾದ ಸಲಹೆ ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿ ವತಿಯಿಂದ ನೀರು ಪೂರೈಸಲು ಕ್ರಮ ವಹಿಸಬೇಕು. ಅವಶ್ಯವಿದಲ್ಲಿ ಮಾತ್ರ ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ೯೮ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ನೀರು ಇಳುವರಿಯಿರುವ ಖಾಸಗಿ ಬೊರವೆಲ್‌ಗಳನ್ನು ಮುಂಜಾಗ್ರತಾ ಕ್ರಮವಾಗಿ ಗುರುತಿಸಿಟ್ಟುಕೊಂಡು ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮ ವಹಿಸಬೇಕು.…
ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ :ಡಿಸಿ ಟಿ.ಭೂಬಾಲನ್ ವಿಜಯಪುರ: ದೇಶದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವಾಗಿದ್ದು, ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ ಅವರು, ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ಫೆ.೧೧ ರಂದು ನಗರದ ಗಾಂಧಿಭವನದಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ, ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ಜಿಲ್ಲೆಯ ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್ ವೈದ್ಯರುಗಳಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ ಕುಂದರ್ ಅವರು ಮಾತನಾಡಿ, ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡಲು ಹೆರಿಗೆಗೆ ಮುನ್ನ ಭ್ರೂಣಲಿಂಗ…
ಇಂಡಿ: ರೇಡಿಯೋ ಒಂದು ಶತಮಾನದಷ್ಟು ಹಳೆಯದಾದ ಸಾಮಾಜಿಕ ಸಂವಹನದ ಪ್ರಮುಖ ಮೂಲವಾಗಿದ್ದು, ಅದೊಂದು ಶ್ರಾವ್ಯ ಮಾಧ್ಯಮವಾಗಿದೆ. ಜಗತ್ತಿನ ಪ್ರತಿಯೊಬ್ಬ ನಾಗರಿಕನಿಗೂ ಸುಲಭವಾಗಿ, ವೇಗವಾಗಿ ತಲುಪಬಹುದಾದ ಮಾಧ್ಯಮ ರೇಡಿಯೋ ಆಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ರೇಡಿಯೋ ದಿನವನ್ನು ಉದ್ದೇಶಿಸಿ ಮಾತನಾಡಿದರು.ಜಗತ್ತಿನಲ್ಲಿ ನಡೆದ ಮಹಾನ್ ಘಟನೆಗಳ ಸುದ್ದಿಯ ಜೊತೆಗೆ ಕೃಷಿ, ಶಿಕ್ಷಣ,ಆರೋಗ್ಯದಂತಹ ಅನೇಕ ರಂಗದ ಮಾಹಿತಿಯನ್ನು ಜನರಿಗೆ ತಲುಪಿಸಿದ್ದೇ ರೇಡಿಯೋ. ಒಂದು ಕಾಲದಲ್ಲಿ ಗ್ರಾಮೀಣ ಭಾರತದ ಇಂಚು ಇಂಚನ್ನು ತಲುಪಿದ್ದ ರೇಡಿಯೋ ದೇಶದ ಜನತೆಯೊಂದಿಗೆ ಭಾವನಾತ್ಮಕ ಅನುಬಂಧವನ್ನಿಟ್ಟುಕೊಂಡಿದೆ ಎಂದು ಹೇಳಿದರು.ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಜಗತ್ತಿನಲ್ಲಿ ಸಂಘರ್ಷ ತಡೆಗಟ್ಟುವಲ್ಲಿ ಮತ್ತು ಶಾಂತಿ ನಿರ್ಮಾಣ ಮಾಡುವಲ್ಲಿ ರೇಡಿಯೋ ಆಧಾರಸ್ತಂಭವಾಗಿದೆ. ಹಳ್ಳಿ ಜನರ ದೈನಂದಿನ ಜೀವನ ಭಾಗವಾದ ರೇಡಿಯೋ ಅನೇಕ ವಿಚಾರಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿತ್ತು ಎಂದು ಹೇಳಿದರು.ಶಿಕ್ಷಕಿ ಎಸ್…
ಇಂಡಿ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ದೊಡ್ಡ-ದೊಡ್ಡ ಸ್ಟೇಷನರಿ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಲ್ಲಿಯೂ ಸಹ ನೆರೆಯ ಮಹಾರಾಷ್ಟ್ರದಿಂದ ತರಿಸಿದ ಪಟಾಕಿಗಳು ಮಾರಲಾಗುತ್ತಿದೆ. ಅದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಕರ್ನಾಟಕ ಆದಿ ಜಾಂಬವ ಜನಸಂಘ (ರಿ) ಸಂಘಟನೆ ವತಿಯಿಂದ ಸೋಮವಾರ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಸಂಘದ ಅಧ್ಯಕ್ಷ ದತ್ತಾ ಬಂಡೆನವರ್ ಮಾತನಾಡಿ, ಇಂಡಿ ಪಟ್ಟಣ ಸೇರಿದಂತೆ ತಾಲೂಕಿನ ದೊಡ್ಡ ದೊಡ್ಡ ಹಳ್ಳಿಗಳಲ್ಲಿ ಅಕ್ರಮವಾಗಿ ಮಹಾರಾಷ್ಟ್ರದಿಂದ ಕಡಿಮೆ ಬೆಲೆಯಲ್ಲಿ ಪಟಾಕಿ ಖರೀದಿಸಿ ಇಲ್ಲಿಗೆ ತಂದು ಮಾರಾಟ ಮಾಡಲಾಗುತ್ತಿದೆ. ಪಟಾಕಿ ಮಾರಾಟಕ್ಕೆ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಸಂಬಂಧಿಸಿದ ಇಲಾಖೆಯವರು ಸ್ಟೇಷನರಿ ಅಂಗಡಿ ಹಾಗೂ ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿ ಅಕ್ರಮ ಪಟಾಕಿಗಳನ್ನು ವಶಪಡಿಸಿಕೊಳ್ಳಬೇಕು.ಪರವಾನಿಗೆ ಇಲ್ಲದೆ ಪಟಾಕಿ ಮಾರುತ್ತಿರುವವರ ವಿರುದ್ಧ ಶಿಸ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಸತೀಶ್ ಬೋಳೇಗಾವ್, ಚಂದ್ರಶೇಖರ್ ಹೊಸಮನಿ, ಮಲ್ಲು ವಾಲಿಕರ, ಈರಣ್ಣ ಸಾಗರ್, ಭಾಗಣ್ಣ ಬಾವಿಕಟ್ಟಿ, ಅರ್ಜುನ್ ಪಾರಶಿ,…
ಎರಡು ದಿನಗಳ ತರಬೇತಿ ಕಾರ್ಯಾಗಾರ | ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲನೆಗೆ ಸಿಇಓ ಕರೆ ವಿಜಯಪುರ: ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸಬೇಕು. ಪ್ರತಿಯೊಬ್ಬರು ಮತದಾನ ಮಾಡುವುದಲ್ಲದೇ ಮತದಾನ ಮಾಡಲು ಕುಟುಂಬ ಸದಸ್ಯರು, ನೆರೆಹೊರೆಯವನ್ನು ಪ್ರೇರೆಪಿಸುವುದ ನಮ್ಮ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಮಂಗಳವಾರ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದಲ್ಲಿ ನಡೆಯುತ್ತಿರುವ ಆಹಾರ ಭದ್ರತಾ ಕಾಯ್ದೆ ೨೦೧೩ರ ಜಾರಿಯಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿ ಸಾಮರ್ಥ್ಯಾಭಿವೃದ್ಧಿ ತರಬೇತಿ ಹಾಗೂ ಜಿಲ್ಲಾ ಪಂಚಾಯಿಯ ಎನ್‌ಆರ್‌ಎಲ್‌ಎಂ ಯೋಜನೆಯಡಿ ಚಡಚಣ ತಾಲೂಕಿನ ೧೩ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಗ್ರಾಮೀಣ ಬಡತನ ನಿರ್ಮೂಲನೆ ಯೋಜನೆ” ತಯಾರಿಕೆ ಕುರಿತಂತೆ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ರಾಜ್ಯ ಚುನಾವಣಾ ಆಯೋಗದಿಂದ ಮತದಾರರ ಜಾಗೃತಿ ಕುರಿತು ಇರುವ ವಿಡಿಯೋವನ್ನು…
Udayarashmi kannada daily newspaper
ದೇವರಹಿಪ್ಪರಗಿ: ಚಿಮ್ಮಲಗಿ ಹಾಗೂ ಮುಳವಾಡ ಏತ ನೀರಾವರಿ ಕಾಲುವೆಗಳ ನೀರು ಪೂರೈಕೆಯಲ್ಲಿ ತಾರತಮ್ಯ ನೀತಿ ಅನುಸರಿಸದೇ ಕೂಡಲೇ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕಿನ ರೈತ ಸಮುದಾಯ ಪೂರ್ವಭಾವಿ ಸಭೆಯ ಮೂಲಕ ಆಗ್ರಹಿಸಿತು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸೇರಿದ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಸರ್ಕಾರದ ನೀರು ಹಂಚಿಕೆಯ ತಾರತಮ್ಯ ನೀತಿಯನ್ನು ಚರ್ಚಿಸಿ ಖಂಡಿಸಿದರು. ಈ ಸಂದರ್ಭದಲ್ಲಿ ರೈತಸಂಘದ ನಾಯಕರಾದ ಶಂಕರಗೌಡ ಹಿರೇಗೌಡರ, ಅಜೀಜ್ ಯಲಗಾರ, ಬಸವರಾಜ ಕಲ್ಲೂರ ಮಾತನಾಡಿ, ಪ್ರತಿ ಬಾರಿ ಕಾಲುವೆ ಮೂಲಕ ನೀರು ಪಡೆಯಲು ರೈತರು ಹೋರಾಟ ಮಾಡಬೇಕಾದ ಅನಿವಾರ್ಯತೆಯನ್ನು ಸರ್ಕಾರ ಸೃಷ್ಟಿಸಿದೆ.ನಮ್ಮ ಭಾಗದ ಚಿಮ್ಮಲಗಿ ಏತ ನೀರಾವರಿ ಕಾಲುವೆಗಳು ಹೆಸರಿಗಷ್ಟೇ ಕಾಲುವೆಗಳೇನಿಸಿವೆ. ಇಲ್ಲಿ ವರ್ಷಕ್ಕೆ ಒಂದು ಬಾರಿ ಮಾತ್ರ ನೀರು ಹರಿಯುತ್ತದೆ. ಅದು ಅರ್ಧ ಹಂತದವರೆಗೆ ಮಾತ್ರ ಪೂರ್ಣವಾಗಿ ಮುಟ್ಟುವ ಸಂದರ್ಭದಲ್ಲಿ ನೀರು ನಿಲ್ಲಿಸಲಾಗುತ್ತದೆ. ಹೀಗಾಗಿ ಈ ಭಾಗದ ಕೆರೆಗಳು ಬೇಸಿಗೆಯ ಆರಂಭದಲ್ಲಿಯೇ ಖಾಲಿಯಾಗಿವೆ. ಹೀಗಾದರೇ ಬೇಸಿಗೆ ಕಳೆಯುವುದಾದರೂ ಹೇಗೆ? ತೋಟಗಳಲ್ಲಿ ಇರುವ…
ಆಲಮಟ್ಟಿ: ಇಲ್ಲಿಯ ವಿವಿಧ ಉದ್ಯಾನಗಳನ್ನು ನಿರ್ವಹಣೆಯ ಕಾಮಗಾರಿ ಹೊರಗುತ್ತಿಗೆ ಟೆಂಡರ್ ಕರೆಯಲಾಗಿದ್ದು, ಅದನ್ನು ರದ್ದುಗೊಳಿಸಲು ಆಗ್ರಹಿಸಿ ಸಂಯುಕ್ತ ಆಲಮಟ್ಟಿ ಕೆಬಿಜೆಎನ್ ಎಲ್ ಗಾರ್ಡ್ನ್ ಡಿ ಗ್ರುಪ್ ನೌಕರರ ಸಂಘ ಸೋಮವಾರದಿಂದ ಇಲ್ಲಿಯ ಮುಖ್ಯ ಎಂಜಿನಿಯರ್ ಕಚೇರಿ ಎದುರು ಅನಿರ್ದಿಷ್ಟ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದರು.ಉದ್ಯಾನಗಳಿಂದ ಮೆರವಣಿಗೆಯ ಮೂಲಕ ಆಗಮಿಸಿದ ಅರಣ್ಯ ದಿನಗೂಲಿಗಳು ಮುಖ್ಯ ಎಂಜಿನಿಯರ್ ಕಚೇರಿ ಎದುರು ಕುಳಿತು ಪ್ರತಿಭಟನೆ ಆರಂಭಿಸಿದರು.ಕಳೆದ ೨೨ ವರ್ಷಕ್ಕೂ ಹೆಚ್ಚಿನ ಕಾಲದಿಂದ ೩೦೦ ಕ್ಕೂ ಅಧಿಕ ಅರಣ್ಯ ದಿನಗೂಲಿ ಕಾರ್ಮಿಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಲಮಟ್ಟಿಯ ವಿವಿಧ ಉದ್ಯಾನಗಳ ನಿರ್ಮಾಣ ಹಾಗೂ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರಿಗೆಲ್ಲಾ ಅರಣ್ಯ ಇಲಾಖೆಯ ನಿಗದಿಪಡಿಸಿರುವ ದಿನಗೂಲಿಗಳ ಆಧಾರದ ಮೇಲೆ ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯ ವಿಭಾಗವೂ ವೇತನ ಪಾವತಿ ಮಾಡುತ್ತಿದೆ.ಅತ್ಯಂತ ಕಡಿಮೆ ಸಂಬಳದಲ್ಲಿ ಇಲ್ಲಿ ದುಡಿಯುತ್ತಿದ್ದಾರೆ. ಆದರೆ ಈಗ ಈ ಉದ್ಯಾನದ ನಿರ್ವಹಣೆಯ ಹೊಣೆಯನ್ನು ಹೊರಗುತ್ತಿಗೆ ನೀಡಲು ಟೆಂಡರ್ ಕರೆಯಲಾಗಿದೆ. ಇದರಿಂದ ಕಳೆದ ೨೫ ವರ್ಷಗಳಿಂದಲೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ…
