Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರಾ ಸಮಾಜದ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಸಚಿವ ಸ್ಥಾನ ನೀಡಬೇಕು ಎಂದು ಬಂಜಾರಾ ಸಮಾಜದ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.ವಿಜಯಪುರ ಜಿಲ್ಲೆಯವರಿಗೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಹಕ್ಕೊತ್ತಾಯ ಮಂಡಿಸಿದರು.ಸಮಾಜದ ಪರವಾಗಿ ಮಾತನಾಡಿದ ಮಾಜಿ ಶಾಸಕ ಹಾಗೂ ಬಂಜಾರಾ ಸಮಾಜದ ಮುಖಂಡ ಮನೋಹರ ಐನಾಪೂರ ಮಾತನಾಡಿ, ಬಂಜಾರಾ ಸಮಾಜ ಲಕ್ಷಾಂತರ ಜನರಿದ್ದಾರೆ, ಬಡತನ ಅನುಭವಿಸಿ ಗುಳೇ ಹೋಗುವ ಸಮುದಾಯ, ಹೀಗಾಗಿ ಸಮುದಾಯದ ಮುಖಂಡರು ಸಚಿವರಾಗುವುದು ಹಾಗೂ ಸಮುದಾಯದ ಧುರೀಣರು ಜನಪ್ರತಿನಿಧಿಗಳಾಗಬೇಕಾಗಿರುವುದು ಅಗತ್ಯವಾಗಿದೆ ಎಂದರು.ಪ್ರತಿ ಮತಕ್ಷೇತ್ರದಲ್ಲಿ ಬಂಜಾರಾ ಸಮಾಜ ಪ್ರಾಬಲ್ಯ ಹೊಂದಿದೆ, ಪ್ರಸ್ತುತ ಏಕೈಕ ಶಾಸಕರಾಗಿರುವ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು, ಉಪ ಸಭಾಧ್ಯಕ್ಷ ಒಂದು ಉತ್ತಮ ಹುದ್ದೆ, ಆದರೆ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನ, ಸಮಾಜ ಸಂಘಟನೆ ಕಷ್ಟ ಸಾಧ್ಯ, ಸಚಿವರಾದರೆ ಅತ್ಯಂತ ಅನುಕೂಲ ಇದು ಸಮಾಜದ ಒಕ್ಕೊರೆಲಿನ ಒತ್ತಾಯ ಎಂದರು.ಕಾಂಗ್ರೆಸ್ ಪಕ್ಷ ಬಂಜಾರಾ ಸಮಾಜಕ್ಕೆ ಪ್ರಾತಿನಿಧ್ಯ ನೀಡುತ್ತಲೇ ಬಂದಿದೆ, ಆದರೆ…

Read More

ಕೇಳುತ್ತಿಲ್ಲ ಚಿಕ್ಕನಂದಿ, ಹತ್ವಾಳು ರೈತರ ಗೋಳು | ಅನಿರ್ದಿಷ್ಟಾವಧಿ ಧರಣಿಗೆ ನಿರ್ಧಾರ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ :ಕಳೆದ 40-50 ವರ್ಷಗಳಿಂದಲೂ ಅದೇ ಭೂಮಿಯಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಆರ್ ಟಿ ಸಿ ಕೂಡ ನಮ್ಮ ಹೆಸರಿನಲ್ಲಿ ಇದೆ. ಆದರೆ ಪಹಣಿಯಲ್ಲಿ ಸರಕಾರಿ ಬೀಳು ಭೂಮಿ ಎಂದು ನಮೂದಾಗಿದೆ. ಇದರಿಂದ ನಮಗೆ ಯಾವುದೇ ಸರಕಾರಿ ಸೌಲಭ್ಯಗಳು ಸಿಗುತ್ತಿಲ್ಲ. ಬ್ಯಾಂಕ್ ಗಳಿಂದ ಸಾಲ ಪಡೆಯಲು ಆಗುತ್ತಿಲ್ಲ. ನಮ್ಮ ಹೆಸರಿಗೆ ಭೂಮಿ ಇದ್ದರೂ ಇಲ್ಲದಂತಾಗಿದೆ. ಖಾತೆಯಲ್ಲಿ ಸರಕಾರಿ ಬೀಳು ತೆಗೆದುಹಾಕಿ ಬದಲಾವಣೆ ಮಾಡಿ ಕೊಡುವಂತೆ ಸಂಬಂಧಪಟ್ಟ ಇಲಾಖೆ, ಸ್ಥಳೀಯ ಶಾಸಕರು, ಅಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದರೂ ಏನು ಪ್ರಯೋಜನವಾಗಿಲ್ಲ ಎಂದು ತಾಲೂಕಿನ ಚಿಕ್ಕನಂದಿ, ಹತ್ವಾಳು ರೈತರು ಅಳಲು ತೋಡಿಕೊಳ್ಳುತ್ತಾರೆ.ತಾಲೂಕಿನ ಹಂಪಾಪುರ ಹೋಬಳಿ ವ್ಯಾಪ್ತಿಗೆ ಸೇರಿದ ಚಿಕ್ಕನಂದಿ, ಹತ್ವಾಳು ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 700 ಎಕರೆ ಕೃಷಿ ಜಮೀನು ಸಕಾರಣವಿಲ್ಲದೆ ಸರ್ಕಾರಿ ಬೀಳು ಎಂದು ಸಮುದಾಗಿರುವುದರಿಂದ ಉಂಟಾಗಿರುವ ಗೋಳು ರೈತರ ನೆಮ್ಮದಿ ಹಾಳು ಮಾಡಿದೆ.…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪತಂಜಲಿ ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರಾದ ಈರಯ್ಯ ಹಲಗಯ್ಯ ಮಠಪತಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ಬೆಳಿಗ್ಗೆ 6 ರಿಂದ 7 ಗಂಟೆಯವರೆಗೆ ತರಬೇತಿ ನಡೆಯಲಿದ್ದು, ಮಾಜಿ ಸಚಿವರು ಹಾಗೂ ಯೋಗ ಶಿಕ್ಷಕರಾದ ಎಸ್.ಕೆ. ಬೆಳ್ಳುಬ್ಬಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು.ಈ ತರಬೇತಿಯಲ್ಲಿ ಶಾಲಾ ಮಕ್ಕಳು ಹಾಗೂ ಊರಿನ ಸಾರ್ವಜನಿಕರು ಭಾಗವಹಿಸಿ ಯೋಗದ ಮಹತ್ವವನ್ನು ಅರಿತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲ್ಲಪ್ಪ ಶಿ. ಸೊನ್ನದ, ವಿರುಪಾಕ್ಷೀ ನಾ. ಕೊಲಕಾರ, ಸಂಗಪ್ಪ ಹುಚ್ಚಪ್ಪಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕೂಡಗಿಯಲ್ಲಿ ಶಾಸಕ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದೇಶದೆಲ್ಲೆಡೆ ಖ್ಯಾತಿ ಗಳಿಸಿರುವ ಈ ಭಾಗದ ರೈತರ ವಿಳ್ಯದೆಲೆ ಮತ್ತು ಈರುಳ್ಳಿ ಖರೀದಿ ಮತ್ತು ಮಾರಾಟಕ್ಕಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಕೂಡಗಿಯಲ್ಲಿ ನಿರ್ಮಿಸುವ ಚಿಂತನೆಯಿದ್ದು ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯೋಜನೆ ಇದೆ ಎಂದು ಶಾಸಕ ಶಿವಾನಂದ ಪಾಟೀಲ ಭರವಸೆ ನೀಡಿದರು. ಕೂಡಗಿ ಗ್ರಾಮದ ಮಾರುತೇಶ್ವರ ದೇವಸ್ಥಾನ ಬಳಿ ಸಮುದಾಯ ಭವನ, ಎಪಿಎಂಸಿ ಬಳಿ ಸಿಸಿ ರಸ್ತೆ, ಕೂಡಗಿ ತಾಂಡಾದ ೨ ಕಡೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ಜನ ಎನ್‌ಟಿಪಿಸಿಗಾಗಿ ತಮ್ಮ ಫಲವತ್ತಾದ ಜಮೀನನ್ನು ಕಳೆದುಕೊಂಡಿದ್ದಾರೆ. ಆದರೆ ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ಎನ್‌ಟಿಪಿಸಿ ಇನ್ನೂ ನೀಡಿಲ್ಲ ಎಂದರು. ಕೂಡಗಿ ತಾಂಡಾದಲ್ಲಿ ೩೩ ಕೊಳವೆ ಭಾವಿಗಳಿದ್ದರೂ ಸ್ಥಳೀಯ ನಿವಾಸಿಗರಿಗೆ ಕುಡಿಯುವ ನೀರಿನ ತೊಂದರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಕುಡಿಯುವ ನೀರಿನ ಬಗ್ಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು. …

Read More

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಕೊರೆಸಲಾಗಿರುವ ೪೩ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಅತ್ಯವಶ್ಯಕ ಪರಿಸ್ಥಿತಿಯಲ್ಲಿ ಮಾತ್ರ ಹೊಸ ಕೊಳವೆ ಬಾವಿ ಕೊರೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಧಿಕಾರಿಗಳಾದ ರಿಷಿ ಆನಂದ ಹೇಳಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಘಟಕಾಂಶಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಲ ಜೀವನ್ ಮಿಷನ್ ಹಾಗೂ ಟಾಸ್ಕ್ ಫೋರ್ಸ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಗದಿತ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಿ, ಬಾಕಿ ಇರುವ ಬಿಲ್ಲುಗಳನ್ನು ತ್ವರಿತವಾಗಿ ವಿಭಾಗೀಯ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದರು.ಸುಜಲಾಂ ಗಾವ್ (ಆರ್ ಪಿಡಬ್ಲ್ಯೂ ಎಸ್ ಎಸ್) ಯೋಜನೆಯಡಿ ಐಡಿ…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಜಿಲ್ಲೆಯ ತಿಕೋಟಾದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ೨ ಹಾಗೂ ಹಾಗೂ ೧ ವರ್ಷದ ಎನ್ ಸಿವಿಟಿ ವೃತ್ತಿಗಳಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಟಾಟಾ ಯೋಜನೆ ಅಡಿಯಲ್ಲಿ ೦೫ ವೃತ್ತಿಗಳಿಗೆ ಆಪ್ ಲೈನ್ ಮೂಲಕ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ. ಇಂಡಸ್ಟ್ರಿಯಲ್ ರೋಬೋಟಿಕ್ಸ್ ಡಿಸೈನಿಂಗ್ ಅಂಡ್ ಮ್ಯಾನುಫ್ಯಾಕ್ಚರಿಂಗ್, ಸಿ.ಎನ್.ಸಿ., ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್ ಅಂಡ್ ಆಟೋನಾಮಸ್,ವರ್ಚುವಲ್ ಅನೆಲಿಸಿಸ್ ಅಂಡ್ ಡಿಸೈನರ್‌ಇಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ವೃತ್ತಿಗಳಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಸಂಸ್ಥೆಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತಿಕೋಟಾ. ಮೊ: ೯೪೪೯೫೦೧೬೬೩, ೯೭೩೯೯೮೫೪೨೨, ೯೮೮೬೨೪೭೭೧೮ ಹಾಗೂ ೯೯೦೨೧೦೯೭೫೦ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಇದೇ ಜೂ. ೨೦ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳು ವಾಸ್ತವದಲ್ಲಿ ಪ್ರಾರಂಭವಾಗಲಿದ್ದು, ಜಿಲ್ಲೆಯ ಎಲ್ಲ ೨೦೯೨ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳು ಮತ್ತು ಪ್ರತಿ ೧೦ ಮತಗಟ್ಟೆಗೆ ಒಬ್ಬರಂತೆ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕರು ಇರುವಂತೆ ನೋಡಿಕೊಂಡು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳವರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಯೋವೃದ್ಧರು ಅನಾರೋಗ್ಯದಿಂದ ಬಳಲುತ್ತಿರುವವರು, ವಿಶೇಷಚೇತನರು, ಬಡವರು ಹಾಗೂ ದುರ್ಬಲರಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ವಯೋವೃದ್ಧರು, ಅನಾರೋಗ್ಯದಿಂದ ಬಳಲುತ್ತಿರುವವರು, ವಿಶೇಷಚೇತನರು, ಬಡವರು ಹಾಗೂ ದುರ್ಬಲರು ಸಕ್ರಿಯವಾಗಿ ಭಾಗವಹಿಸಲು ಸುಲಭವಾಗುವಂತೆ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಬೇಕು ಎಂದರು.ತಾಲೂಕಾ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜರುಗಿಸಿ, ಅವರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ತಿಳುವಳಿಕೆ ನೀಡಿ, ಜಿಲ್ಲಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕಾರ್ಯಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ಹಾಗೂ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತಾಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲಾ ನೋಡಲ್ ಅಧಿಕಾರಿ, ಡಿಡಿಪಿಐ ಮೊ: ೯೧೧೦೮೩೯೭೦೧,ವಿಜಯಪುರ ನಗರ ಬಿಇಒ ಅವರನ್ನು ತಾಲೂಕು ನೋಡಲ್ ಅಧಿಕಾರಿಯನ್ನಾಗಿ ವಿಜಯಪುರ ನಗರಕ್ಕೆ ವಹಿಸಿಕೊಡಲಾಗಿದೆ.ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವಿಜಯಪುರ ಗ್ರಾಮೀಣ, ತಿಕೋಟಾ ಹಾಗೂ ಬಬಲೇಶ್ವರ ತಾಲೂಕು ವಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಬಸವನಬಾಗೇವಾಡಿ, ಕೊಲ್ಹಾರ ಹಾಗೂ ನಿಡಗುಂದಿ ತಾಲೂಕಾ ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ನೋಡಲ್ ಅಧಿಕಾರಿಯಾದರೆ, ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಇಂಡಿ ವಹಿಸಿದರೆ, ಚಡಚಣ ಬಿಇಒಗೆ ಚಡಚಣ ತಾಲೂಕು ನೋಡಲ್ ಜವಾಬ್ದಾರಿ ನೀಡಲಾಗಿದೆ. ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಿಂದಗಿ, ದೇವರಹಿಪ್ಪರಗಿ ಮತ್ತು…

Read More

ವಿಜಯಪುರದಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ:ಎಸ್ ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಂಡು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ಲಾಭ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ೨೦೨೬-೨೭ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಮೇ ತಿಂಗಳಾಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಎಸ್ಸಿಪಿ ಮತ್ತು ಟಿಎಸ್‌ಪಿ ಯೋಜನೆ ನಿಗದಿತ ಅನುಷ್ಠಾನಕ್ಕೆ ಕ್ರಮ ವಹಿಸಬೇಕು. ಆರ್ಥಿಕ ಹಾಗೂ ಭೌತಿಕ ಗುರಿ ನಿಗದಿತ ಅವಧಿಯಲ್ಲಿ ಗುರಿ ಸಾಧಿಸಬೇಕು ಎಂದರು. ಡಾ.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಯೋಜನೆಗಳಾದ ಗಂಗಾಕಲ್ಯಾಣ, ವಿವಿಧ ಯೋಜನೆ ಸೇರಿದಂತೆ ಗುರಿಗೆ ಅನುಸಾರ ಅನುಷ್ಟಾನಗೊಳಿಸಲು ಅಧಿಕಾರಿಗಳು ತ್ವರಿತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಯೋಜನೆಗಳಡಿ ಸರ್ಕಾರದ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡದ ಮೇದಾರ ಅಲೆಮಾರಿ ಸಮುದಾಯಗಳ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗುರಿಗಳನುಸಾರ ಈ ಹಿಂದಿನ ಸಭೆಯಲ್ಲಿ ಆಯ್ಕೆ ಮಾಡಿದ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸಬೇಕು. ಬ್ಯಾಂಕಿನಲ್ಲಿ ಈ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು ವೃಥಾ ವಿಳಂಬ ಮಾಡಬಾರದು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರತಿ ಮೂರು ತಿಂಗಳಿಗೊಮ್ಮೆ ಸಿಇಒ ಅವರ ನೇತೃತ್ವದಲ್ಲಿ ಬ್ಯಾಂಕರ್ಸ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗುತ್ತಿದೆ. ಇದರಲ್ಲಿ ಸಮಸ್ಯೆ ಇದ್ದರೆ ಸಿಇಒ ಅವರ ಗಮನಕ್ಕೆ ತರಲು ಸಮಿತಿ ಸದಸ್ಯರಿಗೆ ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಾಧಿಕಾರಿಗಳಾದ ಸಿಇಒ…

Read More