Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಹನ ಪಲ್ಟಿಯಾದ ಘಟನೆ ವಿಜಯಪುರ ನಗರದ ಬಸವೇಶ್ವರ ಚೌಕ್ ನಲ್ಲಿ ನಡೆದಿದೆನಸುಕಿನ ಜಾವ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಜೆಡಿಎಸ್ ಕಚೇರಿ ಮತ್ತು ಜಯಶ್ರೀ ಟಾಕೀಸ್ ಪಕ್ಕದಲ್ಲಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನಗಳ ಸಂಚಾರ ಬಂದ್ ಆಗಿತ್ತು. ವಿಜಯಪುರ ನಗರದ ಬಸವೇಶ್ವರ ಚೌಕ್ ಬಳಿ ಟ್ಯಾಂಕರ್ ವಾಹನ ಪಲ್ಟಿಯಾದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಪಲ್ಟಿಯಾದ ಟ್ಯಾಂಕರ್ ವಾಹನವನ್ನು ಕ್ರೇನ್ ಸಹಾಯದಿಂದ ತೆರವು ಮಾಡಿ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.ವಿಜಯಪುರ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಾಹನ ಚಾಲಕನ ನಿರ್ಲಕ್ಷ್ಯದಿಂದ ಬೊಲೇರೊ ಪೀಕಪ್ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಹುಣಸಗಿ ತಾಲೂಕಿನ ಅಗತೀರ್ಥ ಕ್ರಾಸ್ ಬಳಿ ಸೋಮವಾರ ನಡೆದಿದೆ.ಹುಣಸಗಿ ತಾಲೂಕಿನ ಕಲ್ಲದೇವನಹಳ್ಳಿಯಿಂದ ಯಾಳಗಿಗೆ ಕೂಲಿ ಕೆಲಸಕ್ಕೆ ಹೋಗುವ ಬೊಲೆರೊ ವಾಹನ ಇದಾಗಿದ್ದು, ಒಟ್ಟು 48 ಜನ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರೆನ್ನಲಾಗಿದೆ.ಓರ್ವ ಮಹಿಳೆ ಲಕ್ಷ್ಮೀ ಗಂಡ ಶೇಖಪ್ಪ ಕಲ್ಲದೇವನಹಳ್ಳಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಉಳಿದ ಕೂಲಿ ಕಾರ್ಮಿಕರನ್ನು ವಿಜಯಪುರ ಹಾಗೂ ಕಲ್ಬುರ್ಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಬೊಲೇರೋ ವಾಹನ ಚಾಲಕ ಸ್ಥಳದಲ್ಲೆ ಗಾಡಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.ಈ ಘಟನೆ ಕುರಿತು ಹುಣಸಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡೆದ ಮತಗಳು 129 | ವಿಪಕ್ಷದ ನಾಲ್ವರಿಂದ ಸಿಎಂ ಪರ ಮತ | ಸ್ಪೀಕರ್ ಅವಧ್ ಬಿಹಾರಿ ಚೌಧರಿ ಪದಚ್ಯುತಿ ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ.ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಾಗಿತ್ತು. ಆರ್‌ಜೆಡಿ ಕೋಟಾದಿಂದ ಸ್ಪೀಕರ್ ಆದ ಅವಧ್ ಬಿಹಾರಿ ಚೌಧರಿ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪದ ಮೇಲಿನ ಮತದಾನದಲ್ಲಿ 125 ಶಾಸಕರು ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸಿದರೆ 112 ಶಾಸಕರು ಮಾತ್ರ ವಿರೋಧ ಪಕ್ಷದಲ್ಲಿ ಉಳಿದಿದ್ದಾರೆ.ಸ್ಪೀಕರ್ ಪದಚ್ಯುತಿಗೆ 125 ಶಾಸಕರು ಸರ್ಕಾರದ ಜೊತೆ ನಿಂತಿದ್ದು, ನಿತೀಶ್ ಕುಮಾರ್ ಅವರಿಗೆ ಬಹುಮತ ಇರುವುದು ಸ್ಪಷ್ಟವಾಯಿತು. ಅವಧ್ ಬಿಹಾರಿ ಪದಚ್ಯುತಿ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಮಹೇಶ್ವರ ಹಜಾರಿ ಸದನ ನಿರ್ವಹಿಸಿದರು. ಉಪಮುಖ್ಯಮಂತ್ರಿ…
ಇಂಡಿ: ಏಡ್ಸ್ ಜಾಗೃತಿ ಜಾಥಾ ಮಾಡುವ ಉದ್ದೇಶ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವುದಾಗಿದೆ. ಪ್ರಸ್ತುತ ಹೆಚ್.ಐ.ವ್ಹಿ ಸೊಂಕನ್ನು ಗುಣಪಡಿಸಲಾಗದು, ಆದರೆ ರೋಗದ ಬಗ್ಗೆ ಉತ್ತಮ ಗುಣಮಟ್ಟದ ಶಿಕ್ಷಣದಿಂದ ಅದನ್ನು ನಿಯಂತ್ರಿಸಬಹುದು. ಅಸುರಕ್ಷಿತ ಲೈಂಗಿಕತೆಯಿಂದಾಗಿ ಹೆಚ್.ಐ.ವ್ಹಿ ಸೊಂಕಿತರ ಪಟ್ಟಿಯಲ್ಲಿ ಯುವಕರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಯುವಕ-ಯುವತಿಯರು ಹೆಚ್.ಐ.ವ್ಹಿ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಮನುಷ್ಯನ ಜೀವಿತಾವಧಿಯಲ್ಲಿ ಯಮನಂತೆ ಕಾಡುವ ಈ ರೋಗವನ್ನು ಹೋಗಲಾಡಿಸಲು ಮುಖ್ಯವಾಗಿ ಬೇಕಾಗಿರುವುದು ಅರಿವು. ಅದಕ್ಕಾಗಿ ಜನರಲ್ಲಿ ಹೆಚ್ಚೆಚ್ಚು ಜಾಗೃತಿ ಮೂಡಿಸಬೇಕು ಎಂದು ಪ್ರಾಚಾರ್ಯ ಎಸ್.ಬಿ.ಜಾಧವ ಹೇಳಿದರು.ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ರೆಡ್ ರಿಬನ್ ಕ್ಲಬ್, ಎನ್ನೆಸ್ಸೆಸ ಮತ್ತು ರೆಡ್ ಕ್ರಾಸ್ ಅಡಿಯಲ್ಲಿ ವಿಶ್ವ ಏಡ್ಸ್ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿದ್ಯಾರ್ಥಿನಿ ಭಾಗ್ಯಶ್ರೀ ನೆದಲಗಿ, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ.ಪಿ.ಕೆ.ರಾಠೋಡ, ಸಹಾಯಕ ಪ್ರಾಧ್ಯಾಪಕ ಡಾ.ಸುರೇಂದ್ರ ಕೆ ಮಾತನಾಡಿದರು.ಸಹಾಯಕ ಪ್ರಾಧ್ಯಾಪಕ ಡಾ.ಆನಂದ ನಡವಿನಮನಿ, ಶ್ರೀಶೈಲ, ಡಾ.ಸಿ.ಎಸ್.ಬಿರಾದಾರ, ಡಾ.ಶ್ರೀಕಾಂತ ರಾಠೋಡ, ಮಲ್ಲಿಕಾರ್ಜುನ…
ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ಗ್ರಾಮಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತದೊಂದಿಗೆ ಬೀಳ್ಕೊಡುವ ಸಂದರ್ಭದವರೆಗೆ ಎಲ್ಲ ಇಲಾಖೆಗಳ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲ್ಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ:೧೫ರಿಂದ ೧೮ ವರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸುತ್ತದೆ. ಈ ಸಂದರ್ಭದಲ್ಲಿ ಜಾಥಾಗೆ ಗೌರವಯುತವಾಗಿ ಸ್ವಾಗತಿಸಿ, ಬಿಳ್ಕೋಡುವ ಹಂತದವರೆಗೆ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿಗಳು, ಸಿಬ್ಬಂದಿವರ್ಗ ಹಾಗೂ ಸಂಘ ಸಂಸ್ಥೆಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ವಿವರಿಸಿದರು.ನೋಡಲ್ ಅಧಿಕಾರಿ ಚಂದ್ರಕಾಂತ ಪವಾರ ಹಾಗೂ ಸಿಂದಗಿ ಕ್ಷೇತ್ರಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿದರು.ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಪರವಾಗಿ ದಲಿತಪರ ಸಂಘಟನೆಯ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ ಹಾಗೂ ಸಿದ್ದು ಮೇಲಿನಮನಿ ಮಾತನಾಡಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಸದಸ್ಯರಾದ…
ಸಿಂದಗಿ: ನಗರಕ್ಕೆ ಈಗಾಗಲೇ ಮನೆ ಮನೆಗೆ ನಳ ಸಂಪರ್ಕಕ್ಕೆ ೪೯ಕೋಟಿ ರೂ. ಅನುದಾನವು ಮಂಜೂರಾಗಿದೆ. ನಗರೋತ್ಥಾನ ಅಮೃತ ೨ ಯೋಜನೆಯ ಅಡಿಯಲ್ಲಿ ಪ್ರಾರಂಭವಾಗಲಿದೆ. ನನ್ನ ಈ ೫ ವರ್ಷದ ಅವಧಿಯನ್ನು ಜನ ಸೇವೆಗೆ ಮೀಸಲಿಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರ ಸಾಯಂಕಾಲ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಆಟೋ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಒಂದು ಆಟೋ ನಿಲ್ದಾಣ ನಿರ್ಮಾಣವಾಗಿದೆ. ಇನ್ನುಳಿದ ಬಸವೇಶ್ವರ ವೃತ್ತ, ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ ಹಾಗೂ ಸಂಗಮ್ ಬಾರ್ ಸೇರಿ ಐದಾರು ಆಟೋ ನಿಲ್ದಾಣಗಳನ್ನು ಐದಾರು ತಿಂಗಳಲ್ಲಿ ನಿರ್ಮಾಣ ಮಾಡಿಕೊಡುವೆ ಎಂದು ಭರವಸೆ ನೀಡಿದರು.ಸಿಂದಗಿಯಲ್ಲಿ ಈ ಆಟೋ ನಿರ್ಮಾಣವಾಗಬೇಕಾದರೆ ಸಭಾಧ್ಯಕ್ಷರಾದ ಯು.ಟಿ.ಖಾದರ ಅವರ ಪ್ರೇರಣೆಯಾಗಿದೆ. ಏಕೆಂದರೆ ಕಳೆದ ಉಪಚುನಾವಣೆಯಲ್ಲಿ ಬಂದ ಸಂದರ್ಭದಲ್ಲಿ ಅವರು ಆಟೋ ಚಾಲಕರಿಗೆ ಕೊಟ್ಟ ಮಾತಿನಂತೆ ಇಂದು ಈ ಆಟೋ ನಿಲ್ದಾಣ ಮಾಡಲು ಪ್ರೇರಣೆಯಾಗಿದೆ ಎಂದರು.ಈ…
ವಿಜಯಪುರ: ಬ.ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರ ಅಭಿಯಾನ ಉದ್ಘಾಟಿಸಿ ಬಸವನಬಾಗೇವಾಡಿ ಪಿಎಸ್‌ಐ ಆರ್.ವಾಯ್. ಬೀಳಗಿ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಪ್ರತಿಯೊಬ್ಬ ನಾಗರಿಕರು ಸಂವಿಧಾನದ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರುಈ ಸಂದರ್ಭದಲ್ಲಿ ತಹಶೀಲ್ದಾರ್ ಯಮನಪ್ಪ ಸೋಮನಕಟ್ಟಿ, ವಸಂತ ರಾಠೋಡ, ನೋಡಲ್ ಅಧಿಕಾರಿಗಳಾದ ಎಸ್.ವ್ಹಿ ವಿರಬಾಳ, ಭವಾನಿ ಪಾಟೀಲ, ಯುವರಾಜ ಹನಗಾಡಿ, ಬ.ಬಾಗೇವಾಡಿ ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಚಡಚಣ ತಾಲೂಕ ಪಂಚಾಯತಿ ಸಭಾ ಭವನದಲ್ಲಿ ಫೆ.೧೪ ರಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಮೊ:೯೩೬೪೦೬೨೫೨೮), ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ (ಮೊ:೯೩೬೪೦೬೨೫೫೭), ಪೊಲೀಸ್ ಇನ್ ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸ್‍ಪೆಕ್ಟರ್-೨ (ಮೊ: ೯೩೬೪೦೬೨೬೩೯) ಇವರು ಅಂದು ಬೆಳಿಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು…
ವಿಜಯಪುರ: ಈ ದೇಶದ ಮೊದಲ ಚಳುವಳಿಗಾರ ಜ್ಯೋತಿಬಾಪುಲೆ ಅವರಿಗೂ ಅಸ್ಪೃಶ್ಯತೆಯ ಅಪಮಾನ ಅಂಟಿತ್ತು. ಇದಕ್ಕೆಲ್ಲ ಶಿಕ್ಷಣವೇ ಪರಿಹಾರ ಎಂದು ಪ್ರಪ್ರಥಮ ಬಾರಿಗೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ದೇಶದಲ್ಲಿ ತೆಗೆದವರು ಮಹಾತ್ಮ ಜ್ಯೋತಿಬಾ ಫುಲೆ ಎಂದು ಬಿಎಸ್ ಪಿ ರಾಜ್ಯ ವಕ್ತಾರ ಸಿಕೆ ತೂರವಿ ಅವರು ಹೇಳಿದರು.ವಿಜಯಪುರ ನಗರದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ವೃತ್ತದ ಸಮೀಪದ ಮೊದಲ ಐಬಿಯಲ್ಲಿ ಇತ್ತೀಚೆಗೆ ದಲಿತ ಸಮರ ಸೇನೆ-ಕರ್ನಾಟಕ ಜಿಲ್ಲಾ ಶಾಖೆ ವಿಜಯಪುರ ವತಿಯಿಂದ ಹಮ್ಮಿಕೊಂಡಿದ್ದ ದಲಿತ ಚಳುವಳಿಯ ಐವತ್ತು ವರ್ಷಗಳು ಹಾಗೂ ಜಿಲ್ಲಾ ಸಂಚಾಲನ ಸಭೆಯ ಉದ್ದೇಶಿಸಿ ಅವರು ಮಾತನಾಡಿದರು.1974ರಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ, ದೇವನೂರು ಮಹಾದೇವ, ಡಾಕ್ಟರ್ ಸಿದ್ದಲಿಂಗಯ್ಯ, ಮಂಗಳೂರು ವಿಜಯ, ಇನ್ನು ಮುಂತಾದ ಮಹನೀಯರಿಂದ ಸಂಘಟನೆಗೊಂಡ ಡಿಎಸ್ಎಸ್ ಹಕ್ಕು ವಂಚಿತರಿಗೆ, ನ್ಯಾಯ ವಂಚಿತರಿಗೆ, ಅಸಹಾಯಕರಿಗೆ, ಭೂ ರಹಿತರಿಗೆ ರಕ್ಷಾ ಕವಚವಾಗಿ ಕೆಲಸ ಮಾಡಿದ್ದು ಮಾನನೀಯ ಎಂದು ಹೇಳಿದರು.ಸಾಹಿತಿ ಪತ್ರಕರ್ತ ಅನಿಲ್ ಹೊಸಮನಿ ಮಾತನಾಡಿದರು.ಇದೇ ಸಂದರ್ಭದಲ್ಲಿ ವಕೀಲರಾದ ಉತ್ತಮ್, ಆನಂದ್, ಸಮಿತಿಯ…
ಕೆಂಭಾವಿ: ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸಿದಾಗ ಏಡ್ಸ್ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಡಾ. ಗಿರೀಶ್ ಕುಲಕರ್ಣಿ ಹೇಳಿದರು.ರೆಡ್ ರಿಬ್ಬಿನ ಕ್ಲಬ್ ಸಹಯೋಗದೊಂದಿಗೆ ‘ಏಡ್ಸ್ ಜಾಗೃತಿ ‘ ಕುರಿತು ಬಾಪುಗೌಡ ಪದವಿ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡತನ, ನಿರುದ್ಯೋಗ, ಅಸಮಾನತೆ ಮಧ್ಯೆ ಆರೋಗ್ಯದ ಸಮಸ್ಯೆಯು ಕೂಡ ಇಂದು ಮಾನವ ಸಂಕುಲವನ್ನು ಹಲವು ರೀತಿಯಲ್ಲಿ ಚಿಂತೆಗೀಡು ಮಾಡಿದೆ. ಅಂತಹವುಗಳಲ್ಲಿ ಏಡ್ಸ್ ಕೂಡ ಒಂದು. ಇದು ಕಣ್ಣಿಗೆ ಕಾಣದೇ, ಒಳಗೊಳಗೆ ಮನುಷ್ಯನ ನೆಮ್ಮದಿ ಹಾಗೂ ಸಂತೋಷವನ್ನು ಕಿತ್ತುಕೊಂಡು ಜೀವ ಹಿಂಡಿ, ಮುಂದೊಂದು ದಿನ ಜೀವವನ್ನೇ ಬಲಿ ತೆಗೆದುಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ. ಅದರ ಸಲುವಾಗಿ ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಜಾಗೃತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪ್ರಾಂಶುಪಾಲರು ಪಾರ್ವತಿ, ವಿಶ್ವನಾಥ ರೆಡ್ಡಿ, ಸುನೀಲ್ ಹುಲ್ಯಳ್, ಸ್ವಾತಿಕಾ ಬಿ ಆರ್, ಲಕ್ಷ್ಮೀ, ರಾಮಣ್ಣ ಹಾಲಾಳ್ ಹಾಗೂ ವಿದ್ಯಾರ್ಥಿಗಳು ಇದ್ದರು.
