Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲೀಗ ಬೆಳಕು ಮುದ್ದೇಬಿಹಾಳ: ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ವಿದ್ಯುತ್ ದೀಪಗಳು ಉರಿಯದೇ ಸಂಜೆಯಾದರೆ ಸಾಕು ಕತ್ತಲೆ ಆವರಿಸಿ ಪ್ರಯಾಣಿಕರು ಭಯದಿಂದ ತಿರುಗಾಡುವ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಇನ್ನೀತರ ಚಟುವಟಿಕೆಗಳಿಗೆ ದಾರಿ ಮಾಡಿ ಕೊಟ್ಟಿತ್ತು. ಈ ಬಗ್ಗೆ ಗುರುವಾರದ ಉದಯರಶ್ಮಿ ಪತ್ರಿಕೆಯಲ್ಲಿ “ಅಂಧಕಾರದಲ್ಲಿ ಮುದ್ದೇಬಿಹಾಳ ಬಸ್ ನಿಲ್ದಾಣ” ಶೀರ್ಷಿಕೆಯಡಿ ಸುದ್ದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ನಿಲ್ದಾಣದಲ್ಲಿ ಬಂದ್ ಆದ ವಿದ್ಯುತ್ ದೀಪಗಳನ್ನು ದುರಸ್ತಿಗೊಳಿಸಿದ್ದಾರೆ. ವಿದ್ಯುತ್ ದೀಪಗಳು ದುರಸ್ತಿಗೊಳಿಸುತ್ತಿದ್ದಂತೆಯೇ ಉದಯರಶ್ಮಿ ನ್ಯೂಸ್ ಕಳಕಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದೇವರಹಿಪ್ಪರಗಿ: ಟೈರ‍್ಸ್ ವೃತ್ತಿನಿರತರ ಕ್ಷೇಮಾಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಅಥವಾ ಮಂಡಳಿ ಸ್ಥಾಪಿಸುವಂತೆ ಮುಂಬರುವ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಸರ್ಕಾರಕ್ಕೆ ಒತ್ತಾಯಿಸುವಂತೆ ಆಗ್ರಹಿಸಿ ತಾಲ್ಲೂಕು ಟೈರ‍್ಸ್ ಸಮೀತಿಯಿಂದ ಶಾಸಕ ರಾಜುಗೌಡ ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣ ಹಾಗೂ ತಾಲ್ಲೂಕು ಟೈರ‍್ಸ್ ಸಮೀತಿಯ ಪದಾಧಿಕಾರಿಗಳು ಬುಧವಾರ ಶಾಸಕರನ್ನು ಕಂಡು ತಮ್ಮ ಬೇಡಿಕೆಯ ಕುರಿತು ಗಮನಸೆಳೆದರು. ಈ ಸಂದರ್ಭದಲ್ಲಿ ಸಮೀತಿಯ ಅಧ್ಯಕ್ಷ ಪ್ರಕಾಶ ಚೌಗಲೆ ಮಾತನಾಡಿ, ರಾಜ್ಯಾದ್ಯಂತ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಸುಮಾರು ೧೦ ಲಕ್ಷಕ್ಕೂ ಹೆಚ್ಚು ಪುರುಷ ಹಾಗೂ ಮಹಿಳೆಯರು ಹೊಲಿಗೆ ವೃತ್ತಿಯನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಈವರೆಗೆ ಇವರಿಗೆ ಯಾವುದೇ ಸಾಮಾಜಿಕ ಜೀವನ ಭದ್ರತೆ ಇರುವುದಿಲ್ಲ. ಸಮಾಜಕ್ಕೆ ಅಗತ್ಯವಾದ ಸೇವೆ ಸಲ್ಲಿಸುತ್ತಿದ್ದರೂ ಇವರ ಮಕ್ಕಳ ವಿದ್ಯಾಭ್ಯಾಸ, ವೃದ್ಧಾಪ್ಯದಲ್ಲಿ ಇವರ ಔಷದೋಪಚಾರ, ಬದುಕಿಗೆ ಭದ್ರತೆಯಿಲ್ಲದೆ ಅಸಹಾಯಕ ಸ್ಥಿತಿ ಎದುರಿಸುವಂತಾಗಿದೆ. ಇಂತಹ ಲಕ್ಷಾಂತರ ಅಸಂಘಟಿತ ಹೊಲಿಗೆ ವೃತ್ತಿಯವರಿಗಾಗಿ ಸರ್ಕಾರ ಟೈರ‍್ಸ್ ಕ್ಷೇಮನಿಧಿ ಮಂಡಳಿ ಸ್ಥಾಪಿಸಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡುವುದರ ಮೂಲಕ ರಾಜ್ಯದ ಎಲ್ಲಾ ಟೈರ‍್ಸ್ ಅಭಿವೃದ್ಧಿಗಾಗಿ…
Udayarashmi kannada daily newspaper
ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿ: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ‘ಪ್ರತ್ಯೇಕತಾವಾದಿ’ ಮನಸ್ಥಿತಿಯನ್ನು ಹೊಂದಿದೆ. ಅನುದಾನ ಹಂಚಿಕೆಯಲ್ಲಿ ರಾಜ್ಯದ ವಿರುದ್ಧ ಕೇಂದ್ರದ ತಾರತಮ್ಯದ ಬಗ್ಗೆ ‘ಸುಳ್ಳು ನಿರೂಪಣೆ’ ಯನ್ನು ಹರಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರುಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ‘ಪ್ರತ್ಯೇಕತಾವಾದಿ’ ಮನಸ್ಥಿತಿಯನ್ನು ಹೊಂದಿದೆ. ಅನುದಾನ ಹಂಚಿಕೆಯಲ್ಲಿ ರಾಜ್ಯದ ವಿರುದ್ಧ ಕೇಂದ್ರದ ತಾರತಮ್ಯದ ಬಗ್ಗೆ ‘ಸುಳ್ಳು ನಿರೂಪಣೆ’ ಯನ್ನು ಹರಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಬರ ಪರಿಹಾರ ನೀಡುವಲ್ಲಿಯೂ ವಿಳಂಬವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕ ಸಿಎಂ ಸಿದ್ದರಾಮಯ್ಯ 13 ಬಾರಿ ರಾಜ್ಯ…
ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಫೆ.೭ರಂದು ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ.ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟಕ ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ ಇಲಾಖೆಯಡಿ ನಿರ್ಮಿಸಿರುವ ನೆಡುತೋಪು ಕಾಮಗಾರಿಯನ್ನು ವೀಕ್ಷಣೆ ಮಾಡಿ ಗಿಡಗಳಿಗೆ ನೀರು ಪೂರೈಸುವ ವ್ಯವಸ್ಥೆ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಬಬಲಾದ ಗ್ರಾಮ ಪಂಚಾಯಿತಿ ಕಟ್ಟಡದ ಮಳೆ ನೀರು ಕೊಯ್ಲು ಘಟಕ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಚವಡಿಹಾಳ ಗ್ರಾಮಕ್ಕೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿ ವೀಕ್ಷಿಸಿದರು.…
ವಿಜಯಪುರ: ತಾಲೂಕಾ ಆಸ್ಪತ್ರೆ ಮುದ್ದೇಬಿಹಾಳದ ಎಆರ್‌ಟಿ ಕೇಂದ್ರದಲ್ಲಿ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಗೆ ಸಂಪೂರ್ಣ ಮೆರಿಟ್ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ದಿನಾಂಕ:೧೫-೦೨-೨೦೨೪ರ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ೨೦೨೩-೨೪ನೇ ಸಾಲಿನಲ್ಲಿ ಕೊಲ್ಹಾರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೇ-ನಲ್ಮ್ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.ಈ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಈ ತರಬೇತಿ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ, ಡೀಪ್ಲೋಮ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ೨೧-೦೨-೨೦೨೪ರ ಸಂಜೆ ೫ ಗಂಟೆಯೊಳಗೆ ಕೊಲ್ಹಾರ ಪಟ್ಟಣ ಪಂಚಾಯತ್ ಡೇ-ನಲ್ಮ್ ಶಾಖೆಗೆ ಸಲಿಸಬಹುದಾಗಿದೆ ಎಂದು ಕೊಲ್ಹಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಕಚೇರಿಯ ಸಾಮಾನ್ಯ ಪತ್ರ ವ್ಯವಹಾರ, ಲೆಕ್ಕ ಪತ್ರ, ಪತ್ರ ವ್ಯವಹಾರ ಕಾರ್ಯ ನಿರ್ವಹಣೆಗಾಗಿ ಅರ್ಹರಿಂದ ತಾತ್ಕಾಲಿಕವಾಗಿ ಮಾಜಿ ಸೈನಿಕರಿಂದ ತಾತ್ಕಾಲಿಕವಾಗಿ ಕ್ಲರ್ಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್,ಲೆಕ್ಕಪತ್ರ ಜ್ಞಾನ,ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪತ್ರ ವ್ಯವಹಾರ ಮಾಡುವ ಅನುಭವ ಇರಬೇಕು. ೫೦ ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಉಪ ನಿರ್ದೇಶಕರ ಕಾರ್ಯಲಯ, ಸೈನಿಕ ಕಲ್ಯಾಣ ಮತ್ತು ಪುನವರ್ಸತಿ ಇಲಾಖೆ, ಡಿ.ಸಿ ಕಾಂಪೌಂಡ್ ಹತ್ತಿರ ವಿಜಯಪುರ ಇವರಿಗೆ ಅರ್ಜಿಯನ್ನು ಸಲ್ಲಿಸುವಂತೆ ಪ್ರಕಟಣೆಯಲ್ಲಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯಲ್ಲಿ ೪,೬೩,೯೫೮ ಗೃಹ ಬಳಕೆ ಸ್ಥಾವರಗಳಿದ್ದು, ಅದರಲ್ಲಿ ಜನವರಿ ೨೦೨೪ರ ಅಂತ್ಯಕ್ಕೆ ೪,೨೧,೨೪೦ ಗ್ರಾಹಕರು ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ೪,೦೮,೯೮೧ ಗ್ರಾಹಕರು ಗೃಹಜ್ಯೋತಿಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆದಿದ್ದಾರೆ. ಈ ಮೂಲಕ ಇಲಾಖೆಗೆ ೧೭.೬೭ಕೋಟಿ ರೂ ಅನುದಾನ ಲಭ್ಯವಾಗಿದೆ.ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ:೦೫-೦೮-೨೦೨೩ರಂದು ಚಾಲನೆ ನೀಡಿದ್ದರು. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗರಿಷ್ಠ ೨೦೦ ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತದೆ.ಗೃಹಜ್ಯೋತಿ ನೋಂದಣಿಗಾಗಿ ಸಾರ್ವಜನಿಕರು ಕರ್ನಾಟಕ ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರ, ಸೇವಾ ಸಿಂಧು ಪೋರ್ಟಲ್, ಹೆಸ್ಕಾಂ ಉಪ ವಿಭಾಗದ ಕಚೇರಿಯ ಸೌಜನ್ಯ ಕೌಂಟರ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ ನೋಂದಾಯಿಸಲು ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ ಎಂದು ವಿಜಯಪುರ ಹೆಸ್ಕಾಂನ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸಂಜೆಯಾದರೆ ಸಾಕು ಕತ್ತಲೆ ಆವರಿಸಿ ಪ್ರಯಾಣಿಕರು ಭಯಪಡುವಂತಾಗಿದೆ. ಕಳೆದ ಕೆಲವು ತಿಂಗಳುಗಳಿದ ಈ ಸಮಸ್ಯೆ ಅನುಭವಿಸುತ್ತಿದ್ದು ಈ ಸಮಸ್ಯೆ ಬಗೆಹರಿಸಲು ಯಾರೊಬ್ಬರು ಮುಂದಾಗುತ್ತಿಲ್ಲ. ಈ ಕೂಡಲೇ ಬಂದ್ ಆದ ಲೈಟ್ ಗಳನ್ನು ದುರಸ್ತಿಗೊಳಿಸಬೇಕು ಎಂದು ಹೆಸರು ಹೇಳಲು ಇಚ್ಛಿಸದ ನಿಲ್ದಾಣದ ಮಳಿಗೆಯ ಬಾಡಿದಾರರೊಬ್ಬರು ವಿನಂತಿಸಿದ್ದಾರೆ.ಈ ಕುರಿತು ’ಉದಯ ರಶ್ಮಿ’ ಯೊಂದಿಗೆ ಮಾತನಾಡಿದ ಅವರು, ಮುಖ್ಯ ಪ್ರವೇಶ ದ್ವಾರದ ಬಳಿಯೇ ಇಂಥಹ ಸಮಸ್ಯೆ ತಲೆದೋರಿದ್ದು ಸೂರ್ಯ ಮುಳುಗುತ್ತಿದ್ದಂತೆಯೇ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿದೆ. ಪ್ರಯಾಣಿಕರು ಭಯ ಪಡುತ್ತಲೇ ತಿರುಗಾಡುವಂತಾಗಿದೆ. ಈ ಸಮಸ್ಯೆ ಬಗ್ಗೆ ಹಲವಾರು ಬಾರಿ ಸಂಬಂಧಿಸಿದವರಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾರಣ ಅನಿವಾರ್ಯವಾಗಿ ಮಾಧ್ಯಮದ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡುತ್ತಿರುವದಾಗಿ ತಿಳಿಸಿದ್ದಾರೆ.
