Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ವೇತನವನ್ನು ನಿಗದಿತ ಅವಧಿಯಲ್ಲಿ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಮಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ೨ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೇರ ಪಾವತಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೂ ಸಕಾಲದಲ್ಲಿ ವೇತನ ಪಾವತಿ ಮಾಡಬೇಕು ಎಂದರು.ನೇರ ವೇತನ ಪಾವತಿ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಇಎಸ್ಐ, ಇಪಿಎಫ್ ಒದಗಿಸಬೇಕು ಹಾಗೂ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೇ ನಡೆಸಬೇಕು ಎಂದು ಜಿಲ್ಲೆಯ ವಿವಿಧ ಪುರಸಭೆ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ಪ್ರತ್ಯೇಕ ಹೆಲ್ತ್…
ವಿಜಯಪುರ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ | ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕಿನಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ೧೯೮೯ ಪ್ರತಿಬಂಧ ಕಾಯ್ದೆಯಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರತಿ ಮೂರು ತಿಂಗಳಿಗೊಮ್ಮೆ ಬ್ಯಾಂಕಿನ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಈ ಬಗ್ಗೆ ನಿರಂತರ ಪ್ರಗತಿ ವರದಿ ಅವಲೋಕಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಬ್ಯಾಂಕಿನ ಶಾಖಾ ವ್ಯವಸ್ಥಾಪಕರೊಂದಿಗೆ ವಿವಿಧ ಸರ್ಕಾರದ ಯೋಜನೆಯಡಿ ಫಲಾನುಭವಿಗಳ ಬಾಕಿ ಅರ್ಜಿ ಸ್ಥಿತಿಗತಿ ಕುರಿತು ಅಗ್ರಣೀಯ ಬ್ಯಾಂಕಿನ ಅಧಿಕಾರಿಗಳು ಕಾಲ-ಕಾಲಕ್ಕೆ ಸಭೆ ನಡಸಬೇಕು. ಈ ವಿಷಯದಲ್ಲಿ ವಿನಾ ಕಾರಣ ವಿಳಂಬ ಆಗದಂತೆ ಕ್ರಮ ಕೈಗೊಳ್ಳಬೇಕು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮ ಪಂಚಾಯಿತಿ ಪಿಡಿಓ ಅವರು ಪಂಚಾಯಿತಿಯಲ್ಲಿ ಜಾತಿ ತಾರತಮ್ಯ ಮಾಡುವುದರ ಜೊತೆಗೆ ಬೋಗಸ್ ಬಿಲ್ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಾಗೂ ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಗುರುವಾರ ಆಗಮಿಸಿದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪಿಡಿಓ ಅವರ ಬಗ್ಗೆ ಆರೋಪಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ರಾಜಕುಮಾರ ಸಿಂದಗೇರಿ ಮಾತನಾಡಿ, ಗ್ರಾಮದ ಪಿಡಿಓ ಜಿ.ಸಿ.ಕನ್ನೋಳ್ಳಿ ಇವರು ಪಂಚಾಯಿತಿ ಸದಸ್ಯರ ಮಧ್ಯೆ ಜಾತಿ ತಾರತಮ್ಯ ಮಾಡುವುದರ ಜೊತೆಗೆ ಮೇಲ್ವರ್ಗದ ಸದಸ್ಯರ ಬಿಲ್ ಮಾತ್ರ ಪಾವತಿ ಮಾಡುತ್ತಾರೆ. ಅಲ್ಲದೆ ಎನ್‌ಆರ್‌ಇಜಿ ಯೋಜನೆಯಲ್ಲಿ ಎನ್‌ಎಮ್‌ಆರ್ ಹಾಕಿದ ಬಿಲ್‌ಗಳಿಗೆ ಪೇಮೆಂಟ್ ಮಾಡದೇ ವಿನಾಕಾರಣ ಕಿರುಕುಳು ನೀಡುತ್ತಿದ್ದಾರೆ. ಅಲ್ಲದೆ ಎಸ್‌ಸಿ, ಎಸ್‌ಟಿ ಸಮುದಾಯದ ಸದಸ್ಯರೊಂದಿಗೆ ಅಸಭ್ಯವಾಗಿ ವರ್ತಿಸಿ ಕೀಳಾಗಿ ಕಾಣುತ್ತಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.ಪಿಡಿಓ ಅವರ ಮೇಲೆ ೨೦೨೩ ರಿಂದ ೨೦೨೬…
ಪಟ್ಟಣ ಬಂದ್ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಡೋದು ಇದೆಂಥ ನ್ಯಾಯ? ಎಂದ ಡಿಎಸ್‌ಎಸ್ ಮುಖಂಡರು ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬಂದ್ ನೆಪದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಿಸಲು ಪ್ರಯತ್ನಿಸಿದರೆ ಉಗ್ರವಾಗಿ ಪ್ರತಿಭಟಿಸುವದಾಗಿ ಡಿಎಸ್‌ಎಸ್ ಮುಖಂಡರಾದ ಬಾಲಚಂದ್ರ ಹುಲ್ಲೂರ ಮತ್ತು ಬಸವರಾಜ ಸಿದ್ದಾಪೂರ ಎಚ್ಚರಿಸಿದರು.ಸ್ಥಳೀಯ ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜು೧೯ ರಂದು ಮುದ್ದೇಬಿಹಾಳ ಪಟ್ಟಣ ಬಂದ್ ಕರೆ ನೀಡಿರುವ ಹಿನ್ನೆಲೆ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.ಶಾಸಕರಿಗೆ ಸಚಿವ ಸ್ಥಾನ ನೀಡಲು ನಮ್ಮದೇನು ಅಭ್ಯಂತರವಿಲ್ಲ. ಅದಕ್ಕೆ ಹೋರಾಟ ಮಾಡುವದಕ್ಕೂ ನಮ್ಮ ವಿರೋಧವಿಲ್ಲ. ಆದರೆ ಬಂದ್ ಕರೆಗೆ ನಮ್ಮ ತೀರ್ವ ವಿರೋಧ ಇದೆ. ಯಾಕೆಂದರೆ ಪ್ರತೀ ದಿನ ಹಲವಾರು ಬಡವರು ತಾಲೂಕಿನ ಬಹುತೇಕ ಹಳ್ಳಿಗಳಿಂದ ಬೆಳ್ಳಂಬೆಳಿಗ್ಗೆ ಹಾಲು, ಮೊಸರು, ತರಕಾರಿ ಅಂತಾ ಪಟ್ಟಣಕ್ಕೆ ಬಂದು ವ್ಯಾಪಾರ ಮಾಡಿ, ಅದರಿಂದ ಬಂದ ದುಡ್ಡಿನಿಂದ ಅವತ್ತಿನ ದಿನ ಸಾಗಿಸುವ ಅದೆಷ್ಟೋ ಕುಟುಂಬಗಳಿವೆ. ಮೊದಲೇ ಬರಗಾಲ ಅಂಥದರಲ್ಲಿ ಪಟ್ಟಣ ಬಂದ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆದರ್ಶ ನಗರದ ಶ್ರೀ ಸಂತ ಸೇವಾಲಾಲ ದೇವಸ್ಥಾನದಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು, ವತಿಯಿಂದ ಜೂ.18 ರಿಂದ 20 ವರೆಗೆ ನಡೆಯಲಿರುವ “ಬಂಜಾರ ಯುವಕ-ಯುವತಿಯರಿಗೆ ಹವೇಲಿ, ವಳಂಗ, ವಿತಿ, ಕಡಿ ಕಸಳಾತ, ಸಿಕವಾಡಿ” ಕುರಿತು ಮೂರು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು.ಕಾರ್ಯಾಗಾರವನ್ನು ಉದ್ಘಾಟಿಸಿದ ಡಾ. ಮೋತಿಲಾಲ ರೂ ಚವ್ಹಾಣ ಅಧ್ಯಕ್ಷರು, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅವರು ಮಾತನಾಡಿ, ಬಂಜಾರ ಅಕಾಡೆಮಿಯು ಬಂಜಾರ ಸಂಸ್ಕೃತಿಯನ್ನು ಉಳಿಸಲು ಹಗಲಿರುಳು ಕಾರ್ಯವನ್ನು ನಿರ್ವಹಿಸುತ್ತಿದೆ. ಬಂಜಾರ ಭಾಷೆ ಉಳಿಸಲು ಇಂದು ಎಲ್ಲಾ ಬಂಜಾರರು ತಮ್ಮ ಮನೆಗಳಲ್ಲಿ ಲಂಬಾಣಿ ಭಾಷೆಯನ್ನು ಮಾತನಾಡಬೇಕು. ಮಕ್ಕಳಿಗೂ ಕೂಡ ಲಂಬಾಣಿ ಭಾಷೆ ಕಲಿಸಿ ಆ ಮೂಲಕ ಭಾಷೆ ಉಳಿಸಲು ಶ್ರಮಿಸಬೇಕು. ಬಂಜಾರ ಸಂಸ್ಕೃತಿ ಮತ್ತು ಭಾಷೆ ಉಳಿಸಲು ಬಂಜಾರ ಅಕಾಡೆಮಿಯು ಎಲ್ಲ ರೀತಿಯ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಿದ್ಧವಾಗಿದೆ. ಯುವಕರು ಮತ್ತು ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ…
ಉದಯರಶ್ಮಿ ದಿನಪತ್ರಿಕೆ ಆಲಮೆಲ: ಪಟ್ಟಣದ ಪೋಲಿಸ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.ಪಿ ಎಸ್ ಐ ಅರವಿಂದ ಅಂಗಡಿ ಅವರು ಅದ್ಯಕ್ಷತೆ ವಹಿಸಿ ಮಾತನಾಡಿ, ಮೊಹರಂ ಹಬ್ಬವನ್ನು ಹಿಂದು ಮುಸ್ಲಿಂ ಸಹೋದರರು ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಪರಿಪಾಲನೆ ಮಾಡಿ, ಸಹೋದರತ್ವ, ಸಹಬಾಳ್ವೆಯಿಂದ ಆಚರಿಸಿ ಎಂದು ಹೇಳಿದರು.ಗ್ರಾಮದ ಗಣ್ಯರಾದ ರಮೇಶ ಬಂಟನೂರ, ಹರೀಶ ಎಂಟಮನ, ಮೂಹರಂ ಆಚರಣೆ ಮಾಡುವ ಮಾಹಿತಿಯನ್ನು ಸಭೆಗೆ ತಿಳಿಸಿದರು.ಪಟ್ಟಣದಲ್ಲಿ ವಿವಿದ ಸ್ಥಳದಲ್ಲಿ ದೇವರ ಸ್ಥಾಪನೆ ನಡೆಯುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು ೩೬ ಸ್ಥಳಗಳಲ್ಲಿ ದೇವರ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಸಭೆಯಲ್ಲಿ ತಿಳಿಸಿದರು.ವಿವಿದ ಗ್ರಾಮದ ಗಣ್ಯರು, ಗ್ರಾಮಸ್ಥರು, ಪೋಲಿಸ್ ಸಿಬ್ಬಂದಿ ಇದ್ದರು
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತ್ಯಾಗ, ಹುತಾತ್ಮರ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಶಾಂತಿ, ಸಹನೆ, ಸಹಕಾರದಿಂದ ಆಚರಿಸಬೇಕು ಎಂದು ಪಿಎಸೈ ಪ್ರೇಮಾ ಚೌರ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಮೊಹರಂ ಹಬ್ಬದ ನಿಮಿತ್ಯ ಜರುಗಿದ ಶಾಂತಿಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪಟ್ಟಣದ ೪ ಮಸೀದೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ ಅಗತ್ಯವಾಗಿದೆ. ಅದಕ್ಕಾಗಿ ಸಹಕಾರ ನೀಡಲು ವಿನಂತಿಸಿ, ಇಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ. ಎಲ್ಲರೂ ಶಾಂತಿ, ಸಹನೆ ಯಿಂದ ಪರಸ್ಪರ ಹಬ್ಬಗಳ ಆಚರಣೆಗೆ ಸಹಕಾರ ನೀಡಬೇಕು ಅಹಿತಕರ ಘಟನೆಗಳು ಜರುಗದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಮಹಿಬೂಬ್ ಹುಂಡೇಕಾರ ಹಾಗೂ ಶಂಕರಗೌಡ ಪಾಟೀಲ ಮಾತನಾಡಿದರು.ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಸಪ್ಪ ಜಮಾದಾರ, ಎಂ.ಎಚ್.ಪಾನಪರೋಷ್, ಮಹ್ಮದ್‌ರಫೀಕ್ ಮೋಮಿನ್, ನಿಂಗು ಯಂಭತ್ನಾಳ, ಬಲವಂತ ಹೊನ್ನಮೀಸಿ, ಮಲ್ಲು ಜಮಾದಾರ, ಶಂಕರ ಜಮಾದಾರ, ಜಾನು ಗುಡಿಮನಿ, ಭೀಮಾಶಂಕರ ಮಿಂಚನಾಳ, ರಾವುತ್ ಎಸ್.ಟಿ, ಜಿ.ಎಮ್.ಹಿರೇಮಠ, ಹನುಮಂತ ಸಣ್ಣಕ್ಕಿ, ಯಾಕೂಬ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳ ಪೈಕಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ (NHM) ಕಾರ್ಯನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸುವ ಭರವಸೆಯು ಒಂದಾಗಿತ್ತು. ಇದೀಗ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಈ ಭರವಸೆ ಇನ್ನೂ ಈಡೇರಿಲ್ಲ ಎಂದು ಸಂತೋಷ್ ಬಗಲಿ ಆಕ್ರೋಶ ವ್ಯಕ್ತಪಡಿಸಿದರು.ಈ ಕುರಿತು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ 25 ಸಾವಿರಕ್ಕೂ ಅಧಿಕ ಒಳಗುತ್ತಿಗೆ ನೌಕರರು NHM ಅಡಿಯಲ್ಲಿ 10, 20 ವರ್ಷಗಳಿಂದ ಅತ್ಯಂತ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದು. ಗ್ರಾಮೀಣ ಮತ್ತು ನಗರ ಪ್ರದೇಶಗಳ ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಕೋವಿಡ್ ಅನ್ನು ಮಹಾಮಾರಿ ದೇಶವನ್ನು ವಕರಿಸಿಕೊಂಡ ಸಂಕಷ್ಟದ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ತಮ್ಮ ಕುಟುಂಬದ ಹಂಗು ತೊರೆದು, ಸೋಂಕಿನ ಭಯದ ನಡುವೆಯೂ ಜನರ ಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದವರು ಇದೆ NHM…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಂಡ್ (ನೋಟರಿ) ಮೂಲಕ ಖರೀದಿಸಿದ ಭಕ್ಷೀಸ್ ಪತ್ರಗಳು, ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿತ ಗುಂಟಾ ಪ್ಲಾಟ್‌ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ ಮತ್ತು ವಾಣಿಜ್ಯ ವಿದ್ಯುತ್ ಸಂಪರ್ಕ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ವೇಳೆ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ ಯಾಸೀನ್ ಎಲ್. ಗುಲ್ಬರ್ಗಾ ಮಾತನಾಡಿ, 03-07-2025 ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 1200 ಚದರ ಅಡಿ ವರೆಗಿನ ಕಟ್ಟಡಗಳಿಗೆ ಓಸಿ ಹಾಗೂ ಸಿಸಿ ಪಡೆಯುವುದರಿಂದ ವಿನಾಯಿತಿ ನೀಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆ ಆದೇಶಗಳನ್ನು ಉಲ್ಲಂಘಿಸಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಮಂಜೂರು ಮಾಡುವಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.ಗುಂಟಾ ಪ್ಲಾಟ್‌ಗಳಲ್ಲಿ ನಿರ್ಮಿಸಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳಿಗೆ ತಾತ್ಕಾಲಿಕ, ಶಾಶ್ವತ…
