Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಡಾ. ಶಶಿಕಾಂತ ಪಟ್ಟಣರಾಮದುರ್ಗ – ಪುಣೆ ಉದಯರಶ್ಮಿ ದಿನಪತ್ರಿಕೆ ಸರ್ವಜ್ಞ ಕವಿ 16ನೇ ಶತಮಾನದಲ್ಲಿ ಜೀವಿಸಿದ್ದ ಕನ್ನಡದ ಅತ್ಯಂತ ಜನಪ್ರಿಯ ಕ್ರಾಂತಿಕಾರಿ ತ್ರಿಪದಿ ಕವಿ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದ ಸರ್ವಜ್ಞ ಅಪ್ಪಟ ಬಸವ ಭಕ್ತ ಕ್ರಾಂತಿಕಾರಿ ಕವಿ. ತನ್ನ ಮೊನಚಾದ ಟೀಕೆ ಟಿಪ್ಪಣಿಗಳು ವಿಡಂಬನೆಯಿಂದ ಸುತ್ತಲಿನ ಅಂಕು ಡೊಂಕುಗಳನ್ನು ತಿದ್ದಿದ್ದಾನೆ. ಸಮಾಜದ ಆಷಾಢಭೂತಿತನಕ್ಕೆ ನೇರ ಚಾಟಿ ಏಟು ಬೀಸಿದ್ದಾನೆ.ಮೂರು ಸಾಲುಗಳ ಸರಳ ‘ತ್ರಿಪದಿ’ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಾರ್ವಕಾಲಿಕ ನೀತಿ ಮತ್ತು ಮೌಲ್ಯಗಳನ್ನು ಬೋಧಿಸಿದ ದಾರ್ಶನಿಕರಾಗಿದ್ದಾರೆ.ಜನನ ಮತ್ತು ಬಾಲ್ಯಹುಟ್ಟೂರು: ಇಂದಿನ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಅಬಲೂರು.ನಿಜನಾಮ: ಸಂಶೋಧನೆಗಳ ಪ್ರಕಾರ ಈತನ ನಿಜವಾದ ಹೆಸರು ಪುಷ್ಪದತ್ತ, ‘ಸರ್ವಜ್ಞ’ ಎಂಬುದು ಕಾವ್ಯನಾಮ.ತಂದೆ ತಾಯಿ: ತಂದೆ ಕುಂಬಾರ ಮಲ್ಲ ಮತ್ತು ತಾಯಿ ಮಾಳೆ (ಮಾಳಲಾದೇವಿ).ತಂದೆ ಕುಂಬಾರ ಮಲ್ಲ ತಾಯಿ ಮಾಳಲಾದೇವಿ ಇಂದು ಧರೆಗೆಬಂದ ಚಂದ್ರಶೇಖರ ನಾನು…
ಲೇಖನ – ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು ಬೆಳಗಾವಿಮೊ ನಂ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಸಾಮಾನ್ಯ ಮಹಿಳೆಯಾಗಿದ್ದ ತಿಮ್ಮಕ್ಕನವರು ಪರಿಸರ ರಕ್ಷಣೆಗೆ ತೋರಿದ ನಿಷ್ಠೆ ನಮಗೆಲ್ಲ ಮಾದರಿ. ತಮಗೆ ಮಕ್ಕಳಿಲ್ಲದಿದ್ದರೂ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು, ಅವುಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೀರುಣಿಸಿ ಬೆಳೆಸಿದರು. ಯಾವುದೇ ಫಲಾಪೇಕ್ಷೆಯಿಲ್ಲದೆ ದಶಕಗಳ ಕಾಲ ಅವರು ತೋರಿದ ಸಮರ್ಪಣೆಗೆ ಜಗತ್ತು ತಲೆಬಾಗಿದೆ.ನಮ್ಮಲ್ಲಿ ಬಹುತೇಕರು ಯಾವುದೇ ಒಂದು ಗುರಿಯನ್ನು ನಿರ್ಧರಿಸುತ್ತಾರೆ. ಅದನ್ನು ಅತಿಯಾದ ಉತ್ಸಾಹದಿಂದ ಆರಂಭಿಸುತ್ತಾರೆ. ಗುರಿಯ ಸಾಧನೆಯಲ್ಲಿ ಬರುವ ಅಡೆತಡೆಗಳಿಗೆ ಹೆದರಿ ಆ ಗುರಿಯನ್ನು ಅಲ್ಲಿಯೇ ಕೈ ಬಿಡುತ್ತಾರೆ. ಹೀಗೆ ಹತ್ತಾರು ಸಲ ಮಾಡಿ ನನ್ನಿಂದ ಯಾವುದೂ ಆಗುತ್ತಿಲ್ಲವೆಂದು ಬೇಸರಿಸುತ್ತಾರೆ. ವಾಸ್ತವದಲ್ಲಿ ಯಶಸ್ಸನ್ನು ಸಾಧಿಸಲು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಸಾಲದು. ಅದರೊಂದಿಗೆ ಸಮರ್ಪಣಾ ಭಾವ ಬೇಕು. ಮಾಡುವ ಕೆಲಸದ ಪ್ರತಿ ನಿಷ್ಠೆ ಬೇಕು. ನಿಷ್ಠೆ ಎಂದರೆ ಕೈಗೆತ್ತಿಕೊಂಡ ಕೆಲಸವನ್ನು ಯಾವುದೇ ಅಡೆತಡೆಗಳು ಬಂದರೂ ಅರ್ಧಕ್ಕೆ ನಿಲ್ಲಿಸದೆ, ಗುರಿ ತಲುಪುವವರೆಗೆ ಶ್ರಮಿಸುವುದು. ನಿಷ್ಠೆಯಿಂದ ಗುರಿಯನ್ನು ಬೆನ್ನು ಹತ್ತಿದವರೆಲ್ಲ…
ಕೂಡಗಿ ಗ್ರಾಮದಲ್ಲಿ ಶಾಸಕ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದೇಶದೆಲ್ಲೆಡೆ ಖ್ಯಾತಿ ಗಳಿಸಿರುವ ಈ ಭಾಗದ ರೈತರ ವಿಳ್ಯದೆಲೆ ಮತ್ತು ಈರುಳ್ಳಿ ಖರೀದಿ ಮತ್ತು ಮಾರಾಟಕ್ಕಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯನ್ನು ಕೂಡಗಿಯಲ್ಲಿ ನಿರ್ಮಿಸುವ ಚಿಂತನೆಯಿದ್ದು ಭವಿಷ್ಯದಲ್ಲಿ ಅದನ್ನು ನಿರ್ಮಿಸುವ ಯೋಜನೆ ಇದೆ ಎಂದು ಶಾಸಕ ಶಿವಾನಂದ ಪಾಟೀಲ ಭರವಸೆ ನೀಡಿದರು. ಕೂಡಗಿ ಗ್ರಾಮದ ಮಾರುತೇಶ್ವರ ದೇವಸ್ಥಾನ ಬಳಿ ಸಮುದಾಯ ಭವನ, ಎಪಿಎಂಸಿ ಬಳಿ ಸಿಸಿ ರಸ್ತೆ, ಕೂಡಗಿ ತಾಂಡಾದ ೨ ಕಡೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ಜನ ಎನ್‌ಟಿಪಿಸಿಗಾಗಿ ತಮ್ಮ ಫಲವತ್ತಾದ ಜಮೀನನ್ನು ಕಳೆದುಕೊಂಡಿದ್ದಾರೆ. ಆದರೆ ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ಎನ್‌ಟಿಪಿಸಿ ಇನ್ನೂ ನೀಡಿಲ್ಲ ಎಂದರು. ಕೂಡಗಿ ತಾಂಡಾದಲ್ಲಿ ೩೩ ಕೊಳವೆ ಭಾವಿಗಳಿದ್ದರೂ ಸ್ಥಳೀಯ ನಿವಾಸಿಗರಿಗೆ ಕುಡಿಯುವ ನೀರಿನ ತೊಂದರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಕುಡಿಯುವ ನೀರಿನ ಬಗ್ಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಮೀರ್ ಅಹ್ಮದ್ ಖಾನ್ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿ, ಅಲ್ಪಸಂಖ್ಯಾತರ ಧ್ವನಿಯಾಗಿ ಕಾರ್ಯನಿರ್ವಹಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ನೀಡಿರುವ ಕೊಡುಗೆ ಗಮನಾರ್ಹವಾಗಿದೆ. ಅವರ ಅನುಭವ, ನಾಯಕತ್ವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಎರಡನೆಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಮ್ ಮರ್ತೂರ್ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಭವಿಷ್ಯದ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಸ್ಥಾನ ನೀಡಬೇಕೆಂಬುದು ಆಶಯವಾಗಿದೆ ಎಂದಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸ್ತುತ ಸಮುದಾಯದಿಂದ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಪುಲಕೇಶಿ ಕ್ಷೇತ್ರದ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡದ ವೆಂಕಟೇಶ್ ಅವರು ಸಂಘಟನೆ ಹಾಗೂ ಸಾರ್ವಜನಿಕ ಜೀವನದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಇವರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯದ ಸಂದೇಶ ಸಾರಬೇಕು ಎಂದು ಭೋವಿ ವಡ್ಡರ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗುತ್ತಿರುವ ಹೊಸ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ತತ್ವದಡಿ ಭೋವಿ ಸಮುದಾಯಕ್ಕೆ ಅವಕಾಶ ದೊರೆಯಬೇಕು. ಜತೆಗೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಬೇಕಾದರೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ, ಪುಲಕೇಶಿ ಕ್ಷೇತ್ರದ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡದ ವೆಂಕಟೇಶ್ ಈ ಮೂವರಲ್ಲಿ ಯಾರಿಗಾದರು ಸಚಿವ ಸ್ಥಾನ ಕಲ್ಪಿಸಬೇಕು ಎಂದು ಭೋವಿ ಸಮಾಜದ ಮುಖಂಡರಾದ ಮುತ್ತಪ್ಪ ಪಾತ್ರೋಟ, ಸುನಂದಾ ಯಂಪೂರೆ, ಭೀಮಾಶಂಕರ ಯಂಪೂರೆ, ದಿಲೀಪ ಆಲಕುಂಟೆ, ಸಚೀನ ಮಂಜಾಳಕರ, ದಯಾನಂದ ಗೊಳಸಾರ ಸೇರಿದಂತೆ ಅನೇಕರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸರ್ಕಾರವು ವಿಶೇಷ ಚೇತನರಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಹೊಂದಿದರೆ ಜೀವನ ಮಟ್ಟವನ್ನು ಉತ್ತಮ ಗೊಳಿಸಿಕೊಳ್ಳಬಹುದು ಎಂದು ಸಿಂದಗಿ ಹೆಸ್ಕಾಂ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಜಿ.ಎಂ.ಬಿರಾದಾರ ಹೇಳಿದರು.ಸಿಂದಗಿ ಬಸವ ನಗರದಲ್ಲಿರುವ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ವಿಶೇಷ ಚೇತನರ ಹಕ್ಕುಗಳು ಹಾಗೂ ಸರ್ಕಾರಿ ಸೌಲಭ್ಯಗಳ ಕುರಿತು ಹಮ್ಮಿಕೊಂಡ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಯಲ್ಲಿ ಆತ್ಮ ವಿಶ್ವಾಸದಿಂದ ಬದುಕಲು ಶಿಕ್ಷಣ, ಸ್ವಾವಲಂಬನೆ ಹಾಗೂ ಜಾಗೃತಿ ಅತ್ಯಂತ ಅಗತ್ಯವೆಂದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಗಮ ಸಂಸ್ಥೆಯ ಸಹನಿರ್ದೇಶಕಿ ಸಿಸ್ಟರ ಪ್ರಿಯಾಂಕಾ ಅವರು ಮಾತನಾಡಿದರು.ಈ ವೇಳೆ ಶಂಕರಗೌಡ ಹನುಮಗೊಂಡ, ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್, ಮಹೇಶ ಚವ್ಹಾಣ ಸೇರಿದಂತೆ ಸಿಂದಗಿ, ಬಬಲೇಶ್ವರ, ಮನ್ನಾಪುರ, ಬಂಟನೂರ ಹಾಗೂ ವಂದಾಲ ಗ್ರಾಮದ ವಿಶೇಷ ಚೇತನರ ಸಂಘದ ಸದಸ್ಯರು ಮತ್ತು ಸಂಸ್ಥೆಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ವತಿಯಿಂದ ದಿನಾಂಕ 18/06/2026 ರಿಂದ 20/06/2026 ವರೆಗೆ ಶ್ರೀ ಸಂತ ಸೇವಾಲಾಲ ದೇವಸ್ಥಾನ, ರಾಮರಾಮ ಮಹಾರಾಜರ ಭವನ, ಆದರ್ಶ ನಗರ ವಿಜಯಪುರದಲ್ಲಿ ಬಂಜಾರ ಯುವಕ ಯುವತಿಯರಿಗೆ ಹವೇಲಿ, ವಳಂಗ, ವಿತಿ, ಕಡಿ ಕಸಳಾತ, ಸಿಕವಾಡಿ ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಆಸಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲು ನೊಂದಣಿ ಮಾಡಿಕೊಳ್ಳಲು ಡಾ. ಸುರೇಖಾ ಜಿ ರಾಠೋಡ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯರು ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲಣಾ ಉಪವಿಭಾಗ ಕಚೇರಿಯನ್ನು ಕೊಲ್ಹಾರ ಪಟ್ಟಣದಲ್ಲಿ ಆರಂಭಿಸಲು ಸರ್ಕಾರದಿಂದ ಮಂಜೂರು ಮಾಡಿಸಬೇಕೆಂದು ಶಾಸಕ ಶಿವಾನಂದ ಪಾಟೀಲ ಅವರಲ್ಲಿ ಅವರ ಅಭಿಮಾನಿ ಬಳಗ ಹಾಗೂ ಕೊಲ್ಹಾರ ತಾಲೂಕಿನ ಗಣ್ಯರು ಮನವಿ ಸಲ್ಲಿಸಿದರು.ನಿಡಗುಂದಿ ತಾಲೂಕಿನಲ್ಲಿರುವ ಕಾರ್ಯ ಮತ್ತು ಪಾಲಣಾ ಉಪವಿಭಾಗ ಕಚೇರಿಯ ವ್ಯಾಪ್ತಿಯಲ್ಲಿ ಕೊಲ್ಹಾರ ತಾಲೂಕು ಬರುವುದರಿಂದ, ತಾಲೂಕಿನ ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಸಮಸ್ಯೆಗಳ ಕುರಿತು ದೂರು ಸಲ್ಲಿಸಲು ಮತ್ತು ಹಣಕಾಸು ವ್ಯವಹಾರಗಳನ್ನು ನಡೆಸಲು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ. ಕೊಲ್ಹಾರದಿಂದ ನಿಡಗುಂದಿ ಸುಮಾರು 45 ಕಿ.ಮೀ ದೂರದಲ್ಲಿದ್ದು, ಸಮರ್ಪಕ ಸಾರಿಗೆ ಸೌಲಭ್ಯವೂ ಇಲ್ಲದಿರುವುದು ಜನರಿಗೆ ಹೆಚ್ಚುವರಿ ಕಷ್ಟ ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೊಲ್ಹಾರ ಪಟ್ಟಣದಲ್ಲಿಯೇ ಉಪವಿಭಾಗ ಕಚೇರಿ ಪ್ರಾರಂಭಿಸುವಂತೆ ವಿನಂತಿಸಿದರು.ನೀರಾವರಿ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಕೊಲ್ಹಾರ ತಾಲೂಕಿನ ರೈತರಿಗೆ ಅನುಕೂಲವಾಗುವಂತೆ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ (ಟಿ.ಸಿ) ದುರಸ್ತಿ ಕೇಂದ್ರವನ್ನೂ ಮಂಜೂರು ಮಾಡಿಸುವ ಮೂಲಕ ಸ್ಥಳೀಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕೆಂದು…
ತೆಲಗಿ ಗ್ರಾಮದಲ್ಲಿ ಶಾಸಕ ಶಿವಾನಂದ ಎಸ್. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರ್ಕಾರಿ ಯೋಜನೆಗಳು ಯಶಸ್ವಿಯಾಗಿ ಪೂರ್ಣಗೊಳ್ಳಲು ರೈತರು ಮತ್ತು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವೆಂದು ಶಾಸಕ ಶಿವಾನಂದ ಎಸ್. ಪಾಟೀಲ ಹೇಳಿದರು.ತಾಲೂಕಿನ ಕೂಡಗಿ ಎನ್‌ಟಿಪಿಸಿ ಕೇಂದ್ರದ ಸಮೀಪದ ತೆಲಗಿ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವತಿಯಿಂದ ನಿರ್ಮಿಸಲಾಗುವ 2×20 ಎಂವಿಎ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಭೂಮಿಪೂಜಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರವು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳುವ ಯೋಜನೆಗಳಿಗೆ ಅಡೆತಡೆಗಳು ಎದುರಾದರೆ ಕಾಮಗಾರಿಗಳು ಅರ್ಧಕ್ಕೆ ನಿಂತು ಸಾರ್ವಜನಿಕರಿಗೆ ಉಪಯೋಗವಾಗುವುದಿಲ್ಲ. ಆದ್ದರಿಂದ ರೈತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ರೈತರ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸಲು ವಿದ್ಯುತ್ ಅತ್ಯಾವಶ್ಯಕವಾಗಿದೆ. ಇತರೆ ರಾಜ್ಯಗಳಲ್ಲಿ ರೈತರಿಂದ ಪಂಪ್‌ಸೆಟ್‌ಗಳಿಗೆ ಹಣ ವಸೂಲಿ ಮಾಡಲಾಗುತ್ತಿದ್ದರೂ, ಕರ್ನಾಟಕದಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಹೀಗಾಗಿ ವಿದ್ಯುತ್ ಲೈನ್‌ಗಳು ಹಾದುಹೋಗುವ ವೇಳೆ ಸರ್ಕಾರ ನಿಗದಿಪಡಿಸಿದ ಪರಿಹಾರವನ್ನು ಸ್ವೀಕರಿಸಬೇಕು,ಅನಾವಶ್ಯಕ ಬೇಡಿಕೆಗಳನ್ನು ಮುಂದಿರಿಸಬಾರದು ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ-ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಅಲೆಮಾರಿ-ಅರೆ ಅಲೆಮಾರಿ ಜನಾಂಗದ ವಿದಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆಗಸ್ಟ್ ೩೧ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‌ಸೈಟ್ https://ssp.postmatric.karnataka.gov.in/ ವೀಕ್ಷಿಸಬಹುದಾಗಿದೆ.ಯೋಜನೆಗಳ ವಿವರ, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳಿಗಾಗಿ https://bcwd.karnataka.gov.in/ ವೆಬ್‌ಸೈಟ್ ಅನ್ನು ಹಾಗೂ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಅನ್ನು ಹಾಗೂ ಇ-ಮೇಲ್ bcwdhelpline@gmail.comಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿವೇತನ ಸಂಬAಧಿತ ತಾಂತ್ರಿಕ ಸಹಾಯಕ್ಕಾಗಿ ೧೯೦೨ ಸಂಖ್ಯೆಯನ್ನು…
