Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ರಚಿಸಿರುವ ಸಂವಿಧಾನದಿಂದಾಗಿ ದೇಶದಲ್ಲಿ ಎಲ್ಲರೂ ಸಮಾನತೆಯಿಂದ ಜೀವನ ಸಾಗಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ೭೫ ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ, ಪಪೂ ಕಾಲೇಜಿನ ಪ್ರಾಚಾರ್ಯ ಆರ್.ಎ.ಪವಾರ, ಪ್ರಾಧ್ಯಾಪಕರಾದ ಡಾ.ವೈ.ಬಿ.ನಾಯಕ, ಪ್ರೊ.ಡಿ.ಎಸ್.ಲಗಳಿ, ಪ್ರೊ.ದಿಲೀಪಕುಮಾರ, ಡಾ.ಎಸ್.ಬಿ.ಜನಗೊಂಡ, ವಿ.ಎನ್.ರಜಪೂತ, ಎಸ್.ಜೆ.ಸೂರ್ಯವಂಶಿ, ಪಿ.ಎಸ್.ಹೊರಕೇರಿ, ಜೆ.ಆರ್.ಡಾವಣಗೇರಿ, ಎ.ಬಿ.ಅಪ್ಪೋಜಿ, ಎಂ.ಆರ್.ಮಮದಾಪೂರ, ಪಿ.ಎಸ್.ನಾಟೀಕಾರ, ಭರತ, ಬಿ.ಆರ್.ಮ್ಯಾಗೇರಿ, ಎಸ್.ಎಸ್.ನಾಯ್ಕೋಡಿ, ಟಿ.ವೈ.ಮಣ್ಣೂರ, ಬಿ.ಬಿ.ಕಳ್ಳಿಗುಡ್ಡ, ಎಸ್.ಎಸ್.ಮನಗೂಳಿ ಇತರರು ಇದ್ದರು. ಪ್ರೊ.ಎಂ.ಕೆ.ಯಾದವ ನಿರೂಪಿಸಿ, ವಂದಿಸಿದರು.ಇದೇ ಸಂದರ್ಭದಲ್ಲಿ ಬಿಎಲ್ಡಿಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಹತ್ತನೆ ತರಗತಿ ವಿದ್ಯಾರ್ಥಿಗಳ ಟ್ಯಾಲೆಂಟ್ ಪರೀಕ್ಷೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಈ ಪರೀಕ್ಷೆಯಲ್ಲಿ ೩೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಸವನಬಾಗೇವಾಡಿ: ದೇಶದಲ್ಲಿ ಸಂವಿಧಾನ ಜಾರಿಯಾದ ಜ.೨೬,೧೯೫೦ ಇದು ವಿಶ್ವದ ದೊಡ್ಡ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲು ಹಾಕಿದ ಸುದಿನವಾಗಿದೆ ಎಂದು ಮನಗೂಳಿ ಹೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರ ಚನ್ನಗೌಡ ಪಾಟೀಲ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಹೆಸ್ಕಾಂ ಇಲಾಖೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ೭೫ ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹಬ್ಬಗಳು ದೇಶ ಬಾಂಧವರಲ್ಲಿ ದೇಶ ಭಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜೊತೆಗೆ ಸಂಭ್ರಮ ತುಂಬುವಂತೆ ಮಾಡುತ್ತವೆ. ವಿವಿಧೆತೆಯಲ್ಲಿ ಏಕತೆಯನ್ನು ಇಡೀ ಜಗತ್ತಿಗೆ ಸಾರಿದ ದೇಶ ನಮ್ಮದು. ಇಂತಹ ಹೆಮ್ಮೆಯ ದೇಶದಲ್ಲಿ ನಾವೆಲ್ಲರೂ ಒಂದಾಗಿ ದೇಶದ ಪ್ರಗತಿಗೆ ಮುಂದಾಗಬೇಕೆಂದರು.ಧ್ವಜಾರೋಹಣ ನೆರವೇರಿಸಿದ ಶಾಖೆಯ ಸಹಾಯಕ ಅಭಿಯಂತರ ಪರಶುರಾಮ ಉಕ್ಕಲಿ, ಸಿಬ್ಬಂದಿಗಳಾದ ಸುರೇಶ ಕಲ್ಲೂರ, ಶ್ರೀಮಂತ ನಾಗರಾಳ ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಮನಗೂಳಿಯ ೩೩ ಕೆವ್ಹಿ ಸ್ಟೇಶನ್ ಜೆಇ ಶರಣು ಗೊಳಸಂಗಿ, ಸಿಬ್ಬಂದಿಗಳಾದ ರಾಜಶೇಖರ ಹೊಸಮನಿ, ಪವಾಡೆಪ್ಪ ಗಾಣಿಗೇರ, ಪೂಜಾ ಮನಗೂಳಿ, ಶಿವಾನಂದ ಸಜ್ಜನ, ರಮೇಶ ಹಾವಣ್ಣನವರ, ಅಶೋಕ ಬಳಗಾನೂರ, ಅಶೋಕ ತೆಲಗಿ, ಶ್ರೀಧರ ಲಮಾಣಿ, ಪ್ರಶಾಂತ…
ಬಸವನಬಾಗೇವಾಡಿ: ದೇಶದ ಸಂವಿಧಾನವು ನಮಗೆ ನೀಡಿರುವ ಹಕ್ಕುಗಳನ್ನು ಪ್ರತಿಪಾದಿಸದೇ ಸಂವಿಧಾನ ಹೇಳಿರುವ ಕರ್ತವ್ಯಗಳನ್ನು ಎಲ್ಲ ನಾಗರಿಕರು ಪಾಲಿಸಿದರೆ ದೇಶವು ಪ್ರಗತಿಯತ್ತ ಸಾಗುತ್ತದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕಾಡಳಿತವು ಶುಕ್ರವಾರ ಹಮ್ಮಿಕೊಂಡಿದ್ದ ೭೫ ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಡೀ ಜಗತ್ತಿನಲ್ಲಿಯೇ ಅತ್ಯಂತ ಬೃಹತ್, ಲಿಖಿತ ಸಂವಿಧಾನ ನಮ್ಮದಾಗಿದೆ. ನಮ್ಮ ಸಂವಿಧಾನವು ರಾಜ್ಯನಿರ್ದೇಶಕ ತತ್ವಗಳನ್ನು, ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ, ಸಂಸದೀಯ ವ್ಯವಸ್ಥೆ, ಜಾತ್ಯಾತೀತ ನಿಲುವು, ಏಕ ಪೌರತ್ವ, ವಯಸ್ಕ ಮತದಾನ ವ್ಯವಸ್ಥೆ ಸೇರಿದಂತೆ ಅನೇಕ ಮೌಲ್ಯಯುತ ಅಂಶಗಳನ್ನು ಹೊಂದಿದೆ. ಇಂತಹ ಸಂವಿಧಾನ ಪಡೆದ ನಾವೆಲ್ಲರೂ ಧನ್ಯರು ಎಂದರು.ಮೂಲ ಸಂವಿಧಾನದಲ್ಲಿ ೩೯೫ ವಿಧಿಗಳು, ೨೨ ಭಾಗಗಳು, ೮ ಅನುಸೂಚಿಗಳಿದ್ದು. ಹಲವಾರು ತಿದ್ದುಪಡಿ ಕಂಡು ಪ್ರಸ್ತುತ ನಮ್ಮ ಸಂವಿಧಾನದಲ್ಲಿ ೪೭೦ ವಿಧಿಗಳು,೨೫ ಭಾಗಗಳು, ೧೨ ಅನುಸೂಚಿಗಳನ್ನು ಒಳಗೊಂಡಿದೆ. ನಮ್ಮ ಸಂವಿಧಾನದ ಪೂರ್ವ ಪೀಠಿಕೆಯನ್ನು ನಾವು ಓದಿದರೆ ಇಡೀ ಸಂವಿಧಾನದ ತಿರುಳು ಅರ್ಥವಾಗುತ್ತದೆ.…
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಾರ್ವಜನಿಕ ಜನ ಸಂಪರ್ಕ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಮಾಜಿ ಅಧ್ಯಕ್ಷರಾದ ಎಂ.ಎಸ್.ರುದ್ರಗೌಡ್ರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ಜವಾಹಾರ ಗೋಸಾವಿ, ವಿಠ್ಠಲ ಹೊಸಪೇಟೆ, ಮಲ್ಲಿಕಾರ್ಜುನ ಗಡಗಿ, ನಗರ ಆಶ್ರಯ ಸಮಿತಿ ನಾಮನಿರ್ದೇಶನ ಸದಸ್ಯರಾದ ಪಾರೀಸ್ ಶಿರಹಟ್ಟಿ, ಬಸವರಾಜ ಕಾಂಬಳೆ, ಭೂ ನ್ಯಾಯ ಮಂಡಳಿ ಸಮಿತಿ ನಾಮನಿರ್ದೇಶನ ಸದಸ್ಯರಾದಶರಣು ಕಾಖಂಡಕಿ, ಮುಖಂಡರಾದ ಬಾಬು ಶಿರಶ್ಯಾಡ, ವಿಕ್ರಮ ಗಾಯಕವಾಡ, ಬಸವರಾಜ ಕೋರಿ, ರಾಜಶೇಖರ ಭಜಂತ್ರಿ, ಅಶೋಕ ಬೆಲ್ಲದ, ಮಡಿವಾಳ ಯಾಳವಾರ, ಬಸವರಾಜ ಗೊಳಸಂಗಿ ಸೇರಿದಂತೆ ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಿದ್ದರು.
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಹೊಸದಾಗಿ ವಿಜಯಪುರ-ಬೆಂಗಳೂರು ವೋಲ್ವೋ ಮಲ್ಟಿ ಎಕ್ಸಲ್ ಸ್ಲೀಪರ್ ಬಸ್ ಸಂಚಾರ ಜ.೨೬ರಿಂದ ಆರಂಭಿಸಲಾಗಿದ್ದು, ಸಾರ್ವನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.ಜ.೨೬ರ ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೊಸದಾಗಿ ಆರಂಭಿಸಿರುವ ವಿಜಯಪುರ-ಬೆಂಗಳೂರು ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದು, ಈ ಬಸ್ ಪ್ರತಿ ದಿನ ವಿಜಯಪುರದಿಂದ ರಾತ್ರಿ ೯-೪೫ಕ್ಕೆ ಹೊರಟು ಮರು ದಿನ ಬೆಳಿಗ್ಗೆ ೭-೩೦ಕ್ಕೆ ತಲುಪಲಿದೆ. ಅದರಂತೆ ಬೆಂಗಳೂರಿನಿಂದ ಪ್ರತಿದಿನ ರಾತ್ರಿ ೧೦ ಗಂಟೆಗೆ ಹೊರಟು ಬೆಳಿಗ್ಗೆ ೭-೪೫ಕ್ಕೆ ವಿಜಯಪುರಕ್ಕೆ ತಲುಪಲಿದೆ.ಈ ಸಾರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದ್ದು, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಮೂಲಕ ಇಲ್ಲವೇ ಸಮೀಪದ ಮುಂಗಡ ಟಿಕೆಟ್ ಕೌಂಟರ್ (ಕೇಂದ್ರ ಬಸ್ ನಿಲ್ದಾಣ) ಮೂಲಕ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಜ್ಞಾನೇಶ್ವರ ತಾಟೆ, ಗಾಂಧಿ ಭವನದ ಅಧಿಕಾರೇತರ ಸಮಿತಿ ಸದಸ್ಯರಾದ ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಜ.೨೬ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಇಂದಿನಿಂದ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸಂವಿಧಾನದ ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.ಇದೇ ಸಂದರ್ಭದಲ್ಲಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಎಸಿ ಮಲ್ಟಿ ಎಕ್ಸಲ್ ವೊಲ್ವೋ ಸ್ಲೀಪರ್ ಬಸ್ಸಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ,…
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಮಾಹಿತಿ ವಿವಿಧ ಕಂಪನಿಗಳಿಂದ ಬಂಡವಾಳ ಹೂಡಿಕೆ | ವಿವಿಧ ಕೈಗಾರಿಕೆಗಳ ಸ್ಥಾಪನೆ | ಐದು ಸಾವಿರ ಉದ್ಯೋಗ ಸೃಷ್ಠಿ ವಿಜಯಪುರ: ಜಿಲ್ಲೆಯಲ್ಲಿ ವಿದೇಶಿ ಸೇರಿದಂತೆ ವಿವಿಧ ಕಂಪನಿಗಳು ಬಂಡವಾಳ ಹೂಡಲು ಮುಂದಾಗಿದ್ದು, ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಯಿಂದಾಗಿ ಐದು ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಅವರು ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜ.೨೬ರಂದು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ವಿಜಯಪುರದಲ್ಲಿ ವಿವಿಧ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಮುಂದೆ ಬಂದಿದ್ದು, ಈ ಪೈಕಿ ಲುಲು ಕಂಪನಿ ವಿಜಯಪುರದಲ್ಲಿ ೩೦೦ ಕೋಟಿ ರೂ. ವೆಚ್ಚದಲ್ಲಿ ಹಣ್ಣು ಮತ್ತು ತರಕಾರಿ ಸಂಸ್ಕರಣ ಘಟಕವನ್ನು ತೆರೆಯಲು ಒಪ್ಪಿಕೊಂಡಿದೆ ಎಂದು ಹೇಳಿದರು.ಉತ್ತರಪ್ರದೇಶ ಮೂಲದ ಬಿ.ಎಲ್.…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ವಿಜಯಪುರ: ದೇಶದ ಏಳಿಗೆಗಾಗಿ ಶ್ರಮಿಸಬೇಕಾಗಿರುವಂಥದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ಬರಲು ಪ್ರತಿಯೊಬ್ಬರಿಗೂ ಸಂವಿಧಾನದ ಹಕ್ಕುಗಳು, ಕಾನೂನುಗಳು ಹಾಗೂ ಮೌಲ್ಯಗಳನ್ನು ಎತ್ತಿ ಹಿಡಿದು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದು ಪ್ರಾಚಾರ್ಯೆ ಡಾ.ಆರ್.ಎಮ್.ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ ಪ್ರತಿ ಮೂಲೆಯಲ್ಲಿಯೂ ಈ ಸಂಭ್ರಮ ಆಚರಿಸುತ್ತಿದ್ದು ದೇಶದ ಸಂಸೃತಿಯನ್ನು ಬಿಂಬಿಸುವಂತಹ ಆಚರಣೆಯಾಗಿದೆ ಎಂದರು.ಪ್ರತಿಯೊಂದು ದೇಶವೂ ತನ್ನದೇ ಆದಂತಹ ಸಂವಿಧಾನವನ್ನು ಹೊಂದಿರುತ್ತದೆ. ಅದೇ ತೆರನಾಗಿ ಭಾರತವು ಕೂಡ ವಿವಿಧ ಗಣಗಳಿಂದ ಕೂಡಿದ ಅಖಂಡ ಭಾರತದ ಜನತೆಗೆ ಸ್ವಾತಂತ್ರ್ಯ, ಸಮಾನತೆ, ಭಾತೃತ್ವ, ಹಾಗೂ ಜಾತಾತೀತೆಯ ಮೌಲ್ಯಗಳನ್ನು ಭಾರತೀಯರಿಗೆ ಅವಕಾಶ ಕಲ್ಪಿಸಿದ ಸಂವಿಧಾನದ ಜಾರಿಯಾದ ಸುದಿನ ಎಂದು ಹೇಳಿದರು.ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಜಾತ್ಯಾತೀತ…
Udayarashmi kannada daily newspaper
