Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏ.16 ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಕಾರ್ಯಕರ್ತರೊಂದಿಗೆ ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 12 ಕ್ಕೆ ಸ್ಟೇಶನ್ ರಸ್ತೆಯ ದರ್ಬಾರ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಪ್ರಕಟಣೆಯಲ್ಲಿ ತೀಳಿಸಿದ್ದಾರೆ.ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆ ವಿಶೇಷವಾಗಿ ರಾಜ್ಯ ಬಿಜೆಪಿ ನಾಯಕರುಗಳಾದ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಲಬುರ್ಗಿ ಸಂಸದ ಉಮೇಶ ಜಾಧವ, ನಾರಾಯಣಸಾ ಭಾಂಡಗೆ, ಹಾಲಪ್ಪ ಆಚಾರ, ಜಗದೀಶ ಹಿರೇಮನಿ ಭಾಗಿಯಾಗಲಿದ್ದಾರೆ. ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ…
ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಭಾನುವಾರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ ಪ್ರಾಮಾಣಿಕವಾಗಿ ಮಾಡಿದೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಲ್ಪೋಹಾರ, ತಂಪು ಪಾನಿಯ ವ್ಯವಸ್ಥೆ ಮಾಡಲಾಗಿತ್ತು.ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟೆ, ಜವಾಹರ ಗೋಸಾವಿ, ಕಿರಣ ಪಾಟೀಲ, ವಿಜಯಪುರ ನಗರ ಮಂಡಲ ಅಧ್ಯಕ್ಷ ಶಂಕರ…
ಆಲಮಟ್ಟಿ: ಭಾನುವಾರ ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದಇಲ್ಲಿಯ ಸಂಗೀತ ಕಾರಂಜಿ ಬಳಿ ಸೇರಿದ್ದ ಸಹಸ್ರಾರು ಪ್ರವಾಸಿಗರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಜಿಲ್ಲಾಡಳಿತ ವತಿಯಿಂದ ಭಾನುವಾರ ರಾತ್ರಿ ಜರುಗಿತು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಿಷಿ ಆನಂದ,ಕಡ್ಡಾಯವಾಗಿ ಎಲ್ಲರೂ ಮತ ಚಲಾಯಿಸಬೇಕು, ಪ್ರಜಾಪ್ರಭುತ್ವ ಆಡಳಿತಕ್ಕಾಗಿ , ದೇಶದ ಅಭಿವೃದ್ಧಿಗಾಗಿ ಎಲ್ಲರೂ ಮತದಾನ ಮಾಡಬೇಕು, ಮತದಾನ ಮಾಡದೇ ತಪ್ಪಿಸಿಕೊಳ್ಳಬಾರದು ಎಂದರು. ಮತದಾನ ಸುಲಲಿತ ನಡೆಯಲು ಜಿಲ್ಲಾಡಳಿತ ಸಜ್ಜಾಗಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದರು.ವಿಜಯಪುರ ಲೋಕಸಭಾ ಚುನಾವಣಾ ವೆಚ್ಚ ವಿಚಕ್ಷಣಾಧಿಕಾರಿ ಅನುಪಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಾಲೆ, ಸಹಾಯಕ ಚುನಾವಣಾಧಿಕಾರಿ ಗಂಗಪ್ಪ, ರಾಜಶೇಖರ ಪವಾರ, ಸಿ.ಆರ್. ಮುಂಡರಗಿ, ಬಿ.ಎಸ್. ಮೂಗನೂರಮಠ, ರಾಮಣ್ಣ ಮತ್ತೀತರರು ಇದ್ದರು.ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಮತದಾನ ಮಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಚಡಚಣ: ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಅಚ್ಚುಕಟ್ಟಾಗಿ ನಿರ್ವಹಿಸಲು ಭಾರತೀಯ ಅರೆ ಸೇನಾ ಪಡೆಯ ಯೋಧರು ಹಾಗೂ ಸ್ಥಳೀಯ ಪೊಲೀಸರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರವಿವಾರ ಪಥಸಂಚಲನ ನಡೆಸಿದರು.ಪ್ರೋಬೆಷನರಿ ಎಸ್‌ಪಿ ಕುಮಾರಿ ಶಾಲು ಅವರ ನೇತ್ರತ್ವದಲ್ಲಿ ಪಥಸಂಚಲನ ನಡೆಯಿತು.ಶಾಂತಿ, ಸುವ್ಯವಸ್ಥಿತವಾಗಿ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಧೈರ್ಯ ತುಂಬಿ, ಚುನಾವಣಾ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಮುಂಜಾಗೃತೆಯ ಕ್ರಮವಾಗಿ ಈ ಪಥಸಂಚಲನ ನಡೆಯಿತು. ಲೋಕಸಭಾ ಚುನಾವಣಾ ನಿಮಿತ್ಯ ಚಡಚಣ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೆಟಾಲಿನ್ ೧ರ ಸೈನಿಕರು ಹಾಗೂ ಸ್ಥಳೀಯ ಪೊಲೀಸರಿಂದ ಪಥಸಂಚಲನ ಜಾಗೃತಿ ನಡೆಯಿತು.ಈ ಸಂದರ್ಭದಲ್ಲಿ ಬೆಟಾಲಿನ್ ೧ರ ಕಮಾಂಡೆಂಟ ಸೌರಭ, ಚಡಚಣ ಸಿಪಿಐ ಎಚ್.ಡಿ. ಮುಲ್ಲಾ, ಪಿಎಸ್‌ಐ ರಾಘವೇಂದ್ರ ಖೋತ ಹಾಗೂ ಸ್ಥಳೀಯ ಠಾಣೆಯ ಪೊಲೀಸರು ಪಥಸಂಚಲದಲ್ಲಿ ಪಾಲ್ಗೊಂಡಿದ್ದರು.
ಚಡಚಣ: ಜಿಲ್ಲಾ ಆಡಳಿತ ವಿಜಯಪುರ, ಸ್ವೀಪ್ ಸಮಿತಿ ಹಾಗೂ ಪಟ್ಟಣ ಪಂಚಾಯತಿ ಚಡಚಣ ಇವರ ಸಹಯೋಗದಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಸಹಿ ಸಂಗ್ರಹಣ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಹಿ ಸಂಗ್ರಹಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಸ್. ಎಸ್. ಪೂಜಾರಿ ಅವರು ೧೮ ವರ್ಷ ತುಂಬಿದ ಪ್ರತಿಯೊಬ್ಬ ಸ್ತ್ರೀ- ಪುರುಷರು ಮತದಾನ ಮಾಡಲು ಅರ್ಹರಾಗಿದ್ದಾರೆ. ಆದ ಕಾರಣ ಎಲ್ಲ ಮತದಾರ ಬಾಂಧವರು ಬರುವ 2024 ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಕಂದಾಯ ನಿರೀಕ್ಷಕರಾದ ಆರ್.ಬಿ.ಭಂಡಾರಿ, ಶ್ರೀದೇವಿ ಕೊಟ್ಟಲಗಿ, ಅನುಸೂಯಾ ಕಂಟಿಕರ, ರಾಜೇಂದ್ರ ಸುಂಗದಿ, ಮತ್ತು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಮತ್ತು ಪೌರಕಾರ್ಮಿಕರು ಇದೇ ಸಂದರ್ಭದಲ್ಲಿ ಇದ್ದರು.
-ಮಲಿಕ್.ಎಲ್.ಜಮಾದಾರ ವಿಜಯಪುರ: ಈ ವರ್ಷ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಝಳವೋ ಝಳ. ಇದರಿಂದ ನೀರಿನ ಆಕರಗಳು ಒಣಗಿ ಹೋಗಿವೆ. ಜನ ಜೀವನಕ್ಕೆ ನೀರಿನ ಅಭಾವದಿಂದ ಅಸ್ತವ್ಯಸ್ತ ಉಂಟಾಗಿದೆ. ಇಂತಹ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಮತ್ತಷ್ಟು ತಾರಕ್ಕೇರಿದೆ. ಜನ ಜಾನುವಾರುಗಳಿಗೆ ನೀರಿನ ಅಭಾವದಿಂದಾಗಿ ಗ್ರಾಮದ ಸುತ್ತಮುತ್ತಲಿನ ವಸ್ತಿ ಪ್ರದೇಶಗಳಲ್ಲಿ ನೀರನ್ನು ಪೂರೈಸಲು ನಂದರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಧುಮಕನಾಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವತಃ ಗ್ರಾಮ ಪಂಚಾಯತಿ ಸದಸ್ಯರೇ ಜನರ ನೀರಿನ ಬವಣೆಯನ್ನು ನೀಗಿಸುವಲ್ಲಿ ಮುಂದಾಗಿದ್ದಾರೆ. ನಿತ್ಯ ಹಲವು ವಸ್ತಿ ಪ್ರದೇಶಗಳಿಗೆ ಖುದ್ದಾಗಿ ತಾವೇ ಟ್ಯಾಂಕರ್ ಮೂಲಕ ನೀರನ್ನು ಪೂರೈಸುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿದ ಗ್ರಾಮಸ್ಥರು ಇವರ ಸೇವೆ ನಿಜಕ್ಕೂ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ.ಜನಸೇವೆಯೇ ಜನಾರ್ದನ ಸೇವೆ ಎಂಬಂತೆ ಬಿಸಲಿನ ಹಂಗಿಲ್ಲದೆ ನಿರಂತರ ಜನರ ದಾಹ ತಣಿಸುವಲ್ಲಿ ಮುಂದಾಗಿದ್ದಾರೆ. ಜನಪ್ರತಿನಿಧಿಗಳು ಕುಂತಲ್ಲೆ ಪರೋಕ್ಷವಾಗಿ ಜನಸೇವೆ ಮಾಡುವ ಈ ದಿನಮಾನದಲ್ಲಿ ಇವರು ಪ್ರತ್ಯಕ್ಷವಾಗಿ ಈ ಸೇವೆಗೆ ಮುಂದಾಗಿದ್ದು ನಿಜಕ್ಕೂ ಶ್ಲಾಘನೀಯವಾದದ್ದಾಗಿದೆ.ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ತತ್ತರಿಸಿದ…
ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮತ್ತು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ, ಉಪಸ್ಥಿತರಿದ್ದರು.ಎರಡನೇ ಸೆಟ್ ನಲ್ಲಿ ನಾಮಪತ್ರ ಸಲ್ಲಿಸುವ ವೇಳೆ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ನ್ಯಾಮಗೊಂಡ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ಪೂಜಾರಿ ಉಪಸ್ಥಿತರಿದ್ದರು.
ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಐಶ್ವರ್ಯ ನಗರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು.ದೇಶದಲ್ಲಿ ಬದಲಾವಣೆ ಮಾಡುವುದಾಗಿ 2014 ರಲ್ಲಿ ಮೋದಿ ದೊಡ್ಡ ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಆದರೆ, ಕಳೆದ 10 ವರ್ಷಗಳಲ್ಲಿ ಅವರು ನೀಡಿರುವ ಯಾವ ಭರವಸೆಗಳೂ ಈಡೇರಿಲ್ಲ. ಅಚ್ಛೆ ದಿನ್, ಕಪ್ಪು ಹಣ ವಾಪಸ್, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಯಾವುದೂ ಈಡೇರಿಲ್ಲ. ಬದಲಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ…
ವಿಜಯಪುರ: ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಚುನಾವಣೆ ಪ್ರಚಾರ ಚಟುವಟಿಕೆಗಳಿಗಾಗಿ ಈ ಕಾರ್ಯಾಲಯ ಪ್ರಾರಂಭಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ, ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಡಾ. ಮಕ್ಬೂಲ ಬಾಗವಾನ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ವಸಂತ ಹೊನಮೋಡೆ, ಹೊನಮಲ್ಲ ಸಾರವಾಡ, ಸುರೇಶಗೌಡ ಪಾಟೀಲ, ಚಂದ್ರಕಾಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ವಿಜಯಪುರ: ಜಗತ್ಪ್ರಸಿದ್ಧ ಕಲಾವಿದ ಲಿಯೋನಾರ್ಡ್ ಡಾ ವಿಂಚಿ ಕೇವಲ ಒಬ್ಬ ಕಲಾವಿದ ಅಲ್ಲದೆ ಪ್ರಖ್ಯಾತ ವಾಸ್ತುಶಿಲ್ಪಿ, ಅಂಗರಚನಾ ತಜ್ಞರಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೆ ಆದ ಮಹತ್ವದ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದ ಇತಿಹಾಸಕಾರರಾಗಿದ್ದರು ಎಂದು ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಟಂಕಸಾಲಿ ಹೇಳಿದರು.ಸೋಮವಾರ ನಗರದ ಆರ್ಟ್ ಗ್ಯಾಲರಿಯಲ್ಲಿ ನಡೆದ ವಿಶ್ವದೃಶ್ಯಕಲಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ನಮ್ಮ ದೇಶದ ಪ್ರಖ್ಯಾತ ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನವನ್ನು ನಮ್ಮ ದೇಶದ ಕಲಾ ದಿನವನ್ನಾಗಿ ಆಚರಿಸಬೇಕೆಂದು ಸಲಹೆ ನೀಡಿದರು.ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಮತನಾಡಿ, ಕಲಾವಿದರು ಸರ್ವ ಸ್ವತಂತ್ರರು. ಕವಿ ಕಾಣದನ್ನು ಕಲಾವಿದ ಕಂಡಹಾಗೆ ಸಮಾಜಕ್ಕೆ ತನ್ನದೆ ದೃಶ್ಯಭಾಷೆಯಲ್ಲಿ ಸಂದೇಶಗಳನ್ನು ನೀಡುತಿದ್ದಾರೆ. ಅವರು ನಿಜವಾದ ಸಮಾಜದ ಆಸ್ತಿ ಎಂದರು.ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನಾಚರಣೆಗೆ ಸಂಪೂರ್ಣ ಸಹಾಯ ನೀಡುವುದಾಗಿ ಭರವಸೆ ನೀಡಿದರು.ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ…
