Author: editor.udayarashmi@gmail.com

ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ದೇವಾಸ್ಥಾನ ಸ್ವಚ್ಛತೆ ಚಡಚಣ: ಇದೇ ೨೨ರಂದು ಅಯೋಧ್ಯಯ ರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಎಂಇಎಸ್ ಶಿಕ್ಷಣ ಸಂಸ್ಥೆಯ ಪ್ರೌಢ ಹಾಗೂ ಐಟಿಐ ವಿದ್ಯಾರ್ಥಿಗಳ ವತಿಯಿಂದ ಪಟ್ಟಣದ ಹಲವಾರು ದೇವಾಲಯಗಳ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು.ಈ ವೇಳೆಯಲ್ಲಿ ಮಾತನಾಡಿದ ಶಿಕ್ಷಕ ಮಲ್ಲು ಮಾನೆಯವರು, ಪರಿಸರದ ಸ್ವಚ್ಛತೆ ಅರಿವು ನಮಗೆ ಇಂದು ಅಗತ್ಯವಾಗಿದೆ. ಅದರಲ್ಲೂ ಇಂಥ ಸ್ಥಳಗಳು ಸ್ವಚ್ಛತೆಯಿಂದ ಕೂಡಿರಬೇಕು. ನಮ್ಮ ಪ್ರಾಚೀನ ಪರಂಪರೆಯ ದೇಗುಲಗಳು, ಶಿಲ್ಪಗಳನ್ನು ಹಾಳಾಗದಂತೆ ರಕ್ಷಿಸುವ ಜವಾಬ್ದಾರಿ ಕೂಡ ವಿದ್ಯಾರ್ಥಿಗಳು ಮಾಡಬೇಕು. ಹಿಂದಿನ ಪರಂಪರೆ ಮುಂದಿನ ಪೀಳಿಗೆಯವರೆಗೆ ಮುಟ್ಟಿಸುವ ಹೊಣೆ ನಿಮ್ಮದಾಗಬೇಕು ಎಂದರು.ಈ ಸಂದರ್ಭದಲ್ಲಿ ಹನುಮಾನ, ಲಕ್ಷ್ಮೀ, ನವಗ್ರಹ ಹಾಗೂ ಸಂಗಮೇಶ್ವರ ದೇವಾಲಯಗಳು ಸೇರಿದಂತೆ ಪ್ರಮುಖ ದೇವಾಲಯಗಳ ಆವರಣಗಳನ್ನು ಸ್ವಚ್ಛತೆ ಮಾಡಲಾಯಿತು.ಈ ವೇಳೆ ಅನಿಲ ಬಿಳೂರ, ಸಿ.ಕೆ.ಬಿರಾದಾರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಬಸವನಬಾಗೇವಾಡಿ: ಜೀವನದಲ್ಲಿ ಯಾರು ಕೆಲಸದಲ್ಲಿ ಯಶಸ್ಸು ಪಡೆಯಲು ಹೆಚ್ಚು ಪ್ರಯತ್ನ ಪಡುತ್ತಾರೋ ಅವರು ಖಂಡಿತ ಅವರು ಕೈಗೊಳ್ಳುವ ಕೆಲಸದಲ್ಲಿ ಖಂಡಿತ ಯಶಸ್ಸು ಪಡೆಯುತ್ತಾರೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಪಟ್ಟಣದ ಸಂಸ್ಥಾನ ಹಿರೇಮಠದಲ್ಲಿ ಶುಕ್ರವಾರ ಫೆ 2 ರಿಂದ 4 ರವರೆಗೆ ವಿವಿಧ ಕಾರ್ಯಕ್ರಮದಂಗವಾಗಿ ಹಮ್ಮಿಕೊಂಡಿರುವ ಕಲಬುರಗಿಯ ಶರಣಬಸವೇಶ್ವರ ಪುರಾಣ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶ್ರೀಮಠದ ಸದ್ಭಕ್ತರ ಸಹಕಾರದಿಂದ ಶ್ರೀಮಠದ ಅಭಿವೃದ್ಧಿಯಾಗುತ್ತಿದೆ. ಶ್ರೀಮಠದಿಂದ ಮುಂಬರುವ ದಿನಗಳಲ್ಲಿ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಆಲೋಚನೆ ನಮ್ಮ ಮುಂದಿದೆ. ಫೆ.2 ರಿಂದ 4 ರವರೆಗೆ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮದ ಯಶಸ್ವಿಗೊಳಿಸಲು ಎಲ್ಲರೂ ತನು-ಮನ-ಧನದಿಂದ ಸಹಕಾರ ಮಾಡಬೇಕೆಂದರು.ಕಲಬುರಗಿಯ ಶರಣಬಸವೇಶ್ವರ ಪುರಾಣವನ್ನು ಮಸೂತಿಯ ಡಾ.ಶಿವಲಿಂಗಯ್ಯ ಶರಣರು ನಡೆಸಿಕೊಡುತ್ತಿದ್ದಾರೆ. ಸಂಗೀತ ಸೇವೆಯನ್ನು ಪರಶುರಾಮ ಚಟ್ನಳ್ಳಿ, ಬಸನಗೌಡ ಬಿರಾದಾರ ಸಲ್ಲಿಸುತ್ತಿದ್ದಾರೆ.ಇದೇ ಸಂದರ್ಭದಲ್ಲಿ ಶಿವನಗೌಡ ಗುಜಗೊಂಡ ಅವರು ತಮ್ಮ ಪರಿವಾರದಿಂದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರಿಗೆ ನಾಣ್ಯಗಳಿಂದ ತುಲಾಭಾರ…

Read More

ಬಸವನಬಾಗೇವಾಡಿ: ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸರ್ಕಾರ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ಜನರಿಗೆ ತಲುಪಿಸುವ ಕಡೆಗೆ ಗಮನ ಹರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ-೧ ಎಸ್ಎಲ್ಎಓ, ತಾಲೂಕು ಉಸ್ತುವಾರಿ ಅಧಿಕಾರಿ ಬಲರಾಮ ಚೌವ್ಹಾಣ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜರುಗಿದ ತಾಲೂಕಿನ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರದ ಅನುದಾನ ಸರಿಯಾಗಿ ಬಳಕೆ ಮಾಡಬೇಕು. ಯಾವುದೇ ಸಮಸ್ಯೆ ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯಾವುದಾದರೂ ಸಮಸ್ಯೆಗಳು ಬಂದರೆ ನಮ್ಮ ಗಮನಕ್ಕೆ ತಂದರೆ ತಾವು ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವುವದಾಗಿ ಹೇಳಿದರು.ಮುಂಬರುವ ಬೇಸಿಗೆ ಕಾಲದಲ್ಲಿ ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರು ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ರೇಷ್ಮೆ ಇಲಾಖೆಯಿಂದ ರೈತ ಬಾಂಧವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ತಲುಪಿಸಬೇಕು. ಅರಣ್ಯ ಇಲಾಖೆಯಿಂದ ಕೆರೆ, ಸ್ಮಶಾನ, ಗುಡ್ಡ-ಗಾಡು ಪ್ರದೇಶ ಸೇರಿದಂತೆ ಅಗತ್ಯವಿರುವ ಕಡೆಗಳಲ್ಲಿ…

Read More

ವಿಜಯಪುರ: ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯಿಂದ ೨೦೨೩-೨೪ನೇ ಸಾಲಿನಲ್ಲಿ ಲಿಂಬೆ ಬೆಳೆಗಾರರಿಗೆ ಯಂತ್ರಗಳನ್ನು ಖರೀದಿಸಲು ಯಾಂತ್ರಿಕರಣ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಇಂಡಿ ಕಚೇರಿಯ ಸಹಾಯಕ ನಿರ್ದೇಶಕರಾದ ಆನಂದ ಬಿರಾದಾರ (ಮೊ:೯೬೧೧೦೭೧೦೭೧) ಇವರನ್ನು ಸಂಪರ್ಕಿಸಬಹುದು ಎಂದು ಇಂಡಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಇಂಡಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರ ಜಿಲ್ಲೆಯಲ್ಲೆಡೆ ಸಂಚಾರ ವಿಜಯಪುರ: ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ ೨೬ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿರುವ ಸ್ತಬ್ಧಚಿತ್ರ ವಾಹನಕ್ಕೆ ಮಾರ್ಗನಕ್ಷೆ (ರೂಟ್ ಮ್ಯಾಪ್) ಸಿದ್ಧಪಡಿಸಲಾಗಿದ್ದು, ಮಾರ್ಗನಕ್ಷೆಯಂತೆ ಸ್ತಬ್ಧಚಿತ್ರ ವಾಹನ ಸಂಚರಿಸಲು ಎಲ್ಲ ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜಾಥಾದ ಎರಡೂ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ೨೭ ದಿನಗಳ ಕಾಲ ಸಂಚರಿಸಲಿದ್ದು, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ಗಳು ಒಳ್ಳಗೊಳ್ಳಬೇಕು. ತಾಲೂಕಾ ಕೇಂದ್ರದಲ್ಲಿ ಸ್ತಬ್ಧಚಿತ್ರ ಆಗಮಿಸುವ ಸಂದರ್ಭದಲ್ಲಿ ಎಲ್ಲ ತಹಶೀಲ್ದಾರರು, ನೋಡಲ್ ಅಧಿಕಾರಿಗಳು ಸ್ಥಳದಲ್ಲಿದ್ದು, ಭವ್ಯವಾಗಿ ಸ್ವಾಗತಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.ವಿಜಯಪುರದಿಂದ ಹಾಗೂ ಇನ್ನೊಂದು ಇಂಡಿಯಿಂದ ಸ್ತಬ್ಧಚಿತ್ರ ಸಂಚರಿಸಲಿದೆ. ಜಿಲ್ಲೆಯ ೧೩…

Read More

ಆಲಮಟ್ಟಿ: ಅಯೋಧ್ಯೆಯಲ್ಲಿ ರಾಮಮಂದಿರದ ರಾಮದೇವರ ಪ್ರಾಣಪ್ರತಿಷ್ಠಾಪನೆ ನಿಮಿತ್ತ ಇದೇ ೨೨, ಸೋಮವಾರ ತಾಲ್ಲೂಕಿನ ಸುಕ್ಷೇತ್ರ ಯಲಗೂರದಲ್ಲಿ ಶ್ರೀ ಯಲಗೂರೇಶನ ಸನ್ನಿಧಾನಲ್ಲಿ ಇಡೀ ದಿನ ನಿರಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಅಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಯಲಗೂರೇಶನಿಗೆ ಅಭಿಷೇಕ, ಮನ್ಯುಸೂಕ್ತ ಪಾರಾಯಣ, ವಾಯಸ್ತುತಿ ಪುನಶ್ಚರಣ, ಲೋಕಕಲ್ಯಾಣಾರ್ಥ ಸುಂದರಕಾAಡ ಪಾರಾಯಣ ಪುಣ್ಯಾವಾಚನ, ರಾಮನಾಮ ಜಪ ನಡೆಯಲಿದೆ.ನಂತರ ಶ್ರೀ ರಾಮನಾಮ ತಾರಕ ಹೋಮ ಮತ್ತು ಮನ್ಯುಸೂಕ್ತ ಹೋಮ, ಮಹಾಪೂಜೆ, ರಾಮದೇವರ ಮೆರವಣಿಗೆ, ಪ್ರಸಾದ ವಿತರಣೆ ಮತ್ತು ಸಂಜೆ ದೀಪೋತ್ಸವ ರಾಮಸಂಕೀರ್ತನೆ, ಸಂಗೀತ ಕಾರ್ಯಕ್ರಮ ಹಾಗೂ ದೇವಸ್ಥಾನ ಪ್ರಾಂಗಣದಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇವಸ್ಥಾನ ಕಮಿಟಿಯ ಅಧ್ಯಕ್ಷ ಅನಂತ ಓಂಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಅಖಂಡ ವಿಜಯಪುರ ಜಿಲ್ಲೆಯ ಜನರ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ ತುಂಬಿಸಬೇಕು ಎಂದು ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಿಂಗರಾಜ ಆಲೂರ ಆಗ್ರಹಿಸಿದರು.ಶನಿವಾರ ಆಲಮಟ್ಟಿಯಲ್ಲಿರುವ ಶ್ರೀರಾಮಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆಯಲ್ಲಿ ಎಸ್‌ಬಿಐ ಬ್ಯಾಂಕ್ ಮಾರ್ಗವಾಗಿ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಗೆ ತೆರಳಿ ಮನವಿ ಅರ್ಪಿಸಿ ಮಾತನಾಡಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಲಕ್ಷಾಂತರ ಎಕರೆ ಜಮೀನು, ನೂರಾರು ಊರುಗಳು ಮುಳುಗಡೆಯಾಗಿ ಲಕ್ಷಾಂತರ ಕುಟುಂಬಗಳು ಸಂತ್ರಸ್ಥರಾಗಿರುವ ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಪರದಾಡುವಂತೆ ಮಾಡಲು ಅಧಿಕಾರಿಗಳು ಕೃತಕ ಅಭಾವ ಸೃಷ್ಠಿಸುತ್ತಿದ್ದಾರೆ. ರಾಜ್ಯದಲ್ಲಿ ಮುಂಗಾರು-ಹಿಂಗಾರು ಮಳೆಗಳು ಸಮರ್ಪಕವಾಗಿ ಸುರಿಯದಿದ್ದರೂ ಕೃಷ್ಣೆಯ ಉಗಮಸ್ಥಾನ ಮಹಾಬಲೇಶ್ವರ ಮತ್ತು ಕೃಷ್ಣೆಯ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದರಿಂದ ಕೃಷ್ಣೆಗೆ ನೀರು ಹರಿದುಬಂದು ಜನತೆಯ ದಾಹ ನೀಗಿಸುವಂತಾಗಿದೆ ಎಂದರು.ಬರದ ಜಿಲ್ಲೆಯೆಂದೇ ಖ್ಯಾತಿ ಪಡೆದಿರುವ ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಜಲಾಶಯ ನಿರ್ಮಿಸಿ ನೂರಾರು ಟಿಎಮ್‌ಸಿ ನೀರು ಸಂಗ್ರಹ ಮಾಡಿಕೊಂಡಿದ್ದರೂ…

Read More

ವಿಜಯಪುರ: ಅಖಿಲ ಭಾರತ ವಾಲ್ಮೀಕಿ ಸೇವಾ ಸಂಘದ ವತಿಯಿಂದ ಕೊಲ್ಹಾರ ಜಿಲ್ಲೆಯ ವೆಮಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮೇಡಿಹಾಳ್ ಗ್ರಾಮದ ವಾಲ್ಮೀಕಿ ಸಮಾಜದ ನೀಲಮ್ಮ ಎಂಬ ಮಹಿಳೆಯ ಮೇಲೆ ದೌರ್ಜನ್ಯ ಎಸಗಿ ಚಿತ್ರ ಹಿಂಸೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಮುಖಾಂತರ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಕೋಲ್ಹಾರ್ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಡಿಹಾಳ ಗ್ರಾಮದ ವಾಲ್ಮೀಕಿ ಸಮಾಜದ ನೀಲಮ್ಮ ಎಂಬ ದಲಿತ ಮಹಿಳೆಯು ಮದುವೆ ಮತ್ತಿತರ ಕಾರ್ಯಕ್ರಮಗಳಲ್ಲಿ ಎಲೆ ಎತ್ತುವ ಕೆಲಸ ಮಾಡುತ್ತಾ ಬಿಡುವಿನ ವೇಳೆಯಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅದೇ ಗ್ರಾಮದ ಸವರ್ಣೀಯ ಸಮುದಾಯದ ಪ್ರಕಾಶ ಮತ್ತು ಮಮತಾ ದಂಪತಿಗಳು ನೀಲಮ್ಮನನ್ನು ಮನೆಗೆಲಸಕ್ಕೆ ಕರೆದಿದ್ದಾರೆ. ಅವಳು ಅನಾರೋಗ್ಯ ಕಾರಣ ಕೆಲಸಕ್ಕೆ ಹೋಗಿಲ್ಲ. ಇದನ್ನೇ ನೆಪ ಮಾಡಿಕೊಂಡು ದಂಪತಿಗಳು ಇಬ್ಬರು ಸೇರಿ ನೀಲಮ್ಮನ ಮನೆಗೆ ನುಗ್ಗಿ ಮನಸೋ ಇಚ್ಛೆ…

Read More

ಕೆಂಭಾವಿ: ಎರಡು ದಿನಗಳ ಕಾಲ “ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡೀಸೆಬಿಲಿಟಿ “(ಎ ಪಿ ಡಿ ) ಸಂಸ್ಥೆ ಮತ್ತು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ” ಪುನಃಚೇತನ ಮೇಳ” ವನ್ನು ಹಮ್ಮಿಕೊಳ್ಳಗಿತ್ತು.ವಿಕಲಚೇತನ ಮಕ್ಕಳಿಗೆ ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಆರೋಗ್ಯ ತಪಾಸಣೆಯನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಮೇಳದಲ್ಲಿ ಆರೋಗ್ಯ ತಪಾಸಣೆಯನ್ನು ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಮಾಡಿದರು.ಕು. ಸ್ವಾತಿಕಾ ಬಿ ಆರ್ ಅವರು ವಿಕಲಚೇತನ ಮಕ್ಕಳಿಗೆ ವ್ಯಾಯಾಮ ಕಲಿಸಿಕೊಟ್ಟರು. ಇದೆ ಸಂದರ್ಭದಲ್ಲಿ ಮಹೇಶ್ ಎಂಬ ಮಗುವಿಗೆ ಎ ಪಿ ಡಿ .ಸಂಸ್ಥೆಯಿಂದ ಗಾಲಿ ಕುರ್ಚಿಯನ್ನು ವಿತರಿಸಲಾಯಿತು.ಸುರಪುರ ತಾಲೂಕು ಸಂಯೋಜಕ ಸುನಿಲ್ ಹುಲ್ಯಾಳ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮಾಂತೇಶ್ ಕುಂಬಾರ, ಸ್ವಾಗತವನ್ನು ಶ್ರೀಮತಿ ಲಕ್ಷ್ಮೀ ರಾಮಣ್ಣ ಹಾಲರ್, ಸಹಾಯಕರಾದ ಶ್ರೀಮತಿ ಮೀನಾಕ್ಷಿ, ಶ್ರೀ ಬಸವರಾಜ್ ಬೇವಿನಾಳ ವಂದನಾರ್ಪಣೆ ಮಾಡಿದರು.ಶಿಬಿರದಲ್ಲಿ ಇಂಜೆಕ್ಷನ್,ಮಾತ್ರೆ , ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಣೆ ಮಾಡಲಾಯಿತು.ಒಟ್ಟು 70 ಜನ ಶಿಬಿರದಲ್ಲಿ ಪಾಲ್ಗೊಂಡಿದ್ದರು. 41 ಮಕ್ಕಳು ಆರೋಗ್ಯ ತಪಾಸಣೆಯ…

Read More

ಮುದ್ದೇಬಿಹಾಳ: ಜ.೨೧ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ದಾಸೋಹ ದಿನಾಚರಣೆ ಪ್ರಯುಕ್ತ, ಶ್ರೀ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್ ಮತ್ತು ವೀರಶೈವ ಲಿಂಗಾಯತ ಸಮಾಜದ ವತಿಯಿಂದ, ತ್ರಿವಿಧ ದಾಸೋಹಿ ಶತಾಯುಷಿ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳು ಸಿದ್ದಗಂಗಾ ಮಠ ತುಮಕೂರು, ಮತ್ತು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ವಿಜಯಪುರ ಇವರ ಸ್ಮರಣೋತ್ಸವ ಹಾಗೂ ಲಿಂಗೈಕ್ಯ ಚನ್ನಣ್ಣ ದೇಸಾಯಿ ಅವರ ಸ್ಮರಣಾರ್ಥವಾಗಿ ಪಟ್ಟಣದ ತಹಶಿಲ್ದಾರರ ಕಚೇರಿಯ ಹತ್ತಿರದ ಹೆಮರೆಡ್ಡಿ ಮಲ್ಲಮ್ಮ ವೃತ್ತದ ಬಳಿ ಇರುವ ಗಾರ್ಡನ್ ಜಾಗೆಯಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮತ್ತು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮತ್ತು ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರ ಅಭಿಮಾನಿ ಬಳಗದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಪ್ರಮುಖರಾದ ದೇವೇಂದ್ರ ವಾಲಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More