Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಗತ್ತಿನಲ್ಲಿ ಅನೇಕ ದಾರ್ಶನಿಕ ಮಹನೀಯರು ತಮ್ಮದೇಯಾದ ಸಂದೇಶಗಳನ್ನು ಸಾರಿದ್ದಾರೆ. ನಾವು ಅದನ್ನು ಅರ್ಥ ಮಾಡಿಕೊಂಡು ಅವರ ವಿಚಾರಧಾರೆಗಳನ್ನು ಎಲ್ಲರಿಗೂ ತಿಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಾಯೋಗಿಯ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ. ಮಹನೀಯರ ಸಾರಿದ ತತ್ವ ಸಿದ್ದಾಂತಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು. ಹುಟ್ಟಿನಿಂದಲೇ ಎಲ್ಲರೂ ಸಮಾನರು ಎಂದು ಸಾರಿದ ವೇಮರ ಬದುಕು ನಮಗೆ ಸ್ಪೂರ್ತಿಯಾಗಬೇಕು ಎಂದರು ಮಹಾಯೋಗಿ ವೇಮರ ಜೀವನ ಚರಿತ್ರೆಯ ಬಗ್ಗೆ ಡಾ.ಉಷಾದೇವಿ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮವನ್ನು ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾದ ಮೆಹೇಜನಬಿ ಹೊರ್ತಿ ಅವರು ಉದ್ಘಾಟಿಸಿದರು.ಉಪ ಮಹಾಪೌರ ದಿನೇಶ ಹಳ್ಳಿ, ತಹಶಿಲ್ದಾರ ಶ್ರೀಮತಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಯುಭ್ ದ್ರಾಕ್ಷಿ, ಎಚ್.ಮಮದಾಪುರ ವಿದ್ಯಾವತಿ ಅಂಕಲಗಿ, ಸುರೇಶ ದೇಸಾಯಿ,…
ವಿಜಯಪುರ: ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೪೫೯೨೫೧ ಗೃಹಬಳಕೆ ಸ್ಥಾವರಗಳಿದ್ದು, ಡಿಸೆಂಬರ್-೨೦೨೩ರ ಅಂತ್ಯಕ್ಕೆ ೪೧೬೮೯೧ ಗ್ರಾಹಕರು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ೪೦೮೪೨೫ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆದಿದ್ದು, ಪ್ರತಿಶತ ೯೮ರಷ್ಟು ಫಲಾನುಭವಿಗಳು ಒಟ್ಟು ೧೫.೯೬ ಮಿಲಿಯನ್ ಯೂನಿಟ್ ಬಳಕೆ ಮಾಡಿದ್ದು, ಇದರಿಂದ ಇಲಾಖೆಗೆ ೧೫.೮೨ ಕೋಟಿ ರೂ. ಅನುದಾನ ಲಭ್ಯವಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಅವರು ತಿಳಿಸಿದ್ದಾರೆ.ಗೃಹಜ್ಯೋತಿ ಯೋಜನೆಯಡಿ ನೊಂದಾಯಿಸಲು ಯಾವುದೇ ಕಾಲಮಿತಿ ಇರುವುದಿಲ್ಲ. ಇನ್ನೂ ಬಾಕಿ ಉಳಿದ ೩೩೯೫೯ ಗ್ರಾಹಕರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಉಪ ವಿಭಾಗ ಕಚೇರಿ (ಸೌಜನ್ಯ ಕೌಂಟರ್), ಗ್ರಾಮ ಒನ್ ಕೇಂದ್ರಗಳು, ಕರ್ನಾಟಕ ಒನ್ ಕೇಂದ್ರ, ಸೈಬರ್ ಕೇಂದ್ರಗಳು, ಸೇವಾ ಸಿಂಧೂ ಪೋರ್ಟಲ್‌ನಲ್ಲಿ ಮತ್ತು ಮೊಬೈಲ್ ಮೂಲಕ https://sevasindhugs.karnataka.gov.in ಮೂಲಕ ಆಧಾರ ಕಾರ್ಡ, ವಿದ್ಯುತ್ ಬಿಲ್ ಹಾಗೂ ಆಧಾರ ಲಿಂಕ್‌ಇರುವ ಮೊಬೈಲ್‌ನೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸಲು ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.೫೦ರಷ್ಟು ಸಹಾಯಧನವನ್ನು (ಕನಿಷ್ಠ ೨೦ ಲಕ್ಷ ರೂ.ದಿಂದ ಗರಿಷ್ಠ ೫೦ ಲಕ್ಷ ರೂ.ವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮೂಲಕ ನೀಡಲಾಗುವುದು.ಆಸಕ್ತ ನವೋದ್ಯಮಿಗಳು ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ : ೨೯-೦೧-೨೦೨೪ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮುದ್ದೇಬಿಹಾಳ: ತಾಲೂಕಿನ ಗುಡಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾಯೋಗಿ ವೇಮನರ ಜಯಂತಿ ಆಚರಿಸಲಾಯಿತು.ಶಾಲೆಯ ಮುಖ್ಯಗುರು ಸಂಗಮೇಶ ನವಲಿ, ಮಡಿಕೇಶ್ವರ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಂಗಣ್ಣ ಮೇಟಿ, ಸದಸ್ಯರಾದ ಮಲ್ಲಪ್ಪ ಚಲವಾದಿ, ಗ್ರಾಮದ ಪ್ರಮುಖರಾದ ಮಡಿವಾಳಪ್ಪ ಮಾಡಗಿ, ಗುರುನಾಥಗೌಡ ಬಿರಾದಾರ, ಶಂಕರಗೌಡ ಬಿರಾದಾರ, ಗುರುಬಸಪ್ಪಗೌಡ ಹೂಲಗೇರಿ, ಮಹಾದೇವಪ್ಪಗೌಡ ಬಿರಾದಾರ, ಎಂಜಿವಿಸಿ ಕಾಲೇಜು ಉಪನ್ಯಾಸಕ ಶಿವಾನಂದ ಮೂರ್ತಿ, ವೀರಭದ್ರಪ್ಪಗೌಡ ಮಾಡಗಿ, ಶಿಕ್ಷಕಿ ಲಕ್ಷ್ಮೀ ಮನಿಕಟ್ಟಿ, ಅತಿಥಿ ಶಿಕ್ಷಕಿ ಯಲ್ಲಮ್ಮ ಉತಾಳೆ, ಕಾಶಿಬಾಯಿ ಹಾದಿಮನಿ, ಪ್ರಭುಗೌಡ ಬಿರಾದಾರ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಮುದ್ದೇಬಿಹಾಳ: ಮುದ್ದೇಬಿಹಾಳ, ಢವಳಗಿ ಹಾಗೂ ನಾಲತವಾಡ ಹೋಬಳಿಯಲ್ಲಿ ಕೃಷಿಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕಾಗಿ ರೈತರಿಂದ ಸ್ವೀಕರಿಸಲಾದ ಅರ್ಜಿಗಳು ಗುರಿಗಿಂತ ಹೆಚ್ಚಿಗೆ ಬಂದಿದ್ದು, ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲು ಜ.೨೨ ನಿಗದಿಪಡಿಸಲಾಗಿದೆ. ಈ ಭಾಗದಲ್ಲಿ ಅರ್ಜಿ ಸಲ್ಲಿಸಿದ ಪಲಾನುಭವಿಗಳು ಅಂದು ಮದ್ಯಾಹ್ನ ೩ಕ್ಕೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.
ಮುದ್ದೇಬಿಹಾಳ: ೨೦೨೩-೨೪ ನೇ ಸಾಲಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಸರ್ಕಾರಿ ಉರ್ದು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ.ಸಿ .ಕೆರೂರ ಅವರನ್ನು ಆಯ್ಕೆ ಮಾಡಲಾಗಿದೆ.
ಜಾನಪದ ಸಮಾವೇಶ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಅಭಿಮತ ತಾಳಿಕೋಟಿ: ಎಲ್ಲ ಧರ್ಮ – ಜಾತಿಗಳ ತತ್ವಸಾರ ಜಾನಪದ ಕುಲುಮೆಯಲ್ಲಿಯೇ ಉದಯವಾಗಿವೆ. ಮಾನವೀಯ ಮೌಲ್ಯಗಳಾದ ಪ್ರೀತಿ, ಕರುಣೆ, ಸಮಾನತೆ, ಕಾಯಕ, ದಾಸೋಹದಂತಹ ಸಾರ್ವತ್ರಿಕ ಚಿಂತನೆಗಳು ಜಾನಪದ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ (ಕೂಚಬಾಳ) ಅಭಿಪ್ರಾಯಪಟ್ಟರು.ತಾಲೂಕಿನ ಮೂಕಿಹಾಳದ ದರ್ಗಾದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ಹಜರತ್ ಲಾಡ್ಲೆ ಮಶ್ಯಾಕ ದರ್ಗಾ ಕಮೀಟ ಸಹಯೋಗದಲ್ಲಿ ಹಜರತ್ ಲಾಡ್ಲೆ ಮಶ್ಯಾಕ ಉರುಸಿನ ಪ್ರಯುಕ್ತ ಹಮ್ಮಿಕೊಂಡಿದ್ದ ” ಜಿಲ್ಲಾ ಮಟ್ಟದ ಜಾನಪದ ಸಮಾವೇಶ” ಉದ್ಘಾಟಿಸಿ ಅವರು ಮಾತನಾಡಿದರು.ದರ್ಗಾ, ದೇವಾಲಯ, ಮಠ-ಮಂದಿರಗಳು ಭಾವೈಕ್ಯತೆ ಸಾರುತ್ತಾ ಆದರ್ಶ ಮೆರೆಯುತ್ತಿವೆ. ಇಂಥಹ ನೆಲದಲ್ಲಿ ಕಲಾವಿದರು, ಸಾಹಿತಿಗಳು ಮತ್ತು ಸಂಘಟಕರು ಸಮಾವೇಶಗೊಂಡಿರುವುದು ಸಾರ್ಥಕವಾಗಿದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯಪುರ ಜಿ ಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಾಳನಗೌಡ ಪಾಟೀಲರು ಜಾನಪದ ಪರಿಷತ್ ಅಧ್ಯಕ್ಷರಾದ ಮೇಲೆ ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿ ಜಾನಪದ…
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ಮುಖಂಡರು ಶುಕ್ರವಾರ ಸಂಜೆ ರಾಜ್ಯ ಸರ್ಕಾರ ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರೆಂದು ನಿರ್ಣಯ ಮಾಡಿದ್ದನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದರು.ಈ ಸಂದರ್ಭದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಎಂ.ಜಿ.ಆದಿಗೊಂಡ, ಎಚ್.ಎಸ್.ಬಿರಾದಾರ ಮಾತನಾಡಿ, ಇಡೀ ಜಗತ್ತಿಗೆ ಸಾಂಸ್ಕ್ರತಿಕ, ಸಾಮಾಜಿಕ ಹಾಗೂ ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕನ್ನು ತೋರಿಸಿದ ವಚನ ಚಳವಳಿಯ ನಾಯಕತ್ವವನ್ನು ವಹಿಸಿದ್ದ ಬಸವೇಶ್ವರರನ್ನು ಕರ್ನಾಟಕ ರಾಜ್ಯದ ಸಾಂಸ್ಕ್ರತಿಕ ನಾಯಕರೆಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿರುವುದು ಸಮಸ್ತ ಬಸವಾಭಿಮಾನಿಗಳಿಗೆ ಹರ್ಷ ಉಂಟು ಮಾಡಿದೆ. ಇದರಿಂದಾಗಿ ಬಸವೇಶ್ವರರು ಜನಿಸಿದ ಬಸವನಬಾಗೇವಾಡಿಯ ಗರಿಮೆ ಹೆಚ್ಚಿದಂತಾಗಿದೆ. ಈ ನಿರ್ಣಯ ತೆಗೆದುಕೊಂಡ ರಾಜ್ಯದ ಸಿಎಂ ಸಿದ್ದರಾಮಯ್ಯನವವರು ಸೇರಿದಂತೆ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದ ಅವರು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರವು ಬಸವೇಶ್ವರರನ್ನು ದೇಶದ ಸಾಂಸ್ಕ್ರತಿಕ ರಾಯಭಾರಿಯನ್ನಾಗಿ ಘೋಷಣೆ ಮಾಡಬೇಕೆಂದು ಆಶಯ ವ್ಯಕ್ತಪಡಿಸಿದರು.ಸಂಭ್ರಮಾಚರಣೆಯಲ್ಲಿ ಎಸ್.ಆರ್.ಕಲ್ಲೂರ, ಬಸವರಾಜ ಹಾರಿವಾಳ, ಸಿ.ಎಸ್.ಪಾಟೀಲ, ಸುಭಾಸ ಚಿಕ್ಕೊಂಡ, ರವಿ ರಾಠೋಡ ಸಂಕನಗೌಡ ಪಾಟೀಲ,…
ಬಸವನಬಾಗೇವಾಡಿ: ಪಟ್ಟಣದ ತಾಲೂಕು ಆಸ್ಪತ್ರೆಗೆ ಕೇಂದ್ರ ಸರ್ಕಾರದ ೨೦೨೨ ನೇ ಸಾಲಿನ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಈ ಪ್ರಶಸ್ತಿಯನ್ನು ವಿಜಯಪುರದಲ್ಲಿ ಬುಧವಾರ ಜರುಗಿದ ಆರೋಗ್ಯ ಇಲಾಖೆಯ ಮಾಸಿಕ ಸಭೆಯಲ್ಲಿ ಡಿಎಚ್ಓ ಡಾ.ಬಸವರಾಜ ಹುಬ್ಬಳ್ಳಿ ಅವರು ತಾಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಾಬೀರ ಪಟೇಲ ಅವರಿಗೆ ಪ್ರದಾನ ಮಾಡಿ, ಆರೋಗ್ಯ ಇಲಾಖೆಯಿಂದ ಸನ್ಮಾನಿಸಲಾಯಿತು.ಡಿಎಚ್ಓ ಹುಬ್ಬಳ್ಳಿ ಮಾತನಾಡಿ, ಕೇಂದ್ರ ಸರ್ಕಾರ ಆಸ್ಪತ್ರೆಯ ಆಂತರಿಕ ಮತ್ತು ಬಾಹ್ಯವಾಗಿ ಸ್ವಚ್ಛತೆ, ಜೈವಿಕ ತ್ಯಾಜ್ಯ ಸಂಸ್ಕರಣಾ ಘಟಕ, ಇನ್ಪೆಕ್ಷನ್ ಕಂಟ್ರೋಲ್, ಪರಿಸರ ಸಂರಕ್ಷಣೆ, ಸಮಯ ಪಾಲನೆ ರೋಗಿಗಳ ಆರೈಕೆ, ಸಿಬ್ಬಂದಿಗಳ ಕಾರ್ಯಕ್ಷಮತೆ ಪರಿಗಣಿಸಿ ರಾಜ್ಯಕ್ಕೆ ಎರಡನೇ ಸ್ಥಾನದ ಕಾಯಕಲ್ಪ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ೨೦೨೩ ನೇ ಸಾಲಿನಲ್ಲಿ ರಾಜ್ಯ ಸರ್ಕಾರ ತಾಲೂಕು ಆಸ್ಪತ್ರೆಯನ್ನು ಈ ಮಾನದಂಡಗಳ ಅನ್ವಯ ರಾಜ್ಯಕ್ಕೆ ಪ್ರಥಮ ಸ್ಥಾನದ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮುಂಬರುವ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಆಸ್ಪತ್ರೆಗೆ…
ಬಸವನಬಾಗೇವಾಡಿ: ಸಮಸ್ತ ಭಾರತೀಯರಿಗೆ ಅಯೋಧ್ಯ ಭವ್ಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾನ ನಡೆಯುತ್ತಿರುವ ಸಂಗತಿ ಬಹಳ ಸಂತಸ, ಸಂಭ್ರಮ ತಂದುಕೊಟ್ಟಿದೆ. ಬಹಳ ದಿನಗಳ ಕನಸು ನನಸಾಗುತ್ತಿದೆ. ಇಡೀ ದೇಶವೇ ಸಂಭ್ರಮ ಪಡುತ್ತಿದೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ಸಹಯೋಗದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ.೨೨ ರಂದು ನಡೆಯುತ್ತಿರುವ ಶ್ರೀರಾಮ ದೇವರ ಮೂರ್ತಿ ಪ್ರತಿಷ್ಠಾಪನೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಮತಾರಕ ಹೋಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಬಹು ವರ್ಷಗಳ ಹಿಂದೆ ನಿರ್ಮಾಣವಾಗಬೇಕಿತ್ತು. ಕೆಲವರ ಕಾರಣದಿಂದಾಗಿ ಈ ಕಾರ್ಯ ನೆರವೇರಿರಲಿಲ್ಲ. ಇದೀಗ ಕಾನೂನು ಬದ್ಧವಾಗಿ ನಿರ್ಮಾಣ ಮಾಡಿದ್ದು ಸಂತೋಷದಾಯಕ ಸಂಗತಿ. ಈ ಮೊದಲು ಎಲ್ಲೆಡೆ ಬನಾಯೆಂಗೇ ಮಂದಿರ ಹಾಡು ಹಾಕಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಇದರ ಬದಲು ಬನ್ನಗಯಾ ಮಂದಿರ ಎಂಬ ಹಾಡು ಹಾಕಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜ.೨೨ ರಂದು ಶ್ರೀರಾಮ ಭಾವಚಿತ್ರ…
