Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ ಐದಾರು ವರ್ಷಗಳಿಂದ ಶರಣರ ಚರಿತ್ರೆಯನ್ನು ವಿರೂಪಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದ, ಶರಣರ ಕುರಿತಾದ ವಿವಾದಾಸ್ಪದ ಸಾಹಿತ್ಯ ಕೃತಿಗಳ ಮೂಲಕ ಬಸವ ಭಕ್ತರಲ್ಲಿ ಅನಗತ್ಯ ಗೊಂದಲ ಅಶಾಂತಿ ಮೂಡಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ ವಾಸುದೇವ ಬಡಿಗೇರ ಅವರ ವಿವಾದಾಸ್ಪದ ಸಾಹಿತ್ಯ ಕೃತಿಗಳ ಬಗ್ಗೆ ಮಾಹಿತಿ ಪಡೆದು ಅವರ ಮೇಲೆ ಯೋಗ್ಯ ಕ್ರಮ ಕೈಗೊಳ್ಳಬೇಕು ಎಂದು ಘನವೆತ್ತ ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಅವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದು ಆದೇಶ ಮಾಡಿದ್ದಾರೆ.ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಬಸವ ತಿಳುವಳಿಕೆ ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷರಾದ ಡಾ ಶಶಿಕಾಂತ ಪಟ್ಟಣ ಅವರು ರಾಜ್ಯಪಾಲರ ಕ್ರಮವನ್ನು ಸ್ವಾಗತಿಸಿದ್ದಾರೆ.ಪ್ರೊ ವಾಸುದೇವ ಬಡಿಗೇರ ಅವರು ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಒಬ್ಬರೇ ಎಂದೆನ್ನುವ ಒಂದು ಕೃತಿಯನ್ನು ರಚಿಸಿ ವಿವಾದಕ್ಕೆ ಕಾರಣರಾಗಿದ್ದರು. ಈ ಮೊದಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿತೀಯ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಅಂಗವಾಗಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಅಂತಿಮ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗಾಗಿ “ಸರ್ಜಿಕ್ವಿಜ್” ರಸಪ್ರಶ್ನೆ ಕಾರ್ಯಕ್ರಮವನ್ನು ಸೋಮವಾರ ಸ್ಕಿಲ್ ಲ್ಯಾಬೊರೆಟರಿ ಕಟ್ಟಡದ ಸಭಾಂಗಣದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣವರ, ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆಯ ಉದ್ದೇಶ ಜನಸಾಮಾನ್ಯರಿಗೆ ಶಸ್ತ್ರ ಚಿಕಿತ್ಸಕರ ಮಹತ್ವವನ್ನು ತಿಳಿಸುವುದು, ಸಮಾಜ ಸುಧಾರಣಾ ಕಾರ್ಯಗಳಲ್ಲಿ ಶಸ್ತ್ರ ಚಿಕಿತ್ಸಕರು ಪಾಲ್ಗೊಳ್ಳುವುದು ಮತ್ತು ಸ್ನಾತಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗದ ಬಗ್ಗೆ ಆಸಕ್ತಿ ಮೂಡಿಸುವುದಾಗಿದೆ ಎಂದು ಹೇಳಿದರು.ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ರಸಪ್ರಶ್ನೆ ಕಾರ್ಯಕ್ರಮ ಸೂಕ್ತ ವಿಧಾನವಾಗಿದ್ದು, ಜ್ಞಾನದ ಜೊತೆಗೆ ಸಮಯ ಪ್ರಜ್ಞೆ, ಗುಂಪು ಸಾಮರ್ಥ್ಯ ಮತ್ತು ವಿಶ್ಲೇಷಣಾ ಸಾಮರ್ಥ್ಯಗಳನ್ನು ಅಳೆಯುವ ಮಹತ್ವದ ಸಾಧನವಾಗಿದೆ” ಎಂದು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.ಪೂರ್ವಭಾವಿ ಪರೀಕ್ಷೆಯ ಮೂಲಕ ಅಂತಿಮ ಸುತ್ತಿಗೆ ಆಯ್ಕೆಯಾದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ನಗರದಲ್ಲಿ ಭೀಕರ ಹಲ್ಲೆ ಘಟನೆ ನಡೆದಿದ್ದು, ನಿವೃತ್ತ ಯೋಧನೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.ನಗರದ ಕೆಇಬಿ ಕಚೇರಿ ಎದುರಿನ ಮಸೀದಿ ಸಮೀಪ ಈ ಘಟನೆ ಸಂಭವಿಸಿದೆ.ಹಿರೇ ಮಸಳಿ ಗ್ರಾಮದ ನಿವಾಸಿ ಹಾಗೂ ನಿವೃತ್ತ ಯೋಧನಾಗಿರುವ ಮಾರುತಿ ಕ್ಷತ್ರಿ (45) ಅವರ ಮೇಲೆ ಮೂವರು ಮುಸುಕುದಾರಿಗಳು ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಾರುತಿ ಕ್ಷತ್ರಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಲೇಖನ- ಅವಿನಾಶ ಸೆರೆಮನಿಬೈಲಹೊಂಗಲ ಉದಯರಶ್ಮಿ ದಿನಪತ್ರಿಕೆ “ಪರಿಸರದ ಅಳಿವು ಮಾನವ ಜನಾಂಗದ ಅಳಿವು” ಎಂಬುದು ಕೇವಲ ಒಂದು ಘೋಷವಾಕ್ಯವಲ್ಲ, ಇದು ಇಂದಿನ ಜಗತ್ತಿನ ಕಠೋರ ಸತ್ಯವಾಗಿದೆ. ಮಾನವನು ಪ್ರಕೃತಿಯ ಒಂದು ಭಾಗವಾಗಿದ್ದು, ತನ್ನ ಬದುಕಿಗಾಗಿ ಸಂಪೂರ್ಣವಾಗಿ ಪರಿಸರವನ್ನು ಅವಲಂಬಿಸಿದ್ದಾನೆ. ಶುದ್ಧ ಗಾಳಿ, ನೀರು, ಆಹಾರ, ವಾಸಸ್ಥಳ ಮತ್ತು ಜೀವ ವೈವಿಧ್ಯ ಇವೆಲ್ಲವೂ ಪರಿಸರದ ಕೊಡುಗೆಗಳಾಗಿವೆ. ಆದ್ದರಿಂದ ಪರಿಸರದ ನಾಶವು ಮಾನವನ ಅಸ್ತಿತ್ವದ ಮೇಲೆಯೇ ನೇರ ಪರಿಣಾಮ ಬೀರುತ್ತದೆ.ಪರಿಸರವು ಜೀವಿಗಳ ಬದುಕಿಗೆ ಅಗತ್ಯವಾದ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಭೂಮಿ, ನೀರು, ಗಾಳಿ, ಕಾಡುಗಳು, ನದಿಗಳು, ಪರ್ವತಗಳು, ಪ್ರಾಣಿ-ಪಕ್ಷಿಗಳು ಹಾಗೂ ಸೂಕ್ಷ್ಮಜೀವಿಗಳು ಪರಿಸರದ ಅವಿಭಾಜ್ಯ ಅಂಗಗಳಾಗಿವೆ. ಇವುಗಳ ಸಮತೋಲನದಿಂದಲೇ ಭೂಮಿಯ ಮೇಲೆ ಜೀವಸಂಕುಲ ಉಳಿದುಕೊಂಡಿದೆ. ಪ್ರಕೃತಿಯ ಪ್ರತಿಯೊಂದು ಅಂಶವೂ ಒಂದಕ್ಕೊಂದು ಪೂರಕವಾಗಿದೆ.ಪರಿಸರ ಅಳಿವಿಗೆ ಕಾರಣಗಳು ಇತ್ತೀಚಿನ ದಶಕಗಳಲ್ಲಿ ಮಾನವನ ಸ್ವಾರ್ಥ ಮತ್ತು ಅತಿಯಾದ ಅಭಿವೃದ್ಧಿಯ ಚಟುವಟಿಕೆಗಳು ಪರಿಸರದ ಮೇಲೆ ಭಾರೀ ಒತ್ತಡವನ್ನುಂಟು ಮಾಡಿವೆ.ಕಾರಣಗಳು ಕೆಳಗಿನಂತಿವೆ1. ಅರಣ್ಯ ನಾಶಕೈಗಾರಿಕೆಗಳು, ರಸ್ತೆ ನಿರ್ಮಾಣ, ನಗರೀಕರಣ ಮತ್ತು ಕೃಷಿ…
ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ. ಅದರ ನಂತರವೂ ಗ್ಯಾರಂಟಿಗಳು ಮುಂದುವರಿಯಲಿವೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದಿದ್ದಾರೆ.ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ. ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು,ನಂತರದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತೊರವಿ ಸಮೀಪ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಕ್ಷಕ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತರನ್ನು ವಿಜಯಪುರ ತಾಲ್ಲೂಕಿನ ಖತಿಜಾಪುರ ಎಚ್‌ಪಿಎಸ್ ಶಾಲೆಯ ಜಿಪಿಟಿ ಶಿಕ್ಷಕಿ ಅಂಬವ್ವ ಪೂಜೇರಿ (34) ಹಾಗೂ ನಗರದ ಚಾಣಕ್ಯ ಕರಿಯರ್ ಅಕಾಡೆಮಿಯ ಶಿಕ್ಷಕ ಗುರುಲಿಂಗ ಹುಣಶ್ಯಾಳ (37) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು ಮತ್ತು ಶಿಕ್ಷಣ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ.ಮಾಹಿತಿಯ ಪ್ರಕಾರ, ತಿಕೋಟಾದಲ್ಲಿರುವ ಸಂಬಂಧಿಕರ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜಯಪುರ ನಗರಕ್ಕೆ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ತೊರವಿ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಶಿಕ್ಷಕ ದಂಪತಿಯ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಂಧುಗಳು,…
ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್) ಬಿ.ಎಲ್.ಎಗಳ ವಿಶೇಷ ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಧಾನಿ ಮೋದಿಯವರ ೧೨ ವರ್ಷಗಳ ಸಾಧನೆಯನ್ನು ಜನಸಾಮಾನ್ಯರಿಗೆ ತಿಳಿಸುವುದರ ಜೊತೆಗೆ ಮತಗಟ್ಟೆ ಪರಿಷ್ಕರಣೆ ಕುರಿತಂತೆ ಬಿ.ಎಲ್.ಎ ಗಳು ವಿಶೇಷ ಜವಾಬ್ದಾರಿ ವಹಿಸುವುದು ಅಗತ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಪಟ್ಟಣದ ಮಲ್ಲಯ್ಯ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಜರುಗಿದ ಮತಗಟ್ಟೆ ಪರಿಷ್ಕರಣೆ (ಎಸ್‌ಐಆರ್) ಬಿ.ಎಲ್.ಎಗಳ ವಿಶೇಷಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಗತ್ತಿನ ಎಲ್ಲ ದೇಶಗಳ ನಾಯಕರು ಭಾರತದ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸುವಲ್ಲಿ ಪ್ರಧಾನಿ ಮೋದಿ ಅವರು ಕೈಗೊಂಡ ಅಭಿವೃದ್ಧಿಪರ ವಿಚಾರ ಹಾಗೂ ನಿರ್ಧಾರಗಳೇ ಕಾರಣ. ದೇಶ ಹಾಗೂ ದೇಶದ ಜನತೆ ಮುಖ್ಯ ಎನ್ನುವ ಮೂಲಕ ಅವರ ಧೃಡ ಹಾಗೂ ಅಚಲ ನಿರ್ಧಾರಗಳು ಇಂದು ನಾವು ಶಾಂತಿ, ಸಹನೆಯಿಂದ ಜೀವಿಸಲು ಕಾರಣವಾಗಿದೆ ಎಂದರು.ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ಜಗಮೆಚ್ಚುವ ರೀತಿಯಲ್ಲಿ ದೇಶದ ಆಡಳಿತವನ್ನು ನಿರ್ವಹಿಸಿ ಬಲಾಢ್ಯ ಭಾರತದ ಕನಸು ಸಾಕಾರಗೊಳಿಸಲು ಪ್ರಯತ್ನಿಸುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂವಿಧಾನ ನೀಡಿರುವ ಹಕ್ಕು ಮತ್ತು ಸೌಲಭ್ಯಗಳನ್ನು ಒದಗಿಸಲು ಇಲಾಖೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಪಿಎಸ್‌ಐ ಪ್ರೇಮಾ ಚೌರ ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದಲ್ಲಿ ಭಾನುವಾರ ಜರುಗಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಡಾ:ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶೋತ್ತರಗಳ ಈಡೇರಿಕೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಭೆ ನಡೆಸಿ ಕುಂದುಕೊರತೆ ಆಲಿಸಿ ಪರಿಹಾರ ಕೈಗೊಳ್ಳಲಾಗುತ್ತಿದೆ. ಸಮುದಾಯದ ಯುವಕರು ದುಶ್ಚಟಗಳಿಂದ ದೂರವಿರಬೇಕೆಂದರು.ಮಾನವ ಬಂಧುತ್ವ ವೇದಿಕೆಯ ಧುರೀಣ ಸಾಯಿಕುಮಾರ ಬಿಸನಾಳ ಮಾತನಾಡಿ, ಗ್ರಾಮದ ಯುವಕರು ಜನ್ಮದಿನಗಳನ್ನು ಮನೆಗಳಲ್ಲಿ ಆಚರಿಸದೇ ಇಂಡಿ ಹೆದ್ದಾರಿಯಲ್ಲಿ ಆಚರಿಸುತ್ತಿರುವುದು ಖೇದಕರ. ಟ್ರ್ಯಾಕ್ಟರ್‌ಗಳಲ್ಲಿ ಸೌಂಡ್ ಹಚ್ಚಿ ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದು ಇದು ನಿಲ್ಲಬೇಕು ಹಾಗೂ ಗ್ರಾಮವ್ಯಾಪ್ತಿಯಲ್ಲಿ ಇಸ್ಪಿಟ್ ಆಟ, ಗಾಂಜಾ, ಸಾರಾಯಿ ಸಹಿತ ಮಾದಕದ್ರವ್ಯ ಸೇವನೆ ಹಾಗೂ ಮಾರಾಟ ನಿಲ್ಲಬೇಕು ಮತ್ತು ಗ್ರಾಮದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಶೌಚಾಲಯ ನಿರ್ಮಾಣ ಅಗತ್ಯವಿದೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಕ್ಷಯ ರೋಗ ನಿಯಂತ್ರಿಸಬಹುದು ಎಂದು ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿಗಳಾದ ಡಾ.ತೈಸಿನ್ ಶಿವಣಗಿ ಹೇಳಿದರು.ತಾಲೂಕಿನ ಕುಂಟೋಜಿ ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ೧೦೦ ದಿನದ ಕ್ಷಯ ಮುಕ್ತ ಭಾರತ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಎಕ್ಸರೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎಚ್‌ಐವಿ ಸೋಂಕಿತರು, ಮಧುಮೇಹ ಪೀಡಿತರು ಹಾಗೂ ಧೂಮಪಾನ ಮಾಡುವವರು ಬಹುಬೇಗ ಸೋಂಕಿಗೆ ಒಳಗಾಗುತ್ತಾರೆ. ಕ್ಷಯ ರೋಗಿ ಕೆಮ್ಮಿದಾಗ ಮತ್ತು ಸೀನಿದಾಗ ಹೊರ ಬರುವ ರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹ ಸೇರಿ ಸೋಂಕು ಉಂಟಾಗುತ್ತದೆ. ಕ್ಷಯ ರೋಗಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ನೀಡಲಾಗುತ್ತದೆ. ಕ್ಷಯ ರೋಗಿಗಳು ನಿರಂತರ ೬ ತಿಂಗಳು ಸೂಕ್ತ ಚಿಕತ್ಸೆ ಪಡೆದರೆ ರೋಗದಿಂದ ಮುಕ್ತಿ ಹೊಂದಬಹುದು. ನಿಯಮಿತವಾಗಿ ಔಷಧ ತೆಗೆದುಕೊಳ್ಳದಿದ್ದರೆ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತೆ. ಎರಡು ವಾರಕ್ಕೂ ಹೆಚ್ಚು ಕೆಮ್ಮು,…
