Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನ | ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ | ಮಠಾಧೀಶರ ಮನವಿಗೆ ಸ್ಪಂದನೆ ಬೆಂಗಳೂರು: ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ…
ಮುದ್ದೇಬಿಹಾಳ: ಫೆಬ್ರವರಿ.೪ ರಂದು ಪಟ್ಟಣದ ಎಪಿಎಂಸಿಯಲ್ಲಿರುವ ದಿ-ಕರ್ನಾಟಕ ಕೋ ಅಪ್ ಬ್ಯಾಂಕ್ ಸಭಾಭವನದಲ್ಲಿ ೩ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.ಈ ಕುರಿತು ಚರ್ಚಿಸಲು ದಿ.೨೦ ರಂದು ಸಂಜೆ ೫.೩೦ ಕ್ಕೆ ದಿ ಕರ್ನಾಟಕ ಬ್ಯಾಂಕ್ ನ ಸಭಾಭವನದ ಮೊದಲನೇ ಮಹಡಿಯಲ್ಲಿ ಗಣ್ಯರ, ವಿವಿಧ ಸಂಘಟನೆಗಳ ಅಧ್ಯಕ್ಷರ ಹಾಗೂ ಆಸಕ್ತರ ಸಭೆ ಕರೆಯಲಾಗಿದೆ. ಸರ್ವರೂ ಹಾಜರಾಗಿ ಸಮ್ಮೇಳನ ಆಚರಣೆಯ ಕುರಿತು ಸಲಹೆ ಸೂಚನೆ ನೀಡಲು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ನಾಲತವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈವರೆಗೆ ೫೮೮.೦೬ ಕೋಟಿ ರೂ. ರೈತರಿಗೆ ಕಬ್ಬಿನ ಬಿಲ್ ಪಾವತಿ: ವಿನಯಕುಮಾರ ವಿಜಯಪುರ: ಜಿಲ್ಲೆಯಲ್ಲಿ ೯ ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಸಕ್ಕರೆ ಕಾರ್ಖಾನೆಗಳು ೨೦೨೩-೨೪ ನೇ ಸಾಲಿನ ಹಂಗಾಮಿನಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭಿಸಿವೆ. ಈ ವರೆಗೆ ಜಿಲ್ಲೆಯಲ್ಲಿನ ಎಲ್ಲಾ ಸಕ್ಕರೆ ಕಾರ್ಖಾನೆಗಳು ಸುಮಾರು ೩೬.೫೧ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ನುರಿಸಿದ್ದು ಈ ಪೈಕಿ ದಿನಾಂಕ ೧೬-೦೧-೨೦೨೪ ರವರೆಗೆ ೫೮೮.೦೬ ಕೋಟಿ ಹಣವನ್ನು ರೈತರಿಗೆ ಪಾವತಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಅವರು ತಿಳಿಸಿದ್ದಾರೆ.ಜಿಲ್ಲೆಯ ಸಾಯಿಬಸವ ಮಲಘಾಣ ಸಕ್ಕರೆ ಕಾರ್ಖಾನೆಯವರು ೩೨.೯೬ ಕೋಟಿ ರೂ., ಇಂಡಿಯನ್ ಶುಗರ್ಸ ಹಾವಿನಾಳ ೫೮.೮೯ ಕೋಟಿ ರೂ., ಶ್ರೀ ಬಾಲಾಜಿ ಶುಗರ್ಸ ಯರಗಲ್ಲ ೮೮.೬೧ ಕೋಟಿ ರೂ., ಕೆಪಿಆರ್ ಶುಗರ್ಸ ಆಲಮೇಲ ೧೩೧.೯೭ ಕೋಟಿ ರೂ., ಜಮಖಂಡಿ ಶುಗರ್ಸ ಯುನಿಟ್-೨ ನಾದ ಕೆಡಿ ೭೦.೯೧ ಕೋಟಿ ರೂ., ಸಂಗಮನಾಥ ಶುಗರ್ಸ ಯರಗಲ್ಲ ಬಿಕೆ…
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಜನವರಿ ೨೧ ರಂದು ಬೆಳಗ್ಗೆ ೯ ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ ೧೦೦ ವ್ಯಂಗ್ಯಚಿತ್ರಗಳನ್ನು ಜ.೨೧ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ ೨೫ ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.ಷರತ್ತು ಹಾಗೂ ನಿಬಂಧನೆಗಳು
ವಿಜಯಪುರ: ೨೦೨೩-೨೪ನೇ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್‌ಪಿ)ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು, ೧೦ನೇ ತರಗತಿಯ ನಂತರ ಯಾವುದೇ ಕೋರ್ಸ ಮಾಡುತ್ತಿರುವವರು ಅರ್ಜಿ ಸಲ್ಲಿ¸ಬಹುದಾಗಿದೆ. ಅಧ್ಯಯನ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ ಕಾರ್ಡ, ಶುಲ್ಕ ರಶೀದಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಾಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಮಡೆಯಬಹುದು ಎಂದು ವಿಜಯಪುರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ (ಸಿಎಆರ್ ಮತ್ತು ಡಿಎಆರ್) ೩೦೬೪ ಹುದ್ದೆಗಳಿಗೆ ಜ.೨೮ರಂದು ಬೆಳಿಗ್ಗೆ ೧೧ ರಿಂದ ೧೨-೩೦ರವರೆಗೆ ರಾಜ್ಯದಾದ್ಯಂತ ಲಿಖಿತ ಪರೀಕ್ಷೆ ಆಯೋಜಿಸಲಾಗಿದೆ.ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಕರೆ ಪತ್ರದ ಬಗ್ಗೆ ಎಸ್.ಎಂ.ಎಸ್. ಮೂಲಕ ಮಾಹಿತಿ ನೀಡಲಾಗುವುದು. ಕರೆ ಪತ್ರದ ಲಿಂಕ್‌ನ್ನು ಸಹ ಕಳಿಸಲಾಗುವುದು. ಜಿಲ್ಲೆಯ ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ ಸೋನಾವಣೆ ಅವರು ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಜಿಲ್ಲೆಯ ೨೨ ಪರೀಕ್ಷಾ ಕೇಂದ್ರಗಳಲ್ಲಿ ಜನವರಿ ೨೦ ಹಾಗೂ ೨೧ ರಂದು ನಡೆಯಲಿದ್ದು, ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಜನವರಿ ೨೦ ಹಾಗೂ ೨೧ ರಂದು ಕನ್ನಡಭಾಷಾ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಪಾರದರ್ಶಕವಾಗಿ ನಡೆಯುವಂತೆ ಮುನ್ನೆಚ್ಚರಿಕೆಯಾಗಿ ಕಲಂ ೧೪೪ರನ್ವಯ ಅಂದು ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್‌ನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಸದರಿ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ…
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿಯ ನಿವಾಸಿ ಹಾಲಿ ವಸ್ತಿ ಹಡಗಲಿ ಗ್ರಾಮದ ೪೦ ವರ್ಷದ ಮಲ್ಲೇಶಪ್ಪ ತಂದೆ ನಾಗಪ್ಪ ಪೂಜಾರಿ ಎಂಬ ವ್ಯಕ್ತಿ ದಿನಾಂಕ : ೧೭-೦೩-೨೦೨೩ ರಿಂದ ಹಡಗಲಿಯಿಂದ ಕಾಣೆಯಾಗಿರುವ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿ ಪತ್ತೆಗೆ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾಗಿರುವ ವ್ಯಕ್ತಿಯು ೫.೬ ಎತ್ತರ, ಸಾಧಾರಣ ಮೈಕಟ್ಟು, ಚೌಕ ಮುಖ ಹಾಗೂ ಮೊಂಡ ಮೂಗು ಹೊಂದಿದ್ದು, ಮೂಗಿನ ಮೇಲೆ ಹಳೆ ಗಾಯದ ಕಲೆ ಇದ್ದು, ಉದ್ದ ಗಡ್ಡ ಬಿಟ್ಟಿರುತ್ತಾನೆ. ಕನ್ನಡ ಹಾಗೂ ಹಿಂದಿ ಭಾಷೆ ಬಲ್ಲವನಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಚುಕ್ಕೆಯುಳ್ಳ ಅಂಗಿ ಮತ್ತು ಬೂದು ಬಣ್ಣದ ಪ್ಯಾಂಟ್ ಧರಿಸಿದ್ದನು.ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಸಾರ್ವಜನಿಕರು ಜಿಲ್ಲಾ ನಿಸ್ತಂತು ಕಚೇರಿ ದೂ: ೦೮೩೫೨-೨೫೦೮೪೪/೨೫೦೭೫೧ ವಿಜಯಪುರ ಗ್ರಾಮೀಣ ಠಾಣೆ ದೂ: ೦೮೩೫೨-೨೫೦೯೨೩ ಸಂಖ್ಯೆಗೆ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ದಿನಾಂಕ : ೩೧-೦೧-೨೦೨೪ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
