Author: editor.udayarashmi@gmail.com

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಸಿಎಂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಮಂಗಳವಾರ ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ.…

Read More

ಡಿಸಿಎಂ ಡಿ.ಕೆ.ಶಿವಕುಮಾರ ಸ್ಪಷ್ಠನೆ ಸಿಎಂ ಪುತ್ರ ಯತೀಂದ್ರ ಅವರ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಿಎಂ ಪುತ್ರ ಯತೀಂದ್ರ ಅವರು ಹೇಳಿದ್ದು, ಈ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದರು.ನಮ್ಮ‌ ಸರ್ಕಾರ ಬಲಿಷ್ಠವಾಗಿದೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ. ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.ಸಿದ್ದರಾಮಯ್ಯ…

Read More

ವಿಜಯಪುರ: ಭಾರತ ಆಧ್ಯಾತ್ಮಿಕ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದ್ದು ಸ್ವಾಮಿ ವಿವೇಕಾನಂದರು. ಇಂದಿನ ಯುವ ಜನತೆ ವಿವೇಕಾನಂದರ ಜೀವನ ಅರಿಯುವದರ ಜೊತೆಗೆ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಬೊಮ್ಮನಹಳ್ಳಿ ಗವಿಮಠ ಗುರುಶಾಂತ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜಿಲ್ಲಾ ತಾಲೂಕು ಹಾಗೂ ನಗರ ಸಯುಕ್ತ ಘಟಕದ ಆಶ್ರಯದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಕುರಿತು ಚಿಂತನಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಮಸೂತಿ ಜಗದೀಶ್ವರ ಹಿರೇಮಠದ ಪ್ರಭು ಕುಮಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ, ಸ್ವಾಮಿ ವಿವೇಕಾನಂದರು ಜಗತ್ತಿಗೆ ವಿಕಾಸ ಸಂದೇಶ ಸಾರಿದರು. ಅವರು ಚಿಕ್ಯಾಗೋದಲ್ಲಿ ಮಾಡಿದ ಭಾಷಣ ವಿಶ್ವ ಭ್ರಾತೃತ್ವವನ್ನು ಅವರ ವಿಚಾರ ಶ್ರೇಷ್ಠತೆಯನ್ನು ಸಾರುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಕೂಡ್ಗಿ ಸಹಕಾರ ಸಂಘದ ವ್ಯವಸ್ಥಾಪಕ ಸಂಗಮೇಶ ಬಿಜಾಪುರ ಮಾತನಾಡಿ, ವಿವೇಕಾನಂದರ ಜೀವನ ಸಂದೇಶವನ್ನು ಬಾಳಿನಲ್ಲಿ ಅಳವಡಿಸಿಕೊಳ್ಳಬೇಕೆಂದರು.ಹಸಿದವರ ಅಸಹಾಯಕರ ನಿರ್ಗತಿಕರ ಸೇವೆಯಲ್ಲಿ ದೇವರನ್ನು ಕಾಣಬೇಕು. ಅಮೇರಿಕಾ ದೇಶಕ್ಕೆ ವಿವೇಕಾನಂದರನ್ನು ಮೈಸೂರು ಒಡೆಯರು ಸಹಾಯ ಮಾಡಿದ್ದು ನಾಡಿನ ಹೆಮ್ಮೆ ವಿಷಯ ಎಂದರು.ಮುಖ್ಯ ಅತಿಥಿಗಳಾಗಿ…

Read More

ವಿಜಯಪುರ: ವಿಜಯಪುರ ತಾಲೂಕಿನ ಹೊನ್ನುಟಗಿ ಗ್ರಾಮದ ೫೫ ವರ್ಷದ ಪ್ರಕಾಶ ಸಂಗಪ್ಪ ಚೂರಿ ಎಂಬ ವ್ಯಕ್ತಿ ದಿನಾಂಕ : ೦೪-೦೫-೨೦೨೩ ರಿಂದ ಹೊನ್ನುಟಗಿಯಿಂದ ಕಾಣೆಯಾಗಿರುವ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿ ಪತ್ತೆಗೆ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾಗಿರುವ ವ್ಯಕ್ತಿಯು ೫.೮ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣ ಕೋಲುಮುಖ, ಉದ್ದ ಮೂಗು, ಕುರುಚಲು ಗಡ್ಡ ಬಿಟ್ಟಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಬಲ್ಲವನಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟೀ ಶರ್ಟ ಹಾಗೂ ಚಾಕಲೇಟ್ ಬಣ್ಣದ ಪ್ಯಾಂಟ್ ಧರಿಸಿದ್ದನು. ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಸಾರ್ವಜನಿಕರು ಪೊಲೀಸ್ ಅಧೀಕ್ಷಕರು ದೂ: ೦೮೩೫೨-೨೫೦೧೫೨, ಜಿಲ್ಲಾ ನಿಸ್ತಂತು ಕಚೇರಿ ದೂ: ೦೮೩೫೨-೨೫೦೮೪೪, ವಿಜಯಪುರ ಗ್ರಾಮೀಣ ಠಾಣೆ ದೂ: ೦೮೩೫೨-೨೫೦೯೨೩ ಸಂಖ್ಯೆಗೆ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ ೨೬ ರಂದು ಜರುಗುವ ಗಣರಾಜ್ಯೋತ್ಸವ ಅಂಗವಾಗಿ ೨೦೨೩-೨೪ನೇ ಸಾಲಿನಲ್ಲಿ ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ದಿನಾಂಕ : ೨೩-೦೧-೨೦೨೪ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫, ಮೊ: ೭೦೧೯೧೬೭೨೪೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಜನವರಿ ೨೩ ರಿಂದ ೨೬ರವರೆಗೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜರುಗುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಹಾಗೂ ಜ.೨೪ ರಿಂದ ೩೦ರವರೆಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಜರುಗುವ ಶ್ರೀ ಬನಶಂಕರಿದೇವಿ ಜಾತ್ರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗಗಳಿಂದ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ಜಾತ್ರೆಗೆ ತೆರಳುವ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ನಿಗಮದ ವಿಜಯಪುರ ವಿಭಾಗದ ಕೇಂದ್ರ ಬಸ್ ನಿಲ್ದಾಣ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ, ಬಸವನಬಾಗೇವಾಡಿ ಹಾಗೂ ನಿಡಗುಂದಿ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಇಚ್ಛಿಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಸದರಿ ಜಾತ್ರೆಗೆ ಬಸ್ಸಗಳನ್ನು ಒದಗಿಸಲಾಗುವುದು.ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ ಘಟಕ-೧ ಮೊ: ೭೭೬೦೯೯೨೨೬೩, ಘಟಕ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟೆ ಮೊ:…

Read More

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ ಕೆವ್ಹಿ ಭೂತನಾಳ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ೧೧ ಕೆವ್ಹಿ ೨೦ಎಂವಿಎ, ೧೧೦/೩೩ ಕೆವ್ಹಿ ಶಕ್ತಿ ಪರಿವರ್ತಕದ ಛೇದಕ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ೩೩/೧೧ ಕೆವ್ಹಿ ತಿಡಗುಂದಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಹಾಗೂ ೩೩/೧೧ ಕೆವ್ಹಿ ಅರಕೇರಿ ಎಲ್‌ಐಎಸ್‌ಗೆ ಜನವರಿ ೧೯ ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

Read More

ವಿಜಯಪುರ: ಕೃಷಿ ವಿಶ್ವವಿದ್ಯಾಲಯ, ಧಾರವಾಡ ವಿಜಯಪುರ ಆವರಣ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ ೨೧ ರಿಂದ ೨೩ರವರೆಗೆ ವಿಜಯಪುರ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ‘ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ’ ಕೃಷಿ ಮೇಳ-೨೦೨೩-೨೪ ಹಮ್ಮಿಕೊಳ್ಳಲಾಗಿದೆ.ಜನವರಿ ೨೧ ರಂದು ಬೆಳಿಗ್ಗೆ ೧೧ ಗಂಟೆಗೆ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸಲಿದ್ದಾರೆ.ನಾಗಠಾಣ ಶಾಸಕರಾದ ವಿಠ್ಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಬಸನಗೌಡ ಆರ್.ಪಾಟೀಲ ಯತ್ನಾಳ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ,…

Read More

ಮುದ್ದೇಬಿಹಾಳ: ತಾಲೂಕಿನ ಆಲಕೊಪ್ಪರ ಗ್ರಾಮದ ಶಾರದಾ ಬೆಲ್ಲದ ತನ್ನ ೮ ವರ್ಷದ ಮಗಳು ಅಶ್ವಿನಿ ಬೆಲ್ಲದ ಇವಳನ್ನು ಕರೆದುಕೊಂಡು ಮುದ್ದೇಬಿಹಾಳದ ಸಂತೆಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿರುತ್ತಾರೆ ಅಂತಾ ಶಾರದಾಳ ಪತಿ ನಿಂಬೆಣ್ಣ ಬೆಲ್ಲದ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಫಿರ್ಯಾದು ನೀಡಿದ್ದು, ಪ್ರಕರಣ ದಾಖಲಾಗಿದೆ.

Read More

ಮುದ್ದೇಬಿಹಾಳ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹಾಯೋಗಿ ವೇಮನ ಜಯಂತಿ, ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಹಾಗೂ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಬಲರಾಮ ಕಟ್ಟಿಮನಿ ಅವರು ಮಾತನಾಡಿ, ಜ.೧೯ ರಂದು ಮಹಾಯೋಗಿ ವೇಮರ ಮತ್ತು ಜ.೨೧ ರಂದು ಅಂಬಿಗರ ಚೌಡಯ್ಯನವರ ಜಯಂತಿಯನ್ನು ಎಲ್ಲ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು. ಜ.೨೧ ರಂದು ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ಚೌಡಯ್ಯನವರ ವೃತ್ತದಲ್ಲಿ ಸಮಾಜ ಬಾಂಧವರೊಂದಿಗೆ ಪೂಜೆ ಸಲ್ಲಿಸುವದಾಗಿ ತಿಳಿಸಿದರು. ಎರಡೂ ಜಯಂತಿಯ ಆಚರಣೆ ಬಳಿಕ ತಾಲೂಕು ಮಟ್ಟದ ಅಧಿಕಾರಿಗಳು ತಹಶೀಲ್ದಾರ ಕಚೇರಿಯಲ್ಲಿ ನಡೆಯುವ ಆಚರಣೆಯಲ್ಲಿ ಹಾಜರಿರುವಂತೆ ಸೂಚಿಸಿದರು.ಜ.೨೬ ರಂದು ೭೫ ನೇ ಗಣರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿರುವದಾಗಿ ತಿಳಿಸಿದರು. ಎಲ್ಲ ಪಂಚಾಯತಿಗಳು, ಕಚೇರಿಗಳು ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ಗಣರಾಜ್ಯೋತ್ಸವವನ್ನು ಕಡ್ಡಾಯವಾಗಿ ಅಚರಿಸತಕ್ಕದ್ದು. ಪಥಸಂಚಲನ, ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶೇಶವಾಗಿಸುವಂತೆ ಸೂಚಿಸಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಮೇಶ ಲಮಾಣಿ, ತಾಲೂಕು ಪಂಚಾಯತ ನ ಖೂಬಾಸಿಂಗ ಜಾಧವ, ಬಿಇಓ ಬಸವರಾಜ…

Read More