Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸರಳವಾಗಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮೀತಿ (ರಿ ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.ಪ್ರಸ್ತುತ ಸರ್ಕಾರ ಪಡಿತರ ಚೀಟಿಗೆ ಜಾತಿ ಪ್ರಮಾಣ ಪತ್ರ ಲಿಂಕ್ ಮಾಡುವಂತೆ ಆದೇಶ ಹೊರಡಿಸಿರುವುದರಿಂದ ಹಾಗೂ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಅಗತ್ಯ ಹೆಚ್ಚಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳುವಂತಾಗಿದೆ.ರಾಜ್ಯ ಸರ್ಕಾರ ಕೂಡಲೇ ಸರ್ವರ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ಸಾರ್ವಜನಿಕರಿಗೆ ಸರಳ ಮತ್ತು ಸುಗಮವಾಗಿ ಜಾತಿ…
ರಾಜ್ಯದಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಆದ್ಯತೆ ನೀಡಲು ಸಂತೋಷ್ ಬಗಲಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಸರ್ಕಾರದಿಂದ ಅನ್ಯಾಯಕ್ಕೆ ಒಳಗಾದ ಆಯುಷ್ಯ ವೈದ್ಯರನ್ನು ಕಡೆಗಣಿಸದೆ. ಈ ನೇಮಕಾತಿಯಲ್ಲಿ ಆಯುಷ್ಯ ವೈದ್ಯರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಯುವ ಮುಖಂಡ ಸಂತೋಷ್ ಬಗಲಿ ಆಗ್ರಹಿಸಿದರು.ಇತ್ತೀಚೆಗೆ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾವಿರಾರು ಆಯುಷ್ಯ ವೈದ್ಯರು ಶಿಕ್ಷಣ ಪಡೆದು ಉದ್ಯೋಗವಕಾಶಕ್ಕಾಗಿ ಕಾಯುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಆಯುಷ್ಯ ವೈದ್ಯರು ಮಹತ್ವದ ಪಾತ್ರ ವಹಿಸುತ್ತಿದ್ದು. ಕೋವಿಡ್ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ Uಉಅಯಿಂದ ೨(ಈ) ಮಾನ್ಯತೆ ಲಭಿಸಿದೆ.ರಾಜ್ಯದ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨(ಈ) ಮಾನ್ಯತೆಯನ್ನು ಪಡೆದ ಪ್ರಥಮ ಕಾಲೇಜು ಇದಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ೨(ಈ) ಮಾನ್ಯತೆಯನ್ನು ಪಡೆದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಮಾನದಂಡಕ್ಕೆ ಒಳಪಟ್ಟಿದೆ ಮತ್ತು ಈ ಮಾನ್ಯತೆ ಪಡೆಯುವಲ್ಲಿ ಕಾಲೇಜಿನ Iಕಿಂಅ ಸಂಯೋಜಕರಾದ ಡಾ.ಅನೀಲಕುಮಾರ ಡಿಗ್ಗೆ, ಹಾಗೂ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಶ್ರಮಿಸಿದ್ದು ಹೆಮ್ಮೆಯ ವಿಷಯ ಎಂದು ಪ್ರಾಂಶುಪಾಲ ಡಾ.ಎಸ್.ಎಲ್ ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಡಾ. ವಿ ಡಿ ಐಹೊಳ್ಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೂಜಿ ಕಾಯಕದ ಶಂಕರ ದಾಸಿಮಯ್ಯನವರು ಮೂಲತಃ ಶೈವ ಬ್ರಾಹ್ಮಣರು. ನವಿಲೆಯ ಜಡೆ ಶಂಕರದೇವರ ಭಕ್ತಿ ಸೇವೆಗೈದು ಲಿಂಗಾಯತ ಧರ್ಮ ಸೇರಿದರು. ಧ್ಯಾನ, ತಪಸ್ಸು ಮಾಡಿ ಶಿವನಿಂದ ಉರಿಗಣ್ಣನ್ನು ಪಡೆದು ಸ್ವೇಚ್ಛಾಚಾರಿ ಭವಿಗಳ ಅಹಂಕಾರವನ್ನು ನಿರಸನಗೊಳಿಸಿದರು. ಪರಿಶುದ್ಧವಾದ ಮನಸ್ಸಿನ, ಮಹಾ ತಪಸ್ವಿಯಾದ ಶಂಕರ ದಾಸಿಮಯ್ಯನವರೇ ಶಿವದಾಶಿವಯ್ಯನವರೆಂದು ಸಂಶೋಧನೆಯಿಂದ ತಿಳಿದು ಬಂದಿದೆ. ಧರ್ಮಾನುಯಾಯಿಗಳು ಶರಣರ ತತ್ವಗಳನ್ನು ಅರಿತು ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುವುದೆಂದು ಡಾ. ವಿ ಡಿ ಐಹೊಳ್ಳಿ ಹೇಳಿದರು. ಅವರು ವೀರಶೈವ ಮಹಾಸಭೆಯಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ “ಶಿವದಾಶಿವಯ್ಯನವರ ಅನುಭವ” ಕುರಿತು ಉಪನ್ಯಾಸ ನೀಡಿದರು.ಜಂಬುನಾಥ ಕಂಚ್ಯಾಣಿ ಮಾತನಾಡಿ, ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸದಸ್ಯತ್ವ, ದತ್ತಿಗಳ ಸಂಖ್ಯೆ ಮತ್ತು ಮಹಾಮನೆಯ ಚಂದಾದಾರತ್ವದಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.ವಿ ಸಿ ನಾಗಠಾಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪ್ರಪಂಚದಲ್ಲಿಯೇ ಬಸವಾದಿ ಶರಣರ ವಚನಗಳು…
ಸಾರ್ವಜನಿಕರ ಸಹಕಾರಕ್ಕೆ ತಹಶೀಲ್ದಾರ ಸಂಜಯ ಇಂಗಳೆ ಮನವಿ ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಕಾರ್ಯ ಜೂನ್ 30ರಿಂದ ಆರಂಭಗೊಂಡು ಜುಲೈ 29ರವರೆಗೆ ನಡೆಯಲಿದ್ದು, ತಾಲೂಕಿನ ಎಲ್ಲಾ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕರಿಸಬೇಕು ಎಂದು ತಹಶೀಲ್ದಾರ ಸಂಜಯ ಇಂಗಳೆ ಮನವಿ ಮಾಡಿದ್ದಾರೆ.ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಈ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಜೂನ್ 20ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ತರಬೇತಿ ನೀಡಲಾಗುತ್ತಿದ್ದು, ಈಗಾಗಲೇ 2002ರ ಮತದಾರರ ಪಟ್ಟಿ ಹಾಗೂ 2026ರ ಮತದಾರರ ಪಟ್ಟಿಯ ಮತದಾರರ ಮ್ಯಾಪಿಂಗ್ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಅನುಬಂಧ ನಮೂನೆ-3(Enumeration Form) ವಿತರಿಸಲಿದ್ದು, ಚುನಾವಣಾ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: 2026-27ನೇ ಶೈಕ್ಷಣಿಕ ಸಾಲಿಗೆ ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ ಹುಗ್ಗಿ ತಿಳಿಸಿದ್ದಾರೆ.ಕಾಲೇಜಿನಲ್ಲಿ ಬಿ.ಎ., ಬಿ.ಎಸ್ಸಿ. ಹಾಗೂ ಬಿ.ಕಾಂ. ಪದವಿ ಕೋರ್ಸ್‌ಗಳು ಲಭ್ಯವಿದ್ದು, ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ನುರಿತ ಹಾಗೂ ಅನುಭವಿ ಪ್ರಾಧ್ಯಾಪಕರಿಂದ ಬೋಧನೆ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ, ಸಮೃದ್ಧ ಗ್ರಂಥಾಲಯ, ವಿಶಾಲ ಸಭಾಂಗಣ (ಆಡಿಟೋರಿಯಂ) ಮತ್ತು ಸುಸಜ್ಜಿತ ಶೈಕ್ಷಣಿಕ ವಾತಾವರಣ ಕಾಲೇಜಿನ ವಿಶೇಷತೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ.ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ನಿಯಮಾನುಸಾರ ಶುಲ್ಕ ವಿನಾಯಿತಿ ಸೌಲಭ್ಯವೂ ಲಭ್ಯವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಆನ್ ಲೈನ್ ಪ್ರವೇಶ ಲಿಂಕ್ UUCMS.Karnataka. gov.in ಮೂಲಕ ಕಾಲೇಜಿನಲ್ಲಿ ಪ್ರವೇಶ ಪಡೆದು ತಮ್ಮ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಸಿಬ್ಬಂದಿಗಳನ್ನು ಸಂಪರ್ಕಿಸುವಂತೆ ಅವರು ಮನವಿ ಮಾಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಮೈಸೂರಿನ ಪುರಭವನದ ಮುಂದೆ ಎಸ್ ಚಿಕ್ಕಮಾದು ಅಭಿಮಾನಿ ಬಳಗದ ನೇತೃತ್ವದಲ್ಲಿ ನಾಯಕ ಸಮುದಾಯ ಬೃಹತ್ ಪ್ರತಿಭಟನೆ ಮಾಡಲಿದೆ ಎಂದು ಮೈಸೂರು- ಚಾಮರಾಜನಗರ ಜಿಲ್ಲೆ ಎಸ್ ಚಿಕ್ಕಮಾದು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಪಟ್ಟಣದ ವಾಲ್ಮೀಕಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ಯಾತನಹಳ್ಳಿ ನಾಗರಾಜು. ಅನಿಲ್ ಚಿಕ್ಕಮಾದು ಅವರು ಹಳೇ ಮೈಸೂರು ಭಾಗದಲ್ಲಿ ಎಸ್ಟಿ ಸಮುದಾಯದ ಪ್ರಭಾವಿ ಶಾಸಕರು. ತನ್ನದೇ ಆದ ವರ್ಚಸ್ಸು ಹೊಂದಿರುವ ಪ್ರಮುಖ ನಾಯಕರು. ಪ್ರತಿ ಚುನಾವಣೆಯಲ್ಲೂ ಶೇ. 70 ರಷ್ಟು ನಾಯಕ ಸಮುದಾಯ ಕಾಂಗ್ರೆಸ್ ಬೆಂಬಲಿಸುತ್ತಾ ಬರುತ್ತಿದೆ. ಮೈಸೂರು ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ 6 ಲಕ್ಷ ನಾಯಕ ಸಮುದಾಯದ ಜನಸಂಖ್ಯೆ ಇದ್ದು, 8 ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಕಳೆದ 30 ವರ್ಷಗಳಿಂದಲೂ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮತಕ್ಷೇತ್ರದಲ್ಲಿ ಸಿಮೆಂಟ್ ಸಿಸಿ ರಸ್ತೆ ಹಾಗೂ ಡಾಂಬರೀಕರಣ ಮೂಲಕ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮಹದಾಸೆಯನ್ನು ಹೊಂದಿದ್ದೇನೆ. ಇನ್ನು ಉಳಿದ ಅವಧಿಯಲ್ಲಿ ಇನ್ನಷ್ಟು ಅನುದಾನ ತಂದು ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಸಾಲುಮರದ ತಿಮ್ಮಕ್ಕ ಟ್ರಿ ಪಾರ್ಕ್ ಬಳಿ ಲೋಕೋಪಯೋಗಿ ಇಲಾಖೆಯ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಸಿಂದಗಿ-ವಿಜಯಪುರ ಮುಖ್ಯ ರಸ್ತೆಯಿಂದ ಸಾಲುಮರದ ತಿಮ್ಮಕ್ಕ ಟ್ರಿ ಪಾರ್ಕ್ ವರೆಗೆ ಡಾಂಬರ ರಸ್ತೆ ನಿರ್ಮಾಣಕ್ಕಾಗಿ ಮಂಜೂರಾದ ರೂ.೬೨ ಲಕ್ಷ ಮೊತ್ತದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳ ಸುಗಮ ಪ್ರಯಾಣಕ್ಕೆ ನೆರವಾಗಲಿದೆ. ಕಾಮಗಾರಿಯನ್ನು ಗುಣಮಟ್ಟದಿಂದ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸಿಂದಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿರುತ್ತೇನೆ ಎಂದರು.ಇದೇ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಕೆರೆಯ ಸೌಂದರ್ಯೀಕರಣಕ ಮಾಡುವ ಉದ್ದೇಶದಿಂದ ಅಮೃತ ೨ ಯೋಜನೆ ಅಡಿಯಲ್ಲಿ ₹೩ ಕೋಟಿ ೪ಲಕ್ಷ ಅನುದಾನವು ರಾಜ್ಯ ಸರಕಾರದಿಂದ ಮಂಜೂರಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಪತ್ರಿಕೆಗೆ ತಿಳಿಸಿದ್ದಾರೆ.ಈ ಅನುದಾನವನ್ನು ಸಾರ್ವಜನಿಕ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ವಿವಿಧ ಕಾಮಗಾರಿಗಳಿಗೆ ಬಳಸಲಾಗುವುದು. ಅಮೃತ ೨ ಯೋಜನೆಯಡಿ ಬಿಡುಗಡೆಯಾದ ಅನುದಾನದಿಂದ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದ್ದು, ಸಾರ್ವಜನಿಕರ ಬಹುಕಾಲದ ಬೇಡಿಕೆಗಳಿಗೆ ಸ್ಪಂದನೆ ದೊರೆಯಲಿದೆ. ಯೋಜನೆಯ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
