Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಅಥಣಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,43,842 ಎನ್ಯೂಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಶೇ.100ರಷ್ಟು ಫಾರ್ಮ್‌ ವಿತರಣೆ ಹಾಗೂ ಸಂಗ್ರಹಣೆ ಕಾರ್ಯ ಪೂರ್ಣಗೊಂಡಿದೆ. ಈ ಪೈಕಿ 2,23,002 ಫಾರ್ಮ್‌ಗಳನ್ನು (91.45%) ಡಿಜಿಟಲೀಕರಣಗೊಳಿಸಲಾಗಿದೆ ಎಂದು ಅಥಣಿ ತಾಲೂಕು ದಂಡಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಸಿದರಾಯ ಭೋಸಗಿ ತಿಳಿಸಿದ್ದಾರೆ.ಅವರು ಪಟ್ಟಣದ ತಾಲೂಕಾ ಆಡಳಿತ ಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,31,096 ಮತದಾರರು ಇದ್ದು, ಜೂನ್ 30ರಿಂದ ಆಗಸ್ಟ್ 17ರವರೆಗೆ ಎನ್ಯೂಮರೇಷನ್‌ ಫಾರ್ಮ್‌ ವಿತರಣೆ ಮತ್ತು ಸಂಗ್ರಹಣೆ ಕಾರ್ಯ ನಡೆಯಿತು. ಡಿಜಿಟಲೀಕರಣಗೊಂಡ ಮಾಹಿತಿಯ ಪರಿಶೀಲನೆಯಲ್ಲಿ 20,840 ಪ್ರಕರಣಗಳು ASDD ಪಟ್ಟಿಯಲ್ಲಿ ದಾಖಲಾಗಿವೆ.ಇದೇ ವೇಳೆ, ಪರಿಶೀಲನಾ ಪ್ರಕ್ರಿಯೆಯಲ್ಲಿ 1,232 ಗೈರು ಮತದಾರರು, 10,668 ಶಾಶ್ವತವಾಗಿ ವಲಸೆ ಹೋದ ಮತದಾರರು, 5,561 ಮೃತ ಮತದಾರರು ಹಾಗೂ 3,376 ಪುನರಾವರ್ತಿತ ಮತದಾರರು ಎಂದು ಗುರುತಿಸಲಾಗಿದೆ. ಇತರ ಕಾರಣಗಳಿಗೆ ಸಂಬಂಧಿಸಿದಂತೆ 3 ಪ್ರಕರಣಗಳು ದಾಖಲಾಗಿವೆ.ಮತದಾರರ ಮಾಹಿತಿಯ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಅಣ್ಣ ತಂಗಿಯ ಬಾಂಧವ್ಯ ಇವರದು ಶರೀರ ಕರಗಿದರೂ ಅವರ ಬಾಂಧವ್ಯ ಕರಗುವಂತಹದಲ್ಲಾ. ಸಹೋದರತ್ವ ಅಂದರೆ ತಂಗಿ ಶರಣೆ ಮುಕ್ತಾಯಕ್ಕ ಅಣ್ಣ ಅಜಗಣ್ಣ ರಂತಿರಬೇಕು ಎಂದು ಐನಾಪೂರ ಹಿರೇಮಠದ ಉಪಮನ್ಯು ಶಿವಾಚಾರ್ಯರು ಹೇಳಿದರು.ಆಲಮೇಲ ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಪೂಜ್ಯರು, ಇಂದು ನಾವೆಲ್ಲರೂ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿದ್ದೇವೆ ಅದು ಅಪಾಯದ ಅಂಚಿನಲ್ಲಿ ನಮ್ಮನ್ನು ತಂದೊಡ್ಡಿದೆ ಹಾಗಾಗಿ ನಮ್ಮ ಭಾರತೀಯ ಸಂಸ್ಕೃತಿಯ ಪರಂಪರೆ ಆಚಾರ ವಿಚಾರಗಳನ್ನು ಉಳಿಸಿಕೊಂಡು ಹೋಗಿ ನಮ್ಮ ಮುಂದಿನ ಯುವ ಜನತೆಗೆ ಜಾಗೃತಿ ಮಾಡಬೇಕಾಗಿದೆ. ಅಂತಹ ಕಾರ್ಯವನ್ನು ಬಾಲಭಾರತಿ ಶಾಲೆಯು ಮಾಡುತ್ತಿರುವುದು ಶ್ಲಾಘನೀಯ ಎಂದರು.ಕವಿವಾಣಿ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕುದರತ್ ಅಲಿ ಭೂಸನೂರ ಮಾತನಾಡಿ, ಹೆಣ್ಣಿಗೆ ಸಮಾಜದ ಪ್ರತಿ ಪುರುಷರು ಅಣ್ಣ-ತಮ್ಮಂದಿರಾಗಿ ಅವಳಿಗೆ ಪ್ರತಿ ಹೆಜ್ಜೆಯಲ್ಲೂ ರಕ್ಷೆ ನೀಡಿದಾಗ ಮಾತ್ರ ಈ ರಕ್ಷಾ ಬಂಧನ ಹಬ್ಬಕ್ಕೆ ನಿಜ ಅರ್ಥ ಬರುವುದು ಎಂದರು.ಈ ವೇಳೆ ಅರವಿಂದ ಕುಲಕರ್ಣಿ, ಅಲೋಕ…

Read More

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ ಸಂದರ್ಭದಲ್ಲಿ ಸಚಿವ ಎಂ.ಬಿ.ಪಾಟೀಲರಿಗೆ ವಿಜಯಪುರದ ನೌಕರರ ಭೇಟಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಡಂಬಡಿಕೆಯೋ ನಡೆಯುತ್ತಿದೆ ಎಂದರೆ ಕೈಗಾರಿಕಾ ಸಚಿವರಿಗೆ ಸಹಜವಾಗಿಯೇ ಖುಷಿಯಾಗುತ್ತದೆ. ಇದರಲ್ಲಿ ಎರಡು ಮಾತಿಲ್ಲ, ನಿಜ. ಆದರೆ, ದೇವನಹಳ್ಳಿ ತಾಲ್ಲೂಕಿನ ಕುಂದಾಣದಲ್ಲಿ ಮೊನ್ನೆ ನಡೆದ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯ ತಯಾರಿಕಾ ಸ್ಥಾವರ ಮತ್ತು ಆರ್ & ಡಿ ಘಟಕಗಳ ಉತ್ಪಾದನೆಯಲ್ಲಿ ಎಂ ಬಿ ಪಾಟೀಲರು ರೋಮಾಂಚನಗೊಳ್ಳಲು ಇದ್ದ ಕಾರಣವೇ ಬೇರೆ ಎಂದರೆ ನೀವು ನಂಬಬೇಕು.ಡಿ.ಎನ್.ಸೊಲ್ಯೂಷನ್ಸ್ ಅಂದರೆ ಇದು ದಕ್ಷಿಣ ಕೊರಿಯಾದ ಒಂದು ಅಗ್ರಮಾನ್ಯ ಕಂಪನಿ; ಮಶೀನ್ ಟೂಲ್ಸ್ ಕ್ಷೇತ್ರದಲ್ಲಿ ಇದರದು ದೊಡ್ಡ ಹೆಸರು. ಈ ಕಂಪನಿ ನಮ್ಮಲ್ಲೀಗ 600 ಕೋಟಿ ರೂಪಾಯಿ ಸುರಿದು ತನ್ನ ಎರಡೂ ಸ್ಥಾವರಗಳನ್ನು ಹೊಸದಾಗಿ ನಿರ್ಮಿಸಿದೆ. ಕಂಪನಿಯವರು ಸಹಜವಾಗಿಯೇ ಸಚಿವರನ್ನು ಉದ್ಘಾಟನೆಗೆ ಆಮಂತ್ರಿಸಿದ್ದರು.ಆದರೆ, ಕಂಪನಿಯ ಕ್ಯಾಂಪಸ್ಸಿನಲ್ಲಿ ಎಂ ಬಿ ಪಾಟೀಲರಿಗೆ ಎದುರಾದ ದೃಶ್ಯವೇ ಬೇರೆ. ಅಂದರೆ, ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಜಿಲ್ಲೆಯ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಖಂಡನೀಯ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ), ಬೆಂಗಳೂರು ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಬಿತ್ತನೆ, ಬೆಳೆ ಬೆಳವಣಿಗೆ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ, ಉಳಿದ ತಾಲೂಕುಗಳನ್ನು ನಿರ್ಲಕ್ಷಿಸಿರುವುದು ರೈತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಮಳೆ ಕೊರತೆ, ಬೆಳೆ ಹಾನಿ, ಅಂತರ್ಜಲ ಮಟ್ಟ ಹಾಗೂ ರೈತರ ವಾಸ್ತವ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹವಾಗಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಅಪ್ಪುರಾಜ್ ನಿಮಾದಾರ…

Read More

ವಿಜಯಪುರ ಜಿಲ್ಲೆಯಲ್ಲಿ ಎಸ್ಐಆರ್ ಹೆಸರಿನಲ್ಲಿ 2.97 ಲಕ್ಷ ಮತದಾರರು ಪಟ್ಟಿಯಿಂದ ಹೊರಗೆ | ಮತ ಕಾವಲು ಸಮಿತಿ ಆಕ್ಷೇಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಸಂಭವಿಸಿರುವ ಭಾರೀ ಬದಲಾವಣೆಗಳ ಕುರಿತು ಜಿಲ್ಲೆಯ SIR ಹೋರಾಟ ಸಮಿತಿ ಹಾಗೂ ಮತ ಕಾವಲು ಸಮಿತಿ ತೀವ್ರ ಆತಂಕ ಮತ್ತು ಆಕ್ಷೇಪ ವ್ಯಕ್ತಪಡಿಸಿದೆ.ಈ ಕುರಿತು ನಗರದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿದ ಮುಖಂಡರಾದ ಭೋಗೇಶ ಸೊಲಾಪೂರ, ಮೊಹಮ್ಮದ್ ಖದೀರ್, ಲಕ್ಷ್ಮಣ್ ಹಂದ್ರಾಳ, ಡಾ. ಗುರಿಕರ ಅವರು ಮಾತನಾಡಿ, ಮತದಾರರ ಪಟ್ಟಿಯನ್ನು ಶುದ್ಧೀಕರಿಸುವುದು ಅಗತ್ಯವಾದರೂ, ಆ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಮತದಾರನ ಮತದಾನದ ಹಕ್ಕು ಕಳೆದುಹೋಗಬಾರದು ಎಂಬುದು ಮತ ಕಾವಲು ಸಮಿತಿಯ ಸ್ಪಷ್ಟ ನಿಲುವಾಗಿದೆ. ವಿಜಯಪುರ ಜಿಲ್ಲೆಯಲ್ಲಿ SIR ಪ್ರಕ್ರಿಯೆಯ ಮೊದಲ ಹಂತದಲ್ಲಿ ಒಟ್ಟು 19,82,114 ಮತದಾರರಿಗೆ ಎನ್ಯೂಮರೇಷನ್ ಫಾರಂಗಳನ್ನು ವಿತರಿಸಲಾಗಿತ್ತು. ಈ ಪೈಕಿ 16,84,968 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಒಟ್ಟು 2,97,147 ಮತದಾರರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ ಉದ್ಘಾಟಿಸಿದರು.ಈ ವೇಳೆ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಮಾತನಾಡಿ, ಶರಣ ನುಲಿಯ ಚಂದಯ್ಯ ಅವರು ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳ ಸಾರಿ ಅದರಂತೆ ನಡೆದು ಸಮಾಜಕ್ಕೆ ಮಾದರಿಯಾಗಿದ್ದಾರೆ.ಅವರ ಆದರ್ಶ ಮತ್ತು ಸಂದೇಶ ಇಂದಿನ ಪೀಳಿಗೆ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನುಲಿಯ ಚಂದಯ್ಯ ಅವರು ೧೨ನೇ ಶತಮಾನದಲ್ಲಿ ಕಾಯಕದ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕಾಯಕಕ್ಕೆ ಘನತೆ ತಂದುಕೊಟ್ಟ ಶರಣರ ಜೀವನ ಮತ್ತು ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದರು.ವಿಶೇಷ ಉಪನ್ಯಾಸ ನೀಡಿದ, ಮೋಹನ ಕಟ್ಟಿಮನಿ ಅವರು ನುಲಿಯ ಚಂದಯ್ಯ ಅವರ ಜೀವನ, ಕಾಯಕನಿಷ್ಠೆ, ಶರಣ ತತ್ವಗಳ ಮೇಲಿನ ಬದ್ಧತೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು…

Read More

ವಿಜಯಪುರ ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ಸಮಾಜ ಸುಧಾರಕರಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು,ನಾರಾಯಣ ಗುರುಗಳು ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಯ ಮೂಲಕ ಸಮಾಜದ ಅಭಿವೃದ್ಧಿಗೆ ದಾರಿ ತೋರಿದವರಾಗಿದ್ದಾರೆ. ಅವರ ಚಿಂತನೆಗಳು ಇಂದಿನ ಸಮಾಜಕ್ಕೂ ಪ್ರೇರಣೆಯಾಗಿವೆ ಎಂದು ಹೇಳಿದರು.ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಹಾಗೂ ಗೌರವ ದೊರೆಯಬೇಕು ಎಂಬ ನಾರಾಯಣ ಗುರುಗಳ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ.ಅವರ ತತ್ವಾದರ್ಶಗಳನ್ನು ಅರ್ಥಮಾಡಿಕೊಂಡು, ಸಮಾನತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (೨೦೨೬-೨೭) ಸ್ನಾತಕೋತ್ತರ ಹಾಗೂ ವ್ಯಾಲ್ಯು ಆಡೆಡ್ ಡಿಪ್ಲೊಮಾ, ಅಡ್ವಾನ್ಸ್ಡ್ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಖಾಲಿ ಉಳಿದಿರುವ ಸೀಟುಗಳ ಭರ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ. ೧೫, ೨೦೨೬ರವರೆಗೆ ವಿಸ್ತರಿಸಲಾಗಿದೆ.ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಸಂಗೀತ, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಸಮಾಜಕಾರ್ಯ, ಜೈವಿಕ ಮಾಹಿತಿ ವಿಜ್ಞಾನ, ಜೈವಿಕ ತಂತ್ರಜ್ಞಾನ, ಭೌತಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತ್ರ, ಆಹಾರ ಸಂಸ್ಕರಣೆ ಮತ್ತು ಪೋಷಣೆ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಔಷಧೀಯ ರಸಾಯನಶಾಸ್ತ್ರ, ವಿದ್ಯುನ್ಮಾನ, ಎಂ.ಎಡ್., ಎಂ.ಪಿ.ಎಡ್., ಬಿ.ಪಿ.ಎಡ್. ಹಾಗೂ ವಾಣಿಜ್ಯಶಾಸ್ತ್ರ ವಿಷಯಗಳ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಲಭ್ಯವಿರುವ ಸೀಟುಗಳಿಗೆ ಸೆ. ೧೫ರವರೆಗೆ ಈ ಕೋರ್ಸ್ಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.ಮೇಲ್ಕಂಡ ಯಾವುದೇ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇದುವರೆಗೆ ಪ್ರವೇಶ ಪಡೆಯದೇ ಇರುವವರು ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ರಕ್ಷಾ ಬಂಧನ ಹಬ್ಬದ ಅಂಗವಾಗಿ ತಾಲ್ಲೂಕಿನ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ವಿಶೇಷವಾಗಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜಶ್ರೀ ತುಂಗಳ ಹಾಗೂ ಸಿಬ್ಬಂದಿ ಲಕ್ಷ್ಮಿ ಮಹಲ ಅವರು ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಸಹೋದರತ್ವ, ಪ್ರೀತಿ, ವಿಶ್ವಾಸ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಬೆಳೆಸಿದರು.ರಕ್ಷಾ ಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ, ಬಾಂಧವ್ಯ ಹಾಗೂ ರಕ್ಷಣೆಯ ಸಂಕೇತವಾಗಿರುವುದರ ಜೊತೆಗೆ, ಸಮಾಜದಲ್ಲಿ ಪರಸ್ಪರ ಗೌರವ ಮತ್ತು ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಸಂದೇಶವನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ ಪಿಡಿಒ ರಾಜಶ್ರೀ ತುಂಗಳ ಅವರು ಪಂಚಾಯಿತಿ ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಕಚೇರಿಯಲ್ಲಿಯೂ ಕುಟುಂಬದಂತಹ ಆತ್ಮೀಯ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಒಂದು ಕುಟುಂಬದ ಸದಸ್ಯರಂತೆ ಪರಸ್ಪರ ಸಹಕಾರದಿಂದ ಕೆಲಸ ಮಾಡಿದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ…

Read More