Author: editor.udayarashmi@gmail.com

ಮಾಜಿ ಎಂಎಲ್ಸಿಗಳಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ ಸೇರಿದಂತೆ ಹಲವರು ಸೇರ್ಪಡೆ ಬೆಂಗಳೂರು: ಹಲವು ಮಂದಿ ಬಿಜೆಪಿ-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಮಂದಿ ಕೈ ಹಿಡಿದಿದ್ದಾರೆ.ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ, ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಲ್ಲರನ್ನು…

Read More

ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌ | ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ | ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ಬಂಧನ ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಅರ್ಜಿಯು ಕೆಲವು ದೋಷಗಳನ್ನು ಹೊಂದಿದೆ; ಇವುಗಳನ್ನು ಪರಿಶೀಲಿಸಿದ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಾಲಯದ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸುರ್ಜಿತ್ ಸಿಂಗ್ ಯಾದವ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.ಕೇಜ್ರಿವಾಲ್ ಅವರು ಯಾವ ಅಧಿಕಾರದ ಅಡಿಯಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿದ್ದಾರೆ ಎಂಬುದನ್ನು ವಿವರಿಸಲು ಕೇಂದ್ರ, ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಪ್ರಧಾನ ಕಾರ್ಯದರ್ಶಿಯನ್ನು ಕೇಳಬೇಕು. ಕೇಜ್ರಿವಾಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅರ್ಜಿಯಲ್ಲಿ ಯಾದವ್ ಒತ್ತಾಯಿಸಿದ್ದಾರೆ.“ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ…

Read More

ವಿಜಯಪುರ: ರಾಜ್ಯ ಕಾರ್ಮಿಕರ ಮತ್ತು ಬಡರೋಗಿಗಳ ಕಲ್ಯಾಣ ಬೋರ್ಡ (ಎನ್.ಜಿ.ಓ) ವಿಜಯಪುರ ವತಿಯಿಂದ ವಿಶ್ವ ಜಲ ದಿನವನ್ನು ನಗರದ ಜಲನಗರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಅಶೋಕ ಜುಗತಿ ಮಾತನಾಡಿ, ವಿಶ್ವ ಜಲ ದಿನವನ್ನು ವಿಶ್ವ ಸಂಸ್ಥೆಯು ೧೯೯೩ ಮಾರ್ಚ ೨೨ ರಂದು ರಲ್ಲಿ ಜಾರಿ ಬಂದಿತು. ಅಮೃತಕ್ಕೆ ಸಮಾನವಾದ ಈ ನೀರು ದಿನನಿತ್ಯದ ಬದುಕಿಗೆ ಅತ್ಯಗತ್ಯ. ಕುಡಿಯುವುದರಿಂದ ಹಿಡಿದು ದಿನನಿತ್ಯದ ಕೆಲಸಕಾರ್ಯಗಳಿಗೆ ನೀರು ಅಗತ್ಯವಾಗಿ ಬೇಕು. ನೀರಿಲ್ಲದೇ ಬದುಕುವುದನ್ನು ಊಹೆ ಮಾಡುವುದಕ್ಕೂ ಅಸಾಧ್ಯ. ಆದರೆ ಬೇಸಿಗೆಯೂ ಆರಂಭವಾಗುತ್ತಿದ್ದಂತೆ ಎಲ್ಲೆಡೆ ನೀರಿನ ಹಾಹಾಕಾರವು ಶುರುವಾಗುತ್ತದೆ. ಈ ಸಮಯದಲ್ಲಿ ಕುಡಿಯಲು ನೀರಿಲ್ಲದೆ ಒದ್ದಾಡುವವರು ಇದ್ದಾರೆ. ಈ ನೀರಿನ ಮಹತ್ವವನ್ನು ಸಾರುವ ಸಲುವಾಗಿ ಪ್ರತಿ ವರ್ಷ ಮಾರ್ಚ್ ೨೨ ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಈ ಪೃಥ್ವಿಯ ಮೇಲಿರುವ ಸಕಲ ಜೀವ ರಾಶಿಗಳಿಗೆ ಆಹಾರ ಹಾಗೂ ಗಾಳಿ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಈ ನೀರು ಕೂಡ. ಆದರೆ ಈ ಮನುಷ್ಯ…

Read More

ಕಸಾಪದಿಂದ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷ ಆಹ್ವಾನ ಸ್ವೀಕರಿಸಿದ ಡಾ.ಐಹೊಳ್ಳಿ ಅಭಿಮತ ವಿಜಯಪುರ: ಜಿಲ್ಲೆಯು ಕನ್ನಡ ನಾಡು- ನುಡಿ, ಕಲೆ-ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ. ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ಜಿಲ್ಲೆಯನ್ನು ಶ್ರೀಮಂತಗೋಳಿಸಿವೆ ಎಂದು ಡಾ. ವಿ ಡಿ ಐಹೊಳ್ಳಿ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ೧೯ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷರಾಗಿ ಆಯ್ಕೆಯಾದ ಡಾ ವ್ಢಿ ಡಿ ಐಹೊಳ್ಳಿ ಅವರು ಆವ್ಹಾನ ಹಾಗೂ ಗೌರವ ಸ್ವೀಕರಿಸಿ ಮಾತನಾಡಿದರು.ನಾನು ಸಮ್ಮೇಳನದ ಸವಾ೯ಧ್ಯಕ್ಷರಾಗಿ ಆಯ್ಕೆಯಾಗಿದ್ದು ಅತ್ಯಂತ ಸಂತಸದ ವಿಷಯ. ಜಿಲ್ಲೆಯಾದ್ಯಂತ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ಸಾಗಬೇಕು. ಹೊಸ ಪ್ರತಿಭೆಗಳಿಗೆ ಅವಕಾಶ ಹಾಗು ಪ್ರೋತ್ಸಾಹ ಅಗತ್ಯ ಎಂದರು.ಸವಾ೯ಧ್ಯಕ್ಷರಿಗೆ ಆವ್ಹಾನ ನೀಡಿ ಸನ್ಮಾನಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಬಹುಮುಖ ವ್ಯಕ್ತಿತ್ವ ಹೊಂದಿರುವ ಡಾ ವ್ಹಿ ಡಿ ಐಹೊಳ್ಳಿಯವರು ಶಿಕ್ಷಣ. ಸಾಹಿತ್ಯ, ಸಂಶೋಧನೆ ಹಾಗು ಗ್ರಂಥ ಸಂಪಾದನೆಯಲ್ಲಿ ಅಪಾರ ಸೇವೆ ಮಾಡಿದ ಅನುಭವಿಗಳು. ಕನ್ನಡ ಸಾಹಿತ್ಯ ಪರಿಷತ್ತಿನ…

Read More

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಮಾಜಿ ಅಧ್ಯಕ್ಷ ಸಂಜೀವ ಕಲ್ಯಾಣಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಧರ್ಮಸೇನ ಅವರ ಆದೇಶ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಕಾಂಗ್ರೆಸ ಸಮಿತಿಗಳ ಮಾರ್ಗದರ್ಶನದಲ್ಲಿ ತಮ್ಮ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾ ಕಾಂಗ್ರೆಸ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ನೀಡಿದ ನೇಮಕ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Read More

ಬಸವನಬಾಗೇವಾಡಿ: ತಾಲೂಕಿನಲ್ಲಿ ಮೋಸ ಮಾಡುವ ಆಧಾರ ಕಾರ್ಡ್ ಕೇಂದ್ರಗಳ ಮೇಲೆ ತಹಸೀಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ರಾಜಶೇಖರ ಹುಲ್ಲೂರ,ಪದಾಧಿಕಾರಿಗಳು ಗ್ರೇಡ್-೨ ತಹಸೀಲ್ದಾರ ಜಿ.ಎಸ್.ನಾಯಕ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದಲ್ಲಿ ಶಾಲೆಯ ಮಕ್ಕಳ ಹೆಸರು ಎಸ್ಟಿಎಸ್ ದಾಖಲಾತಿ ಪ್ರಕಾರ ಆಧಾರ ಕಾರ್ಡ್ನಲ್ಲಿಯೂ ಇರಬೇಕು. ಇದರಿಂದಾಗಿ ಆಧಾರ ಕಾರ್ಡ್ನಲ್ಲಿ ಮಕ್ಕಳು ಹೆಸರು, ತಂದೆಯ ಹೆಸರು, ಅಡ್ಡಹೆಸರು ಸೇರಿದಂತೆ ಏನಾದರೂ ತಪ್ಪಾಗಿದ್ದರೆ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಶಾಲೆಯ ಮುಖ್ಯಗುರುಗಳು ಪಾಲಕರಿಗೆ ಹೇಳುತ್ತಾರೆ. ಅದರಂತೆ ಪಾಲಕರು ತಮ್ಮ ತಮ್ಮ ಮಕ್ಕಳ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಆಧಾರ ಕಾರ್ಡ್ ಕೇಂದ್ರಗಳಿಗೆ ಶಾಲೆಯ ದಾಖಲೆಯನ್ನು ಮುಖ್ಯಗುರುಗಳಿಂದ ಬರೆಸಿಕೊಂಡು ಹೋಗುತ್ತಾರೆ. ಪಾಲಕರು ಇದನ್ನು ತೆಗೆದುಕೊಂಡು ಹೋದಾಗ ಆಧಾರ ಕಾರ್ಡ್ ಕೇಂದ್ರದವರು ಇದನ್ನು ಪ್ರಿಂಟ್ ಮಾಡಿ ಮತ್ತೆ ಶಾಲೆಯ ಮುಖ್ಯಗುರುಗಳಿಂದ ಸಹಿ ಮಾಡಿಸಿಕೊಂಡು ಬರಲು ಹೇಳುತ್ತಾರೆ. ಆಗ ಪಾಲಕರಿಂದ ರೂ. ೧೦೦ ತೆಗೆದುಕೊಳ್ಳುತ್ತಾರೆ. ಪಾಲಕರು ಮತ್ತೆ ಮುಖ್ಯಗುರುಗಳಿಂದ…

Read More

ಬಸವನಬಾಗೇವಾಡಿ: ಮೇ.7 ರಂದು ನಡೆಯಲಿರುವ ವಿಜಯಪುರ ಮತಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಆಲಮಟ್ಟಿ ಯುಕೆಪಿ ಭೂಸ್ವಾಧಿನಾಧಿಕಾರಿ, ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಗಂಗಪ್ಪ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಶುಕ್ರವಾರ ಅಖಂಡ ತಾಲೂಕಿನ ಪತ್ರಿಕೆ ವರದಿಗಾರರ ಹಾಗೂ ವಿಡಿಯೋ ಮಾಧ್ಯಮದವರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಲಾಗುವದು. ನಮ್ಮ ವಿಧಾನಸಭಾ ಮತಕ್ಷೇತ್ರದಲ್ಲಿ ಹೆಚ್ಚು ಮತದಾನವಾಗಲು ವಿವಿಧ ಜಾಗೃತಿ ಜಾಥಾ ಕಾರ್ಯಕ್ರನಗಳನನ್ನು ಆಯೋಜನೆ ಮಾಡಲಾಗುವದು. ಮಾ.16 ರಿಂದ ಚುನಾವಣೆ ನೀತಿಸಂಹಿತೆ ಜಾರಿ ಬಂದಿರುವದರಿಂದ ಯಾರೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವದು. ಈಗಾಗಲೇ ಕೊಲ್ಹಾರ ಯುಕೆಪಿ ಬ್ರಿಜ್, ಅರಳದಿನ್ನಿ ಕ್ರಾಸ್, ಯಲಗೂರ ಕ್ರಾಸ್ ನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ ಎಂದರು.ರೂ.50 ಸಾವಿರಕ್ಕಿಂತ ಹೆಚ್ಚಿನ…

Read More

ಢವಳಗಿ: ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಮಂಜೂರಾತಿ ಮಾಡಿದ 2.00 ಲಕ್ಷ ಡಿಡಿ. ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಜಯಪುರ ಜಿಲ್ಲೆಯ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ, ಮತ್ತು ಮುದ್ದೇಬಿಹಾಳ ತಾಲೂಕಿನ ಯೋಜನಾಧಿಕಾರಿ ನಾಗೇಶ್ N P, ಜನ ಜಾಗೃತಿ ಸಮಿತಿಯ ಸದಸ್ಯ ಶ್ರೀಶೈಲ ದೊಡ್ಡಮನಿ ಮತ್ತು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳಿಗೆ ಮಂಜೂರಾತಿ ಚೆಕ್ ಹಸ್ತಾಂತರ ಮಾಡಿದರು.ನಿರ್ಗತಿಕರಿಗೆ ತಾಲೂಕಿನಲ್ಲಿ 105 ಕುಟುಂಬಕ್ಕೆ ನಿರ್ಗತಿಕರ ಮಾಸಾಸನ ನೀಡುತ್ತಿದ್ದೇವೆ. ಯೋಜನೆ ಕುಟುಂಬದ ಅಭಿವೃದ್ಧಿ ಜೊತೆಗೆ ಸಮಾಜದ ಅಭಿವೃದ್ಧಿಗಾಗಿ ಶಾಲೆಗಳಿಗೆ ಬೆಂಚ್ ಡೆಸ್ಕ್, ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವ ಶಾಲೆಗೆ ಶಿಕ್ಷಕರ ಕೊಡುವುದು, ರುದ್ರಭೂಮಿ ಅಭಿವೃದ್ಧಿ, ಶುದ್ಧಗಂಗಾ ಘಟಕ ನಿರ್ಮಾಣ, ಕೆರೆ ಹೋಳುತೆಗೆಯುವುದು, ಇಂತಹ ಕಾರ್ಯಕ್ರಮಗಳನ್ನು ನೀಡುತ್ತ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಂದಿದ್ದಾರೆ ಎಂದು ಜಿಲ್ಲಾ ನಿರ್ದೇಶಕ ಸಂತೋಷ ರೈ ಹೇಳಿದರು.ಸ್ಥಳೀಯ ರಾಮಲಿಂಗೇಶ್ವರ ಸಂಘದ…

Read More

ತಿಕೋಟಾ: ತಾಲೂಕು ವ್ಯಾಪ್ತಿಯ ಎಲ್ಲ ೧೪ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಭಾಗದಲ್ಲಿರುವ ಜನರು ವಲಸೆ ಹೋಗುವದನ್ನು ತಡೆದು ಸ್ಥಳಿಯವಾಗಿ ಅವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸ ನೀಡುವ ಉದ್ದೇಶದಿಂದ ಹಾಗೂ ಮಹಾತ್ಮ ಗಾಂದಿ ನರೇಗಾ ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಭಾಗವಹಿಸುವಂತೆ ಪ್ರೇರೆಪಿಸುವ ದೃಷ್ಠಿಯಿಂದ ಮೇ-೨೦೨೪ರ ಅಂತ್ಯದವರೆಗೆ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ “ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ” ಎಂಬ ವಿಶೇಷ ಅಭಿಯಾನವನ್ನು ಮಾನ್ಯ ಆಯುಕ್ತರ ನಿರ್ದೇಶನದಂತೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರವೀಣಕುಮಾರ ಸಾಲಿ ಹೇಳಿದರು.ಈಗಾಗಲೇ ಗ್ರಾಮೀಣ ಭಾಗದ ಜನರಿಗೆ ಪ್ರತಿ ದಿನ ೩೧೬ ರೂ ಕೂಲಿ ಜೊತೆಗೆ ೧೦೦ ದಿನಗಳ ಅಕುಶಲ ಕೆಲಸ ನೀಡಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಯಾವದೇ ಉದ್ಯೋಗ ದೊರೆಯದೇ ಇರುವ ಪ್ರಯುಕ್ತ ಈ ಅವಧಿಯಲ್ಲಿ ಅವರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ಈ ಅಭಿಯಾನವನ್ನು…

Read More

“ಪ್ರಭುದ್ಧ ಮನಸ್ಸು, ಪ್ರಭುದ್ಧ ಸಮಾಜ”- ವಿವೇಕಾನಂದ. ಎಚ್.ಕೆ, ಬೆಂಗಳೂರು ಒಂದು ಆಶ್ಚರ್ಯಕರ ಸಂಗತಿಯನ್ನು ಕೆಲವರು ಗಮನಿಸಿರಬೇಕು. ಅನೇಕ ಸಾಮಾಜಿಕ ಜಾಲತಾಣಗಳ ಸಾಮಾನ್ಯ ಜನ ಮತ್ತು ಪ್ರಾಣಿ, ಪಕ್ಷಿ, ಪರಿಸರ ಪ್ರೇಮಿಗಳು ಗುಬ್ಬಚ್ಚಿ ದಿನದಂದು ಭಾವುಕರಾಗಿ ಗುಬ್ಬಚ್ಚಿಯನ್ನು ನೆನೆಯುತ್ತಿದ್ದಾರೆ. ಹೆಚ್ಚು ಕಡಿಮೆ ವಿ ಮಿಸ್ ಯು ಗುಬ್ಬಚ್ಚಿ ಎಂದು ಗುಬ್ಬಚ್ಚಿಯ ಆ ಚಿಲಿಪಿಲಿ ಧ್ವನಿಯನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ.. ಒಂದು ರೀತಿಯ ಭಾವನಾತ್ಮಕ ಅಲೆಗಳನ್ನು ಗುಬ್ಬಚ್ಚಿ ದಿನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಹೃದಯಗಳು ಎಬ್ಬಿಸಿದ್ದು ಕಂಡು ಬರುತ್ತಿದೆ. ಒಂದಷ್ಟು ಜನ ಗುಬ್ಬಚ್ಚಿ ಕುರಿತ ಕವಿತೆಗಳು, ಲೇಖನಗಳು, ಭಾವನಾತ್ಮಕ ಸನ್ನಿವೇಶಗಳು, ಮನೆಯೊಳಗಿನ ಗುಬ್ಬಚ್ಚಿಯ ಗೂಡು ಕಟ್ಟುವಿಕೆಯ ನೆನಪುಗಳು, ವೈಜ್ಞಾನಿಕ ಲೇಖನಗಳು ಮತ್ತು ಅದು ಬಹುತೇಕ ನಗರ ಪ್ರದೇಶಗಳಲ್ಲಿ ಅವು ಮರೆಯಾಗುತ್ತಿರುವ ನೋವು ಎಲ್ಲವನ್ನು ಅಕ್ಷರಗಳ ಮುಖಾಂತರ ವ್ಯಕ್ತಪಡಿಸುತ್ತಿದ್ದಾರೆ.. ನಿಜಕ್ಕೂ ಸಾಮಾನ್ಯ ಜನರ ಮನಸ್ಸಿನ ಮೂಲೆಯಲ್ಲಿ ಕಾಡುತ್ತಿರುವ ಈ ಗುಬ್ಬಚ್ಚಿಯ ಜೀವಸಂಕುಲದ ಬಗೆಗಿನ ತುಡಿತವೇ ಮನುಷ್ಯ ಇನ್ನು ಎಲ್ಲೋ ಜೀವಂತವಾಗಿದ್ದಾನೆ ಎಂಬ ಭಾವನೆ ಮೂಡಿಸುತ್ತದೆ. ದೂರದಿಂದ ಈ…

Read More