Author: editor.udayarashmi@gmail.com

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯಿಂದ ಬುಧವಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಜರುಗಿತು.ಹೂವಿನಹಿಪ್ಪರಗಿ ನಾಡಕಚೇರಿಯ ಉಪತಹಸೀಲ್ದಾರ ಎಸ್.ಕೆ.ಪಾಟೀಲ ಅವರು, ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರ ಪಿಂಚಣಿ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಮನಸ್ವಿನಿ, ವಿಧವಾ ವೇತನ, ಸಂದ್ಯಾಸುರಕ್ಷಾ, ವಿಕಲಚೇತನ, ವೃದ್ಯಾಪ್ಯ ವೇತನ ಸೇರಿದಂತೆ ವಿವಿಧ ಪಿಂಚಣಿಗೆ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಅರ್ಜಿ ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಪಿಂಚಣಿ ಪಡೆಯಲು ಗ್ರಾಮ ವನ್ ಕೇಂದ್ರಗಳಲ್ಲಿಯೂ ಅರ್ಹ ಫಲಾನುಭವಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂದು ಜರುಗಿದ ಪಿಂಚಣಿ ದಿನಾಚರಣೆಯಲ್ಲಿ ಹನ್ನೊಂದು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು. ಮುಂದಿನ ದಿನಗಳಲ್ಲಿ ಅವರಿಗೆ ಮಂಜೂರಾತಿ ಆದೇಶಗಳನ್ನು ನೀಡಲಾಗುತ್ತಿದೆ. ಇಂದು ಹಿಂದೆ ಅರ್ಜಿ ಸಲ್ಲಿಸಿದ ಮೂರು ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ನೀಡಲಾಗಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯಕ್ಷೆ ಶರಣಮ್ಮ ಕುಂಬಾರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೂವಿನಹಿಪ್ಪರಗಿ ಕಂದಾಯ ನಿರೀಕ್ಷಕ ವ್ಹಿ.ಜಿ.ಸಿಂದಗಿ,…

Read More

ಬಸವನಬಾಗೇವಾಡಿ: ಪಟ್ಟಣದ ಗೌರಿಶಂಕರ ದೇವಸ್ಥಾನದ ಜಾತ್ರೆಯಂಗವಾಗಿ ಬುಧವಾರ ದ್ಯಾಮವ್ವನ ಸೋಗಿನ ಮೆರವಣಿಗೆಯು ಸಂಭ್ರಮದಿಂದ ಜರುಗಿತು.ಜಾತ್ರೆಯಂಗವಾಗಿ ಗೌರಿಶಂಕರ ದೇವಸ್ಥಾನದಲ್ಲಿ ಕಳೆದ ಹತ್ತು ದಿನಗಳಿಂದ ಪ್ರತಿಷ್ಠಾಪಿಸಲಾಗಿರುವ ಗೌರಿ, ಶಿವ, ಗಂಗೆ, ನಂದಿ ಮೂರ್ತಿಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.ಅಲಂಕೃತಗೊಂಡಿದ್ದ ಗರ್ಭಗುಡಿಯ ಮೂರ್ತಿಗಳಿಗೆ ಪೂಜೆ ಸಲ್ಲಿಸಲಾಯಿತು. ಮಹಿಳೆಯರು ತಮ್ಮ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ತೆರಳಿ ದೇವರಿಗೆ ನೈವೇದ್ಯ ಅರ್ಪಿಸಿದರು. ಕೆಲವರು ಗೌರಿಗೆ ಉಡಿ ತುಂಬಿದರು.ಮಧ್ಯಾನ್ಹ ಪಟ್ಟಣದ ಮಾರುತಿ ದೇವಸ್ಥಾನದ ಮುಂಭಾಗದಿಂದ ಆರಂಭವಾದ ದ್ಯಾಮವ್ವನ ಸೋಗಿನ ಮೆರವಣಿಗೆಯು ಸಂಜೆ ಗೌರಿಶಂಕರ ದೇವಸ್ಥಾನಕ್ಕೆ ಆಗಮಿಸಿತು. ಮೆರವಣಿಗೆಯುದ್ದಕ್ಕೂ ಡೊಳ್ಳಿನ ಮೇಳ, ಹಲಗೆ ನಾದ ಸೇರಿದಂತೆ ವಿವಿಧ ವಾದ್ಯಗಳ ತಾಳಕ್ಕೆ ಜನರು ಹೆಜ್ಜೆ ಹಾಕಿ ಸಂಭ್ರಮ ಪಟ್ಟರು. ದ್ಯಾಮವ್ವ ಸೋಗು ಸಾಗುವ ಮಾರ್ಗ ಎರಡು ಬದಿಗಳಲ್ಲಿ ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯ ಜನರು ನಿಂತು ಮೆರವಣಿಗೆಯನ್ನು ವೀಕ್ಷಿಸಿದರು.ಈ ಸಲ ಹಣಮಂತ ಕಾಮನಕೇರಿ ದ್ಯಾಮವ್ವನ ಸೋಗು ಹಾಕಿದ್ದರು. ಇವರಿಗೆ ಅಪ್ಪಾಶಿ ಮಟ್ಯಾಳ ಸಾಥ್ ನೀಡಿದರು. ದ್ಯಾಮವ್ವನ ಸೇವಕಿಯರಾಗಿ ಕಿರಣ ಕಾಮನಕೇರಿ, ಸಮರ್ಥ ಯರನಾಳ…

Read More

ದೇವರಹಿಪ್ಪರಗಿ: ಇದು ಮಕ್ಕಳಹಬ್ಬ, ಮಕ್ಕಳು ಎಂದರೆ ದೇವರ ಸಮಾನ, ಮಕ್ಕಳ ಪರ ಚಿಂತಕರು ಇರುವ ಗ್ರಾಮ ಸ್ವರ್ಗವಾಗುತ್ತದೆ ಎಂದು ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ ತೋಳಬಂದಿ ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ಉಜ್ವಲ ಗ್ರಾಮೀಣಾಭಿವೃದ್ಧಿ ಸೇವಾಸಂಸ್ಥೆ, ಇಂಡಿಯಾ ಲಿಟ್ರಸಿ ಪ್ರೋಜೆಕ್ಟ್ ಶಿಕ್ಷಣಯಾತ್ರೆ ಯೋಜನೆ, ಹಾಗೂ ಜಿಲ್ಲಾ ಆಡಳಿತ ಸಹಯೋಗದೊಂದಿಗೆ ಮಂಗಳವಾರ ಜರುಗಿದ ಮಕ್ಕಳ ಹಕ್ಕುಗಳ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಮಕ್ಕಳಿಗೆ ಸಂಬಂಧಿಸಿದ ಯೋಜನೆಗಳು ಗ್ರಾಮ ಮಟ್ಟದ ಪ್ರತಿ ಮಗುವಿಗೆ ದೊರಕಬೇಕು. ಮಕ್ಕಳ ರಕ್ಷಣೆಗಾಗಿ ೧೦೦, ೧೧೨, ೧೦೯೮, ಸಹಾಯವಾಣಿಗಳಿಗೆ ಸಂಪರ್ಕಿಸಬೇಕು. ಗ್ರಾಮ ಪಂಚಾಯತ್ ಮಕ್ಕಳ ಬೇಡಿಕೆಗಳು ತಮ್ಮ ಕ್ರಿಯಾ ಯೋಜನೆಯಲ್ಲಿ ಹಾಕಿ ಪರಿಹಾರ ನೀಡಲು ಹೇಳಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಸಿಆರ್‌ಸಿ ಮಾಹಾಂತೇಶ ಕಾಳಗಿ ಅವರು ಮಾತನಾಡಿದರು.ವೇದಿಕೆಯಲ್ಲಿ ಮಕ್ಕಳು ಮತ್ತು ಅಂಗನವಾಡಿ ಕಾರ್ಯಕರ್ತರು ತಮ್ಮ ಸಮಸ್ಯೆಗಳನ್ನು ಮಂಡಿಸುತ್ತಾ, ತಮ್ಮ ಬೇಡಿಕೆಗಳಾದ ಅಂಗನವಾಡಿ ಹಾಗೂ ಶಾಲಾಕಟ್ಟಡ, ಕಿಡಕಿ, ಕಂಪೌಂಡ್, ಗೇಟ್ ರಿಪೇರಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಜೊತೆಗೆ ಶೌಚಾಲಯಗಳ ನಿರ್ಮಾಣ, ಸರಕಾರದಿಂದ ಶಾಲೆಗಳಿಗೆ ಕಂಪ್ಯೂಟರ್…

Read More

ಹಡಗಿನಾಳದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ನಾಡಗೌಡ ಸ್ಪಷ್ಠನೆ ತಾಳಿಕೋಟಿ: ಮತಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ ಸಮರ್ಪಕ ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣವನ್ನು ಒದಗಿಸಲು ಆದ್ಯತೆಯೊಂದಿಗೆ ಕೆಲಸ ಮಾಡಲಾಗುವುದು ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಬುಧವಾರ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂತನ ಹಡಗಿನಾಳ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ವಿಜಯಪುರ ತಾಲೂಕು ಪಂಚಾಯತ್ ತಾಳಿಕೋಟೆ ಹಾಗೂ ಮೂಕಿಹಾಳ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಗ್ರಾಮಸ್ಥರಿಂದ ಗ್ರಾಮದಲ್ಲಿರುವ ಸಮಸ್ಯೆಗಳ ಕುರಿತು ಅವರು ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ಹಡಗಿನಾಳ ಗ್ರಾಮವು ಸ್ಥಳಾಂತರಗೊಂಡ ನೂತನ ಗ್ರಾಮವಾಗಿರುವುದರಿಂದ ಇಲ್ಲಿ ಹಲವಾರು ಸಮಸ್ಯೆಗಳು ಇರುವುದು ನಿಜ. ಮೂಲವಾಗಿ ಶುದ್ಧ ಕುಡಿಯುವ ನೀರಿನ ತೊಂದರೆ ಇದ್ದು ಲಭ್ಯ ಇರುವ ನೀರು ಫ್ಲೋರೈಡ್ನಿಂದ ಕೂಡಿದೆ. ಇದಕ್ಕಾಗಿ ಇಲ್ಲೊಂದು ಆರ್ ಒ ಪ್ಲಾಂಟ್ ಘಟಕ ಸ್ಥಾಪಿಸುವುದು ಅಗತ್ಯವಾಗಿದೆ.…

Read More

ತಾಳಿಕೋಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒಂದು ಸಮಯದಲ್ಲಿ ಇಡೀ ಜಿಲ್ಲೆಯಲ್ಲಿಯೇ ಒಂದು ಮಾದರಿ ಕೇಂದ್ರವಾಗಿತ್ತು. ಆದರೆ ಇಂದು ಅದರ ವರ್ಚಸ್ಸು ಕ್ಷೀಣಿಸುತ್ತಿದೆ ಸರ್ಕಾರಿ ಆಸ್ಪತ್ರೆಗಳು ಬಡ ರೋಗಿಗಳ ಸೇವಾ ಕೇಂದ್ರಗಳಾಗಿವೆ ಹೊರತು ವ್ಯಾಪಾರಿ ಕೇಂದ್ರಗಳಲ್ಲ ಎಂದು ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಆಸ್ಪತ್ರೆಯಲ್ಲಿಯ ಸೌಕರ್ಯಗಳ ಕುರಿತು ತಾಲೂಕು ಆರೋಗ್ಯ ಅಧಿಕಾರಿ ಡಾ. ಸತೀಶ ತಿವಾರಿ ಹಾಗೂ ಆಡಳಿತ ಅಧಿಕಾರಿ ಡಾ. ಶ್ರೀಶೈಲ ಹುಕ್ಕೇರಿ ಇವರಿಂದ ಮಾಹಿತಿ ಪಡೆದರು. ಕೆಲವು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ನಡೆದ ಅಹಿತಕರ ಘಟನೆಗಳ ಕುರಿತು ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿದ ಅವರು ಯಾವ ಕಾರಣಕ್ಕೂ ಆಸ್ಪತ್ರೆಯ ಸೇವೆಯನ್ನು ನಿಲ್ಲಿಸಬೇಡಿ, ಇಲ್ಲಿಗೆ ಬರುವವರು ಬಡವರು ಹಾಗೂ ಗ್ರಾಮೀಣ ಭಾಗದ ಜನರು ಇದರಿಂದ ಅವರಿಗೆ ತುಂಬಾ ತೊಂದರೆಯಾಗುತ್ತದೆ ಎಂದರು. ಇತ್ತೀಚಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ…

Read More

ಚಡಚಣ: ಸಮೀಪದ ಶಿರಾಡೋಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರದಂದು ಡಿಡಿಪಿಐ ಎನ್.ಎಚ್.ನಾಗೂರ ಮತ್ತು ವಿಷಯ ಪರಿವೀಕ್ಷಕರಾದ ಶ್ರೀಮತಿ ಎಸ್.ಎ.ಅಳಗಿಯವರು ಭೇಟಿ ನೀಡಿದರು.ಶಾಲಾ ಗುಣಮಟ್ಟ, ಆಂಗ್ಲ ಮಾಧ್ಯಮ ತರಗತಿಗಳು, ಶಾಲೆಯ ಪ್ರಾಯೋಗಿಕ ಕೋಠಡಿ, ಆಟದ ಕೋಠಡಿ, ಶಾಲಾ ಭೌತಿಕ ಸೌಲಬೈಗಳನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಿಡಿಪಿಐ ಎನ್.ಎಚ್.ನಾಗೂರರವರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸುವ, ಅಧ್ಯಾತ್ಮಿಕವಾಗಿ, ದೈಹಿಕವಾಗಿ ಮತ್ತು ಶೈಕ್ಷಣಿಕವಾಗಿ, ಸೃಜನಾತ್ಮಕ ಕೌಶಲ್ಯಗಳು, ಸಾಮಾಜಿಕ ಮತ್ತು ಭಾವನಾತ್ಮಕ ಕೌಶಲ್ಯಗಳು, ರಾಷ್ಟçದ ಮೇಲಿನ ಪ್ರೀತಿ ಮತ್ತು ಪ್ರಕೃತಿಯ ಬಗ್ಗೆ ಕಾಳಜಿಯನ್ನು ಬೆಳೆಸುವುದು. ಶಾಲೆಯ ಸಮರ್ಪಿತ ಶಿಕ್ಷಣತಜ್ಞರು ಸ್ವಾಭಿಮಾನ. ಸಹಿಷ್ಣುತೆ ಮತ್ತು ಒಳನೋಟವನ್ನು ಹೊಂದಿರುವ ಕ್ರಿಯಾತ್ಮಕ ವ್ಯಕ್ತಿಗಳನ್ನು ಶಿಲ್ಪಕಲೆ ಮಾಡುವಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ಮತ್ತು ಸಕ್ರಿಯವಾದ, ಉತ್ತಮ ಗುಣಮಟ್ಟದ, ಆಧುನಿಕ ತಂತ್ರಜ್ಞಾನದ ಕಲಿಕೆ ಮತ್ತು ಅರ್ಥಮಾಡಿಕೊಳ್ಳವ ಚೌಕಟ್ಟಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಅಂತರ್ಗತ ಸಕಾರಾತ್ಮಕ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊರಹಾಕಲು ಈ ಶಾಲೆಯು ಪ್ರಯತ್ನಿಸುತ್ತಿದೆ ಎಂದು ಶಾಲೆಯ ಸರ್ವತೋಮುಖ ಬೆಳವಣಿಗೆಯ ಬಗ್ಗೆ…

Read More

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ಎರಡನೇ ವರ್ಷದ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಖೋ ಖೋ ಕ್ರೀಡೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಯುನಿವರ್ಸಿಟಿ ಬ್ಲ್ಯೂ ಸಾಧನೆ ಮಾಡಿದ್ದಾರೆ.ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಅವರು ವಿವಿಯನ್ನು ಪ್ರತಿನಿಧಿಸುತ್ತಿದ್ದಾರೆ. ತಮಿಳುನಾಡಿನ ತಿರುವೂರಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 30ರ ವರೆಗೆ ಮಹಿಳಾ ಖೋ ಖೋ ಪಂದ್ಯಾವಳಿ ನಡೆಯುತ್ತಿದ್ದು, ಈ ಪಂದ್ಯಾವಳಿಯಲ್ಲಿ ರಾಜೇಶ್ವರಿ ಅಗಸರ ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾರೆ.ಈ ಮಧ್ಯೆ, ವಿವಿ ತಂಡಕ್ಕೆ ಆಯ್ಕೆಯಾದ ರಾಜೇಶ್ವರಿ ಅಗಸರ ಅವರಿಗೆ ವಿವಿ ಕುಲಪತಿ ಡಾ. ಎಂ. ಕೆ. ರಮೇಶ ಶುಭ ಹಾರೈಸಿದ್ದಾರೆ. ಅಲ್ಲದೇ, ಉಪಕುಲಸಚಿವ ಡಾ. ವಸಂತ ಶೆಟ್ಟಿ ಅವರು ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.ತಿಕೋಟಾ ನರ್ಸಿಂಗ್ ಕಾಲೇಜೀನ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಅವರ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ…

Read More

ಸ್ವಪಕ್ಷೀಯರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ | ಪಕ್ಷದಿಂದ ಉಚ್ಚಾಟಿಸಿದರೆ ದಾಖಲೆ ಬಿಡುಗಡೆ ಎಚ್ಚರಿಕೆ ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ ಸವಾಲು ಹಾಕಿದ್ದಾರೆ.45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ…

Read More

ಕೊಲ್ಹಾರ: ಪದೇ ಪದೇ ರೈತರಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಸಚಿವ ಶಿವಾನಂದ ಪಾಟೀಲ ಅವರ ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಪಡೆದು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಸಚಿವ ಎಸ.ಕೆ.ಬೆಳ್ಳುಬ್ಬಿ ಒತ್ತಾಯಿಸಿದರು.ಈ ಕುರಿತು ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದ ಆವರಣದಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿ ಮಾತನಾಡಿದ ಅವರು, ಒಕ್ಕಲುತನದ ಕೃಷಿ ಚಟುವಟಿಕೆಯ ಗಂಧ ಗಾಳಿ ಗೊತ್ತಿಲ್ಲದ ಹೊಲದಲ್ಲಿ ಬೆವರು ಸುರಿಸಿ ರೈತಾಪಿ ವರ್ಗದವರು ಮಾಡುವ ಕೆಲಸಗಳನ್ನು ಅರಿಯದೇ ಇರುವ ಸಚಿವ ಶಿವಾನಂದ ಪಾಟೀಲ ರೈತನೇ ಅಲ್ಲ. ಅದಕ್ಕಾಗಿಯೇ ರೈತರ ಸಂಕಷ್ಟ ತಿಳಿಯದ ರೈತರಲ್ಲದವರು ಅಧಿಕಾರ ನಡೆಸಿದರೆ ಇಂಥಹ ಹೇಳಿಕೆಗಳನ್ನು ನಾಡಿನ ರೈತ ಬಾಂಧವರು, ಜನತೆ ಪದೆ ಪದೆ ಕೇಳುವಂತಾಗುತ್ತದೆ ಆದ್ದರಿಂದ ಭಾರತೀಯ ಜನತಾಪಕ್ಷ ಮುಂದಿನ ದಿನಮಾನಗಳಲ್ಲಿ ರಾಜ್ಯ ಅಧ್ಯಕ್ಷರ, ಕಾರ್ಯಕರ್ತರ ಸಂಘಟನೆಯೊಂದಿಗೆ ಸಚಿವರ ವಿರುದ್ದ ಬೀದಿಗಿಳಿದು ರಾಜ್ಯಾದ್ಯಾಂತ ಉಗ್ರ ಹೋರಾಟ ಮಾಡುವ ಪರಿಸ್ಥಿತಿ ಬರಬಹುದು ಎಂದರು.ಈ ವರ್ಷದಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮಿನ ಮಳೆ ಕೈಕೊಟ್ಟಿದ್ದರಿಂದ ರಾಜ್ಯಾದ್ಯಂತ ಭೀಕರವಾದ ಬರಗಾಲದ ಛಾಯೆ…

Read More