Author: editor.udayarashmi@gmail.com

ವಿಜಯಪುರ: ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಜೀ-ಕನ್ನಡ ನ್ಯೂಸ್ ೨೦೨೪ರ ಯುವರತ್ನ ಪ್ರಶಸ್ತಿಯನ್ನು ವಿಜಯಪುರ ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ್ ಮಲ್ಲಪ್ಪ ಜರಾಳಿ ಇವರಿಗೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವು ಬೆಂಗಳೂರಿನ ಹೊಟೇಲ್ ಲಲಿತ್ ಅಶೋಕ್‌ದಲ್ಲಿ ಆಯೋಜಿಸಲಾಗಿತ್ತು.ಈ ಸಮಯದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೃಷಿ ಇಲಾಖೆ ಸಚಿವ ಚೆಲುವರಾಯ ಸ್ವಾಮಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಿರ್ಮಾಪಕಿ ಅಶ್ವಿನಿ ಪುನೀತ ರಾಜಕುಮಾರ, ನಟಿ ಆರಾಧನಾ ರಾಮ್, ನಟ ವಿಜಯ ರಾಘವೇಂದ್ರ, ದ್ರುವ ಸರ್ಜಾ ಉಪಸ್ಥಿತರಿದ್ದು ಸಾಧಕರಿಗೆ ಸನ್ಮಾನಿಸಿದರು.

Read More

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.ಮಾರ್ಚ್‌ 21ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್‌ 25ಕ್ಕೆ ಇಲ್ಲಿಗೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.ಈ ಬಾರಿ ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಪಡೆದುಕೊಂಡಿದೆ. ಒಂದು ಕಾಲದಲ್ಲಿ ಜೆಡಿಎಸ್​ ಭದ್ರಕೋಟೆಯಾಗಿರುವ ಮಂಡ್ಯಕ್ಕೆ ಕಾಂಗ್ರೆಸ್ ಎಂಟ್ರಿಕೊಟ್ಟಿದೆ. ವಿಧಾನಸಭೆಯಲ್ಲಿ…

Read More

ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಶಿವಮೊಗ್ಗ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಇದೀಗ ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಶುಕ್ರವಾರ ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸಭೆ ನಡೆಸಿದ ಈಶ್ವರಪ್ಪ, ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದೇನೆ ಹೊರತು ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಬಿಜೆಪಿ ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿದೆ. ಅದನ್ನು ತಪ್ಪಿಸಲು ಸ್ಪರ್ಧೆಗೆ ಮುಂದಾಗಿದ್ದೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ…

Read More

ನವದೆಹಲಿ: ಚುನಾವಣೆಗೆ ತಯಾರಾಗಿರುವ ದೇಶದಲ್ಲಿ ಯಾವಾಗ ಚುನಾವಣೆ ಎಂದು ಜನ ಕಾಯುತ್ತಿದ್ದರು. ಜನರ ನಿರೀಕ್ಷೆಗೆ ಉತ್ತರಿಸಿರುವ ಚುನಾವಣಾ ಆಯೋಗ ಕೊನೆಗೆ ಒಂದು ದಿನವನ್ನು ತಿಳಿಸಿದೆ. 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಾರ್ಚ್ 15ರ ಮಧ್ಯಾಹ್ನ ತಿಳಿಸಿದೆ.ಭಾರತೀಯ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಲೋಕಸಭಾ ಚುನಾವಣೆ ಕುರಿತು ಸಂಕ್ಷಿಪ್ತ ಹೇಳಿಕೆಯನ್ನು ಪೋಸ್ಟ್ ಮಾಡಿದೆ. ಜೊತೆಗೆ ನಾಲ್ಕು ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ಘೋಷಿಸುವುದಾಗಿ ತಿಳಿಸಿದೆ.ಸಾರ್ವತ್ರಿಕ ಚುನಾವಣೆಗಳು 2024 ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಮಾರ್ಚ್ 16 ರ ಶನಿವಾರ ನಡೆಯಲಿದೆ. ಇದು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್‌ಸ್ಟ್ರೀಮ್ ಆಗುತ್ತದೆ” ಎಂದು ಟ್ವೀಟ್ ಮಾಡಲಾಗಿದೆ.

Read More

ಪೋಕ್ಸೋ ಕಾಯ್ದೆಯಡಿ ಎಫ್​ಐಆರ್​​ ದಾಖಲು | ಸಂತ್ರಸ್ತೆಯ ತಾಯಿ ನೀಡಿದ್ದ ದೂರು | ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಘಟನೆ ಸಂಬಂಧ ತನಿಖೆ ನಡೆಸುವಂತೆ ಸೂಚನೆ ನೀಡಿದೆ.ಹೌದು, ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಇನ್ನು ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.ಈ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಮಾತನಾಡಿ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಮನೆಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ…

Read More

ಝಳಕಿ: ಸಮೀಪದ ಗುಂದವಾನ ಗ್ರಾಮದ ಗ್ರಾಮ ದೇವತೆ ಗುಪ್ತೇಶ್ವರಿ ದೇವಿಗೆ ಕಳಸಾರೋಹಣ ಕಾರ್ಯಕ್ರಮ ಜರುಗಿತು.ಗ್ರಾಮದ ಮಾ.15 ರಂದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೂಗಳು ಸುರಿಮಳೆ ಮಾಡುತ್ತ ಗ್ರಾಮಕ್ಕೆ ಶಿಖರದ ಕಳಸಕ್ಕೆ ಸ್ವಾಗತಿಸುವ ಮೂಲಕ ದೇವಿಯ ಗುಡಿಗೆ ಬಂದು ನಂತರ ಶಿಖರಕ್ಕೆ ಕಳಸಾರೋಹಣ ಮಾಡಲಾಯಿತು.ಸ್ಥಳದಲ್ಲಿ ಜಾತ್ರಾ ಕಮೀಟಿ ಅಧ್ಯಕ್ಷ ಹಣಮಂತ ಖಡೆಖಡೆ, ಸೈಯದ್ ಶಿವಣಗಿ, ಅಕ್ಬರ್ ಖಾನಾಪೂರ, ಮುನ್ನಾಗೌಡ ಪಟೇಲ, ಜಾವೀಧ ಬಿರಾದಾರ, ಆರ್.ಡಿ.ಖಾನಾಪೂರ, ಲಾಲಸಾಬ ಇನಾಮದಾರ, ನಬೀಸಾಬ ಮುಜಾವರ, ಸೇರಿದಂತೆ ಇತರರು ಇದ್ದರು.

Read More

ವಿಜಯಪುರ: ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಹಾಗೂ ನಿಷ್ಕಾಳಜಿಯಿಂದ ಸರಕಾರದ ತೆರಿಗೆ ಹಣವನ್ನು ವ್ಯರ್ಥ ಹಾಳುಮಾಡುತ್ತಿದ್ದು ಸರಿಯಾದ ಯೋಜನೆಯಿಲ್ಲದೇ ವಿದ್ಯುತ್ ಕಂಬದ ಕೆಳಗೆ ಗಿಡಗಳು ಹಚ್ಚಿರುವುದರಿಂದ ವಾಯರ್‌ಗಳ ಮಧ್ಯ ಗಿಡದ ಕೊಂಬೆ ಬಂದು ಗಾಳಿಗೆ ಒಂದಕ್ಕೊಂದು ತಾಗಿ ಶಾರ್ಟ ಸರ್ಕಿಟ್ ಆಗಿ ಅನೇಕ ಬಾರಿ ಸಮಸ್ಯೆಗಳಾಗಿವೆ. ಇದನ್ನು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಆಗ್ರಹಿಸಿ ರೈತಸಂಘದಿಂದ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡಿ, ಜೋರಾದ ಗಾಳಿ ಹಾಗೂ ಮಳೆ ಬಂದಾಗ ಗಿಡಗಳ ಎಲೆಗಳು ವಿದ್ಯುತ್ ಕಂಬದ ವಾಯರಗಳು ಒಂದಕ್ಕೊಂದು ತಾಗಿ ಶಾರ್ಟ ಸರ್ಕಿಟ್ ಆಗಿ ವಾರಗಟ್ಟಲೆ ವಿದ್ಯುತ್ ಹೋಗಿರುವ ಉದಾಹರಣೆಗಳಿವೆ. ಇದರಂತೆ ರೈತರಿಗೆ ಹಾಗೂ ಸಾರ್ವಜನಿಕರಿಗೂ ಅನೇಕ ಸಮಸ್ಯೆಗಳು ಆಗಿರುವುದು ಇದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ತಲೆ…

Read More

ಸಿಂದಗಿ: ಹುದ್ದೆ ಯಾವುದೇ ಇದ್ರು ಸಮಾಜದ ಕಾರ್ಯಕ್ಕಾಗಿ ಸದಾ ಸ್ಪಂದಿಸುತ್ತೇನೆ ಎಂದು ನೂತನ ಮಂಡಲದ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಪಟ್ಟಣದ ಡೈಮಂಡ್ ಬ್ಯಾಂಕ್ ಸಭಾಂಗಣದಲ್ಲಿ ತಾಲೂಕು ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷ ನಿಷ್ಠೆ, ವೃತ್ತಿ ನಿಷ್ಠೆ ಹಾಗೂ ಸಮಾಜ ಪರ ಚಿಂತನೆಗಳು ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತವೆ. ನಾವು ಹುದ್ದೆಗಾಗಿ ಬಡಿದಾಡದೆ ನಿಷ್ಠೆಯಿಂದ ನಮ್ಮ ಕಾರ್ಯಗಳನ್ನು ನಾವು ಜವಾಬ್ದಾರಿಯಿಂದ ಮಾಡುತ್ತಾ ಹೋದರೆ ಹುದ್ದೆಗಳೇ ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಕಾರಣ ನಾವು ಯಾರೇ ಇರಲಿ ನಮ್ಮ ನಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸೋಣ ಎಂದರು.ಇದೇ ಸಂದರ್ಭದಲ್ಲಿ ಸಮಾಜದ ತಾಲೂಧ್ಯಕ್ಷ ಎಂ.ಎಂ.ಹಂಗರಗಿ, ಅಧ್ಯಕ್ಷತೆ ವಹಿಸಿದ್ದ ವ್ಹಿ.ಬಿ ಕುರುಡೆ ಮಾತನಾಡಿ, ಪಾಟೀಲ ಅವರು ಸದಾ ಕ್ರಿಯಾಶೀಲ ವ್ಯಕ್ತಿ. ಸಮಾಜ ಮುಖಿಯಾಗಿ ಎಲ್ಲರೊಂದಿಗೂ ಬೆರೆಯುವ ಸರಳ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಜವಾಬ್ದಾರಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಕಂಡು ಪಕ್ಷ ಅವರಿಗೆ ಮಂಡಲದ ಅಧ್ಯಕ್ಷ ಸ್ಥಾನ ನೀಡಿದೆ. ಕೊಟ್ಟ ಜವಾಬ್ದಾರಿಯನ್ನು ಸಂತೋಷ…

Read More

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನಡೆದ ವಿಶೇಷ ಸಂವಾದದಲ್ಲಿ ಡಾ.ನವೀನ ಪಟ್ಟಣಶೆಟ್ಟಿ ಅಭಿಮತ ವಿಜಯಪುರ: ಸತ್ತಂತೆ ಬದುಕುವುದಕ್ಕಿಂತ ಸತ್ತ ಮೇಲೂ ಬದುಕುವುದು ನಿಜವಾದ ಬದುಕಾಗಿದ್ದು ಆ ಕಾರ್ಯ ಆಗಬೇಕಾದಲ್ಲಿ ಅಂಗಾಂಗಗಳನ್ನು ದಾನ ಮಾಡುವುದೊಂದೆ ಮಾರ್ಗವಾಗಿದೆ. ಸತ್ತ ಮೇಲೆ ಮಣ್ಣಾಗುವ ಈ ಶರೀರದಿಂದ ಸಾಯುವ ಅಂಚಿನಲ್ಲಿರುವ ಜೀವಗಳಿಗೆ ಬದುಕು ನೀಡಬಹುದು ಎಂದು ಮೂತ್ರಪಿಂಡಗಳ ಕಸಿ ತಜ್ಞರಾದ ಡಾ.ನವೀನ ಪಟ್ಟಣಶೆಟ್ಟಿ ಹೇಳಿದರು.ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು; ಹುಟ್ಟಿದ ಪ್ರತಿಯೊಬ್ಬ ಮನುಷ್ಯ ಸಾಯಲೇ ಬೇಕು ಎನ್ನುವುದು ನಿಸರ್ಗದ ನಿಯಮವಾಗಿದೆ. ಆ ನಿಯಮದ ಪ್ರಕಾರ ಪ್ರತಿನಿತ್ಯವೂ ಸಾಕಷ್ಟು ಜನ ಪ್ರಾಣ ಬಿಡುತ್ತಿದ್ದಾರೆ. ಆದರೆ ಸತ್ತ ಮೇಲೆ ಮತ್ತೊಮ್ಮೆ ಬದುಕಿ ಉಳಿಯಬೇಕಾದರೆ ಅದಕ್ಕಿರುವ ಏಕೈಕ ಮಾರ್ಗವೆಂದರೆ ಅದು ಅಂಗಾಂಗ ದಾನವಾಗಿದೆ. ಕೆಲವು ಸಂದರ್ಭಗಳಲ್ಲಿ ಸಂಭವಿಸುವ ಮೃತ್ಯುವಿನಿಂದ ವ್ಯಕ್ತಿಯು ನಮ್ಮನ್ನು ಅಗಲಿ ಹೋಗುತ್ತಾರೆ. ಆದರೆ ಅವರಿಗೆ ತಮ್ಮ ದೇಹದ ಭಾಗಗಳಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು…

Read More