Author: editor.udayarashmi@gmail.com

ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು & ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳಿಗೆ ೦೩ ಬಾಡಿಗೆ ಕಟ್ಟಡಗಳ ಅವಶ್ಯಕತೆ ಇದ್ದು. ಅಡುಗೆ ಕೋಣೆ, ಡೈನಿಂಗ್ ಹಾಲ್, ವಿದ್ಯಾರ್ಥಿಗಳ ವಾಸದ ಕೊಠಡಿಗಳು, ಶೌಚಾಲಯ, ಸ್ನಾನದ ಗೃಹ, ಸೋಲಾರ್ ವಾಟರ್ ಹೀಟರ್ ಹಾಗೂ ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ೧೦ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಕರ್ಯಗಳುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ಜುಲೈ ೧, ರೊಳಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ ದೇವರಾಜ್ ಅರಸು ಭವನ, ಕನಕದಾಸ ಬಡಾವಣೆ, ಇವರಿಗೆ ಅಗತ್ಯ ದಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊ:೯೯೮೬೮೮೧೨೭೩ ಸಂಪರ್ಕಿಸಬಹುದಾಗಿದೆ ಎಂದು ತಾಲೂಕುಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂನಡಿ ನೇರವಾಗಿ ದ್ವಿತೀಯ ವರ್ಷ ೩ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎರಡು ವರ್ಷಗಳ ಐಟಿಐ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಎ.ಐ.ಸಿ.ಟಿ.ಇ. ನಿಯಮಗಳು ಹಾಗೂ ಸರ್ಕಾರದ ಶಶಆದೇಶದನ್ವಯ ಕಳೆದ ಸಾಲಿನ ಇಂಟೇಕ್‌ಗೆ ಹೆಚ್ಚುವರಿಯಾಗಿ ಶೇ.೧೦ರಷ್ಟು ಸೀಟುಗಳನ್ನು ಹಾಗೂ ಮೊದಲನೇ ವರ್ಷ ಭರ್ತಿಯಾಗದೆ ಉಳಿದ ಸೀಟುಗಳನ್ನು ಮೆರಿಟ್ ಆಧಾರದಡಿ ಭರ್ತಿ ಮಾಡಲಾಗುವುದು.ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ. ೩ ರಿಂದ ಆರಂಭವಾಗಿದ್ದು, ಜೂ.೨೦ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಪ್ರವೇಶಾತಿ ಪ್ರಕ್ರಿಯೆ ಪ್ರಾಂಶುಪಾಲರ ಹಂತದಲ್ಲಿ ಆಫ್‌ಲೈನ್ ಮೂಲಕ ನಡೆಯಲಿದೆ. ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳ ಅನುದಾನಿತ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರ ಮೆರಿಟ್ ಆಧರಿಸಿ ಸೀಟು ಹಂಚಿಕೆ ಮಾಡಲಾಗುತ್ತದೆ.ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು, ಭರ್ತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಪ್ರದೇಶದಲ್ಲಿ ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಪಡಿತರ ಚೀಟಿದಾರರಿಗೆ ಐರಿಸ್ ಸಾಧನದ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯು ಜೂನ್ ೨೫ ರವರೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ವಿಜಯಪುರ ನಗರ ಪ್ರದೇಶದಲ್ಲಿ ಇನ್ನೂ ಸುಮಾರು ೬೯೭ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ ಇರುವುದು ಕಂಡುಬAದಿದೆ. ಬಯೋಮೆಟ್ರಿಕ್ (ಬೆರಳು ಗುರುತು) ಸರಿಯಾಗಿ ಮೂಡದ ಕಾರಣ ಇ-ಕೆವೈಸಿ ಪ್ರಕ್ರಿಯೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಿಲ್ಲದೇ ಇರುವುದರಿಂದ ಇಲಾಖೆಯ ವತಿಯಿಂದಲೇ ವಿಶೇಷ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಆಗದೇ ಬಾಕಿ ಉಳಿದಿರುವ ಪಡಿತರ ಚೀಟಿ ಫಲಾನುಭವಿಗಳು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಪಡಿತರ ವಿಭಾಗದ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ದಿನಾಂಕ ೧೧-೦೬-೨೦೨೬ ರಿಂದ ೨೫-೦೬-೨೦೨೬ ರವರೆಗೆ ಕಚೇರಿ ವೇಳೆಯಲ್ಲಿ ಈ ಸೌಲಭ್ಯ ಲಭ್ಯವಿರಲಿದ್ದು, ನ್ಯಾಯ ಬೆಲೆ ಅಂಗಡಿಕಾರರು ಇ-ಕೆವೈಸಿ…

Read More

ಮುದ್ದೇಬಿಹಾಳದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಯಾವುದೇ ಸಂದರ್ಭದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸರ್ವ ಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರ ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ ಮುದ್ದೇಬಿಹಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರತಿ ಗ್ರಾಮಕ್ಕೊಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಆಲಮಟ್ಟಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಯಲಾರಂಭಿಸಿದರೆ ಮುದ್ದೇಬಿಹಾಳ ತಾಲೂಕಿನ ಕೆಲ ಹಳ್ಳಿಗಳು ಪ್ರವಾಹ ಪೀಡಿತವಾಗುವ ಸಂಭವವಿದೆ. ಈ ಕುರಿತು ಕೆಬಿಜೆನ್ನೆಲ್ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.ಶಿಥಿಲಗೊಂಡ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳ ಬಳಿ ಮಕ್ಕಳು ಸುಳಿಯದಂತೆ ನೋಡಿಕೊಳ್ಳಬೇಕು ಎಂದ ಅವರು, ಈ ಕುರಿತು ಮುನ್ಮೆಚ್ಚರಿಕೆ ಕ್ರಮ ವಹಿಸಬೇಕು ಎಂದರು.ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ…

Read More

ತಾಳಿಕೋಟೆಯಲ್ಲಿ ರಜಪೂತ ಸಮಾಜದ ಮುಖಂಡರ ಹೇಳಿಕೆ | ನಿರ್ಲಕ್ಷಿಸಿದರೆ ಹೋರಾಟದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಕಲ್ಬುರ್ಗಿ ಜಿಲ್ಲೆಯಲ್ಲಿಯೇ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಜೇವರ್ಗಿ ಮತಕ್ಷೇತ್ರದ ಶಾಸಕ ಡಾ.ಅಜಯಸಿಂಗ್ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಲೇಬೇಕು, ಇಲ್ಲದಿದ್ದರೆ ಅವರ ಲಕ್ಷಾಂತರ ಅಭಿಮಾನಿಗಳೊಂದಿಗೆ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ರಜಪೂತ ಸಮಾಜದ ಯುವ ಮುಖಂಡ ವಿಜಯಸಿಂಗ್ ಹಜೇರಿ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಸಿದರು.ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಳಿಕೋಟೆ ರಜಪೂತ ಸಮಾಜದ ವತಿಯಿಂದ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪೫ ವರ್ಷಗಳವರೆಗೆ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಕಾಂಗ್ರೇಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವದರೊಂದಿಗೆ ಅಪಾರವಾದ ಕೊಡುಗೆಯನ್ನು ಶಾಸಕ ಡಾ.ಅಜಯಸಿಂಗ್ ಅವರು ಕೊಟ್ಟಿದ್ದಾರೆ. ಮೂರು ಅವಧಿಗೆ ಶಾಸಕರಾಗಿ, ದೆಹಲಿ ವಿಶೇಷ ಪ್ರತಿನಿಧಿಯಾಗಿ ಸಾಕಷ್ಟು ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಸಚಿವ ಸ್ಥಾನ ನಿಭಾಯಿಸಬಲ್ಲ ಎಲ್ಲ ಅರ್ಹತೆಯೂ ಅವರಲ್ಲಿದೆ ಎಂದರು.ರಜಪೂತ ಸಮಾಜದ ಹಿರಿಯರಾದ ಭರತಸಿಂಗ್ ಗೋವಿಂದಸಿಂಗ್ ಮೂಲಿಮನಿ ಹಾಗೂ…

Read More

ಮನಗೂಳಿ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಗುರುವಾರ ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಅವರು ವೀಕ್ಷಿಸಿ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಮತ್ತು ಸಾರ್ವಜನಿಕರ ಆಶಯದಂತೆ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿ, ಗುಣಮಟ್ಟವನ್ನು ಪರಿಶೀಲಿಸಿದೆ. ಈ ಯೋಜನೆಯಿಂದ ಕ್ಷೇತ್ರದ ರೈತರಿಗೆ ಸಕಾಲದಲ್ಲಿ ನೀರಾವರಿ ಸೌಲಭ್ಯ ದೊರೆಯುವುದರ ಜೊತೆಗೆ ಅಂತರ್ಜಲ ಮಟ್ಟವೂ ವೃದ್ಧಿಯಾಗಲಿದೆ. ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿರುವುದಾಗಿ ಹೇಳಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯಗಳಲ್ಲಿ ನಾನು ಸದಾ ಬದ್ಧ ಎಂದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಿಖಿಲೇಶ ಪಾಟೀಲ, ಮನಗೂಳಿ ಪಟ್ಟಣ…

Read More

ವಿಜಯಪುರ ಸರ್ಕಾರಿ ಮೆಡಿಕಲ್ ಕಾಲೇಜ್ ವಿಶೇಷ ಅಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಅವರಿಂದ ಜಿಲ್ಲಾಸ್ಪತ್ರೆ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿಗಳಾದ ಡಾ. ರಾಜಶೇಖರ ದ್ಯಾಬೇರಿ ಅವರು ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ ನಡೆಸಿದರು.ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನಿಯಮಾವಳಿಗಳನ್ವಯ ಕಾಲೇಜು ಸ್ಥಾಪನೆಗೆ ಅಗತ್ಯ ಭೂಮಿ, ಕಟ್ಟಡ, ಬೋಧನಾ ಆಸ್ಪತ್ರೆ ಹಾಗೂ ಇತರೆ ಶಾಸನಬದ್ಧ ಅವಶ್ಯಕತೆಗಳು ಸೇರಿದಂತೆ ಮಹತ್ವದ ಮಾಹಿತಿ ಪಡೆದುಕೊಂಡರು.ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ವಿವಿಧ ಹಳೆಯ ಕಟ್ಟಡಗಳು ಹಾಗೂ ಪ್ರಗತಿಯಲ್ಲಿರುವ ಹೊಸ ಕಟ್ಟಡ ಕಾಮಗಾರಿಗಳನ್ನು ವಿಶೇಷ ಅಧಿಕಾರಿಗಳು ಖುದ್ದಾಗಿ ವೀಕ್ಷಿಸಿ, ಲಭ್ಯವಿರುವ ಮೂಲಸೌಕರ್ಯಗಳ ಪರಿಶೀಲಿಸಿದರು.ಬಳಿಕ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ, ವೈದ್ಯಕೀಯ ಕಾಲೇಜಿಗೆ ಅತ್ಯಗತ್ಯವಾಗಿ ಬೇಕಾಗುವ ಮಾನವ ಸಂಪನ್ಮೂಲಗಳ ವಿವರಗಳು, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ ಮತ್ತು ಡಿಎನ್‌ಬಿ (ಡಿಎನ್‌ಬಿ) ಕೋರ್ಸ್ಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಪಡೆದುಕೊಂಡರು.ಜಿಲ್ಲಾಸ್ಪತ್ರೆಯಡಿ…

Read More

ವಿಜಯಪುರ ಮಹಾನಗರಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಬಿಎಲ್‌ಒಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೂ.೩೦ ರಿಂದ ಜು.೨೯ ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆ ನೀಡುವ ಸಂದರ್ಭದಲ್ಲಿ ಮತದಾರರನ್ನು ಗುರುತಿಸುವುದು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ್ ಮೆಕ್ಕಳಕಿ ಹೇಳಿದರು.ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದಂತೆ ಬೂತ ಲೇವಲ್ ಏಜಂಟ್ ರಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅನರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರಿದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಎಸ್ ಐಆರ್ ಪ್ರಕ್ರಿಯೆಯು ಪಾರರ್ದಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.ರಾಜಕೀಯ ಪಕ್ಷಗಳು ಈ ಕಾರ್ಯದಲ್ಲಿ ಹೆಚ್ಚಚ್ಚು ಭಾಗವಹಿಸುವಿಕೆಯನ್ನು ಖಾತರಿಪಡಿಸಿಕೊಳ್ಳುವ ದೃಷ್ಟಿಯಿಂದ, ಆಯೋಗವು ಮತಗಟ್ಟೆ ಮಟ್ಟದ ಏಜೆಂಟ್ ಗಳು ದಿನಕ್ಕೆ ೫೦ ನಮೂನೆಗಳನ್ನು ಮತದಾರರಿಂದ ಸಂಗ್ರಹಿಸಿ ಮತಗಟ್ಟೆ ಮಟ್ಟದ…

Read More

ಬಂಡಿ ದಾರಿ ಜಾಗ ಗುರುತಿಸಲು ಸರ್ವೇ ಅಧಿಕಾರಿಗಳು ಮೀನಾಮೇಷ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು ಎಂದು ಎಲ್ಲ ತಹಸೀಲ್ದಾರ್‌ಗಳಿಗೆ ಕಂದಾಯ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಒಂದು ವೇಳೆ ಅಕ್ಕಪಕ್ಕದ ಜಮೀನಿನ ಮಾಲೀಕರು ರೈತರಿಗೆ ತಿರುಗಾಡಲು ಅಡ್ಡಿಪಡಿಸಿದರೆ ತಾಲೂಕಿನ ತಹಸೀಲ್ದಾರ್‌ಗಳು ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವುಗೊಳಿಸಿ ರೈತರಿಗೆ ತಿರುಗಾಡಲು ಅವಕಾಶ ಕೊಡಬೇಕು.ಆದರೆ ಹೆಚ್ ಡಿ ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ರೈತ ಜಗದೀಶ್ ಬಿನ್ ಚಂದ್ರಪ್ಪ ಹಾಗೂ ಶಿವಪ್ಪ ಕುಟುಂಬ, ತಮ್ಮ ಜಮೀನಿಗೆ ತೆರಳಲು ಕಾಲುದಾರಿ ಅಥವಾ ಬಂಡಿ ರಸ್ತೆ ಇಲ್ಲದೆ ಪರದಾಡುತ್ತಿದೆ. ಅಣ್ಣೂರು ಗ್ರಾಮದಲ್ಲಿ ಚಂದ್ರಪ್ಪ ಎಂಬುವವರಿಗೆ 38/3 ಸರ್ವೇ ನಂಬರ್ ನಲ್ಲಿ 2 ಎಕರೆ…

Read More