Author: editor.udayarashmi@gmail.com

ಕೃಷ್ಣೆಯ ದಡದಲ್ಲಿ ನಾಟಕ ರಂಗದ ಕಲರವ | ರಸದೌತಣ ಸವಿದ ಸಭಿಕರು ಆಲಮಟ್ಟಿ: ಅಂಗೈಯಲ್ಲೇ ಎಲ್ಲ ಸ್ತರದ ಮನರಂಜನೆ ಲಭಿಸುತ್ತಿರುವ ಈ ಕಾಲಘಟ್ಟದಲ್ಲಿ ನಾಟಕ ರಂಗಕಲೆ  ಪ್ರದರ್ಶನ ಇಂದು ಅಪರೂಪವಾಗುತ್ತಿದೆ ಅಲ್ಲದೇ ನೋಡುಗರು ಸಹ ವಿರಳವಾಗುತ್ತಿದ್ದಾರೆ. ಆದರೆ ಕೃಷ್ಣೆಯ ತಟದಲ್ಲಿ ನಾಟಕ ಪ್ರಿಯ ಸಭಿಕರ ಕೊರತೆ ಇಲ್ಲ ಎಂಬುದಕ್ಕೆ ಈ ಸುಕ್ಷಣವೇ ಸಾಕ್ಷಿ ಎಂದು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸಂಘದ ಆಲಮಟ್ಟಿ ಯೋಜನಾ ಶಾಖೆಯ ಅಧ್ಯಕ್ಷ ಸದಾಶಿವ ದಳವಾಯಿ ಹೇಳಿದರು.   ಇಲ್ಲಿನ ಶ್ರೀ ಅಶ್ವಥ ನಾರಾಯಣ (ಅರಳಿಕಟ್ಟಿ- ನಾಗಪ್ಪನಕಟ್ಟಿ) ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಅಶ್ವಥ ನಾರಾಯಣ ನಾಟ್ಯ ಸಂಘ ಆಲಮಟ್ಟಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಅತ್ತಿಗೆಗೆ ಬಂದ ಅಗ್ನಿ ಪರೀಕ್ಷೆ ” ಅರ್ಥಾತ್ ಬೆಂಕಿಯಲ್ಲಿ ಅರಳಿದ ಹೂವು ಎಂಬ ಸಾಮಾಜಿಕ ನಾಟಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.    ಆಧುನಿಕ ಯುಗದಲ್ಲಿಂದು ದೇಶಿಯ ಜನತೆ ಪಾಶ್ಚಾತ್ಯ ಸಂಸ್ಕೃತಿಯ ಮೋಹಕ್ಕೆ ಮಾರು ಹೋಗುತ್ತಿದ್ದಾರೆ. ಜಾಗತೀಕರಣದ ಪ್ರಭಾವಳಿಂದ ನಾಟಕ…

Read More

ವಿಜಯಪುರ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದ, ರೈತರ ವಸತಿನಿಲಯ ಕಟ್ಟಡದ ಉದ್ಘಾಟನಾ ಸಮಾರಂಭ ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ದಿನಾಂಕ ೧೩-೦೩-೨೦೨೪ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ, ಸು. ಶ್ರೀ ಶೋಭಾ ಕರಂದ್ಲಾಜೆ ನೆರವೇರಿಸುವರು. ಅಧ್ಯಕ್ಷತೆಯನ್ನು ನಾಗಠಾಣ ಮತಕ್ಷೇತ್ರದ, ಶಾಸಕ ವಿಠ್ಠಲ ಧೋಂಡಿಬಾ ಕಟಕಗೊಂಡ ವಹಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ, ಕರ್ನಾಟಕ ಸರಕಾರದ ಮಾನ್ಯ ಕೃಷಿ ಸಚಿವ ಶ್ರೀ ಎನ್. ಚೆಲುವರಾಯಸ್ವಾಮಿ, ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ, ಡಾ. ಎಮ್. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ, ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು…

Read More

ತವರು ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಸಚಿವ ಎಂ ಬಿ ಪಾಟೀಲ ದಾಪುಗಾಲು ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್ ಮತ್ತು ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಇಲ್ಲಿ ಮಾತು ನಡೆಸಿದರು.ಸುಜ್ಲಾನ್ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯ ಸಿಇಒ ಮಿಲಿಂದ್ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.ಬಳಿಕ ಮಾತನಾಡಿದ ಸಚಿವರು, ʻಸುಜ್ಲಾನ್ ಕಂಪನಿಯು ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ ೧೬೦ ಮೀಟರ್ ಎತ್ತರದ ಕಂಬಗಳು ಮತ್ತು ೭೦ ಮೀಟರ್ ಉದ್ದದ ಬೃಹತ್ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ ೩೦ ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು…

Read More

ಇಂಡಿ: ಬೀದಿನಾಯಿಗಳು ದಾಳಿ ನಡೆಸಿ ಐದು ಕುರಿಗಳನ್ನು ಸಾಯಿಸಿ, ಮೂರು ಕುರಿಗಳನ್ನು ಗಾಯಗೊಳಿಸಿರುವದರಿಂದ ಕುರಿಗಳನ್ನು ಕಳೆದುಕೊಂಡಿರುವ ಕುರಿಗಾರರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಪಟ್ಟಣದ ಚವಡಿಹಾಳ ರಸ್ತೆಯ ಪಕ್ಕದ ಜಮೀನಿನ ರೈತರು ಒತ್ತಾಯಿಸಿದರು.ದತ್ತು ಹೇಳವರ ಎಂಬುವವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದಾರೆ. ಇದೀಗ ಬೀದಿ ನಾಯಿಗಳು ಕೃತ್ಯದಿಂದ ಅವರೆಲ್ಲಾ ತಮ್ಮ ಕುರಿಗಳನ್ನು ಕಳೆದುಕೊಂಡು ಆತಂಕಕ್ಕೀಡಾಗಿದ್ದಾರೆ.ಎಂದಿನಂತೆ ದತ್ತು ಹೇಳವರ ಸಮೀಪದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಸುಮಾರು ೫೦ರಿಂದ ೬೦ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ ವೇಳೆಗೆ ನಾಯಿಗಳು ಓಡಿ ಹೋಗಿವೆ. ಆದರೆ ಅಷ್ಟರಲ್ಲಾಗಲೇ ನಾಯಿಗಳು ೫ ಕುರಿಗಳ ಕುತ್ತಿಗೆಗೆ ಕಚ್ಚಿ ರಕ್ತ ಕುಡಿದು ಸಾಯಿಸಿವೆ. ೩ ಕುರಿಗಳು ನಾಯಿಗಳ ದಾಳಿಗೆ ಗಂಭೀರ ಗಾಯಗೊಂಡಿವೆ.ಕುರಿಗಳಿಂದಲೇ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಈ ಘಟನೆಯಿಂದ ನಮ್ಮ ಪರಿಸ್ಥಿತಿ…

Read More

ಇಂಡಿ: 2023 -24 ನೇ ಶೈಕ್ಷಣಿಕ ಸಾಲಿನಲ್ಲಿ ಯುಜಿಸಿ ಅನುಮೋದಿತ ವಿವಿಧ ಕೋರ್ಸಗಳಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಲ್.ಐ.ಸಿ, ಹಾಗೂ ಸ್ನಾತಕೋತ್ತರ, ಸ್ನಾತಕಪೂರ್ವ ಮತ್ತು ಡಿಪ್ಲೋಮಾ ಸರ್ಟಿಫಿಕೆಟ್ ಕೇಟ್ ಕೋರ್ಸ್‌ಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಮಾಹಿತಿಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕಲಿಕಾರ್ಥಿ ಸಹಾಯ ಕೇಂದ್ರ, ಬೋಳೆಗಾಂವ ರೋಡ, ಸಿದ್ದಲಿಂಗೆಶ್ವರ ಕಾಲೋನಿ, ಇಂಡಿ ಮುಬೈಲ್ ಸಂಖ್ಯೆ : 9731549997, 8495935489 ಸಂಪರ್ಕಿಸಬಹುದು ಎಂದು ಸಂಯೋಕರು ಎಸ್. ಬಿ ಕೆಂಬೋಗಿ ತಿಳಿಸಿದ್ದಾರೆ.

Read More

ತಾಳಿಕೋಟಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ ತಾಳಿಕೋಟಿ: ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ದೀನ ದಲಿತ ಹಾಗೂ ವಿಶೇಷವಾಗಿ ಮಹಿಳೆಯರನ್ನು ಸಬಲೀಕರಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬಲು ಸಹಕಾರಿಯಾಗಿ ದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡ ಅಪ್ಪಾಜಿ ಹೇಳಿದರು.ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಹಮ್ಮಿಕೊಂಡ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿ ಅವರು ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ಅಭಿವೃದ್ಧಿಯ ಕಾರ್ಯಗಳು ನಡೆಯುತ್ತಲೇ ಇವೆ. ಅವರ ಮಾತುಗಳನ್ನು ನಂಬಬೇಡಿ. ಬರಲಿರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀವು ಅವರಿಗೆ ಕೊಡಬೇಕು ಎಂದರು.ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ರಾಜು ಆಲಗೂರ ಮಾತನಾಡಿದರು.ಪಕ್ಷದ ಮುಖಂಡರಾದ…

Read More

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಮಾ. ೧೪ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕು ಶಾಖೆಯು ಸಂಘದ ೨೦೨೩-೨೪ ನೇ ಸಾಲಿನ ವಾರ್ಷಿಕೋತ್ಸವ ಮತ್ತು ೭೫ ವರ್ಷ ತುಂಬಿ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದೆ. ಸಾನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷ ಎಫ್.ಡಿ.ಮೇಟಿ ವಹಿಸುವರು. ಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಪಿ.ಬಿರಾದಾರ, ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ ಆಗಮಿಸುವರು. ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ೭೫ ವರ್ಷ ತುಂಬಿದ ನಿವೃತ್ತ ನೌಕರ ಬಾಂಧವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ತಾಲೂಕು ಕಾರ್ಯದರ್ಶಿ ಎಸ್.ಕೆ.ಸೋಮನಕಟ್ಟಿ ತಿಳಿಸಿದ್ದಾರೆ.

Read More

– ಬಸವರಾಜ ನಂದಿಹಾಳ ಬಸವನಬಾಗೇವಾಡಿ: ತಾಲೂಕಿನ ಕಾನ್ನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಪರಿಣಾಮ ಗ್ರಾಮಸ್ಥರೆಲ್ಲರೂ ಕೂಡಿಕೊಂಡು ಗ್ರಾಮದಿಂದ ಎರಡು ಕಿಲೋ ಮೀಟರ್ ಅಂತರದಲ್ಲಿರುವ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಹರಿಸಿದರೆ ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ತಹಸೀಲ್ದಾರ, ತಾಪಂ ಕಚೇರಿ ಎದುರು, ಹಾಗೂ ರಾಜ್ಯ ಬಿಜ್ಜಳ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಅಧಿಕಾರಿಗಳು ಕೊನೆಗೂ ಬಾಂದಾರಕ್ಕೆ ನೀರು ಹರಿಸಲು ಒಪ್ಪಿದ ಪರಿಣಾಮ ಬಾಂದಾರಕ್ಕೆ ನೀರು ಬಂದ ಹಿನ್ನೆಲೆಯಲ್ಲಿ ಗ್ರಾಮದ ನೀರಿನ ಸಮಸ್ಯೆ ಪರಿಹಾರ ಸಿಕ್ಕಿದ್ದರಿಂದಾಗಿ ಗ್ರಾಮಸ್ಥರಲ್ಲಿ ಹರ್ಷ ಮನೆ ಮಾಡಿದೆ.ಕಾನ್ನಾಳ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಾಕಷ್ಟು ಸಲ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಪ್ರತಿಭಟನೆ ಹಾದಿ ಹಿಡಿದು ಗ್ರಾಮದಿಂದ ೨ ಕಿಲೋ ಮೀಟರ್ ದೂರವಿರುವ ಮುಳವಾಡ ಏತ ನೀರಾವರಿಯ ಕಾಲುವೆಯಿಂದ ಗ್ರಾಮದವರೆಗೂ ಪೈಪ್ ಲೈನ್ ಅಧಿಕಾರಿಗಳ ಸಮ್ಮುಖದಲ್ಲಿ…

Read More

ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಅಪ್ಪಾಜಿ ಅವರು ಸುಮಾರು 17.36 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ತಾಳಿಕೋಟಿ ತಾಲೂಕಿನ ವ್ಯಾಪ್ತಿಗೆ ಬರುವ ತಾಳಿಕೋಟಿ- ಹಡಗಿನಾಳ ರೂ. 5 ಕೋಟಿ ಮೊತ್ತದ ಮುಖ್ಯ ಸಂಪರ್ಕ ರಸ್ತೆ. ತಾಳಿಕೋಟಿ ಮೂಕಿಹಾಳ ಮುಖ್ಯ ರಸ್ತೆಯಿಂದ ಹಳೆ ಹಡಗಿನಾಳ ಗ್ರಾಮಕ್ಕೆಕೂಡು ರಸ್ತೆರೂ. 2.25 ಕೋಟಿ. ಪಟ್ಟಣದ ದೇವರ ಹಿಪ್ಪರಗಿ ರಸ್ತೆಯ ರಾಜ್ಯ ಹೆದ್ದಾರಿ 124 ಬಾರಖೇಡ ಬೀಳಗಿ ಮೊತ್ತ ರೂ. 5 ಕೋಟಿಯ ದ್ವಿಪಥ ರಸ್ತೆ. ಪಟ್ಟಣದ ಎಪಿಎಂಸಿ ಪ್ರಾಂಗಣ ರಸ್ತೆ ಅಭಿವೃದ್ಧಿ ರೂ.2 ಕೋಟಿ. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪಟ್ಟಣದ ಮಿಲ್ಲತ್ ಹಾಗೂ ಟಿಪ್ಪು ನಗರದಲ್ಲಿ ರೂ. 1.50 ಕೋಟಿ ಮೊತ್ತದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಹಾಗೂ ಪಟ್ಟಣದಲ್ಲಿ ನಿರ್ಮಾಣಗೊಳ್ಳಲಿರುವ ಇಂದಿರಾ ಕ್ಯಾಂಟೀನಗೆ ಭೂಮಿ ಪೂಜೆಯನ್ನು ಅವರು ನೆರವೇರಿಸಿದರು.ಈ…

Read More

ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆ ಹಾಗೂ ಸಿದ್ಧರಾಮೇಶ್ವರ ಪಾದಯಾತ್ರಾ ಕಮೀಟಿ-೨೦೨೪ ವತಿಯಿಂದ ಮಾ.೨೪ ರಂದು ರಾತ್ರಿ ೮ ಗಂಟೆಗೆ ಸಿದ್ದೇಶ್ವರ ಉತ್ಸವ ಮೂರ್ತಿ ಮತ್ತು ಕಂಬಿ ಜೊತೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀಶೈಲಕ್ಕೆ ಪಾದಯಾತ್ರೆ ೨೧ನೇ ವರ್ಷದ ಪಾದಯಾತ್ರೆ ಆರಂಭಗೊಳ್ಳಲಿದೆ.ನಿರಂತರ ೧೫ ದಿನಗಳ ಕಾಲ ನಡೆಯುವ ಪಾದಯಾತ್ರೆ ಏ.೬ ರಂದು ಶ್ರೀಶೈಲ ತಲುಪಲಿದೆ. ಅಂದು ಸಂಜೆ ೪ ಗಂಟೆಗೆ ಅಡಕೇಶ್ವರ ದೇವಸ್ಥಾನದಿಂದ ಶ್ರೀಶೈಲ ಮಲ್ಲಯ್ಯನ ಸನ್ನಿಧಿವರೆಗೆ ಕಂಬಿ, ನಂದಿಕೋಲ ಹಾಗೂ ಮುತೈದೆಯರಿಂದ ೧೦೮ ಕುಂಭ ಮೆರವಣಿಗೆ ಜರುಗುವುದು.ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿಚಾರ್ಯರು ಕುಂಬಮೇಳ ಮೆರವಣಿಗೆ, ಸಗರ ಒಕ್ಕಲಗೇರ ಹಿರೇಮಠದ ಮರಳಮಹಾಂತ ಶಿವಾಚಾರ್ಯರು ಚಾಲನೆ ನೀಡಲಿದ್ದು, ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಪ್ರಧಾನ ಅರ್ಚಕ ಈರಯ್ಯ ಹಿರೇಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಪಾಟೀಲ ಚಿಮ್ಮಲಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More