Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್,ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರಪಂಚದ ಯಾವುದೇ ಮೂಲೆಯಲ್ಲಿ ನೋಡಿದರೂ ನಾವು ಕಿವಿ ಕೇಳಿಸದ, ಕಣ್ಣು ಕಾಣದ, ಮಾತನಾಡಲು ಬಾರದ ಜನರನ್ನು ಅಲ್ಲಲ್ಲಿ ಕಾಣಬಹುದು. ಇವರಲ್ಲಿ ಈ ನ್ಯೂನತೆಗಳು ಹುಟ್ಟಿನಿಂದಲೂ ಬಂದಿರಬಹುದು, ಇಲ್ಲವೇ ಹುಟ್ಟಿದ ಕೆಲವು ವರ್ಷಗಳ ನಂತರ, ಇಲ್ಲವೇ ಯಾವುದೋ ಆಕಸ್ಮಿಕಗಳಲ್ಲಿ ಜೊತೆಗೂಡಿದಂತಹ ತೊಂದರೆಗಳಾಗಿರಬಹುದು. ಆದರೆ ಜಗತ್ತಿನ ಯಾವುದೇ ಭಾಗದಲ್ಲಿ ರುಚಿಯನ್ನು ಕಳೆದುಕೊಂಡ ನಾಲಿಗೆಯ ಕುರಿತು ಎಲ್ಲಾದರೂ ಕೇಳಿರುವಿರಾ? ಹುಟ್ಟಿದ ಮಗುವಿನ ನಾಲಿಗೆಗೆ ಗೊತ್ತಾಗುವಷ್ಟೇ ರುಚಿ ವಯಸ್ಸಾದ ವೃದ್ಧನಿಗೂ ಇರುತ್ತದೆ. ಪಂಚೇಂದ್ರಿಯಗಳಲ್ಲಿ ಉಳಿದೆಲ್ಲ ಅಂಗಗಳು ಮಗುವಿನ ಶೈಶವಾವಸ್ಥೆಯಿಂದ ಕ್ರಿಯಾಶೀಲವಾಗಿದ್ದು ವಯಸ್ಸಾದಂತೆ ತಮ್ಮ ಕಾರ್ಯ ನಿರ್ವಹಣೆಯ ಸಾಮರ್ಥ್ಯದಲ್ಲಿ ಕುಂಠಿತತೆಯನ್ನು ಹೊಂದಿದರೆ, ನಾಲಿಗೆ ಮಾತ್ರ ಆಬಾಲ ವೃದ್ಧರಾದಿಯಾಗಿ ಎಲ್ಲರಲ್ಲೂ ಅಷ್ಟೇ ಚುರುಕಾಗಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಕಾರಣ ನಾಲಿಗೆ ನಮ್ಮ ಮೆದುಳಿಗೆ ಅತ್ಯಂತ ಹತ್ತಿರದಲ್ಲಿ ಇದೆ ಎಂದು ಪ್ರಾಜ್ಞರು ಹೇಳುತ್ತಾರೆ. ನಮ್ಮ ಮೆದುಳಿನಲ್ಲಿರುವ ಸೆನ್ಸಾರ್ ನರ್ವಗಳ ( ಅರಿವಿನ ನರವ್ಯೂಹ) ಮೂಲಕ ನಾವು ಕೇಳುವ, ನೋಡುವ, ಸ್ಪರ್ಶಿಸುವ, ವಾಸನೆಯನ್ನು…
ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶ ಸಮೃದ್ಧಿಯತ್ತ ಸಾಗಬೇಕಾದರೆ ರಾಮರಾಜ್ಯದ ಕನಸು ನನಸಾಗಬೇಕು ಎಂದು ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ಇಲ್ಲಿಯ ಶ್ರೀಕೃಷ್ಣ ವಾದಿರಾಜ ಮಠದ ಆವರಣದಲ್ಲಿ ಅಂದಾಜು ರೂ.೭ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿದ್ಯಾರ್ಥಿ ನಿಲಯದ ದಾನಿಗಳನ್ನು ಉದ್ಧೇಶಿಸಿ ಮಾತನಾಡುತ್ತಿದ್ದರು.ಬಡ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಅನಕೂಲ ಕಲ್ಪಿಸಲು ಹಿರಿಯ ಸ್ವಾಮಿಗಳು ಆರು ದಶಕದ ಹಿಂದೆ ನಿರ್ಮಿಸಿದ ವಿದ್ಯಾರ್ಥಿ ನಿಲಯ ಶಿಥಿಲಾವಸ್ಥೆಯಲ್ಲಿತ್ತು. ಅದನ್ನು ಆಧುನಿಕರಣಗೊಳಿಸಿ ಇಂದಿನ ತಂತ್ರಜ್ಞಾನಯುಗದಲ್ಲಿ ಸಮಸ್ತ ಬಡವರಿಗೂ ನೂತನ ಕಟ್ಟಡ ನಿರ್ಮಿಸಿಕೊಡುವ ಯೋಜನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಅನುದಾನ ನೀಡಿದ್ದಾರೆ. ರೂ.ಒಂದು ಕೋಟಿಯಷ್ಟು ಹಣ ಸಂಗ್ರಹಿಸಿ ಕೊಡುವ ಭರವಸೆ ಕೊಟ್ಟಿದ್ದಾರೆಂದು ಪ್ರಶಂಸಿಸಿದ ಅವರು ಸಂಸದ ರಮೇಶ ಜಿಗಜಿಣಗಿ ಅವರೂ ಅನುದಾನ ಬಿಡುಗಡೆ ಮಾಡಿದ್ದಾರೆಂದು ಶ್ಲ್ಯಾಘಿಸಿದರು.ಅನೇಕ ಜನ ಹಿರಿಯರು ಒಂದು ಕೋಣೆ ನಿರ್ಮಾಣಕ್ಕೆ ರೂ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಮಖಂಡಿಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್)ದಲ್ಲಿ ಶುಕ್ರವಾರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಯಾವುದೇ ಮಗುವನ್ನು ದುಡಿಮೆಗೆ ಬಳಸದೇ, ಶಿಕ್ಷಣದ ಹಕ್ಕನ್ನು ಗೌರವಿಸಿ, ಬಾಲಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವ ಸಂಕಲ್ಪದೊಂದಿಗೆ ಪ್ರಮಾಣವಚನ ಸ್ವೀಕರಿಸಲಾಯಿತು.ಕಾಲೇಜಿನ ದೈಹಿಕ ನಿರ್ದೇಶಕರಾದ ಪ್ರೊ. ಮಹಾದೇವ ಗಲಬಿ ಅವರು ಪ್ರತಿಜ್ಞಾ ವಿಧಿ ಬೋಧಿಸಿ, ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುವ ಸಾಮಾಜಿಕ ಪಿಡುಗಾಗಿದ್ದು, ಪ್ರತಿಯೊಬ್ಬ ನಾಗರಿಕನು ಇದರ ವಿರುದ್ಧ ಜಾಗೃತನಾಗಿರಬೇಕೆಂದು ತಿಳಿಸಿದರು.ಮಕ್ಕಳಿಗೆ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ಬಾಲ್ಯ ದೊರಕುವುದು ಮೂಲಭೂತ ಹಕ್ಕಾಗಿದ್ದು, ಬಾಲಕಾರ್ಮಿಕತೆಯ ನಿರ್ಮೂಲನೆಗೆ ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯವೆಂದರು.ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪ್ರೊ. ಅಶ್ವಿನಿ ಅನಂತಪೂರ ಹಾಗೂ ಪ್ರೊ. ಪ್ರೇಮಾನಂದ ಹಿರೇಮಠ ಅವರು ಮಾತನಾಡಿ, ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲಿಗೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕಲಿಯುವ ವಯಸ್ಸಿನಲ್ಲಿ ಸರಿಯಾಗಿ ಕಲಿಯದೆ ಬೇರೆಯವರ ಕೈ ಕೆಳಗೆ ದುಡಿಯಲು ಹೋಗಿ ಶಿಕ್ಷಣದಿಂದ ವಂಚಿತರಾಗುವ ಅವಕಾಶವನ್ನು ಕಳೆದುಕೊಳ್ಳದೆ ಶಿಕ್ಷಣವನ್ನು ಪಡೆದು ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಶಿಕ್ಷಕ ಸಂಗನಬಸವ ಉಟಗಿ ಹೇಳಿದರು.ಅವರು ಸಮೀಪದ ಕುಂಬಾರಹಳ್ಳ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ಸಂತಸದ ಕಲಿಕೆಯೊಂದಿಗೆ ಜೀವನ ರೂಪಿಸಿಕೊಳ್ಳಲು ಶ್ರಮಿಸಬೇಕು, ಇದರೊಂದಿಗೆ ತಂದೆ ತಾಯಿಯ ಋಣ ತೀರಿಸಬೇಕೆಂದು ಹೇಳಿದರು.ಕು. ಚೈತ್ರ ತೇರದಾಳ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ನಾರಾಯಣ ಶಾಸ್ತ್ರಿ, ಶಿಕ್ಷಕರಾದ ಶಾರದಾ ಮಠ, ಆಸಿಪಾ ಭಾನು ಮೋಮಿನ್, ಸವಿತಾ ಬೆನಕಟ್ಟಿ, ಮಂಜುಳಾ ಕಡಕೋಳ, ಚಂದ್ರಕಾಂತ್ ಪೊಲೀಸ್, ಶಕುಂತಲಾ ಬಿರಾದಾರ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್ ಆ್ಯಂಡ್ ಡೆಮೆನ್ಶಿಯಾ(Advance Care Planning for Alzheimer’s Disease and Dementia) ಕೃತಿಯನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಗುರುವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಲಝೈಮರ್ಸ್ ಕಾಯಿಲೆ ಮತ್ತು ಡಿಮೆನ್ಶಿಯಾ ಪೀಡಿತರ ಆರೈಕೆಯಲ್ಲಿ ತೊಡಗಿರುವ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ರೋಗಿಗಳ ಆರೈಕೆದಾರರಿಗೆ ಈ ಪುಸ್ತಕ ಅತ್ಯಂತ ಉಪಯುಕ್ತವಾಗಲಿದೆ. ಡಿಮೆನ್ಶಿಯಾ ಆರೈಕೆಯಲ್ಲಿ ಬಳಸಲಾಗುವ ಮೂಲಭೂತ ಮಾಹಿತಿಯಿಂದ ಹಿಡಿದು ಆಧುನಿಕ ತಂತ್ರಜ್ಞಾನ ಮತ್ತು ಸಾಧನಗಳವರೆಗೆ ಸಮಗ್ರ ಮಾಹಿತಿಯನ್ನು ಈ ಪುಸ್ತಕ ಒಳಗೊಂಡಿದೆ ಎಂದು ಅವರು ಹೇಳಿದರು.ಇದೇ ವೇಳೆ ಕೃತಿಯ ಲೇಖಕ ಮತ್ತು ಜೆರಿಯಾಟ್ರಿಕ್ಸ್…
ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು & ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹದ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಹಾಗೂ ಕಾನೂನಿನ ಜಾಗೃತಿ ಹೊಂದುವುದು ಅಗತ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕುಗಳ ಕುರಿತಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳಿಗೆ ೦೩ ಬಾಡಿಗೆ ಕಟ್ಟಡಗಳ ಅವಶ್ಯಕತೆ ಇದ್ದು. ಅಡುಗೆ ಕೋಣೆ, ಡೈನಿಂಗ್ ಹಾಲ್, ವಿದ್ಯಾರ್ಥಿಗಳ ವಾಸದ ಕೊಠಡಿಗಳು, ಶೌಚಾಲಯ, ಸ್ನಾನದ ಗೃಹ, ಸೋಲಾರ್ ವಾಟರ್ ಹೀಟರ್ ಹಾಗೂ ಸಮರ್ಪಕ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ೧೦ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಕರ್ಯಗಳುಳ್ಳ ಕಟ್ಟಡ ಬಾಡಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಸತಿ ನಿಲಯಕ್ಕಾಗಿ ಬಾಡಿಗೆ ಕಟ್ಟಡ ಒದಗಿಸಲು ಆಸಕ್ತಿ ಇರುವ ಕಟ್ಟಡ ಮಾಲೀಕರು ಜುಲೈ ೧, ರೊಳಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ ದೇವರಾಜ್ ಅರಸು ಭವನ, ಕನಕದಾಸ ಬಡಾವಣೆ, ಇವರಿಗೆ ಅಗತ್ಯ ದಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೫೨-೨೬೭೯೯೩, ಮೊ:೯೯೮೬೮೮೧೨೭೩ ಸಂಪರ್ಕಿಸಬಹುದಾಗಿದೆ ಎಂದು ತಾಲೂಕುಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂನಡಿ ನೇರವಾಗಿ ದ್ವಿತೀಯ ವರ್ಷ ೩ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಎರಡು ವರ್ಷಗಳ ಐಟಿಐ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಎ.ಐ.ಸಿ.ಟಿ.ಇ. ನಿಯಮಗಳು ಹಾಗೂ ಸರ್ಕಾರದ ಶಶಆದೇಶದನ್ವಯ ಕಳೆದ ಸಾಲಿನ ಇಂಟೇಕ್‌ಗೆ ಹೆಚ್ಚುವರಿಯಾಗಿ ಶೇ.೧೦ರಷ್ಟು ಸೀಟುಗಳನ್ನು ಹಾಗೂ ಮೊದಲನೇ ವರ್ಷ ಭರ್ತಿಯಾಗದೆ ಉಳಿದ ಸೀಟುಗಳನ್ನು ಮೆರಿಟ್ ಆಧಾರದಡಿ ಭರ್ತಿ ಮಾಡಲಾಗುವುದು.ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ. ೩ ರಿಂದ ಆರಂಭವಾಗಿದ್ದು, ಜೂ.೨೦ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಪ್ರವೇಶಾತಿ ಪ್ರಕ್ರಿಯೆ ಪ್ರಾಂಶುಪಾಲರ ಹಂತದಲ್ಲಿ ಆಫ್‌ಲೈನ್ ಮೂಲಕ ನಡೆಯಲಿದೆ. ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳ ಅನುದಾನಿತ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅವರ ಮೆರಿಟ್ ಆಧರಿಸಿ ಸೀಟು ಹಂಚಿಕೆ ಮಾಡಲಾಗುತ್ತದೆ.ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು, ಭರ್ತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಪ್ರದೇಶದಲ್ಲಿ ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಪಡಿತರ ಚೀಟಿದಾರರಿಗೆ ಐರಿಸ್ ಸಾಧನದ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯು ಜೂನ್ ೨೫ ರವರೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ವಿಜಯಪುರ ನಗರ ಪ್ರದೇಶದಲ್ಲಿ ಇನ್ನೂ ಸುಮಾರು ೬೯೭ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ ಇರುವುದು ಕಂಡುಬAದಿದೆ. ಬಯೋಮೆಟ್ರಿಕ್ (ಬೆರಳು ಗುರುತು) ಸರಿಯಾಗಿ ಮೂಡದ ಕಾರಣ ಇ-ಕೆವೈಸಿ ಪ್ರಕ್ರಿಯೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಿಲ್ಲದೇ ಇರುವುದರಿಂದ ಇಲಾಖೆಯ ವತಿಯಿಂದಲೇ ವಿಶೇಷ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಆಗದೇ ಬಾಕಿ ಉಳಿದಿರುವ ಪಡಿತರ ಚೀಟಿ ಫಲಾನುಭವಿಗಳು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಪಡಿತರ ವಿಭಾಗದ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ದಿನಾಂಕ ೧೧-೦೬-೨೦೨೬ ರಿಂದ ೨೫-೦೬-೨೦೨೬ ರವರೆಗೆ ಕಚೇರಿ ವೇಳೆಯಲ್ಲಿ ಈ ಸೌಲಭ್ಯ ಲಭ್ಯವಿರಲಿದ್ದು, ನ್ಯಾಯ ಬೆಲೆ ಅಂಗಡಿಕಾರರು ಇ-ಕೆವೈಸಿ…
ಮುದ್ದೇಬಿಹಾಳದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಯಾವುದೇ ಸಂದರ್ಭದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸರ್ವ ಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರ ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ ಮುದ್ದೇಬಿಹಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರತಿ ಗ್ರಾಮಕ್ಕೊಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಆಲಮಟ್ಟಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಯಲಾರಂಭಿಸಿದರೆ ಮುದ್ದೇಬಿಹಾಳ ತಾಲೂಕಿನ ಕೆಲ ಹಳ್ಳಿಗಳು ಪ್ರವಾಹ ಪೀಡಿತವಾಗುವ ಸಂಭವವಿದೆ. ಈ ಕುರಿತು ಕೆಬಿಜೆನ್ನೆಲ್ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.ಶಿಥಿಲಗೊಂಡ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳ ಬಳಿ ಮಕ್ಕಳು ಸುಳಿಯದಂತೆ ನೋಡಿಕೊಳ್ಳಬೇಕು ಎಂದ ಅವರು, ಈ ಕುರಿತು ಮುನ್ಮೆಚ್ಚರಿಕೆ ಕ್ರಮ ವಹಿಸಬೇಕು ಎಂದರು.ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ…
