Author: editor.udayarashmi@gmail.com

ತಾಳಿಕೋಟೆಯಲ್ಲಿ ರಜಪೂತ ಸಮಾಜದ ಮುಖಂಡರ ಹೇಳಿಕೆ | ನಿರ್ಲಕ್ಷಿಸಿದರೆ ಹೋರಾಟದ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಕಲ್ಬುರ್ಗಿ ಜಿಲ್ಲೆಯಲ್ಲಿಯೇ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಜೇವರ್ಗಿ ಮತಕ್ಷೇತ್ರದ ಶಾಸಕ ಡಾ.ಅಜಯಸಿಂಗ್ ಅವರಿಗೆ ನೂತನ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಲೇಬೇಕು, ಇಲ್ಲದಿದ್ದರೆ ಅವರ ಲಕ್ಷಾಂತರ ಅಭಿಮಾನಿಗಳೊಂದಿಗೆ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ರಜಪೂತ ಸಮಾಜದ ಯುವ ಮುಖಂಡ ವಿಜಯಸಿಂಗ್ ಹಜೇರಿ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಸಿದರು.ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಳಿಕೋಟೆ ರಜಪೂತ ಸಮಾಜದ ವತಿಯಿಂದ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪೫ ವರ್ಷಗಳವರೆಗೆ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಕಾಂಗ್ರೇಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವದರೊಂದಿಗೆ ಅಪಾರವಾದ ಕೊಡುಗೆಯನ್ನು ಶಾಸಕ ಡಾ.ಅಜಯಸಿಂಗ್ ಅವರು ಕೊಟ್ಟಿದ್ದಾರೆ. ಮೂರು ಅವಧಿಗೆ ಶಾಸಕರಾಗಿ, ದೆಹಲಿ ವಿಶೇಷ ಪ್ರತಿನಿಧಿಯಾಗಿ ಸಾಕಷ್ಟು ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಸಚಿವ ಸ್ಥಾನ ನಿಭಾಯಿಸಬಲ್ಲ ಎಲ್ಲ ಅರ್ಹತೆಯೂ ಅವರಲ್ಲಿದೆ ಎಂದರು.ರಜಪೂತ ಸಮಾಜದ ಹಿರಿಯರಾದ ಭರತಸಿಂಗ್ ಗೋವಿಂದಸಿಂಗ್ ಮೂಲಿಮನಿ ಹಾಗೂ…

Read More

ಮನಗೂಳಿ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಗುರುವಾರ ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಅವರು ವೀಕ್ಷಿಸಿ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಮತ್ತು ಸಾರ್ವಜನಿಕರ ಆಶಯದಂತೆ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿ, ಗುಣಮಟ್ಟವನ್ನು ಪರಿಶೀಲಿಸಿದೆ. ಈ ಯೋಜನೆಯಿಂದ ಕ್ಷೇತ್ರದ ರೈತರಿಗೆ ಸಕಾಲದಲ್ಲಿ ನೀರಾವರಿ ಸೌಲಭ್ಯ ದೊರೆಯುವುದರ ಜೊತೆಗೆ ಅಂತರ್ಜಲ ಮಟ್ಟವೂ ವೃದ್ಧಿಯಾಗಲಿದೆ. ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿರುವುದಾಗಿ ಹೇಳಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯಗಳಲ್ಲಿ ನಾನು ಸದಾ ಬದ್ಧ ಎಂದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಿಖಿಲೇಶ ಪಾಟೀಲ, ಮನಗೂಳಿ ಪಟ್ಟಣ…

Read More

ವಿಜಯಪುರ ಸರ್ಕಾರಿ ಮೆಡಿಕಲ್ ಕಾಲೇಜ್ ವಿಶೇಷ ಅಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಅವರಿಂದ ಜಿಲ್ಲಾಸ್ಪತ್ರೆ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿಗಳಾದ ಡಾ. ರಾಜಶೇಖರ ದ್ಯಾಬೇರಿ ಅವರು ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ ನಡೆಸಿದರು.ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನಿಯಮಾವಳಿಗಳನ್ವಯ ಕಾಲೇಜು ಸ್ಥಾಪನೆಗೆ ಅಗತ್ಯ ಭೂಮಿ, ಕಟ್ಟಡ, ಬೋಧನಾ ಆಸ್ಪತ್ರೆ ಹಾಗೂ ಇತರೆ ಶಾಸನಬದ್ಧ ಅವಶ್ಯಕತೆಗಳು ಸೇರಿದಂತೆ ಮಹತ್ವದ ಮಾಹಿತಿ ಪಡೆದುಕೊಂಡರು.ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ವಿವಿಧ ಹಳೆಯ ಕಟ್ಟಡಗಳು ಹಾಗೂ ಪ್ರಗತಿಯಲ್ಲಿರುವ ಹೊಸ ಕಟ್ಟಡ ಕಾಮಗಾರಿಗಳನ್ನು ವಿಶೇಷ ಅಧಿಕಾರಿಗಳು ಖುದ್ದಾಗಿ ವೀಕ್ಷಿಸಿ, ಲಭ್ಯವಿರುವ ಮೂಲಸೌಕರ್ಯಗಳ ಪರಿಶೀಲಿಸಿದರು.ಬಳಿಕ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ, ವೈದ್ಯಕೀಯ ಕಾಲೇಜಿಗೆ ಅತ್ಯಗತ್ಯವಾಗಿ ಬೇಕಾಗುವ ಮಾನವ ಸಂಪನ್ಮೂಲಗಳ ವಿವರಗಳು, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ ಮತ್ತು ಡಿಎನ್‌ಬಿ (ಡಿಎನ್‌ಬಿ) ಕೋರ್ಸ್ಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಪಡೆದುಕೊಂಡರು.ಜಿಲ್ಲಾಸ್ಪತ್ರೆಯಡಿ…

Read More

ವಿಜಯಪುರ ಮಹಾನಗರಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಬಿಎಲ್‌ಒಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೂ.೩೦ ರಿಂದ ಜು.೨೯ ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆ ನೀಡುವ ಸಂದರ್ಭದಲ್ಲಿ ಮತದಾರರನ್ನು ಗುರುತಿಸುವುದು ಹಾಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ್ ಮೆಕ್ಕಳಕಿ ಹೇಳಿದರು.ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದಂತೆ ಬೂತ ಲೇವಲ್ ಏಜಂಟ್ ರಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅನರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಸೇರಿದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಎಸ್ ಐಆರ್ ಪ್ರಕ್ರಿಯೆಯು ಪಾರರ್ದಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.ರಾಜಕೀಯ ಪಕ್ಷಗಳು ಈ ಕಾರ್ಯದಲ್ಲಿ ಹೆಚ್ಚಚ್ಚು ಭಾಗವಹಿಸುವಿಕೆಯನ್ನು ಖಾತರಿಪಡಿಸಿಕೊಳ್ಳುವ ದೃಷ್ಟಿಯಿಂದ, ಆಯೋಗವು ಮತಗಟ್ಟೆ ಮಟ್ಟದ ಏಜೆಂಟ್ ಗಳು ದಿನಕ್ಕೆ ೫೦ ನಮೂನೆಗಳನ್ನು ಮತದಾರರಿಂದ ಸಂಗ್ರಹಿಸಿ ಮತಗಟ್ಟೆ ಮಟ್ಟದ…

Read More

ಬಂಡಿ ದಾರಿ ಜಾಗ ಗುರುತಿಸಲು ಸರ್ವೇ ಅಧಿಕಾರಿಗಳು ಮೀನಾಮೇಷ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು ಎಂದು ಎಲ್ಲ ತಹಸೀಲ್ದಾರ್‌ಗಳಿಗೆ ಕಂದಾಯ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ. ಒಂದು ವೇಳೆ ಅಕ್ಕಪಕ್ಕದ ಜಮೀನಿನ ಮಾಲೀಕರು ರೈತರಿಗೆ ತಿರುಗಾಡಲು ಅಡ್ಡಿಪಡಿಸಿದರೆ ತಾಲೂಕಿನ ತಹಸೀಲ್ದಾರ್‌ಗಳು ಕ್ರಮ ಕೈಗೊಳ್ಳಬೇಕು. ಒತ್ತುವರಿ ತೆರವುಗೊಳಿಸಿ ರೈತರಿಗೆ ತಿರುಗಾಡಲು ಅವಕಾಶ ಕೊಡಬೇಕು.ಆದರೆ ಹೆಚ್ ಡಿ ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ರೈತ ಜಗದೀಶ್ ಬಿನ್ ಚಂದ್ರಪ್ಪ ಹಾಗೂ ಶಿವಪ್ಪ ಕುಟುಂಬ, ತಮ್ಮ ಜಮೀನಿಗೆ ತೆರಳಲು ಕಾಲುದಾರಿ ಅಥವಾ ಬಂಡಿ ರಸ್ತೆ ಇಲ್ಲದೆ ಪರದಾಡುತ್ತಿದೆ. ಅಣ್ಣೂರು ಗ್ರಾಮದಲ್ಲಿ ಚಂದ್ರಪ್ಪ ಎಂಬುವವರಿಗೆ 38/3 ಸರ್ವೇ ನಂಬರ್ ನಲ್ಲಿ 2 ಎಕರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜೂನ್ 15ರಂದು ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ‌.ಜಾನ್ಸನ್ ಲಿಫ್ಟ್ ಅಂಡ್ ಎಸ್ಕಲೇಟರ್ಸ ಕಂಪನಿ ಈ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ನ ನಾಬಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಯಲಿದೆ.ಆಸಕ್ತ ತರಬೇತಿದಾರರು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸಂತೋಷ ಕರಿಗಾರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ‌‌ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9880716694‌ ಮತ್ತು 9916853605 ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ ಈ ‘ಕ್ಷೀರ ಪೈಲಟ್’ ಯೋಜನೆಗೆ ಚಾಲನೆ ನೀಡಲಾಗಿತ್ತು. ಇದರನ್ವಯ ಬಬಲೇಶ್ವರ ತಾಲೂಕಿನ ನಿಡೋಣಿ, ಕುಮಠೆ ಹಾಗೂ ನಾಗರಾಳ ಮತ್ತು ತಿಕೋಟಾ ತಾಲೂಕಿನ ಜಾಲಗೇರಿ, ಡೋಕಳೆವಾಡಿ ಗ್ರಾಮಗಳ ಉತ್ಸಾಹಿ ರೈತರು ಈ ತರಬೇತಿಗಾಗಿ ತೆರಳಿದ್ದಾರೆ. ವೈಜ್ಞಾನಿಕ ಮತ್ತು ಸಾವಯವ ಹೈನುಗಾರಿಕೆಯಲ್ಲಿ ದೇಶದಲ್ಲೇ ಮಾದರಿ ಎನಿಸಿಕೊಂಡಿರುವ ಅಕ್ಷಯ ಕಲ್ಪ ಸಂಸ್ಥೆಯ ಆವರಣದಲ್ಲಿ ರೈತರು ಸುಧಾರಿತ ತಂತ್ರಜ್ಞಾನಗಳ ನೇರ ಪ್ರಾತ್ಯಕ್ಷಿಕೆ ಹಾಗೂ ತರಬೇತಿಯನ್ನು ಪಡೆಯಲಿದ್ದಾರೆ ಎಂದರು.ಬಿ.ಎಲ್.ಡಿ.ಇ ಡೀಮ್ಡ್ ವಿವಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಸರ ರಕ್ಷಣೆಯನ್ನೇ ಉಸಿರಾಗಿಸಿಕೊಂಡಿದ್ದ ಪರಿಸರ ಪ್ರೇಮಿ ದಿ.ಉದಯ ನಾವಲಗಿ ಅವರ ಸ್ಮರಣೆ ಹಾಗು ಪರಿಸರ ದಿನಾಚರಣೆಯನ್ನು ನನ್ನ ಗಿಡ-ನನ್ನ ಭೂಮಿ ಸಂಸ್ಥೆಯ ವತಿಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಮುನ್ನಡೆದಿದ್ದು, ಈ ಅಭಿಯಾನದ ಅಂಗವಾಗಿ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ೩೩೩ ಸಸಿಗಳನ್ನು ಏಕಕಾಲಕ್ಕೆ ನೆಡಲಾಯಿತು.ಡೊಮನಾಳದಲ್ಲಿ ಹಸಿರು ಕ್ರಾಂತಿಯನ್ನೇ ಮಾಡಿ ಆ ಪ್ರದೇಶವನ್ನು ಹಸಿರು ಸಿರಿಯನ್ನಾಗಿ ಮಾಡಿರುವ ಎನ್.ಡಿ. ಪಾಟೀಲ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪರಿಸರ ರಕ್ಷಣೆ ಸಂದೇಶ ಸಾರಿದ ಅವರು, ಪರಿಸರದ ಉಳಿವಿನಲ್ಲಿ ನಮ್ಮ ಉಳಿವು ಅಡಗಿದೆ, ಪರಿಸರ ರಕ್ಷಣೆ ಒಂದು ಕರ್ತವ್ಯ ಅಷ್ಟೇ ಅಲ್ಲ ಅದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು, ಪರಿಸರ ರಕ್ಷಣೆ ಹಾಗೂ ಸಸಿ ನೆಡುವುದು ಅಪೂರ್ವ ಕಾರ್ಯ, ಈ ಕಾರ್ಯ ಕೈಗೊಂಡು ನೋಡಿ ಆತ್ಮತೃಪ್ತಿ ದೊರಕುತ್ತದೆ ಎಂದರು.ನನ್ನ ಗಿಡ ನನ್ನ ಭೂಮಿ ಸಂಘಟನೆ ಸಂಚಾಲಕ ಬಸವರಾಜ ಬೈಚಬಾಳ ಮಾತನಾಡಿ, ನಮ್ಮ ಸಂಘಟನೆಯ ಹೆಸರಿನಂತೆಯೇ ಭೂಮಿ ಹಾಗೂ ಪರಿಸರ ರಕ್ಷಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗೋಲಗುಮ್ಮಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಣಶಿಖಾರಿ ಕಾಲೋನಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸರಾಯಿ ಹಾಗೂ ನಕಲಿ ಸೇಂದಿ ತಯಾರಿಕೆ ಮತ್ತು ಮಾರಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಅವರ ಮಾರ್ಗದರ್ಶನದಲ್ಲಿ, ವಿಜಯಪುರ ಉಪವಿಭಾಗದ ಡಿಎಸ್‌ಪಿ ನೇತೃತ್ವದಲ್ಲಿ ಇಂದು ಮುಂಜಾನೆ 5 ಗಂಟೆಗೆ 10 ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿದವು.ದಾಳಿಯ ವೇಳೆ ಕಾಲೋನಿಯಲ್ಲಿದ್ದ ಸುಮಾರು 10 ರಿಂದ 15 ಅಕ್ರಮ ಮದ್ಯ ತಯಾರಿಕಾ ಸ್ಥಳಗಳು ಪತ್ತೆಯಾಗಿದ್ದು, ಮಾನವ ಜೀವಕ್ಕೆ ಅಪಾಯಕಾರಿಯಾದ ಸಿಎಚ್ ಪೌಡರ್ ಮಿಶ್ರಣ ಮಾಡಿ ನಕಲಿ ಸೇಂದಿ ಮತ್ತು ಕಳ್ಳಬಟ್ಟಿ ಸರಾಯಿ ತಯಾರಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಸುಮಾರು 480 ರಿಂದ 500 ಲೀಟರ್ ಕಳ್ಳಬಟ್ಟಿ ಸರಾಯಿ ತಯಾರಿಕೆಗೆ ಬಳಸುತ್ತಿದ್ದ ಕಚ್ಚಾ ಕೊಳೆ ಹಾಗೂ 50 ಲೀಟರ್ ನಕಲಿ ಸೇಂದಿಯನ್ನು ಸ್ಥಳದಲ್ಲೇ ನಾಶಪಡಿಸಲಾಯಿತು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಉದ್ಯೋಗಿಗಳ ಸಂತೋಷ ಕೂಟವು ಜೂನ ೧೪ರಂದು ಜರುಗಲಿದೆ ಎಂದು ಕಾರ್ಯಕ್ರಮದ ಸಂಘಟಕರಾದ ಶ್ರೀಕಾಂತ ಕುಲಕರ್ಣಿ, ಪ್ರಕಾಶ ಕುಲಕರ್ಣಿ ಹಾಗೂ ಜಗನ್ನಾಥ ಕುಲಕರ್ಣಿ ಅವರುಗಳು ಸಂಯುಕ್ತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.೬೫ ವರ್ಷ ಮೇಲ್ಪಟ್ಟು ಮತ್ತು ೮೮ ವರ್ಷ ಒಳಗೆ ಇರುವ ಎಸ್.ಬಿ.ಐ ನಿವೃತ್ತ ೧೨೦ ಹಿರಿಯ ಉದ್ಯೋಗಿಗಳು ಅತಿ ಉತ್ಸಾಹದಿಂದ ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಂದು ಈ ಸಂತೋಷ ಕೂಟದಲ್ಲಿ ಸಹಭಾಗಿಯಾಗಲಿದ್ದಾರೆಂದು ಅವರು ತಿಳಿಸಿದ್ದಾರೆ.೧೪ ರಂದು ಬೆಳಿಗ್ಗೆ ರಂಗೋಲಿ ಹಾಕಿ ಗುಲಾಬಿ ಹೂ ಸಮರ್ಪಿಸಿ ಸ್ವಾಗತಿಸುವ ಕಾರ್ಯಕ್ರಮ ನಡೆಯಲಿದೆ. ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಂತೋಷ ಕೂಟದ ಉದ್ಘಾಟನೆಯನ್ನು ಅಧ್ಯಕ್ಷರಾದ ರಮೇಶ ಕನ್ನೂರ ಅವರು ನಡೆಸಿಕೊಡಲಿದ್ದಾರೆ, ಎಮ್.ಎಚ್.ಕುಲಕರ್ಣಿ, ಎಸ್.ಆರ್.ಪಾಗೆ, ಶ್ರೀಮತಿ ವಿ.ಎಮ್.ಐನಾಪುರ ಹಾಗೂ ಶ್ರೀಮತಿ ಶಾರದಾ ಅಂಗಡಿ ಅವರುಗಳು ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಕರಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ ೮೦ ವರ್ಷ ಮೇಲ್ಪಟ್ಟ ಹಿರಿಯ ಸಹೋದ್ಯೋಗಿಗಳನ್ನು…

Read More