Author: editor.udayarashmi@gmail.com

ಸಿಂದಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ ದಿ.ಎಂ.ಸಿ.ಮನಗೂಳಿ ಮಹಾ ವೇದಿಕೆ ಸಿಂದಗಿ: ಸಮ್ಮೇಳನಗಳು ಇಂದಿನ ಯುವ ಸಾಹಿತಿಗಳಿಗೆ ಪ್ರೇರಣಾದಾಯಕ. ಕನ್ನಡದ ಗತ ವೈಭವವನ್ನು ಯುವ ಪೀಳಿಗೆಗೆ ವರ್ಗಾಯಿಸುವ ಕಾರ್ಯ ನಮ್ಮ ನಿಮ್ಮೆಲ್ಲರದ್ದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಎಚ್.ಜಿ.ಪ್ರೌಢಶಾಲಾ ಆವರಣದಲ್ಲಿ ದಿ.ಎಂ.ಸಿ.ಮನಗೂಳಿ ಅವರ ಮಹಾ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಿಂದಗಿ ವತಿಯಿಂದ ಹಮ್ಮಿಕೊಂಡ ತಾಲೂಕಾ ೬ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಕರಿಗೆ ಹಿರಿಯ ಸಾಹಿತಿಗಳ ಮಾರ್ಗದರ್ಶನ ಅವರ ಚಿಂತನೆಗಳು ಮನೆ ಮಾತಾಗಬೇಕು. ಸಿಂದಗಿ ತಾಲೂಕಿಗೆ ಐತಿಹಾಸಿಕ ಹಿನ್ನಲೆ ಇದೆ. ಸಿಂದಗಿ ಸಾಹಿತಿಗಳ ತವರೂರು. ಸಂಗೀತ ದಿಗ್ಗಜ ರವೀಂದ್ರ ಹಂದಿಗನೂರ, ನಟ ಸಾರ್ವಭೌಮ ಹಂದಿಗನೂರ ಸಿದ್ರಾಮಪ್ಪ, ಪತ್ರಕರ್ತ ರೇ.ಚ.ರೇವಡಿಗಾರ, ಡಾ.ಚನ್ನಪ್ಪ ಕಟ್ಟಿ, ಡಾ.ಎಂ.ಎಂ ಪಡಶೆಟ್ಟಿ, ಹ.ಮ.ಪೂಜಾರ ಸುಶೀಲಾ ಕಮತಗಿಯಂತಹ ದಿಗ್ಗಜ ಮಾತೃಭೂಮಿ ಸಿಂದಗಿ.ಸಿಂದಗಿ ತಾಲೂಕು ಶೈಕ್ಷಣಿಕವಾಗಿ, ಬೌಗೋಳಿಕವಾಗಿ ಸಾಕಷ್ಟು ಮುಂದುವರಿದಿದೆ. ಕಾರಣ ವಿಜಯಪು ಜಿಲ್ಲೆ ವಿಭಜನೆಯಾದರೆ…

Read More

ಪರಶುರಾಮ ಮ್ಯಾಕೇರಿ ಕೊಲೆ | ಹಳೆ ದ್ವೇಷ ಹಾಗೂ ಹಣದ ವ್ಯವಹಾರ | ಆರೋಪಿಗಳು ಪರಾರಿ ಆಲಮೇಲ: ಕೊರಳ್ಳಿ ಗ್ರಾಮದ ಬಬಲೇಶ್ವರ ರಸ್ತೆಯ ನಂದಿ ಇವರ ಜಮಿನಿನಲ್ಲಿ ಬುಧವಾರ ರಾತ್ರಿ ನಾಲ್ಕು ಜನ ಆರೋಪಿತರು ಸೇರಿಕೊಂಡು, ಅದೇ ಗ್ರಾಮದ ಪರಶುರಾಮ ತಂದೆ ಯಲ್ಲಪ್ಪ ಮ್ಯಾಕೇರಿ (೨೫) ಎಂಬುವವರನ್ನು ಹಣದ ವ್ಯವಹಾರ ಹಾಗೂ ಹಳೆ ದ್ವೇಷದಿಂದ ಬುಧುವಾರ ಪರಶುರಾಮ ತಂದೆ ಯಲ್ಲಪ್ಪ ಮ್ಯಾಕೇರಿ ಕೊಲೆಯಾದ ಘಟನೆ ಆಲಮೇಲ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ ನಡೆದಿದೆ.ಕೊರಳ್ಳಿ ಗ್ರಾಮದಲ್ಲಿ ಒಂದು ವರ್ಷದ ಹಿಂದೆ ನಡೆದ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಪರಶುರಾಮ ತಂದೆ ಯಲ್ಲಪ್ಪ ಮ್ಯಾಕೇರಿ ಹಾಗೂ ನಾಲ್ಕು ಜನ ಆರೋಪಿತರ ಮಧ್ಯೆ ಆಗಾಗ ಜಗಳ ನಡೆದುಕೊಂಡು ಬರುತ್ತಿದವು, ಈ ಕುರಿತು ಗ್ರಾಮದ ಹಿರಿಯರ ಸಮಕ್ಷಮ ಕೊಲೆಯಾದ ಪರಶುರಾಮ ಹಾಗೂ ಆರೋಪಿತರ ಮಧ್ಯೆ ರಾಜಿ ಸಂಧಾನವು ಕೂಡಾ ಆಗಿತ್ತು, ಕಳೆದ ಒಂದು ವರ್ಷದಿಂದ ಕೊಲೆಯಾದ ಪರಶುರಾಮ ಕೊರಳ್ಳಿ ಗ್ರಾಮವನ್ನು ಬಿಟ್ಟು ಸಿಂದಗಿಯಲ್ಲಿ ವಾಸವಾಗಿ ಉಪ ಜೀವನ ನಡೆಸುತ್ತಿದ್ದನು.…

Read More

ನಾಗೂರ: ಮಕ್ಕಳ ಕಲಿಕಾ ಮೇಳದಲ್ಲಿ ಬಿಇಓ ವಸಂತ ರಾಠೋಡ ಅಭಿಮತ ಬಸವನಬಾಗೇವಾಡಿ: ಪ್ರತಿಯೊಂದು ಶೈಕ್ಷಣಿಕ ಮೇಳಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಯಾಗಿವೆ. ಮಕ್ಕಳ ಕಲಿಕಾ ಮೇಳದಿಂದ ಮಕ್ಕಳ ಶೈಕ್ಷಣಿಕ ಮಟ್ಟ ಹೆಚ್ಚಳಕ್ಕೆ ಪೂರಕವಾಗುತ್ತದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.ತಾಲೂಕಿನ ನಾಗೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಜೀಂ ಪ್ರೇಮ್ಜಿ ಫೌಂಡೇಶನ್ ಜಿಲ್ಲಾ ಸಂಸ್ಥೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ನಾಗೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮುತ್ತಗಿ ಕ್ಲಸ್ಟರ್ ಮಟ್ಟದ ಮಕ್ಕಳ ಕಲಿಕಾ ಮೇಳದಲ್ಲಿ ಮಾತನಾಡಿದ ಅವರು, ಮಕ್ಕಳ ಕಲಿಕಾ ಮೇಳದಿಂದ ಮಕ್ಕಳಿಗೆ ವಿಷಯದ ಸರಳತೆ ಉಂಟಾಗುತ್ತದೆ. ಮಕ್ಕಳಲ್ಲಿ ಆಟದೊಂದಿಗೆ ಪಾಠ ಎನ್ನುವಂತೆ ವಿಷಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಈ ಕಲಿಕಾ ಮೇಳ ಮಕ್ಕಳಲ್ಲಿ ಹೊಸ ಹುಮ್ಮಸ್ಸು ಮೂಡಿಸುತ್ತದೆ ಎಂದರು.ಶಿಕ್ಷಕರು ಪಾಠೋಪಕರಣ ಬಳಕೆ ಮಾಡಿಕೊಂಡು ಬೋಧನೆ ಮಾಡಿದರೆ ಉತ್ತಮವಾದ ಶಿಕ್ಷಣ ಕೊಡಲು ಸಾಧ್ಯವಾಗುತ್ತದೆ. ಕಲಿಕಾ ಮೇಳವು…

Read More

ಹೆಸ್ಕಾಂ ವಿಭಾಗೀಯ ಕಚೇರಿ ಕಂಪೌಂಡ್ ಗೋಡೆ ನಿರ್ಮಾಣ | ಸಚಿವ ಶಿವಾನಂದ ಪಾಟೀಲ ಸೂಚನೆ ಬಸವನಬಾಗೇವಾಡಿ: ಪಟ್ಟಣದ ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಭಾಗೀಯ ಕಚೇರಿಯ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಗುರುವಾರ ಸಂಜೆ ಅಡಿಗಲ್ಲು ಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು, ಹೆಸ್ಕಾಂ ವಿಭಾಗೀಯ ಕಚೇರಿಯ ಕಂಪೌಂಡ್ ಗೋಡೆ ಕಾಮಗಾರಿಯನ್ನು ಗುತ್ತಿಗೆದಾರರು ಉತ್ತಮ ಗುಣಮಟ್ಟದಿಂದ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಈ ಕಂಪೌಂಡ್ ಗೋಡೆ ಪಕ್ಕದಲ್ಲಿ ಬೈಪಾಸ್ ರಸ್ತೆ ನಿರ್ಮಾಣವಾಗುವದರಿಂದಾಗಿ ಮುಂದೆ ಯಾವುದೇ ತೊಂದರೆಯಾಗದಂತೆ ಕಂಪೌಂಡ್ ಕಾಮಗಾರಿ ನಿರ್ಮಾಣವಾಗುವ ಕಡೆಗೆ ಗುತ್ತಿಗೆದಾರರು ಗಮನ ಹರಿಸಿ ತಮ್ಮ ಕಾಮಗಾರಿ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.ಹೆಸ್ಕಾಂ ಇಲಾಖೆಯ ಸಿವ್ಹಿಲ್ ಎಇಇ ಜಿ.ಟಿ.ಬಡಿಗೇರ ಅವರು, ವಿಭಾಗೀಯ ಕಚೇರಿಗೆ ೨.೨೫ ಮೀಟರ ಉದ್ದದ ಕಂಪೌಂಡ್ ಗೋಡೆ ಕಾಮಗಾರಿ ರೂ. ೩೮.೫ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ…

Read More

ವಿಜಯಪುರ: ಇಂದಿನ ಮಕ್ಕಳು ಅಕ್ಷರದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ, ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ತಮ್ಮ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಅಥರ್ಗಾ ಗುರುದೇವಾಶ್ರಮದ ಈಶಪ್ರಸಾದ ಮಹಾಸ್ವಾಮಿಗಳು ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಾತೃ ಸಂಗಮ, ತಾಯಂದಿರ ಪಾದಪೂಜೆ ಹಾಗೂ ಮಕ್ಕಳಿಗೆ ಕೈತುತ್ತು ಉಣಿಸುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.ತಾಯಿ ತನ್ನ ಸಂತೋಷವನ್ನು ತನ್ನ ಮಗುವಿಗೆ ತ್ಯಾಗ ಮಾಡುತ್ತಾಳೆ. ತಾಯಿ ಕಲಿಸಿದ ನೈತಿಕ ಮೌಲ್ಯಗಳು ಮಗುವಿನ ಭವಿಷ್ಯಕ್ಕೆ ಭದ್ರಬುನಾದಿ. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ತಾಯಿಯ ಪಾತ್ರ ಬಹುಮುಖ್ಯ ಎಂದು ಹೇಳಿದರು.ನಾಗಠಾಣ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯ ಉಪ ಪ್ರಾಚಾರ್ಯ ಪ್ರಮೋದ ಮೆಂಚ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಯಂದಿರು ಕುಟುಂಬದ ಭಾವನಾತ್ಮಕ ಬೆನ್ನೆಲುಬು.ಅವರು ದೇವರ ಅಮೂಲ್ಯ ಉಡುಗೊರೆ.‘ಜನನಿ ತಾನೇ ಮಗುವಿನ ಮೊದಲ ಗುರು’ ಎಂಬಂತೆ ಮಗುವಿನ ಸಮಗ್ರ ಬದುಕು ರೂಪಿಸುವಲ್ಲಿ ತಾಯಿಯ ಪಾತ್ರ ಅನನ್ಯ ಎಂದು ಹೇಳಿದರು.ಉಪನ್ಯಾಸ ನೀಡಿದ ಶಿಕ್ಷಕ ಸಂತೋಷ ಬಂಡೆ, ಭೂಮಿಯ ಮೇಲೆ ನಿಸ್ವಾರ್ಥ…

Read More

ವಿಜಯಪುರ: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರದ ಜೀವನಾಡಿ ಭೂತನಾಳ ಕೆರೆಯು ಬರಗಾಲದಿಂದ ಬತ್ತಿ ಹೋಗುತ್ತಿದ್ದು, ನಗರದಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಿತ್ತು. ಈ ಸಮಸ್ಯೆ ನಿವಾರಿಸುವ ಸಲುವಾಗಿ ಮುಳವಾಡ ಏತ ನೀರಾವರಿ ಯೋಜನೆಯಡಿ ನಿರ್ಮಾಣವಾದ ತಿಡಗುಂದಿ ಆಕ್ವಾಡಕ್ಟ್ ಮೂಲಕ ಭೂತನಾಳ ಕೆರೆಗೆ ಕೃಷ್ಣಾನದಿ ನೀರು ತುಂಬಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದು, ಅಧಿಕಾರಿಗಳು ಅವರು ಈಗಾಗಲೇ ನೀರು ಹರಿಸುತ್ತಿದ್ದಾರೆ.ಈಗ ಪೂರ್ಣ ಪ್ರಮಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ದೃಷ್ಟಿಯಿಂದ ಅರಕೇರಿ ಏತ ನೀರಾವರಿ ಮೂಲಕ ನೀರು ಹರಿಸುವಂತೆ ಸೂಚಿಸಿದ್ದೇನೆ. ಅದರಂತೆ, ಕೆರೆಯ ಮತ್ತೊಂದು ಭಾಗಕ್ಕೆ ಇಂದಿನಿಂದ ನೀರು ಹರಿಸಲಾಗುತ್ತಿದೆ. ವಿದ್ಯುತ್ ಮೋಟಾರ್ ಗಳನ್ನು ಬಳಸದೆ ನೈಸರ್ಗಿಕವಾಗಿ ನೀರು…

Read More

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಂದ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಬೆಂಗಳೂರು: ಕರ್ನಾಟಕದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನ ಗಣತಿ) ವರದಿಯನ್ನು ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ, 2015ರಲ್ಲಿ ನಡೆಸಿದ್ದ ಸಮೀಕ್ಷೆಯ ವರದಿ ಸಲ್ಲಿಕೆ ಮಾಡಿದ್ದಾರೆ.ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ವರದಿಯ ಅಂಶಗಳನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ಸರ್ಕಾರದ ಕೆಲಸ” ಎಂದರು.ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಹಾಗೂ ಶಿಫಾರಸುಗಳನ್ನು ಒಳಗೊಂಡ 200 ಪುಟಗಳ ಪ್ರಧಾನ ವರದಿ ಮತ್ತು 48 ಸಂಪುಟಗಳಷ್ಟಿರುವ ದತ್ತಾಂಶದ ವಿವರಗಳನ್ನು ಮುಖ್ಯಮಂತ್ರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಹೇಳಿದರು.ವರದಿ ಸ್ವೀಕರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ಹೆಚ್.…

Read More

ಬೆಂಗಳೂರು: ಮಾಜಿ ಐಎಎಸ್‌ ಅಧಿಕಾರಿ, ನಟ ಕೆ ಶಿವರಾಮ್ ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕೆ ಶಿವರಾಮ್ ಅವರು ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆದು ಐಎಎಸ್‌ ಅಧಿಕಾರಿಯಾಗಿದ್ದರು.ನಟ ಕೆ ಶಿವರಾಮ್ ಅವರಿಗೆ ಬುಧವಾರ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ.ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.ಸಿನಿಮಾ ರಂಗದಲ್ಲೂ ತೊಡಗಿಸಿಕೊಂಡಿದ್ದ ಕೆ.ಶಿವರಾಮ್ 1993ರಲ್ಲಿ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ…

Read More

ವಿಜಯಪುರ: ಸಾಧನೆಗೆ ಛಲವಿರಬೇಕು. ಸಾಧಕನಿಗೆ ಸದಾವಕಾಶಗಳು ಹುಡುಕಿಕೊಂಡು ಬರುತ್ತವೆ. ಶ್ರಮದಿಂದ ಕ್ರಮವಾಗಿ ಅಧ್ಯಯನ ನಡೆಸಿ ಜೀವನದಲ್ಲಿ ಯಶಸ್ವಿಯಾಗಬೇಕು. ಇಂತಹವರ ಸಾಲಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ನಿಲ್ಲುತ್ತಾರೆ ಎಂದು ನ್ಯಾಯವಾದಿ ಎ ಎಂ ತಾಂಬೋಳಿ ಹೇಳಿದರು.ನ್ಯಾಯಾಧೀಶರಾಗಿ ಆಯ್ಕೆಯಾಗಿ ರಾಜ್ಯಕ್ಕೆ ಎರಡನೇ ರ‍್ಯಾಂಕ ಪಡೆದ ನ್ಯಾಯಾಧೀಶ ಜಹೀರ ಅತನೂರ ಇವರ ಗೌರವ ಸನ್ಮಾನ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಆದರೆ ನ್ಯಾಯಾಂಗ ಇಲಾಖೆಯಲ್ಲಿ ಎಲ್ಲ ಪರೀಕ್ಷೆ ಪಾಸಾಗಿ ನ್ಯಾಯಾಧೀಶರಾಗುವುದು ನಾಗರೀಕ ಸೇವಾ ಪರೀಕ್ಷೆಗಿಂತ ಕಠಿಣವಾಗಿರುತ್ತದೆ. ಇಂತಹದರಲ್ಲಿ ಉತ್ತಮ ರೀತಿಯಲ್ಲಿ ಓದಿ ಕುಟುಂಬ ಹಾಗೂ ಜಿಲ್ಲೆಗೆ ಕೀರ್ತಿ ತಂದ ನ್ಯಾಯಾಧೀಶ ಜಹೀರ ಅತನೂರ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದರು.ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಇರಫಾನ್ ಶೇಖ ಹಾಗೂ ಶಿಕ್ಷಕ-ಸಾಹಿತಿ ಕಬೂಲ್ ಕೊಕಟನೂರ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ಇಂತಹ ಪ್ರತಿಭೆಗಳು ಬಹಳ ಕಡಿಮೆ ಆದರೂ ಛಲ ಬಿಡದೆ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ…

Read More

ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ತಾಲೂಕಾ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಗೋಡೆಕಾರ ಆಯ್ಕೆಯಾಗಿದ್ದಾರೆ.ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಘದ ಗುರಿ ಹಾಗೂ ತತ್ವ ಸಿದ್ಧಾಂತಗಳನ್ನು ಹೇಳಿ ತಾಲೂಕಾ ಅಧ್ಯಕ್ಷ ಅರುಣಗೌಡ ತೇರದಾಳ ಆದೇಶ ಪ್ರತಿ ನೀಡಿದರು.ತಾಲೂಕಿನಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ರೈತ ಸಂಘದ ಹಿರಿಯ, ಯುವ, ಮಹಿಳಾ, ಕಾರ್ಮಿಕ ಸಂಘಟನೆಯನ್ನು ಮಾಡಿ ಎಲ್ಲಾ ರೈತರನ್ನು ಸಂಘಟನೆಗೆ ಕರೆತಂದು ಸರ್ಕಾರದ ಯೋಜನೆಗಳನ್ನು ತಿಳಿಸುತ್ತಾ, ಹೊಸ ಹೊಸ ತಂತ್ರಜ್ಞಾನಗಳನ್ನು ತಿಳಿಸುತ್ತಾ ಸಮಗ್ರ ಹಾಗೂ ಸಾವಯವ ಕೃಷಿ ಮಾಡುವಂತೆ ಪ್ರೇರೇಪಿಸಬೇಕು ಎಂದಿದ್ದಾರೆ.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ಮುಖಂಡರಾದ ಸಂತೋಷ ಪೂಜಾರಿ, ಶಿವರಾಜ ಕುಮಟಗಿ ಸೇರಿದಂತೆ ಇತರರು ಇದ್ದರು.

Read More