Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಮಾಜದಲ್ಲಿ ಅಶಾಂತಿ ದ್ವೇಷ ಮತ್ಸರ ಬಿತ್ತುವ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು 28 ಜೂನ್ 2026 ರಂದು ಮಹಾಮಾನವತಾವಾದಿ ವಿಶ್ವ ಗುರು ಬಸವಣ್ಣನವರ ಕರ್ಮ ಭೂಮಿ ಬಸವ ಕಲ್ಯಾಣದಲ್ಲಿ ಆಯೋಜಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಕರ್ನಾಟಕ ರಾಜ್ಯ ಸರ್ಕಾರ ನಿಷೇಧಿಸ ಬೇಕು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಸವ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ಸಮಾಜದಲ್ಲಿ ಗೊಂದಲ ನಿರ್ಮಿಸುತ್ತಿದ್ದಾರೆ. ಅವರು ಬಳಸುವ ಅಸಂವಿಧಾನ ಪದಗಳನ್ನು ಸುಪ್ರೀಂ ಕೋರ್ಟ್ ಕೂಡ ಛೀಮಾರಿ ಹಾಕಿದೆ. ಕನ್ನೇರಿ ಮಠದ ಅದೃಶ್ಯ ಶ್ರೀ ಕಾಡ ಸಿದ್ದೇಶ್ವರ ಶ್ರೀಗಳು ಬಸವಣ್ಣನವರ ಅವೈದಿಕ ಹಿಂದುಯೇತರ ಚಿಂತನೆಗಳನ್ನು ಮರೆ ಮಾಚಿ ವೈದಿಕ ಸನಾತನ ಧರ್ಮದ ಒಂದು ಭಾಗವೇ ಲಿಂಗಾಯತ ಧರ್ಮ ಎಂದು ಪ್ರತಿಪಾದಿಸಿಬಸವ ಭಕ್ತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಜೂ.೧ರಿಂದ ಜೂ.೧೫ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಆಭ್ಯರ್ಥಿಗಳು https://sevasindhuservices.karnataka.gov.in ಪೋರ್ಟಲ್ ಮುಖಾಂತರ ಸಿಟಿಜನ್ ಲಾಗಿನ್ ಕ್ರಿಯೇಟ್ ಮಾಡಿಕೊಂಡು ನಂತರ ಲಾಗಿನ್ ಆಗಿ ಸರ್ಚ್ ಬಾಕ್ಸ್ ನಲ್ಲಿ ಗ್ರಾಮ ಒನ್ ಫ್ರಾಂಚೈಸಿ ಸರ್ಚ್ ಮಾಡಿ ಸೆಲೆಕ್ಟ್ ಮಾಡಿಕೊಂಡು ಕೇಳಿರುವ ಮಾಹಿತಿಯನ್ನು ಸಮರ್ಪಕವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೆಸ್ಕಾಂ ವಿಜಯಪುರದ ವ್ಯಾಪ್ತಿಯಲ್ಲಿ ಬರುವ ೧೧ ಕೆ.ವ್ಹಿ ಓಲ್ಡ್ ಇಂಡಸ್ಟ್ರೀಯಲ್ ಫೀಡರ್ ಮೇಲೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದಈ ಫೀಡರ್‌ನ ಮೇಲೆ ಬರುವ ಕೆ.ಐ.ಎ.ಡಿ.ಬಿ, ಪಾನಿ ನಗರ, ಶಿವ ಶಕ್ತಿ ನಗರ, ಪರಮೇಶ್ವರ ನಗರ, ಆದಿಲ್ ಶಾಹಿ ನಗರ, ಬೋವಿ ನಗರ, ಗಾಂಧಿ ಆಯಿಲ್ ಮಿಲ್, ಕೃಷ್ಣ ನಗರ, ವಿನಾಯಕ ಹೋಟೇಲ್, ವ್ಹಿ.ಆರ್.ಎಲ್ ಆಫೀಸ್, ಚಾಂದಿನಿ ಹಾಲ್, ಶ್ಯಾಪೇಟಿ, ಬಿಲ್ಲಾಲ್ ನಗರ, ಎ.ಪಿ.ಎಮ್.ಸಿ ಲೇಮನ್ ಮಾರ್ಕೆಟ್ ಹಾಗೂ ಸ್ಟೇಷನ ಬ್ಯಾಕ್ ರೋಡ್ ಪ್ರದೇಶಗಳಲ್ಲಿ ಜೂ.೧೨ರ ಬೆಳಿಗ್ಗೆ ೯ ರಿಂದ ಸಂಜೆ ೫ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಸಾರ್ವಜನಿಕರು ಹೆಸ್ಕಾಂದೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು https;//uucms.karnataka.gov.inಆನ್‌ಲೈನ್ ನಲ್ಲಿ ಜೂ.೧೨ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶಾತಿ ಕೋರಿ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂ.೧೫ ರಂದು ನಡೆಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೨೧-೨೪೩೮೯೩೧ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜನ ಡೀನ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಇಂದು ಅಂಗನವಾಡಿ ಕೇಂದ್ರಗಳು ಶಾಲಾಪೂರ್ವ ಶಿಕ್ಷಣದ ಸಮಗ್ರ ಅನುಷ್ಠಾನದ ಪ್ರತಿಫಲವಾಗಿ ಮಾದರಿ ಅಂಗನವಾಡಿಗಳಾಗಿವೆ ಎಂದು ಸಿಂದಗಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಕೆ. ಹಳ್ಳಿ ಹೇಳಿದರು.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಬುಧವಾರ ಅಂಗನವಾಡಿ ಸಂಖ್ಯೆ ೦೭ರಲ್ಲಿ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನಮ್ಮ ಕೇಂದ್ರಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ. ಇಂದು ಸರ್ಕಾರದ ಹಲವಾರು ಯೋಜನೆಗಳು ಮಕ್ಕಳಿಗಾಗಿ ಇವೆ. ಈ ಕೇಂದ್ರಗಳಿಗೆ ದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಸಹಕಾರ ತುಂಬಾ ಇದೆ. ಇಲ್ಲಿ ಪಾಲಕರ ಆಸಕ್ತಿಯಂತೆ ಕನ್ನಡ, ಇಂಗ್ಲಿಷ್ ಕಲಿಕೆ ನಡೆಯುತ್ತಿದೆ. ಇದರ ಸದುಪಯೋಗವನ್ನು ಎಲ್ಲಾ ಪಾಲಕರು ಪಡೆದುಕೊಳ್ಳಬೇಕು. ಗ್ರಾಮದ ಎಲ್ಲಾ ಅಂಗನವಾಡಿಗಳು ಉತ್ತಮ ಕಾರ್ಯ ನಿರ್ವಹಣೆಯಲ್ಲಿ ತೊಡಗಿವೆ. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ನೇಹ ಸಂಸ್ಥೆಯಿಂದ ಏಳು ಹಂತದ ಶಾಲಾ ಪೂರ್ವ ಶಿಕ್ಷಣದ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಎಲ್ಲಾ ಅಂಗನವಾಡಿಗಳು ಮಾದರಿ ಕೇಂದ್ರಗಳಾಗಿವೆ. ಇದೇ ರೀತಿಯ ಸಹಕಾರ ನಮ್ಮ ಅಂಗನವಾಡಿ ಕೇಂದ್ರಗಳಿಗೆ ಇರಲಿ ಎಂದರು.ಅಂಗನವಾಡಿಯ…

Read More

ತಿಕೋಟ-ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ-ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.ಅಟಲ್ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಆಯೋಜಿಸಿದ್ದ ಹಸರೀಕರಣ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿ ನೆಟ್ಟು, ಸಸಿಗೆ ನೀರುಣಿಸಿದರು.ನಂತರ ಮಮದಾಪುರ ದೊಡ್ಡ ಕೆರೆಗೆ ಬೇಟಿ ನೀಡಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಪರಿಶೀಲಿಸಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಬಳಿಕ ಬಬಲೇಶ್ವರ ಪಟ್ಟಣದ ಸರಕಾರಿ ಐ.ಟಿ.ಐ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕಾರ್ಯದ ಕುರಿತು ಮತಗಟ್ಟೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪ್ರತಿಷ್ಠಿತ ಖಾಸಗಿ ವಲಯದ ಬ್ಯಾಂಕ್ ಆಗಿರುವ ಐ.ಡಿ.ಎಫ್.ಸಿ ಫಸ್ಟ್ ಬ್ಯಾಂಕ್‌ನ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಜೂ.೧೬ ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ.ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿಯಿರುವ ಅಸೋಸಿಯೆಟ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಈ ಸಂದರ್ಶನ ನಡೆಯಲಿದೆ. ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರುವ ಹಾಗೂ ೨೮ ವರ್ಷದೊಳಗಿನ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (ರೆಸ್ಯೂಂ) ಹಾಗೂ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸೋಲಾಪುರ ರಸ್ತೆ, ಕೆ.ಎಚ್.ಬಿ. ಕಾಲೋನಿ, ವಿಜಯಪುರದಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಇಲ್ಲವೇ ದೂರವಾಣಿ ಸಂಖ್ಯೆ ೯೯೪೫೦೦೦೭೯೩ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ನರೇಂದ್ರಮೋದಿ ಅವರು ದೇಶದಲ್ಲಿ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್ ಡಿ ಕೋಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇಶದ ಪ್ರಧಾನ ಮಂತ್ರಿಗಳಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಾಗೂ ದೇಶದ ಇತಿಹಾಸದಲ್ಲಿ ಅತ್ಯಧಿಕ ಅವಧಿಯವರೆಗೆ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ನಾಯಕರಲ್ಲಿ ಒಬ್ಬರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಕಾರ್ಯ ಸಾಮರ್ಥ್ಯ ದೊರೆಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಪಟ್ಟಣದ ಮೇಟಿಕುಪ್ಪೆ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಲಿ ವಿಶೇಷ ಪೂಜೆ, ಅರ್ಚನ ಮಾಡಿಸಿ, ಭಕ್ತರಿಗೆ ಪ್ರಸಾದ ವಿತರಿಸಿದರು. ನಂತರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಸ್ವಚ್ಛತೆ ಮತ್ತು ಗಿಡ ನೆಟ್ಟು ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.ಈ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಿಕೆ ಗಿರೀಶ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗುರುಗಳ ಋಣ ತೀರಿಸಲು ಸಾಧ್ಯವಿಲ್ಲ. ಗುರುವಿನ ಉಪಕಾರ ಅಪಾರ. ಶಿಕ್ಷಕರು ಸಚ್ಚಾರಿತ್ರ ಸಮಾಜದ ನಿರ್ಮಾತೃಗಳು. ತಮ್ಮಲ್ಲಿರುವ ಜ್ಞಾನವನ್ನು ಮಕ್ಕಳಿಗೆ ಬೋಧಿಸಿ ಅವರ ಬದುಕನ್ನು ಕಟ್ಟಿಕೊಟ್ಟ ಶಿಕ್ಷಕರ ಸೇವೆ ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ಪಟ್ಟರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದೇವರಹಿಪ್ಪರಗಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ದೇವರಹಿಪ್ಪರಗಿ ಇವರ ಆಶ್ರದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಕ ಸ್ಥಾನ ಪವಿತ್ರವಾದದ್ದು. ಹಗಲಿರುಳು ಅಧ್ಯಯನ ಮಾಡಿ ಮಕ್ಕಳಿಗೆ ಜ್ಞಾನವಂತರನ್ನಾಗಿ ಮಾಡಿ ಭವಿಷ್ಯ ರೂಪಿಸುವ ಮೂಲಕ ಶಿಕ್ಷಕರು ಸ್ಮರಣೀಯ ಸಾಲಿನಲ್ಲಿ ಇದ್ದಾರೆ ಎಂದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಜಿ.ಎಸ್.ಬೇವನೂರು ಮಾತನಾಡಿ, ನಿವೃತ್ತಿ ಜೀವನದಲ್ಲಿ ಸಾಮಾಜಿಕ. ಶೈಕ್ಷಣಿಕ ಹಾಗೂ ಅಧ್ಯಾತ್ಮಿಕ ಜೀವನಕ್ಕೆ ಮಹತ್ವ ನೀಡಬೇಕು. ಜೀವನ ಪೂರ್ತಿ ಬೋಧಿಸಿದ ತಾವು ಈಗ ಸಮಾಜದ ವಿವಿಧ ಕ್ಷೇತ್ರಗಳಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿಗಳು ಸಾಧನೆಗಳ ಮೆಟ್ಟಿಲೇರಬೇಕಾದರೆ ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ದಾಭಕ್ತಿಯಿಂದ ವಿದ್ಯೆಯಲ್ಲಿ ತಲ್ಲಿನವಾದರೆ ಮಾತ್ರ ಗುರಿ ಮುಟ್ಟಲು ಸಾಧ್ಯ. ಈ ರೀತಿಯಲ್ಲಿ ಹೆಚ್ಚಿನ ಅಂಕ ಪಡೆದು ವಿದ್ಯಾರ್ಥಿಗಳು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ಹಂಗರಗಿ ಹೇಳಿದರು.ಸಿಂದಗಿ ತಾಲೂಕಿನ ಯರಗಲ್ಲ ಗ್ರಾಮದ ಶ್ರೀ ಸಿದ್ದ ಶಂಕರಾನಂದ ಸ್ವಾಮೀಜಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ನಗದು ರೂಪದಲ್ಲಿ ಪ್ರೋತ್ಸಾಹಧನ ನೀಡಿ ಮಾತನಾಡಿದ ಅವರು, ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಮಕ್ಕಳು ಮುಂದಿನ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಗ್ರಾಮದ ಹೆಸರು ಹಾಗೂ ಸಂಸ್ಥೆ ಹೆಸರು ತರುವುದರ ಜೊತೆಗೆ ತಂದೆ-ತಾಯಿಗಳ ಕನಸನ್ನು ನನಸು ಮಾಡಬೇಕು. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮದು, ಕಲಾವತಿ, ಪ್ರಿಯಾಂಕಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಸ್ಥೆ ಆಡಳಿತ ಸದಸ್ಯರಾದ ಎಲ್.ವಿ.ಕುಲಕರ್ಣಿ. ಭೀಮಣ್ಣ ಹೇರೂರ, ಅಲ್ಲಿಸಾಬ ಬಂಕಲಗಿ, ಡಾ.ಸಂಗು…

Read More