Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅನಿತಾ ಕಾಸರಗೋಡು ಬಂಧನಕ್ಕೆ ಎಸ್ ಎನ್ ನಾಗರಾಜು ಒತ್ತಾಯ ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಬಿಲ್ಲವ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಅನಿತಾ ಕಾಸರಗೋಡು ವಿರುದ್ಧ ಪೊಲೀಸರು ಸೂಕ್ತ ಕ್ರಮ ಜರುಗಿಸಬೇಕು. ಆಕೆಯನ್ನು ಕೂಡಲೇ ಬಂಧಿಸಿ, ಜೈಲಿಗಟ್ಟಬೇಕು ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಆರ್ಯ ಈಡಿಗ ಸಂಘಟನಾ ಕಾರ್ಯದರ್ಶಿ ಹಾಗೂ ಈಡಿಗ ಸಮಾಜದ ಸರಗೂರು ತಾಲೂಕು ಅಧ್ಯಕ್ಷ ಎಸ್ ಎನ್ ನಾಗರಾಜು ಒತ್ತಾಯಿಸಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಎಸ್ ಎನ್ ನಾಗರಾಜು ಆಕೆಗೆ ಅನ್ಯಾಯವಾಗಿದ್ದರೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಬಹುದಾಗಿತ್ತು. ಆದರೆ ಆಕೆ ಆರ್ಯ ಈಡಿಗ ಸಮಾಜ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಪ್ರಚಾರದ ಗೀಳು ಅಂಟಿಸಿಕೊಂಡು ಆಕೆ ನಮ್ಮ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾಳೆ. ಈ ಮೂಲಕ ಜಾತಿ ಜಾತಿ ನಡುವೆ ವಿಷಬೀಜ ಬಿತ್ತಿ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದಿದ್ದಾಳೆ. ಒಂದು ಸಮಾಜದ ಬಗ್ಗೆ ಇಷ್ಟೆಲ್ಲ ಮಾತನಾಡಿರುವ ಆಕೆಯನ್ನು ಇಲ್ಲಿಯವರೆಗೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಿಪಿಎಸ್ ಪ್ರಕ್ರಿಯೆಯಲ್ಲಿ ಹೆಚ್ಚಿನ ನಿಗಾ ವಹಿಸಿ, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ ಹೇಳಿದರು.ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಸತಿ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿ, ಪ್ರತಿ ಮನೆ ಮಂಜೂರಾತಿಗೆ ಸಂಬಂಧಿಸಿದ ಕಡತಗಳನ್ನು ತ್ವರಿತವಾಗಿ ಪರಿಶೀಲಿಸಿ ಅನುಮೋದನೆ ನೀಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪ್ರತಿ ಸೋಮವಾರ ವಸತಿ ಯೋಜನೆಗಳಿಗೆ ಸಂಬAಧಿಸಿದ ವಿಶೇಷ ಅಭಿಯಾನ ನಡೆಸಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಮ್‌ಎವೈ), ಬಸವ ಆವಾಸ ಯೋಜನೆ ಹಾಗೂ ಅಂಬೇಡ್ಕರ್ ಆವಾಸ ಯೋಜನೆಯ ಫಲಾನುಭವಿಗಳ ಮನೆ ನಿರ್ಮಾಣಕ್ಕೆ ಎದುರಾಗುವ ತೊಡಕುಗಳನ್ನು ನಿವಾರಿಸಿ, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸಮಗ್ರ ಸಮೀಕ್ಷೆ ನಡೆಸಿ, ಜಿಲ್ಲಾ ಪಂಚಾಯಿತಿಗೆ ತ್ವರಿತವಾಗಿ ವರದಿ ಸಲ್ಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬಸವನ ಬಾಗೇವಾಡಿ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ದೇಶಾಭಿಮಾನಿ ನಾಗರಿಕರು ಬುಧವಾರ, ಜೂನ್ ೧೦, ೨೦೨೬ ರಂದು ತಮ್ಮ ತಮ್ಮ ಊರುಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಕರೆ ನೀಡಿದರು.ಪಟ್ಟಣದ ಸ್ವಗೃಹದಲ್ಲಿ ಬುಧವಾರ ಸಾಯಂಕಾಲ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ೧೨ ವರ್ಷಗಳ ೪೩೯೯ ದಿನಗಳ ಸೇವೆಯನ್ನು ಪೂರೈಸಿ ಹೊಸ ಇತಿಹಾಸ ನಿರ್ಮಿಸಿರುವ ಹಿನ್ನೆಲೆಯಲ್ಲಿ ಈ ಪೂಜೆ ಆಯೋಜಿಸಲು ಮನವಿ ಮಾಡಿದರು.ಹಿಂದೆ ಮೂರು ಬಾರಿ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರ ೪೩೯೨ ದಿನಗಳ ದಾಖಲೆ ಮುರಿದು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರತಿಯೊಂದು ಹಳ್ಳಿ, ಪಟ್ಟಣ ಮತ್ತು ನಗರಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳಲ್ಲಿ ದೇಶಾಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಬೇಕು ಎಂದು ಅವರು ವಿನಂತಿಸಿದರು.ನೆಹರು ಅವರ ಕಾಲಘಟ್ಟ ಹಾಗೂ ಇಂದಿನ ಕಾಲಘಟ್ಟದಲ್ಲಿ ದೊಡ್ಡ ವ್ಯತ್ಯಾಸವಿದೆ. ಆ ಕಾಲದಲ್ಲಿ ಮಾಧ್ಯಮ ಹಾಗೂ ಪ್ರಚಾರದ ಪ್ರಭಾವ ಕಡಿಮೆ ಇದ್ದರೆ,…
ಉದಯರಶ್ಮಿ ದಿನಪತ್ರಿಕೆ ಧಾರವಾಡ: ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯನ್ನು ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ 2020 ರಲ್ಲಿ ಜಾರಿಗೊಳಿಸಿದ್ದು, ಮಾರ್ಚ-2030 ರವರೆಗೆ ಜಾರಿಯಲ್ಲಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಸ್ವ-ನಿಧಿ ಮಹೋತ್ಸವ, ನಗರ ಮಟ್ಟದಲ್ಲಿ ಲೋಕ ಕಲ್ಯಾಣ ಮೇಳ ಮತ್ತು ಜನಗಣತಿ ಪಟ್ಟಣಗಳಲ್ಲಿ ಸ್ವ-ನಿಧಿ ಮೇಳಗಳನ್ನು ಜೂನ್ 1, 2026 ರಿಂದ ಜೂನ್ 30, 2026 ರವರೆಗೆ ವಿಶೇಷ ಅಭಿಯಾನವನ್ನು ಆಯೋಜಿಸಲಾಗಿದೆ.ಆಸಕ್ತ ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿ ಪಡೆಯಲು ಆಧಾರ ಕಾರ್ಡ ಪ್ರತಿ (ಕುಟುಂಬದ ಸದಸ್ಯರ ಸಹಿ), ಮತದಾರರ ಗುರುತಿನ ಚೀಟಿ ಪ್ರತಿ, ಪಡಿತರ ಚೀಟಿ ಪ್ರತಿ, ಪಾಸಪೋರ್ಟ ಸೈಜ ಫೋಟೊ-3, ಕುಟುಂಬದ ಸದಸ್ಯರುಗಳು ಹೊಂದಿದ ಪೋಟೊ-2 (ಗುಂಪು ಫೋಟೊ), ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಪಾಸ್ ಪುಸ್ತಕ ಪ್ರತಿ, ಬೀದಿ ಬದಿ ವ್ಯಾಪಾರ ಮಾಡುವ ಸ್ಥಳದ 2 ಛಾಯಾ ಚಿತ್ರಗಳನ್ನು ಸಲ್ಲಿಸಬೇಕು.ಬೀದಿ ಬದಿ ವ್ಯಾಪಾರಿಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ವಿಮಾ ಸೌಲಭ್ಯವನ್ನು ವಿವಿಧ ಯೋಜನೆಯಡಿ…
ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ” ರಸ್ತೆ ಮಧ್ಯೆ ಕುಸಿದಿರುವ ಸೇತುವೆ ನವೀಕರಣ ಮಾಡಿ ಪುಣ್ಯ ಕಟ್ಕೊಳ್ಳಿ “ತಾಲೂಕಿನ ತುಬಚಿ ಗ್ರಾಮದಿಂದ ಜಮಖಂಡಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮಾರ್ಗ ಮಧ್ಯದಲ್ಲಿ ಸೇತುವೆಯು ಕುಸಿದು ಹೋಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ. ಕಳೆದ ವರ್ಷ ಸಪ್ಟಂಬರ್ 5ರಂದು ಕುಸಿದು ಸೇತುವೆ ಇನ್ನು ನವೀಕರಣಗೊಂಡಿಲ್ಲ. ರಸ್ತೆ ಪಕ್ಕದ ಮಣ್ಣು ಅಗೆದು ಗುಂಡಿ ಮುಚ್ಚಿರುವ ಅಧಿಕಾರಿಗಳು ಬೇಜವಾಬ್ದಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಮತ್ತು ಮಂಗಳವಾರ ಮಳೆಯಿಂದ ಮತ್ತಷ್ಟು ಸೇತುವೆ ಸಂಪೂರ್ಣ ಕುಸಿದು ಹೋಗಿದೆ ಸ್ವಲ್ಪ ರಸ್ತೆ ಪಕ್ಕಕ್ಕೆ ವಾಹನ ತೆಗೆದುಕೊಂಡರೆ ವಾಹನ ಪಲ್ಟಿ ಯಾಗುವುದು ಗ್ಯಾರಂಟಿ. ರಸ್ತೆ ತುಂಬಾ ತಿರುವು- ಮುರುವು ಇರುವುದರಿಂದ ವಾಹನ ಸವಾರರಿಗೆ ಮತ್ತಷ್ಟು ಭಯ ಹೆಚ್ಚಿಸಿದೆ.ಜಮಖಂಡಿ ತಾಲೂಕಿನ ತುಬಚಿ ಹಾಗೂ ಅಥಣಿ ತಾಲೂಕಿನ ಅನೇಕ ಗ್ರಾಮಗಳಿಂದ ಜಮಖಂಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ಡಾಂಬರೀಕರಣವಾಗಿ ಸುಮಾರು ವರ್ಷಗಳ ಪೂರ್ಣಗೊಳ್ಳದಿದ್ದರೂ ಈ ರಸ್ತೆಯು ಸಂಪೂರ್ಣ ಕಿತ್ತು ಹೋಗಿದ್ದರೂ ಅಧಿಕಾರಿಗಳು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಶಸ್ತ್ರ ಚಿಕಿತ್ಸಾ ತಜ್ಞ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗ ಮತ್ತು ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದೊಂದಿಗೆ ಜೂನ್ 9 ರಿಂದ ಜೂನ್ 15ರ ವರೆಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಸಪ್ತಾಹ ಆಯೋಜಿಸಲಾಗಿದೆ.ಈ ಸಪ್ತಾಹದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಶಸ್ತ್ರ ಚಿಕಿತ್ಸೆ ಆಧಾರಿತ ಕಾಯಿಲೆಗಳಾದ ಹರ್ನಿಯಾ, ಅಪೆಂಡಿಕ್ಸ್, ಹೈಡ್ರೋಸೀಲ, ಥೈರಾಯ್ಡ್, ಪಿತ್ತಕೋಶದ ಹರಳು, ಮೂಲವ್ಯಾಧಿ, ಸ್ತನದ ಗಂಟುಗಳು, ಬಾಯಿ ಮತ್ತು ಇನ್ನಿತರ ಕ್ಯಾನ್ಸರ್ ಸಂಬಂಧಿತ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.ಚಿಕಿತ್ಸೆ ಅಗತ್ಯವಿರುವ ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರು ಈ ಶಿಬಿರದ ಸದುಪಯೋಗ ಪಡೆಯಬೇಕು ಎಂದು ಕಾಲೇಜಿನ ಪ್ರಾಚಾರ್ಯೆ ಡಾ.ತೇಜಶ್ವಿನಿ ವಲ್ಲಭ ಮತ್ತು ಆಸ್ಪತ್ತೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೋಗಿಗಳು ಬರುವಾಗ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮತದಾರರ ಸಹಾಯವಾಣಿ ಸಂಖ್ಯೆ-೧೯೫೦ ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‌ಐಆರ್) ಕುರಿತು ಯಾವುದೇ ಮಾಹಿತಿ ಪಡೆಯಲು ಅಥವಾ ಈ ಕುರಿತು ಕುಂದುಕೊರತೆಗಳನ್ನು ದಾಖಲಿಸಲು ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಈ ಮೂಲಕ ಅಗತ್ಯ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಸಹಾಯವಾಣಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ಆರೋಗ್ಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕುರಿತು ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕಾರ್ಯ ಜೂ.೨೦ ರಿಂದ ಪ್ರಾರಂಭವಾಗಲಿದ್ದು, ಅಷ್ಟರೊಳಗಾಗಿ, ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವುದು ಅತಿ ಅವಶ್ಯಕವಾಗಿದ್ದು, ಇದರ ಪೂರ್ವಭಾವಿಯಾಗಿ ತಾಲೂಕಾವಾರು ತರಬೇತುದಾರರಿಗೆ ತರಬೇತಿಯನ್ನು ಏರ್ಪಡಿಸಲಾಗಿದೆ ಎಂದ ಅವರು, ಇಲ್ಲಿ ಪೂರ್ಣ ಪ್ರಮಾಣದ ತರಬೇತಿ ಪಡೆದುಕೊಂಡು ಪರಿಣಾಮಕಾರಿಯಾಗಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಬೇಕು ಎಂದರು. ೨೦೦೨ರ ಮತದಾರರ ಪಟ್ಟಿಯನ್ನು…
ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ತಡೆಯಲು “ಜಿಲ್ಲಾ ಶುಲ್ಕ ಪರಿಶೀಲನಾ ಸಮಿತಿ” ರಚನೆ ಮಾಡಲು ಆಪ್ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.15 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಶುಲ್ಕವನ್ನು ಹೆಚ್ಚಿಸುತ್ತಿರುವ ಕ್ರಮವನ್ನು ಖಂಡಿಸಿ, ಆಮ್ ಆದ್ಮಿ ಪಾರ್ಟಿ (ಎಎಪಿ) ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ನೇತೃತ್ವದಲ್ಲಿ, ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದರು.ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ “ಜಿಲ್ಲೆಯ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳು ಈಗಾಗಲೇ ಬೆಲೆ ಏರಿಕೆಯ ಹೊರೆ ಹೊತ್ತಿದ್ದು, ಇಂತಹ ಸಂದರ್ಭದಲ್ಲಿ ವಿಜಯಪುರದ ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೊರಿಸುತ್ತಿದೆ” ಎಂದು ಅವರು ಆರೋಪಿಸಿದರು.”ಕರ್ನಾಟಕ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳು ಗರಿಷ್ಠ ಶೇ.5 ರವರೆಗೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಏರಿಕೆ ನಿಯಮಬಾಹಿರವಾಗಿದೆ.ಅಲ್ಲದೆ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಾದಕ ದ್ರವ್ಯ ವಿರೋಧಿ ಸಮಿತಿ ರಚಿಸಲಾಗುತ್ತಿದೆ. ಈ ಸಮಿತಿಯು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತಾಗಬೇಕೆಂದು ಪಿಆ ಗುರುಶಾಂತ ದಾಶ್ಯಾಳ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಔಷಧ ಮಹಾವಿದ್ಯಾಲಯದಲ್ಲಿ ಸ್ಥಳೀಯ ಪೊಲೀಸ್ ಠಾಣೆಯು ಮಂಗಳವಾರ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ವಿರೋಧಿ ಸಮಿತಿ ರಚನೆ ಸಭೆಯಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿ ತಂಡ ರಚನೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಾದಕ ದ್ರವ್ಯ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಕಾಲೇಜ್ ಮಟ್ಟದಲ್ಲಿ ತಂಡ ರಚನೆ ಮಾಡಿ ಮಾದಕ ದ್ರವ್ಯ ತಡೆಗಟ್ಟುವ ಸಲವಾಗಿ ಹಾಗೂ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕೆಲವು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಡ್ರಗ್ಸ್ ಬಗ್ಗೆ ತಮ್ಮ ಗಮನಕ್ಕೆ ಬಂದರೆ ನಮಗೆ ಯಾವುದೇ ಭಯ ಭೀತಿಯಿಲ್ಲದೆ ನಮ್ಮ ಗಮನಕ್ಕೆ ತಂದರೆ ಅವರ ಮೇಲೆ ಸೂಕ್ತ…
