Author: editor.udayarashmi@gmail.com

ಬಸವನಬಾಗೇವಾಡಿ: ರಾಜ್ಯದ ಬಜೆಟನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿಗೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರಿಂದ ರಾಜಕೀಯ, ವಿವಿಧ ಸಂಘಟನೆ ಮುಖಂಡರು ಸೇರಿದಂತೆ ಬಸವಾಭಿಮಾನಿಗಳು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಸುದ್ಧಿ ತಿಳಿಯುತ್ತಿದ್ದಂತೆ ಕೆಲವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಸಂತಸ ಹಂಚಿಕೊಂಡರು. ಬಹು ದಿನಗಳ ಬೇಡಿಕೆಯಾಗಿದ್ದ ಪ್ರತ್ಯೇಕ ಪ್ರಾಧಿಕಾರ ರಚನೆ ಘೋಷಣೆಯನ್ನು ಬಜೆಟ್ ನಲ್ಲಿ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹಾಗೂ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ತಿಳಿಸಿದರು.ಬಸವನಬಾಗೇವಾಡಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಕಾಂಗ್ರೆಸ್ ಬ್ಲಾಕ್ ಘಟಕದ ಅಧ್ಯಕ್ಷ ಸುರೇಶ ಹಾರಿವಾಳ, ಬಸವೇಶ್ವರ ಅಂತರಾಷ್ಟ್ರೀಯ ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಬಂಜಾರ ಸಮಾಜದ ಮುಖಂಡ ರವಿ ರಾಠೋಡ, ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ತಾಲೂಕು ಸರ್ಕಾರಿ ನೌಕರರ ಸಂಘದ…

Read More

ಕಲಕೇರಿ: ಗ್ರಾಮದ ಮೈಬೂಬಬಾಷಾ ಬಂದಗೀಸಾಬ ಮನಗೂಳಿ ಅವರನ್ನು ದಿಗ್ವಿಜಯ ಭಾರತ ಪಕ್ಷದ ವಿಜಯಪುರ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕಗಿಂಡಿದ್ದಾರೆ, ಈ ಕುರಿತಂತೆ ದಿಗ್ವಿಜಯ ಭಾರತ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ.ಅರವಿಂದ ರಾಜೀವ ಅವರು ನೇಮಕಾತಿ ಆದೇಶ ನೀಡಿದ್ದಾರೆ.

Read More

ಕಲಕೇರಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಮೌಲ್ಯಗಳನ್ನು ರೂಡಿಸಿಕೊಳ್ಳಬೇಕು ಇದರಿಂದ ಬದುಕು ಸುಂದರವಾಗುತ್ತದೆ. ಮೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರೀತ್ರೆಗಳನ್ನು ಓದುವುದರ ಜೊತೆಗೆ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಸಾಹೇಬಗೌಡ ಬಿರಾದಾರ ತಿಳಗೂಳ ಹೆಳಿದರು.ಕಲಕೇರಿ ಗ್ರಾಮದ ಎಸ್‌ಎಂವಿವಿ ಸಂಘದ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯಲ್ಲ್ಲಿ ಹಮ್ಮಿಕೊಂಡ ಎಸ್‌ಎಸ್‌ಎಲ್‌ಸಿ ವಿಧ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದಿನ ದಿನಗಳಲ್ಲಿ ಸಮಾಜದಲ್ಲಿ ಮಾನವೀಯ ಮೌಲ್ಯಗಳೇ ಕಾಣೆಯಾಗುತ್ತಿವೆ. ಇವುಗಳನ್ನು ಮತ್ತೆ ಮರುಸ್ಥಾಪಿಸುವಲ್ಲಿ ಇಂದಿನ ವಿದ್ಯಾರ್ಥಿಗಳೆಲ್ಲರೂ ಶ್ರಮಿಸಬೇಕಿದೆ, ನಾನೂ ಕೂಡಾ ಈ ಬಸವೇಶ್ವರ ಶಾಲೆಯ ವಿಧ್ಯಾರ್ಥಿಯಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳುತ್ತೇನೆ, ಪ್ರತಿಯೊಬ್ಬ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಶ್ರಮ ಪಟ್ಟು ಅಭ್ಯಾಸ ಮಾಡಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿ ಕಲಿತ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಈ ಸಂದರ್ಭದಲ್ಲಿ ಅವರು ಹೆಳಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಗುರುಮರುಳಾಧ್ಯರ…

Read More

ವಿಜಯಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮುದ್ದೇಬಿಹಾಳ ತಾಲ್ಲೂಕಿನ ಹಿರಿಹೊಳಿ ತಟದ ಅಯ್ಯನಗುಡಿ ಶ್ರೀ ಗಂಗಾಧರೇಶ್ವರ ಜಾತ್ರೆಯು ಫೆಬ್ರವರಿ ೧೮ ರಿಂದ ೨೧ ವರೆಗೆ ನಾಲ್ಕು ದಿವಸ ನಡೆಯುವುದು.ಈ ಭಾಗದ ಹಿಂದಿನ ಸಂಸ್ಥಾನಿಕರಾದ ಬಲದಿನ್ನಿ ನಾಡಗೌಡ್ರ ಯಜಮಾನಿಕೆಯಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಜಾನಪದ, ಸಂಗೀತ,ನಾಟಕ, ವಸ್ತು ಪ್ರದರ್ಶನ, ಮತ್ತು ಜಾನುವಾರು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾಂಸ್ಕೃತಿಕ ಲೋಕ ಅನಾವರಣಗೊಳ್ಳಲಿದೆ.ಲಿಂಗೈಕ್ಯ ಶಂಕರರಾವ್ ಎನ್ ನಾಡಗೌಡ್ರ ವೇದಿಕೆಯಲ್ಲಿ ಶ್ರೀಮಂತ ಸೋಮಶೇಖರ್ ಎಸ್ ನಾಡಗೌಡ್ರ ಅದ್ಯಕ್ಷತೆಯಲ್ಲಿ ದಿನಾಂಕ ೧೮.೨.೨೦೨೪ ರವಿವಾರ ರಂದು ಬೆಳಗ್ಗೆ ನಾಲತವಾಡ ಪಟ್ಟಣದಲ್ಲಿ ಪಲ್ಲಕ್ಕಿ ಮತ್ತು ಕಳಸೋತ್ಸವ ಮೆರವಣಿಗೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ರಾಜ್ಯಮಟ್ಟದ ಜನಪದ ಕಲಾತಂಡಗಳಾದ ಹುಬ್ಬಳ್ಳಿ ಜಗ್ಗಲಿಗೆ, ಮಂಗಳೂರು ಜೋಗತಿ ನೃತ್ಯ, ಸಾರವಾಡ ಗಾರುಡಿಗೊಂಬೆ, ಉಪ್ಪಲದಿನ್ನಿ ಹೆಜ್ಜೆಮೇಳ, ಬಬಲೇಶ್ವರ ಡೊಳ್ಳುಕುಣಿತ ಸೇರಿದಂತೆ ಹಲಗೆಮಜಲು,ಹಲಗೆವಾದನ, ಶಹನಾಯಿ, ಕಲಾತಂಡಗಳು ಮತ್ತು ನಾಲತವಾಡ ಪಟ್ಟಣದ ಎಲ್ಲಾ ಶಾಲಾ ಕಾಲೇಜುಗಳಿಂದ ಸ್ಥಬ್ಧ ಚಿತ್ರಗಳ ಮೆರವಣಿಗೆ. ಸಂಜೆ ೫ ಗಂಟೆಗೆ…

Read More

ಮುದ್ದೇಬಿಹಾಳ: ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಿಜಯಪುರ, ಮಾತೋಶ್ರೀ ಗಂಗಮ್ಮ ವೀರಪ್ಪ ಚಿನಿವಾರ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ, ಸೌಟ್ಸ್ & ಗೈಡ್ಸ್, ಎನ್.ಎಸ್.ಎಸ್. ಮತ್ತು ಭಾರತೀಯ ಯೂತ್ ರೆಡ್ ಕ್ರಾಸ್, ಎಚ್ ಡಿ ಎಫ್ ಸಿ ಬ್ಯಾಂಕ್ ಲಿಮಿಟೆಡ್ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಪಟ್ಟಣದ ಎಂಜಿವ್ಹಿಸಿ ಕಾಲೇಜಿನಲ್ಲಿ ಫೆ.೧೯ ರಂದು ಬೆಳಿಗ್ಗೆ ೧೦ ಗಂಟೆಗೆ ರಕ್ತದಾನದ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರಕ್ತದಾನಿಗಳು ೯೪೪೮೧೫೦೩೦೪, ೯೭೩೧೦೪೧೯೭೨, ೯೬೨೦೭೮೩೭೮೮, ೮೧೪೭೧೨೮೯೯೭ ಈ ನಂಬರ್ ಗಳನ್ನು ಸಂಪರ್ಕಿಸಬಹುದಾಗಿ ಪ್ರಕಟಣೆತಿಳಿಸಿದೆ.

Read More

ಜಿಲ್ಲಾ ಮಟ್ಟದ ಕುಡಿವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಸೂಚನೆ ವಿಜಯಪುರ: ಜಿಲ್ಲೆ ಸೇರಿದಂತೆ ವಿಜಯಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತುರ್ತಾಗಿ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣೆ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದಾದ್ಯಂತ ಬರಗಾಲವಿರುವುದರಿಂದ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಬಂದ ಕಡೆಗಳಲ್ಲಿ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಕ್ರಮ ವಹಿಸಬೇಕು. ಬೊರವೆಲ್ ಕೊರೆಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳುವುದರಿಂದ ಪರ್ಯಾಯವಾಗಿ ಇದ್ದ ಮೂಲಗಳಿಂದಲೇ ಟ್ಯಾಂಕರ್ ಮೂಲಕ ತುರ್ತಾಗಿ ನೀರು ಒದಗಿಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿಜಯಪುರ ನಗರದ ಕುಡಿಯುವ ನೀರಿನ ಸಮಸ್ಯೆ…

Read More

ಭೂ ಸುರಕ್ಷಾ ಯೋಜನೆಯಡಿಯ ಅಭಿಲೇಖಾಲಯದ ದಾಖಲೆಗಳು ವಿಜಯಪುರ: ಭೂ ಸುರಕ್ಷಾ ಯೋಜನೆಯಡಿಯಲ್ಲಿ ಅಭಿಲೇಖಾಲಯದ ಎಲ್ಲ ದಾಖಲೆಗಳ ಗಣಕೀಕರಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಮೂಲ ಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.ಶನಿವಾರ ನಗರದ ಮಿನಿವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ದಾಖಲೆಗಳ ಡಿಜಿಟಲೀಕರಣದಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದು ತಾಲೂಕು ಕಚೇರಿಯನ್ನು ೧೦೦ ದಿನಗಳೊಳಗಾಗಿ ಸಂಪೂರ್ಣ ಗಣಕೀಕರಣಗೊಳಿಸಲು ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ ಜಿಲ್ಲೆಯ ವಿಜಯಪುರ ತಾಲೂಕನ್ನು ಈ ಕಾರ್ಯಕ್ರಮದಡಿ ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳ ದಾಖಲೆಗಳು ಆಧುನೀಕರಣ ಯೋಜನೆಯಡಿ ಡಿಜಿಟಲೀಕರಣಗೊಳ್ಳಲಿವೆ ಎಂದು ಅವರು ಹೇಳಿದರು.ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಪ್ರಮುಖ ದಾಖಲೆಗಳ ಗಣಕೀಕರಣಗೊಳಿಸುವ ನಿಟ್ಟಿನಲ್ಲಿ ದಾಖಲೆಗಳ ಇಂಡೆಕ್ಸಿಂಗ್, ಕ್ಯಾಟಲಾಗಿಂಗ್ ಹಾಗೂ ಡಾಟಾ ಎಂಟ್ರಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಕಂದಾಯ ದಾಖಲೆಗಳ ಗಣಕೀಕರಣ ತಂತ್ರಾಂಶದಲ್ಲಿ ದಾಖಲೆಗಳನ್ನು ಅಪಲೋಡ್ ಮಾಡಲು ರಾಜ್ಯದ ಪ್ರತಿ ಅಭಿಲೇಖಾಲಯದ ವಿಷಯ…

Read More

ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿದ ಸಚಿವ ಎಂ.ಬಿ. ಪಾಟೀಲ ಅಭಿಮತ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಅಣ್ಣ ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ. ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಮೂಲ ಸೌಲಭ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ, ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ ಮನವಿ ಸಲ್ಲಿಸಿದ ಕ್ಷಣವೇ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲು ಅವರು ಒಪ್ಪಿಗೆ ಸೂಚಿಸಿದರು. ೧೨ನೇ ಶತಮಾನದಲ್ಲಿ ಬಸವಣ್ಣ ಅವರು ಪ್ರತಿಪಾದಿಸಿದ ಜಾತಿರಹಿತ ಸಮಾಜ, ಕಾಯಕದ ಮಹತ್ವ, ವರ್ಗರಹಿತ ಸಮಾಜದ ಕನಸು ಕಂಡು ನಮ್ಮ ನಡೆನುಡಿಗಳಲ್ಲಿ ಭಿನ್ನತೆ ಇರಬಾರದು ಎಂಬುದನ್ನು ಬಸವಾದಿ ಪ್ರಮಥರು ತಮ್ಮ ವಚನದ ಮೂಲಕ ಸಾರಿದ್ದಾರೆ. ಅವರ…

Read More

ವಿವಿಧ ಗ್ರಾಮಗಳ ರೈತರು ಜಾನುವಾರಗಳೊಂದಿಗೆ ಕೆರೆಯಲ್ಲಿ ಧರಣಿ ಕುಳಿತು ವಿನೂತನ ಪ್ರತಿಭಟನೆ! ದೇವರಹಿಪ್ಪರಗಿ: ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ಕೂಡಲೇ ನೀರು ಹರಿಸಿ, ಕೆರೆ ತುಂಬಿಸುವುದರ ಮೂಲಕ ರೈತ ಸಮುದಾಯದ ನೆರವಿಗೆ ಧಾವಿಸುವಂತೆ ಆಗ್ರಹಿಸಿ ಮುಳಸಾವಳಗಿ, ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಕೆರೆಯಲ್ಲಿ ಜಾನುವಾರಗಳೊಂದಿಗೆ ಧರಣಿ ಕುಳಿತು ವಿನೂತನ ಪ್ರತಿಭಟನೆ ಕೈಗೊಂಡರು.ಮತಕ್ಷೇತ್ರದ ಇಂಗಳಗಿ, ನಿವಾಳಖೇಡ, ಮುಳಸಾವಳಗಿ ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ, ಗ್ರಾಮಗಳು ರೈತರು ಶನಿವಾರ ಇಂಡಿ ರಸ್ತೆಯಲ್ಲಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ಕೆರೆಗೆ ತೆರಳಿ ಸುಡು ಬಿಸಿಲಿನಲ್ಲಿ ಜಾನುವಾರಗಳೊಂದಿಗೆ ಧರಣಿ ಕುಳಿತರು.ಈ ಸಂದರ್ಭದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಹಾಗೂ ಸಾಹೇಬಗೌಡ ರೆಡ್ಡಿ ಮಾತನಾಡಿ, ಚಿಮ್ಮಲಗಿ ಕಾಲುವೆಗೆ ನೀರು ಹರಿಸಲಾಗಿದ್ದು, ಕೆರೆಗಳಲ್ಲಿ ಶೇ ೬೦ ರಷ್ಟು ನೀರಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ವಾಸ್ತವಿಕವಾಗಿ ಕೆರೆಗಳಿಗೆ ಬಂದು ನೋಡಿದರೆ ಶೇ೨ ರಷ್ಟು ನೀರಿಲ್ಲ. ಕಳೆದ ಎರಡು ತಿಂಗಳುಗಳಿಂದ ರೈತರು ನಿರಂತರ ಹೋರಾಟ…

Read More

ಇಂಡಿ: ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕರು ಅನುಭವ ಮಂಟಪದ ಮೂಲಕ ಲಿಂಗ, ಜಾತಿ, ಸಮಾನತೆ ಒತ್ತು ಕೊಟ್ಟವರು. ಸಮಾಜದಲ್ಲಿ ಮೇಲು ಕೀಳೆಂಬ ಭಾವನೆ ಇರಬಾರದು. ಎಲ್ಲರೂ ಸಮಾನರು ಎಂದು ಬೋಧಿಸಿ ಆಚರಣೆ ಮಾಡಿದವರು ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಶನಿವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಗೊಳಿಸಿ ಅವರು ಮಾತನಾಡಿದರು.ಶಿಕ್ಷಕ ಬಸವರಾಜ ಗೊರನಾಳ ಮಾತನಾಡಿ, ಅಂದಿನ ಕಾಲದಲ್ಲಿ ಕಾಯಕ, ಸ್ತ್ರೀ ಸಮಾನತೆ, ಮಹತ್ವ ಕೊಡುವ ಮೂಲಕ ಜಾತಿಯತೆಯನ್ನು ಅಳಿಸಲು ಪ್ರಧಾನ ಆಧ್ಯತೆಯನ್ನು ನೀಡಿ ಭಕ್ತಿ ಮಾರ್ಗ ಪ್ರತಿಪಾದಿಸಿದ ಅಪರೂಪದ ವಿಶ್ವಗುರು ಎಂದರು.ಕರ‍್ಯಕ್ರಮದಲ್ಲಿ ತಹಸೀಲ್ದಾರ ಮಂಜುಳಾ ನಾಯಕ, ಶಿರಸ್ತೆದಾರ ಎಸ್.ಆರ್. ಮುಜಗೊಂಡ, ಎಂ.ಪಿ. ಕೊಡತೆ, ಬಸವರಾಜ ರಾಹೂರ, ಎಚ್.ಎಚ್. ಗುನ್ನಾಪುರ, ಆರ್.ಬಿ. ಮೂಗಿ, ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ, ಭೀಮಾಶಂಕರ ಕಾರ್ಖಾನೆ ನಿರ್ದೇಶಕ ಜಟ್ಟೆಪ್ಪ ರವಳಿ ಮತ್ತಿತರಿದ್ದರು.

Read More