Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಮಕ್ಕಳ ಮನೋದೈಹಿಕ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯವಾಗಿವೆ ಎಂದು ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್ (ಚಬನೂರ) ಹೇಳಿದರು.ಪಟ್ಟಣದಲ್ಲಿ ಗುರುವಾರ ಜರುಗಿದ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ೧೯ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಸರ್ವಾಂಗೀಣ ವಿಕಾಸದಲ್ಲಿ ಶಿಕ್ಷಣ ಪಾತ್ರ ದೊಡ್ಡದು ಈ ಸಂದರ್ಭದಲ್ಲಿ ಪಾಲಕರು ಹಾಗೂ ಶಿಕ್ಷಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದರು.ಖ್ಯಾತ ವೈದ್ಯ ಆರ್.ಆರ್.ನಾಯಿಕ್, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್. ಬಸವರೆಡ್ಡಿ, ಬಿ.ಕೆ.ಪಾಟೀಲ ಮಾತನಾಡಿದರುಸಂಸ್ಥೆಯ ಅಧ್ಯಕ್ಷ ನಾನಾಗೌಡ ಪಾಟೀಲ ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರು ಅಕೀಲ ಬಾಗವಾನ ವರದಿ ವಾಚಿಸಿದರು. ಗ್ರಾಮ ಪಂಚಾಯಿತಿ ಮಾಜಿಸದಸ್ಯ ಶಂಕರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ವಿವಿಧ ಸ್ಫರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ಜರುಗಿದ ಸಿದ್ದೇಶ್ವರ ಸ್ವಾಮೀಜಿಯವರ ಸಂತನೆಂದರೆ ಎಂಬ…
ಕೆಂಭಾವಿ: ಸುರಪೂರ ಘಟಕದಿಂದ ಕೂಡಲಗಿಗೆ ಬರುವ ಎಲ್ಲಾ ಬಸ್ ಗಳು ಮುದನೂರ್ ಮುಖಾಂತರ ಕೆಂಭಾವಿಗೆ ಮತ್ತು ಸುರಪೂರದಿಂದ ಬೈಚಬಾಳ್ ದ ವರೆಗೂ ಎಲ್ಲಾ ಬಸ್ ಗಳು ಹುಣಸಗಿವರೆಗೂ ಬಿಡುವಂತೆ ತೆಗ್ಗೆಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.ತೆಗ್ಗೆಳ್ಳಿ ಹಾಗೂ ಶಾಖಾಪೂರ್ ಗ್ರಾಮಸ್ಥರು ದಿನ ನಿತ್ಯವೂ ಹುಣಸಗಿ ಹಾಗೂ ಕೆಂಭಾವಿಗೆ ಹೊಗುತ್ತಾರೆ. ಹೀಗಾಗಿ ತೆಗ್ಗೆಳ್ಳಿ ಹಾಗೂ ಶಾಖಾಪೂರ ಗ್ರಾಮಸ್ಥರು ದಿನನಿತ್ಯವೂ ಯಾತನೆ ಅನುಭವಿಸುತ್ತಿದ್ದಾರೆ ಎಂಬುದು ಗ್ರಾಮಸ್ಥರ ಅಳಲಾಗಿದೆ. ಪ್ರತಿ ನಿತ್ಯವೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸುಮಾರು ನಾಲ್ಕೈದು ಕಿಲೋಮೀಟರ್ ನಡೆದುಕೊಂಡೇ ಹೋಗಬೇಕಾಗಿದೆ. ಹೀಗಾಗಿ ತೆಗ್ಗೆಳ್ಳಿ ಗ್ರಾಮಸ್ಥರು ಸುರಪೂರದಿಂದ ಬರುವ ಬಸ್ ಗಳು ಹುಣಸಗಿವರೆಗೆ ಸಂಚರಿಸುವಂತೆ ಮನವಿ ಮಾಡಿದ್ದಾರೆ. ಒಂದು ವೇಳೆ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಈ ಸಂದರ್ಭದಲ್ಲಿ ತೆಗ್ಗೆಳ್ಳಿ ಗ್ರಾಮದ ಮುಖಂಡರಾದ ತಾರಾನಾಥ್ ಇನಾಂದಾರ, ಸಿದ್ದಣ್ಣ ಪಾಸೋಡಿ, ಬಸವರಾಜ್ ಪೂಜಾರಿ, ಭೀಮಶಾ ರೂಗಿ, ನಂದನಗೌಡ ಬೆನಕನಾಳ್, ಮಲ್ಲು ಗೋನಾಲ್, ಸೇರಿದಂತೆ ಹಲವರಿದ್ದರು.
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಭಾಭವನಕ್ಕೆ ನಗರದ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು.ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲರಿಗೆ ಬಸವಾದಿ ಶರಣರ ವಚನಗಳ ಪುಸ್ತಕಗಳನ್ನ ನೀಡಿ ಮುಖ್ಯಮಂತ್ರಿಗಳಿಗೂ ಹಾಗೂ ಸಚಿವರಾದ ಎಂ ಬಿ ಪಾಟೀಲರಿಗೂ ಜಿಲ್ಲೆಯ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.ಮಕ್ಕಳನ್ನು ನೋಡಿ ಸಂತೋಷ ಪಟ್ಟ ಸಚಿವರು ಮಕ್ಕಳೊಂದಿಗೆ ನಿಂತು ಭಾವಚಿತ್ರ ತೆಗೆಸಿಕೊಂಡು ಸಂಭ್ರಮಿಸಿದರು. ನಾಡಿನ ಮನೆ ಮನೆಗಳಲ್ಲಿ ಮತ್ತು ಮಕ್ಕಳ ಹೃದಯದಲ್ಲಿ ವಚನ ಸಾಹಿತ್ಯದ ಸಂಸ್ಕಾರ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಆಕ್ಸ್ಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಓ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್…
Udayarashmi kannada daily newspaper
ತಿಕೋಟಾ: ಗ್ರಾಮಸ್ಥರ ಸಹಕಾರದಿಂದ ಅಭಿವೃದ್ಧಿ ಹೊಂದುತ್ತಿರುವ, ಉತ್ತಮ ಕಲಿಕಾ ವಾತಾವರಣ, ಅಗತ್ಯ ಮೂಲಭೂತ ಸೌಲಭ್ಯ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ತಾಲ್ಲೂಕಿನ ಜಾಧವನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಬೇಟಿ ನೀಡಿ ಅಭಿನಂದನಾ ಪತ್ರ ವಿತರಿಸಿ ಶುಕ್ರವಾರ ಶಿಕ್ಷಕರಿಗೆ ಸನ್ಮಾನಿಸಿದರು.ಗ್ರಾಮಸ್ಥರ ಹಾಗೂ ಶಿಕ್ಷಕರ ಸಹಕಾರದಿಂದ ನಿರ್ಮಾಣವಾದ ಶಾಲಾ ಗೇಟ್ (ದ್ವಾರಬಾಗಿಲು) ಉದ್ಘಾಟನೆಗೊಳಿಸಿ ಮಾತನಾಡಿದ ಬಳೋಲಮಟ್ಟಿ ಗಡಿಭಾಗದ ಹೆಚ್ಚಾಗಿ ಮರಾಠಾ ಜನಾಂಗ ಇರುವ ಈ ಪ್ರದೇಶದಲ್ಲಿ ಕನ್ನಡ ಶಾಲೆಯ ಅಭಿವೃದ್ಧಿ ಕಂಡು ಹರ್ಷವ್ಯಕ್ತಪಡಿಸಿದರು. ಶಾಲೆಯೂ ಸಂಸ್ಕಾರಯುತ ಉತ್ತಮ ಪರಿಸರ ಹೊಂದಿದ್ದು, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಹಾಗೂ ಗ್ರಾಮಸ್ಥರು ಶ್ರಮಿಸಿದ್ದಾರೆ ಎಂದರು.ಶಾಲೆಯ ಬದ್ರ ಬುನಾದಿಗೆ ಹಿರಿಯ ಶಿಕ್ಷಕ ಡಿ.ಎನ್.ಘೋಣಸಗಿ ಅವರು ಬಹಳ ಶ್ರಮಿಸಿದ್ದಾರೆ. ಎ.ಎಸ್. ಅನಂತಪೂರ ಗುರುಗಳು ಮಕ್ಕಳಿಗೆ ಕಲಿಸುವ ಯೋಗ, ಉಪನ್ಯಾಸ, ಭಗವದ್ಗೀತೆ ಅಭ್ಯಾಸ ಹಾಗೂ ಮಕ್ಕಳಿಗೆ ಜೀವನದ ಉತ್ತಮ ಮೌಲ್ಯಗಳ ಕಲಿಕೆ ಉಪಯುಕ್ತವಾಗಿದೆ. ಶಾಲೆಯ ಎಲ್ಲ ಸಿಬ್ಬಂದಿ ಮಕ್ಕಳಿಗೆ ಉತ್ತಮವಾದ ಶಿಕ್ಷಣ…
ಮುದ್ದೇಬಿಹಾಳ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೋರ್ವ ತನ್ನ ಕಾರನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಸದ್ದು ಮಾಡಿದೆ.ಶಾಸಕರ ಮಾದರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಈ ಆರೋಪ ಹೊತ್ತಿದ್ದಾರೆ. ತಮ್ಮ ನಾಲ್ಕು ಚಕ್ರದ ವಾಹನವನ್ನು ಇಬ್ಬರು ವಿದ್ಯಾರ್ಥಿಗಳ ಕಡೆಯಿಂದ ಸ್ವಚ್ಛಗೊಳಿಸಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಶಾಲಾ ಆವರಣದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ನೀರಿನ ಪೈಪ್ ಹಿಡಿದು ಕಾರು ತೊಳೆಯುತ್ತಿರುವ ಮತ್ತು ಟವಲ್ ನಿಂದ ಕಾರನ್ನು ಉಜ್ಜುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿ ಮುಖ್ಯ ಶಿಕ್ಷಕನ ಮೇಲಿರುವ ಆರೋಪಕ್ಕೆ ಸಾಕ್ಷಿಯಾಗಿದೆ.
ವಿಜಯಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಅಂಬೇಡ್ಕರ್ ವಾದ ) ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಕೊಳಚೆ ನಿರ್ಮೂಲನೆ ಆಡಳಿತ ಅಧಿಕಾರಿ ಹೊಸಲಟ್ಟಿಯವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ನಡೆಸಿದ ಆಮರಣ ಉಪವಾಸ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.ಈ ವೇಳೆ ದಸಂಸ ( ಅಂಬೇಡ್ಕರ್ ವಾದ ) ಜಿಲ್ಲಾ ಸಂಘಟನಾ ಸಂಚಾಲಕ ಯಲ್ಲಪ್ಪ ಕಾಂಬಳೆ ಮಾತನಾಡಿ, ವಿಜಯಪುರ – ಬಾಗಲಕೋಟ ಜಿಲ್ಲೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು 25 ರಿಂದ 30 ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರು ವಿಜಯಪುರ ಮತ್ತು ಬಾಗಲಕೋಟ ನಗರದಲ್ಲಿ ಬಡಜನರಿಗೆ ವಿತರಿಸುವ ನಿವೇಶನಗಳ ಕಾಮಗಾರಿಯನ್ನು ಅತ್ಯಂತ ಕಳಪೆ ಮಟ್ಟದಲ್ಲಿ ಕಾಮಗಾರಿ ನಿರ್ವಹಣೆ ಮಾಡಿರುತ್ತಾರೆ. ಸರ್ಕಾರದ ಎಸ್ಟಿಮೆಂಟ್ ಪ್ರಕಾರ ಯಾವುದೇ ಕಾಮಗಾರಿ ನಡೆದಿರುವುದಿಲ್ಲ. ನಾವು ಹಲವಾರು ಬಾರಿ ಆಫೀಸಿಗೆ ಬಂದು ವಿಚಾರಿಸಿದರೂ ನಮಗೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಆದಕಾರಣ ಇಂತಹ ಭ್ರಷ್ಟ ಅಧಿಕಾರಿಯನ್ನು ತಾವು ವಿಚಾರಣೆ ಮಾಡಿ ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.
ಮುದ್ದೇಬಿಹಾಳ: ಡಾ.ಬಾಬಾ ಸಾಹೇಬರು ಮತ್ತು ಅವರ ತತ್ವಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದು ತಾಲೂಕು ದಂಡಾಧಿಕಾರಿ ಬಸವರಾಜ ನಾಗರಾಳ ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ತಾಲೂಕಾಡಳಿತದ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರತೀ ವರ್ಷ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಬಂದರೆ ಸಾಕು ಡಿಜೆ ಹಚ್ಚಿ ವಿಜ್ರಂಭಣೆಯಿಂದ ಆಚರಿಸುತ್ತೇವೆ. ಪಟ್ಟಣದಲ್ಲಿನ ಎಲ್ಲ ಪುತ್ಥಳಿಗಳನ್ನು ಅಲಂಕರಿಸುತ್ತೇವೆ. ಪೂಜೆ ಸಲ್ಲಿಸುತ್ತೇವೆ. ಆದರೆ ಬಾಬಾ ಸಾಹೇಬರ ಆದರ್ಶ ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಹಿಂಜರಿಯುತ್ತೇವೆ. ನಮ್ಮನ್ನು ನಾವು ಸುಧಾರಿಸಿಕೊಳ್ಳಲು ಪ್ರತೀ ವರ್ಷ ಡಾ.ಬಾಬಾ ಸಾಹೇಬರ ಜಯಂತಿಯ ದಿನದಂದು ಅವರ ಆದರ್ಶ ಮತ್ತು ತತ್ವಗಳ ಪೈಕಿ ಒಂದೊಂದನ್ನು ಅಳವಡಿಸಿಕೊಳ್ಳುತ್ತ ಹೋದರೆ ಹತ್ತು ವರ್ಷಗಳ ನಂತರ ಇಡೀ ಪ್ರಪಂಚಕ್ಕೆ ನಮ್ಮ ದೇಶ ಮಾದರಿಯಾಗುತ್ತದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಂ.ಎಚ್.ಹಾಲಣ್ಣನವರ ವಕೀಲರು ಮಾತನಾಡಿದರು.ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮೇಶ ಲಮಾಣಿ ಮಾತನಾಡಿದರು.ಉಪನ್ಯಾಸಕ ಬಸವರಾಜ…
ಆಲಮಟ್ಟಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಿ, ಅವುಗಳ ಮೂಲಕ ಕೆರೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.ರಾಮಲಿಂಗೇಶ್ವರ ದೇವಸ್ಥಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ಹಲಗೆ ವಾದನ ಮೂಲಕ ಮೆರವಣಿಗೆ ನಡೆಸಿ ನೀರು ಹರಿಸಲು ಆಗ್ರಹಿಸಿದರು.ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟಿಸಿದ ರೈತ ಸಂಘದ ಕಾರ್ಯಕರ್ತರು ಕೆಬಿಜೆಎನ್ ಎಲ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ಅಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ ಆಲೂರ, ನಿಡಗುಂದಿ ತಾಲ್ಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ ಮಾತನಾಡಿ, ಬಿಸಲಿನ ಪ್ರಖರತೆ ಹೆಚ್ಚಿದ್ದು, ಜಲಾಶಯದಲ್ಲಿಯೂ ನೀರಿನ ಸಂಗ್ರಹ ಸಾಕಷ್ಟಿದೆ. ಕೆರೆಗಳು ಸಂಪೂರ್ಣ ಒಣಗಿವೆ, ಅಂತರ್ಜಲ ಮಟ್ಟವೂ ಕುಸಿದಿದೆ. ತಕ್ಷಣವೇ ಕಾಲುವೆಗೆ ನೀರು ಹರಿಸಬೇಕು, ಅದರ ಮೂಲಕ ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.ಮನವಿ ಸ್ವೀಕರಿಸಿದ ಮುಖ್ಯ ಎಂಜಿನಿಯರ್ ಎಚ್.ಎನ್. ಶ್ರೀನಿವಾಸ, ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ…
