Author: editor.udayarashmi@gmail.com

ಸಚಿವ ಶಿವಾನಂದ ಪಾಟೀಲರ ಮನವಿಗೆ ಸಿಎಂ ಸ್ಪಂದನೆ | ಹಲವು ಯೋಜನೆ ಪ್ರಕಟ ಬೆಂಗಳೂರು: ಬಸವಣ್ಣನ ಜನ್ಮಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಸೇರಿದಂತೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರ ಮನವಿಗೆ ಸ್ಪಂದಿಸಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ, ಬಸವನ ಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶೀತಲಗೃಹ ಘೋಷಿಸಲಾಗಿದೆ. ಮುಳವಾಡ ಏತ ನೀರಾವರಿಯ ಮೂರನೇ ಹಂತದ ಯೋಜನೆಗಳಿಗೂ ಅನುದಾನ ಒದಗಿಸಲಾಗಿದೆ. ಎಪಿಎಂಸಿಗಳ ಎಲ್ಲ ಕಾರ್ಯಚಟುವಟಿಕೆಗಳನ್ನು ೧೦ ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೈಜ್ ಮಾಡಲು, ಹಲವು ಎಪಿಎಂಸಿಗಳಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್ ಸ್ಥಾಪನೆ ಮಾಡಿ ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಎಲ್ಲ ಎಪಿಎಂಸಿಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ, ಪೆಟ್ರೋಲ್ ಬಂಕ್‌ಗಳ ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.ಎಪಿಎಂಸಿಗಳನ್ನು ಬಲಪಡಿಸುವ ಮೂಲಕ ರೈತರು…

Read More

ಸಿಂದಗಿ: ನಮ್ಮ ತಂದೆ ದಿ.ಎಂ.ಸಿ.ಮನಗೂಳಿ ಅವರ ಕನಸಿನ ಕೂಸಾಗಿರುವ ಆಲಮೇಲದಲ್ಲಿ ತೋಟಗಾರಿಕೆ ಮಹಾವಿದ್ಯಾಲಯವು ಇಂದಿನ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಇದು ನಮ್ಮ ತಾಲೂಕಿನ ಜನತೆಗೆ ಅತೀವ ಸಂತಸ ತಂದ ವಿಚಾರವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.ಈ ಸಂತಸಕ್ಕೆ ಕಾರಣರಾದ ಸಿಎಂ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಸಚಿವ ಶಿವಾನಂದ ಪಾಟೀಲ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಮನಗೂಳಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.ಈ ವೇಳೆ ದಯಾನಂದಗೌಡ, ಹೊನ್ನಪ್ಪಗೌಡ ಬಿರಾದಾರ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

Read More

ಸಿಂದಗಿ: “ಈ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ, ದಿ.ಎಂ.ಸಿ.ಮನಗೂಳಿ ಮಂಜೂರು ಮಾಡಿಸಿದ್ದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ೧೫ನೇ ಬಜೆಟ್‌ನಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ ಮಂಜೂರಾತಿ ಮಾಡಿಸಿ ತಂದೆಯ ಆಸೆಯನ್ನು ಕೇವಲ ೮ ತಿಂಗಳಲ್ಲಿ ನೆರವೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದಾರೆ.” – ಸಿದ್ದು ಮಲ್ಲೇದಕಾಂಗ್ರೆಸ್ ಮುಖಂಡ, ಸಿಂದಗಿ

Read More

ಸಿಂದಗಿ: “ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್ ಬಡವರ ಕಾಳಜಿಯುಳ್ಳದ್ದು. ಮಹಿಳೆಯರು, ಬಡವರು, ಅಲ್ಪಸಂಖ್ಯಾತರು, ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ವಿಶೇಷ ಅನುದಾನ ಘೋಷಿಸಿದ್ದು, ಇದು ಅಭಿವೃದ್ಧಿ ಪರವಾಗಿರುವ ಬಜೆಟ್ ಆಗಿದೆ. ಶಿಕ್ಷಣ,ಮೀನುಗಾರಿಕೆ, ಪ್ರವಾಸದ ಅಭಿವೃದ್ಧಿಗೆ ಅನುದಾನ ಕಾಯ್ದಿರಿಸಿದ್ದು, ಇದು ಬಡವರ ಪರವಾದ ಬಜೆಟ್ ಆಗಿದೆ. ಅಲ್ಲದೇ ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡಲಾಗಿದ್ದು, ಈ ಭಾಗದ ರೈತರ ಬಹುದಿನದ ಆಸೆ ಈಡೇರಿಸಿದ ಮುಖ್ಯಮಂತ್ರಿ ಹಾಗೂ ಶಾಸಕ ಅಶೋಕ ಮನಗೂಳಿ ಅವರಿಗೂ ಧನ್ಯವಾದಗಳು.” – ವೈ.ಸಿ.ಮಯೂರವಿಜಯಪುರ ಜಿಲ್ಲಾ ಸಂಚಾಲಕರು, ದಲಿತ ಸಂಘರ್ಷ ಸಮಿತಿ

Read More

ಸಿಂದಗಿ: “ಇದು ತೆರಿಗೆ ಮತ್ತು ಚುನಾವಣೆ ಬಜೆಟ್ ಆಗಿದೆ. ಆಲಮೇಲ ತಾಲೂಕಿಗೆ ತೋಟಗಾರಿಗೆ ಕಾಲೇಜು ನೀಡಿದ್ದು ಸ್ವಾಗತಾರ್ಹ. ಆದರೆ ಬಜೆಟ್ ಘೋಷಣೆಯಾಗಿಯೇ ಉಳಿಯಬಾರದು. ಕುಮಾರಸ್ವಾಮಿ ಅವರು ಸಿಎಂ ಇರುವಾಗ ಅವರ ಬಜೆಟ್‌ನಲ್ಲಿ ಘೋಷಣೆಯಾಗಿತ್ತು. ಈಗಲಾದರೂ ತೋಟಗಾರಿಕೆ ಕಾಲೇಜು ಘೋಷಣೆಯಾಗಿ ಉಳಿಯದೇ ಕಾರ್ಯರೂಪಕ್ಕೆ ಬರಬೇಕು.” – ರಮೇಶ ಭೂಸನೂರಮಾಜಿ ಶಾಸಕರು

Read More

ಸಿಂದಗಿ: ಬೃಹತ್ ಆಗಿರುವ ೫ ಗ್ಯಾರಂಟಿಗಳ ಮಧ್ಯದಲ್ಲಿಯೂ ಕೃಷಿ, ಸಾಮಾಜಿಕ, ಹೈನುಗಾರಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ನೀರಾವರಿ, ಮೂಲಭೂತ ಸೌಕರ‍್ಯ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಪರಿಗಣನೆಗೆ ತಗೆದುಕೊಂಡು ಎಲ್ಲ ಕ್ಷೇತ್ರಗಳ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಬಜೆಟ್‌ದಲ್ಲಿ ಹಣ ಮೀಸಲಿರಿಸಿದ್ದಾರೆ. ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯವನ್ನು ನೀಡಿ ರಾಜ್ಯದ ಗೌರವವನ್ನು ಎತ್ತಿ ಹಿಡಿದಿದ್ದಾರೆ.” – ಅಶೋಕ ಮನಗೂಳಿಶಾಸಕರು

Read More

ವಿಜಯಪುರ: ಇದೊಂದು ನಿರಾಶದಾಯಕ, ಸುಳ್ಳಿನ ಕಂತೆ ಬಜೆಟ್ ಆಗಿದೆ. ಇದರಿಂದ ರಾಜ್ಯದ ಒಂದು ವರ್ಷದ ಭವಿಷ್ಯ ಇಲ್ಲ. ಯಾವುದೇ ಅಭಿವೃದ್ಧಿ ನಿರೀಕ್ಷೆ ಇಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರದ ಬಳಿ ಹಣವೇ ಇಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಘೋಷಿಸಿದನ್ನೆ ಮರಳಿ ಬಹುತೇಕ ಯೋಜನೆಗಳನ್ನು ಘೋಷಣೆ ಮಾಡಿದ್ದು, ಯಾವುದೇ ರೀತಿಯ ಹೊಸ ಯೋಜನೆಗಳು ಈ ಬಜೆಟ್ ದಲ್ಲಿ ಇಲ್ಲ. ಕೃಷ್ಣಾ ನೀರಾವರಿಗೆ ಒಂದೂ ಪೈಸೆ ಹಣ ಇಟ್ಟಿಲ್ಲ. ವಿಜಯಪುರ ಜಿಲ್ಲೆಗೆ ಬೊಮ್ಮಾಯಿಯವರು ಘೋಷಣೆ ಮಾಡಿದ್ದ ಟೆಕ್ಸಟೈಲ್ ಪಾರ್ಕ್, ವೈನ್ ಬೋರ್ಡ್ ಗೂ ಯಾವುದೇ ಅನುದಾನ ಕೊಟ್ಟಿಲ್ಲ.ಉತ್ತರ, ದಕ್ಷಿಣ, ಕಲ್ಯಾಣ ಯಾವ ಭಾಗಕ್ಕೂ ಏನನ್ನೂ ನೀಡದೆ, ಬರೀ ಅಲ್ಪಸಂಖ್ಯಾತರ ಯೋಜನೆಗಳಿಗೆ ಹೆಚ್ಚು ಒತ್ತು ಕೊಟ್ಟಿರುವ ಸಿದ್ದರಾಮಯ್ಯನವರು, ಒಂದೇ ವರ್ಗ ಹಿಡಿದುಕೊಂಡು ಹೊರಟಿದ್ದಾರೆ ಎನ್ನುವುದು ತೋರಿಸಿದೆ. ಹಿಂದುಳಿದ, ದಲಿತ, ಬಡ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ. ಈ ವರ್ಗದ ಜನ ತಕ್ಕ ಪಾಠ…

Read More

ವಿಜಯಪುರ: ಹಣಕಾಸು ಖಾತೆ ಹೊಂದಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ೨೦೨೪-೨೫ನೇ ಸಾಲಿನ ಬಜೆಟ್ ಅಭಿವೃದ್ಧಿಪರ ಬಜೆಟ್ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ರಾಜು ಆಲಗೂರ ಹೇಳಿದ್ದಾರೆ.೨೭ ಸಾವಿರ ಕೋಟಿ ರೂಪಾಯಿ ರಾಜ್ಯದ ರೈತರಿಗೆ ಸಾಲ ವಿತರಣೆಗಾಗಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಹೆಚ್ಚು ಒತ್ತು, ಪ.ಜಾ/ಪ.ಪಂ. ಜನಾಂಗದವರ ಅಭಿವೃದ್ಧಿಗೆ ನಿರೀಕ್ಷೆಗಿಂತಲೂ ಹೆಚ್ಚಿನ ಅನುದಾನ ಮೀಸಲು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ, ಗ್ಯಾರಂಟಿ ಯೋಜನೆಗಳ ಸಂಪೂರ್ಣ ಅನುಷ್ಠಾನದೊಂದಿಗೆ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ. ವಿಜಯಪುರಕ್ಕೆ ತೋಟಗಾರಿಕೆ ವಿದ್ಯಾಲಯ ಮಂಜೂರು ಮಾಡಿರುವುದು ಹಾಗೂ ವಿಮಾನ ನಿಲ್ದಾಣಕ್ಕೆ ೯೪ ಕೋಟಿ ರೂ. ಹೆಚ್ಚುವರಿ ಹಣ ಮಂಜೂರು ಮಾಡಿದ್ದನ್ನು ಸ್ವಾಗತಿಸುತ್ತಾ ಒಟ್ಟಾರೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್, ರಾಜ್ಯದ ಮತ್ತು ಸರ್ವಜನರ ಕಲ್ಯಾಣವನ್ನು ಒಳಗೊಂಡಿದೆ ಎಂದು ರಾಜು ಆಲಗೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದ ೬ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ https:sevasindhuservices.karnataka.gov.inಮೂಲಕ ನೇರವಾಗಿ ದಿನಾಂಕ : ೧೬-೦೨-೨೦೨೪ ರಿಂದ ೧೫-೦೩-೨೦೨೪ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.೭೫ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ.೨೫ರಷ್ಟು ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ವಸತಿ ಶಾಲೆಗಳಲ್ಲಿ ಶೇ.೫೦ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರಿಸಿದೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ, ಉಚಿತ ಸಮವಸ್ತç, ಪಠ್ಯಪುಸ್ತಕ, ನೋಟ್‌ಬುಕ್, ಲೇಖನಿ ಸಾಮಗ್ರಿಗಳು, ಸ್ಕೂಲ್ ಬ್ಯಾಗ್ ಹಾಗೂ ಊಟ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ…

Read More

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಮತ್ತು ನಿರ್ಮಿತಿ ಕೇಂದ್ರದಡಿ ನಿರ್ಮಾಣದ ವಸತಿ (ಡಾರ್ಮಿಟರಿ) ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸಂಪೂರ್ಣ ಪರಿಶೀಲನೆ ನಡೆಸಿ, ಈ ಕಾಮಗಾರಿ ಈಗಾಗಲೇ ವಿಳಂಬವಾಗಿದ್ದು, ಬೇಗ ಪೂರ್ಣಗೊಳಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಗೆ ಹಾಗೂ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಹೊಂಗಯ್ಯ, ಬಾಸ್ಕೆಟ್ ಬಾಲ್ ಕೋಚ್ ಮಲ್ಲನಗೌಡ ಪಾಟೀಲ, ಸೈಕ್ಲಿಂಗ್ ಕೋಚ್ ಅಲಕಾ ಫಡತರೆ, ಅನಂತ ದೇಸಾಯಿ, ಎಸ್.ಬಿ ಕಡಕಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More