Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಮತ್ತು ಸಿಂದಗಿ ಹೋಬಳಿಯ ರೈತರಿಗೆ ಫೆ.೬ ಹಾಗೂ ೮ ರಂದು ಕ್ರಮವಾಗಿ ರೈತ ಸಂಪರ್ಕ ಕೇಂದ್ರ ಆಲಮೇಲ ಮತ್ತು ರೈತ ಸಂಪರ್ಕ ಕೇಂದ್ರ ಸಿಂದಗಿಯಲ್ಲಿ ಸೂಕ್ಷö್ಮ ನೀರಾವರಿ ಘಟಕಗಳು ಉಪಯೋಗಗಳು ಮತ್ತು ನಿರ್ವಹಣೆ ಕುರಿತು ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತೀಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಮತ್ತು ಸಿಂದಗಿ ಹೋಬಳಿಯ ರೈತರಿಗೆ ಫೆ.೬ ಹಾಗೂ ೮ ರಂದು ಕ್ರಮವಾಗಿ ರೈತ ಸಂಪರ್ಕ ಕೇಂದ್ರ ಆಲಮೇಲ ಮತ್ತು ರೈತ ಸಂಪರ್ಕ ಕೇಂದ್ರ ಸಿಂದಗಿಯಲ್ಲಿ ಸೂಕ್ಷö್ಮ ನೀರಾವರಿ ಘಟಕಗಳು ಉಪಯೋಗಗಳು ಮತ್ತು ನಿರ್ವಹಣೆ ಕುರಿತು ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತೀಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಖ್ಯೆಗೆ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಯೋಜನೆಯನ್ನು ವಿಸ್ತರಿಸಲು ಫ್ರಾಂಚೈಸಿಗಳ ಮೂಲಕ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ೦೩, ಇಂಡಿ ೦೩, ಮುದ್ದೇಬಿಹಾಳ ೦೨, ಸಿಂದಗಿ ೦೨, ತಾಳಿಕೋಟೆ ೦೨ ಹಾಗೂ ಆಲಮೇಲ ವ್ಯಾಪ್ತಿಯಲ್ಲಿ ೦೧ ಸೇರಿದಂತೆ ಒಟ್ಟು ೧೩ ಫ್ರಾಂಚೈಸಿ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ : ೧೫-೦೨-೨೦೨೪ ರೊಳಗಾಗಿ https://www.karnatakaone.gov.in/Public/FranchiseeTerms ಲಿಂಕ್ ಮೂಲಕ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಿಜಯಪುರ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರು, ಕಕ್ಷಿದಾರರು ಉಚಿತವಾಗಿ ಕಾನೂನು ಸಲಹೆ ಹಾಗೂ ನೆರವು ಪಡೆಯಲು ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ :೧೫೧೦೦ ಆರಂಭಿಸಿದ್ದು, ಈ ಸಹಾಯವಾಣಿಗೆ ಕರೆ ಮಾಡಿ ಕಾನೂನು ನೆರವಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಅನುಭವಿ ವಕೀಲರಿಂದ ಕನ್ನಡದಲ್ಲಿಯೇ ಪಡೆಯಬಹುದಾಗಿದೆ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲತಾಯಿ ಧೋರಣೆ ವಿರೋಧಿಸಿ ಕೇಂದ್ರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿಯನ್ನು ಆಹ್ವಾನಿಸಿದ ಸಿಎಂ ಬೆಂಗಳೂರು: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ, ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದೆ ಸುಮ್ಮನಿದ್ದರೆ ಕನ್ನಡಿಗರಿಗೆ ದ್ರೋಹ ಮಾಡಿದಂತಾಗುತ್ತದೆ’ ಎಂದು ಹೇಳಿದ್ದಾರೆ.‘ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು…
ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಗೆ ಚಾಲನೆ ನೀಡಿದ ಮಾಜಿ ಎಂಎಲ್ಸಿ ಅರುಣ ಶಹಾಪೂರ ಆರೋಪ ವಿಜಯಪುರ: ಯಾವ ಅಸುರ ಶಕ್ತಿಗಳು ರಾಮ ಮಂದಿರ ನಿರ್ಮಾಣ ವಿರೋಧಿಸಿದವೋ, ಕರಸೇವಕರನ್ನು ದಮನಿಸಿದವೋ ಆ ಶಕ್ತಿಗಳೇ ಇಂದು ಜೈ ಶ್ರೀರಾಮ ಘೋಷಣೆ ಮೊಳಗಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಹೇಳಿದರು.ವಿಜಯಪುರದ ಸಾಯಿ ವಿಹಾರದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕರಸೇವಕರನ್ನು ಗುಂಡಿಕ್ಕಿದ್ದ ಶಕ್ತಿಗಳು ಸಹ ಇಂದು ರಾಮ ನಾಮವನ್ನು ಜಪಿಸುತ್ತಿವೆ, ಯಾವ ಮುಖ್ಯಮಂತ್ರಿ ತಿಲಕ ಹಚ್ಚಿಕೊಳ್ಳಲು ನಿರಾಕರಿಸುತ್ತಿದ್ದರೋ ಅವರು ಸಹ ರಾಮನ ಸ್ಮರಿಸುತ್ತಿದ್ದಾರೆ, ಬನಾಯೇಂಗೆ ಮಂದಿರ ಎಂಬ ಹಾಡನ್ನು ಹಾಡಿದರೆ ಕೇಸು ದಾಖಲಿಸುವ ಪರಿಸ್ಥಿತಿ ಇತ್ತು, ಅಂದು ಆ ರೀತಿ ರಾಮ ಭಕ್ತರನ್ನು ಕಾಡಿದವರೇ ಇಂದು ರಾಮನನ್ನು ನೆನೆಯುತ್ತಿದ್ದಾರೆ ಎಂದರು.ರಾಮ ಮಂದಿರ ನಿರ್ಮಾಣದ ಮೂಲಕ ಭಾರತ ವಿಶ್ವ ಗುರುವಾಗಿ ಶೀಘ್ರದಲ್ಲಿಯೇ ಅಲಂಕೃತವಾಗಲಿದೆ ಎಂದರು.ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಮಯ ನಿಗದಿಯಲ್ಲೂ ಧರ್ಮದ ಲೇಪನ ಮಾಡಿರುವ ಕಾಂಗ್ರೆಸ್ ಮುಸ್ಲಿಂರ ತುಷ್ಟೀಕರಣ…
ಫೆ.೧೫ರಂದು ಶ್ರೀ ಸಂತ ಸೇವಾಲಾಲ್ & ಫೆ.೧೬ರಂದು ಸವಿತಾ ಮಹರ್ಷಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ, ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆಬ್ರವರಿ ೧೬ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ, ಫೆಬ್ರವರಿ೧೦ರಂದು ಕಾಯಕ ಶರಣರ ಜಯಂತಿ ಆಚರಣೆಯನ್ನು ಬೆಳಿಗ್ಗೆ ೯:೩೦ಕ್ಕೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ ೧೧ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ಏರ್ಪಡಿಸಿ, ಓರ್ವ ಉಪನ್ಯಾಸಕರನ್ನು ಆಹ್ವಾನಿಸಿ, ಮಹನೀಯರ ಕುರಿತ ಉಪನ್ಯಾಸ ನೀಡಲು ತೀರ್ಮಾನಿಸಲಾಯಿತು.ಫೆಬ್ರವರಿ೧೫ರಂದು ಶ್ರೀ ಸಂತ ಸೇವಾಲಾಲ್ ಜಯಂತಿ : ಜಯಂತಿ ಕಾರ್ಯಕ್ರಮದ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ೧೧ ಗಂಟೆಗೆ ಭಾವಚಿತ್ರದ ಮೆರವಣಿಗೆ ಹಾಗೂ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ,…
ಫೆ.೨೬-೨೭ ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ವಿಜಯಪುರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.೨೬ ಹಾಗೂ ೨೭ ರಂದು ರಾಜ್ಯ ಮಟ್ಟದ ಯುವ ಬೃಹತ್ ಉದ್ಯೋಗ ಮೇಳ-೨೦೨೪ ಅಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳು ಭಾಗವಹಿಸಲು ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರಾದ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಗಳ ಸಭಾ ಭವನದಲ್ಲಿ ಜರುಗಿದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯಲ್ಲಿ, ಸದರಿ ಉದ್ಯೋಗ https://skillconnect.kaushalkar.com ಪೋರ್ಟಲ್‌ದಲ್ಲಿ ನೋಂದಣಿ ಮಾಡಿಸುವಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಇವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಜಿಲ್ಲೆಯ ನಿರುದ್ಯೋಗಿಗಳು ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ದೊರೆಯಲು ಅನುಕೂಲವಾಗುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಸ್ವಚ್ಛವಾಹಿನಿಯ…
ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ.೧೧ರಂದು ಚುನಾವಣೆ ಇಂಡಿ: ತಾಲೂಕಿನ ಮರಗೂರ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆಬ್ರವರಿ ೧೧ರಂದು ಚುನಾವಣೆ ನಿಗದಿಯಾಗಿದ್ದು, ಫೆಬ್ರವರಿ ೫ ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.ಸೋಮವಾರ ೩೩ ಜನ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು, ಪ್ರಮುಖವಾಗಿ ಮಾಜಿ ಶಾಸಕ ರವಿಕಾಂತ ಪಾಟೀಲ್ ಅವರು ಸಹ ತಮ್ಮ ನಾಮಪತ್ರ ಹಿಂಪಡೆದಿದ್ದು ಅವರ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸುವಂತಾಯಿತು.ಸ್ಥಳೀಯ ಶಾಸಕ ಹಾಗೂ ಕಾರ್ಖಾನೆಯ ಅಧ್ಯಕ್ಷರಾಗಿರುವ ಯಶವಂತರಾಯಗೌಡ ಪಾಟೀಲ್ ಅವರು ಅವಿರೋಧ ಆಯ್ಕೆ ಮಾಡುವ ಪ್ರಯತ್ನದಲ್ಲಿ ಇದ್ದರೂ ಅವರ ಪ್ರಯತ್ನ ಕೈಗೂಡಲಿಲ್ಲ, ಸಾಮಾನ್ಯ ಸ್ಥಾನದಲ್ಲಿ ಐದು ಸ್ಥಾನಗಳಿಗೆ ೮ ಜನ ಅಭ್ಯರ್ಥಿಗಳು ಉಳಿದುಕೊಂಡಿದ್ದು ನಾಳೆಯಿಂದಲೇ ಚುನಾವಣಾ ಪ್ರಚಾರ ಪ್ರಾರಂಭವಾಗಲಿದೆ.ಕಣದಲ್ಲಿರುವವರಲ್ಲಿ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು ಇರುವ ಕಾರಣ ಚುನಾವಣೆ ಕಾವು ದಿನಿ ದಿನೇ ಹೆಚ್ಚಾಗುವ ಸಾಧ್ಯತೆ ಇದೆ.ಸಾಮಾನ್ಯ ವರ್ಗದಲ್ಲಿ-ಚಂದ್ರಕಾಂತ್ ಬೋರಗಿ, ನಾಗನಾಥ ಬಿರಾದಾರ, ಬಸವರಾಜ ಧನಶ್ರೀ, ಮಲ್ಲನಗೌಡ ಪಾಟೀಲ, ಯಶವಂತರಾಯಗೌಡ ಪಾಟೀಲ, ರೇವಗೊಂಡಪ್ಪ ಪಾಟೀಲ, ಸಿದ್ದಣ್ಣ…
ಇಂಡಿ: ತಾಲ್ಲೂಕಿನ ಆಳೂರ ಗ್ರಾಮದ ಶಿವಕುಮಾರ್ ಗಂಗಯ್ಯ ಹಿರೇಮಠ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದ್ದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.ಏಷ್ಯಾ ಇಂಟರ್ನ್ಯಾಷನಲ್ ಟೀಚರ್ ರಿಸರ್ಚ್ ಯೂನಿವರ್ಸಿಟಿಯಲ್ಲಿ ವೇದಗಾಮ ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ವಿಶೇಷ ಸಾಧನೆಗೈದಿದ್ದ ಅವರನ್ನು ನವನಗರ ಹುಬ್ಬಳ್ಳಿಯಲ್ಲಿರುವ ಕಾಶಿ ಜಗದ್ಗುರುಗಳ ಶಾಖಾ ಪೀಠವಾದ ಜಂಗಮವಾಡಿ ಶ್ರೀಮಠದ ಆವರಣದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.ಹಿರಿಯ ಸಾಹಿತಿ, ಸಂಗೀತಗಾರ ಡಾ. ರಾಜಗುರು ಕಲಕೇರಿ, ಡಾ. ವಿರೂಪಾಕ್ಷ ದೇವರು, ಜಂಗಮವಾಡಿ ಮಠದ ಡಾ. ರಾಜೇಂದ್ರ ಶಿವಾಚಾರ್ಯರು ಉಪಸ್ಥಿತರಿದ್ದರು.
