Author: editor.udayarashmi@gmail.com

ಮುದ್ದೇಬಿಹಾಳ: ಪಟ್ಟಣದಲ್ಲಿ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬಂಜಾರ ಸಮುದಾಯದ ಮುಖಂಡರು ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದ ಬೃಹತ್ ಟೆಂಟ್ ಬಳಿ ದಿಢೀರನೆ ಪ್ರತಿಭಟನೆಗೆ ಇಳಿದರು.ಈ ವೇಳೆ ಮಾತನಾಡಿದ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ನಾಯಕ, ಸಿದ್ದರಾಮಯ್ಯ ಸರ್ಕಾರ ಕೇವಲ ವೋಟ್ ಬ್ಯಾಂಕ್ ಅಸ್ತ್ರ ಬಳಸುತ್ತಿದೆ. ಮುಖ್ಯಮಂತ್ರಿಗಳ ಸಾಮಾಜಿಕ ನ್ಯಾಯ ಕೇವಲ ಭಾಷಣಕಷ್ಟೇ ಮಾತ್ರ ಸೀಮಿತವಾಗಿದೆ. ತಾವೂ ಒಬ್ಬ ಹಿಂದುಳಿದ ಸಮುದಾಯದಿಂದ ಬಂದವರಾಗಿ ಅತ್ಯಂತ ಹಿಂದುಳಿದ ಸಮಾಜವಾದ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ತರಾತುರಿಯಾಗಿ ಒಳ ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಪ್ರಯತ್ನಿಸುತ್ತಿರುವ ಈ ಸರ್ಕಾರದ ನಡೆ ಅವೈಜ್ಞಾನಿಕವಾಗಿದೆ. ಇದನ್ನು ರಾಜ್ಯದಾದ್ಯಂತ ಬಂಜಾರ ಸಮುದಾಯ ತೀವ್ರವಾಗಿ ಖಂಡಿಸುತ್ತದೆ ಎಂದರು.ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದಾಗ ಪೊಲೀಸರು ಬಂಜಾರ ಸಮುದಾಯದ ಮುಖಂಡರನ್ನು ಬಂಧಿಸಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಬಂಜಾರ…

Read More

ಸಿಂದಗಿ: ಗ್ರಾಮದಲ್ಲಿರುವ ಪ್ರತಿ ಕುಟುಂಬ ನರೇಗಾ ಯೋಜನೆಯ ಸಹಾಯಧನ ಪಡೆಯಲು ಅರ್ಹತೆ ಹೊಂದಿದ್ದು ಕೃಷಿ ಹೊಂಡ, ಬದು ನಿರ್ಮಾಣ, ಕುರಿ ಶೆಡ್, ದನದ ಶೆಡ್, ಕೋಳಿ ಶೆಡ್, ಇಂಗು ಗುಂಡಿ ಹೀಗೆ ಹಲವು ವ್ಯಯಕ್ತಿಕ ಯೋಜನೆಯ ಕಾಮಗಾರಿಗಳ ಸದುಪಯೋಗ ಪಡೆಯಬೇಕು ಎಂದು ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ ಹೇಳಿದರು.ತಾಲೂಕಿನ ಬಂದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಓತಿಹಾಳ ಗ್ರಾಮದ ಅಮೃತ ಸರೋವರ ದಡದಲ್ಲಿ ಹಮ್ಮಿಕೊಂಡ ನರೇಗಾ ದಿವಸ ಆಚರಣೆ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬೇರೆ ಕಡೆ ಕೆಲಸಕ್ಕೆ ಹೋಗಬಯಸುವವರು ಕೂಡಾ ಈ ಯೋಜನೆಯಲ್ಲಿ ಕೆಲಸ ಮಾಡಿ ದಿನಕ್ಕೆ ೩೧೬ ರೂ. ಗಳಂತೆ ವರ್ಷಕ್ಕೆ ಒಂದು ಕುಟುಂಬ ೧೦೦ ದಿನ ಕೆಲಸ ಮಾಡಲು ಅರ್ಹರರು ಆದ್ದರಿಂದ ಇದರ ಪ್ರಯೋಜನ ಎಲ್ಲರೂ ಪಡೆಯಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ್ ಶಹಾಪುರ, ಕಾರ್ಯದರ್ಶಿ ರಾಜಾಸಾಬ್ ಮುಜಾವರ್, ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಕೇಶುರಾಯ ಮಕಣಪುರ, ಮಲ್ಲು ನಾಕೇತ್ತಿನ,…

Read More

ವಿಜಯಪುರದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಉದ್ಘಾಟನೆ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಶುಭಶ್ರೀ ಹೋಟೆಲ್ ಸಭಾಂಗಣದಲ್ಲಿ ನಿಕಾನ್ ಛಾಯಾಗ್ರಹಣ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತುಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ಹರ್ಷಗೌಡ ಪಾಟೀಲ್, ಜಗತ್ತಿನ ಎಲ್ಲಾ ನೋವು-ನಲಿವುಗಳ ಜೊತೆಯಲ್ಲಿ ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು. ಛಾಯಾಗ್ರಾಹಕರಿಗೆ ನಿಜವಾದ ದಾಖಲುದಾರರು ಎಂದರೆ ತಪ್ಪಾಗಲಾರದು. ಇವರ ವೃತ್ತಿ ಗೌರವಕ್ಕೆ ಎಲ್ಲರು ಸಹಕರಿಸೋಣ. ಛಾಯಾಗ್ರಾಹಕರು ತಮ್ಮಲ್ಲಿ ನೋವಿದ್ದರೂ ಎದುರು ಇರುವವರಿಗೆ ಸ್ಮಾಯಿಲ್ ಪ್ಲೀಸ್ ಎಂದು ಅವರ ನಗುವನ್ನು ಸೆರೆಹಿಡಿಯುತ್ತಾರೆ. ಇಂತಹ ಛಾಯಾಗ್ರಾಹಕ ಕಲಾವಿದರಿಗೆ ನಾವು ಗೌರವಿಸಬೇಕು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ರಾಜ್ಯ ಕೆಪಿಎ ನಿರ್ದೇಶಕ ನಾಗರಾಜ್ ಟಿ. ಸಿ. ಮಾತನಾಡಿ, ರಾಜ್ಯದಲ್ಲಿ ಛಾಯಾಗ್ರಾಹಕರ ಸಂಘಟನೆ ಮಾಡುತ್ತಿದ್ದು, ವಿಜಯಪುರ ಜಿಲ್ಲೆಯ ಛಾಯಾಗ್ರಾಹಕರು ಒಗ್ಗಟ್ಟಾಗಲು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಹಕರ ಸಂಘಕ್ಕೆ ಆಜೀವ ಸದಸ್ಯರಾಗಿ ರಾಜ್ಯ ಕೆಪಿಎದಿಂದ ಸಿಗುವ ಎಲ್ಲ ಸೌಲಭ್ಯಗಳಿಗೆ ಪಾಲುದಾರರಾಗಬೇಕೆಂದು ವಿನಂತಿಸಿಕೊಂಡರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ…

Read More

ಶಹಾಪುರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಶಹಾಪುರ: ನಗರದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾಹನ ಚಾಲನಾ ಕೌಶಲ್ಯ ತರಬೇತಿ ಶಿಬಿರ ಕಾರ್ಯಕ್ರಮ ನಡೆಸಲಾಯಿತು.ಸುರಕ್ಷತಾ ಮಾಸಚರಣೆಯಲ್ಲಿ ಕಲಬುರ್ಗಿ ಜಂಟಿ ಸಾರಿಗೆ ಆಯುಕ್ತರು ಸಿದ್ದಪ್ಪ ಕಲ್ಲೇರಿ ಹಾಗೂ ಬಸವರಾಜ್ ಕಡ್ಲಿ ಇವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಸಂಚಾರಿ ನಿಯಮ ಕಿರು ಪುಸ್ತಕವನ್ನು ರಾಜ್ಯಾಧ್ಯಕ್ಷ ಆನಂದ ವಿ. ಪಾಟೀಲ್ ಬಿಡುಗಡೆ ಮಾಡಿದರು.ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ಚಿಹ್ನೆಗಳ ಪಾಲನೆ ಮಾಡಬೇಕು. ರಸ್ತೆ ಸುರಕ್ಷತೆಯಲ್ಲಿ ಚಾಲಕನ ಕರ್ತವ್ಯ ಬಹಳ ಮುಖ್ಯವಾಗಿದೆ. ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಸಂಚಾರಿ ಚಿಹ್ನೆಗಳು, ಸಂಕೇತಗಳು, ನಿಯಮ ತಿಳಿದು ಇವುಗಳನ್ನು ತಪ್ಪದೇ ಪಾಲಿಸಬೇಕೆಂದು RTO ಮಿಲಿಂದಕುಮಾರ ಯಾದಗಿರಿ ಇವರು ಸೂಚಿಸಿದರು.ರಾಜ್ಯ ಉಪಾಧ್ಯಕ್ಷರಾದ ಯಲ್ಲಪ್ಪ ಬಿ. ದೊಡಮನಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಮರಳು ಸಿದ್ದಯ್ಯ ಹಿರೇಮಠ್, ಚಂದ್ರಶೇಖರ್ ಅರಬೋಳ, ಎಸ್. ಎಮ್. ಪಾಟೀಲ್, ಮಂಗಿಲಾಲ್ ಮಗನಲಾಲ್ ಜೈನ,…

Read More

ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಇಂದಿನಿಂದ ಪತ್ರಕರ್ತರ ಕಲರವ ದಾವಣಗೆರೆ: ಜಿಲ್ಲೆಯಾಗಿ ಮೊದಲ ಬಾರಿಗೆ ರಾಜ್ಯ ಮಟ್ಟದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಫೆ.3ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.ಮೆರವಣಿಗೆ ಪೂರ್ವದಲ್ಲಿ ಹರ್ಡೇಕರ್ ಮಂಜಪ್ಪ, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಂ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಅಂಬೇಡ್ಕರ್ ವೃತ್ದದಿಂದ ಮಾಧ್ಯಮದ ಮಿತ್ರರ ಬೃಹತ್ ಮೆರವಣಿಗೆ ನಡೆಯಲಿದ್ದು, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಆಯುಕ್ತರಾದ ರೇಣುಕಾ ಚಾಲನೆ ನೀಡಲಿದ್ದಾರೆ.ಸಾರೋಟನಲ್ಲಿ ಇರಿಸಲಾಗುವ ವೃಕ್ಷದ ಆಕೃತಿಯಲ್ಲಿ ಬರುವ ರಂಬೆ-ಕೊಂಬೆಗಳಲ್ಲಿ ಎಲ್ಲಾ ಪತ್ರಿಕೆಗಳ ಶಿರೋನಾಮೆಗಳನ್ನು ಬಿಂಬಿಸಲಾಗುವುದು. ಮೆರವಣಿಗೆಯಲ್ಲಿ ಕಲಾ ತಂಡಗಳು, ಆನೆ ಗಮನ ಸೆಳೆಯಲಿವೆ. ಪತ್ರಕರ್ತರು, ಸಾಹಿತಿಗಳು, ಕನ್ನಡಪರ ಹೋರಾಟಗಾರರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.ಉದ್ಘಾಟನೆ: ಮೆರವಣಿಗೆ ನಂತರ ಬೆಳಿಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಘನ ಉಪಸ್ಥಿತಿ ಮತ್ತು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ…

Read More

ಕೆಂಭಾವಿ: ರೈತ ಸಂಘದ ಹೋರಾಟಗಾರ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತದೇವಿಂದ್ರಪ್ಪ ಗೌಡ.ವಿ.ಪೊಲೀಸ ಪಾಟೀಲ ಮಾಲಗತ್ತಿ ಇವರನ್ನುಯಾದಗಿರಿ ಜಿಲ್ಲಾಧ್ಯಕ್ಷರಾಗಿ ಹಾಗೂ ಜಿಲ್ಲಾ ಗೌರವ ಅಧ್ಯಕ್ಷರಾಗಿ ಬಸವರಾಜಪ್ಪ ಗೌಡ. ಜಿ. ಮಾಲಿ ಪಾಟೀಲ ಹೆಮ್ಮಡಗಿ ಇವರನ್ನು ಆಯ್ಕೆ ಮಾಡಿ ವೇದಿಕೆ ರಾಜ್ಯಾಧ್ಯಕ್ಷವಿ. ಹನುಮಂತರಾಯಪ್ಪ ಆದೇಶ ಹೊರಡಿಸಿದ್ದಾರೆ.ವೇದಿಕೆಯ ನೀತಿ ನಿಯಮಗಳ ಅಡಿಯಲ್ಲಿ ಅಸಹಾಯಕರು, ಅಶಕ್ತರು, ರೈತರ ಸಾರ್ವಜನಿಕರ ಕೆಲಸ ಮಾಡುವುದು ಹಾಗೂ ವೇದಿಕೆ ಮೂಲ ಉದ್ದೇಶಗಳಹಿತ ಕಾಪಾಡುವುದು, ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಂಡು ಸಂಘಟನೆಗೆ ಒತ್ತು ನೀಡಲು ಆದೇಶ ನೀಡಲಾಗಿದೆ ಎಂದು ರಾಜ್ಯಾಧ್ಯಕ್ಷವಿ. ಹನುಮಂತರಾಯಪ್ಪತಿಳಿಸಿದ್ದಾರೆ.

Read More

ದಿ. ಡಾ. ಸಿ.ಆರ್.ಬಿದರಿ ಪುಣ್ಯಸ್ಮರಣೆ | ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸಾ ಶಿಬಿರ ವಿಜಯಪುರ: ದಿವಂಗತ ಡಾ. ಸಿ.ಆರ್.ಬಿದರಿ ಅವರ ಪುಣ್ಯಸ್ಮರಣೆ ಅಂಗವಾಗಿ ವಿಜಯಪುರ ತಾಲೂಕಿನ ಹೊನಗನಹಳ್ಳಿ ಮತ್ತು ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮಗಳಲ್ಲಿ ಮಹಿಳೆಯರು ಮತ್ತು ಚಿಕ್ಕಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.ಹೊನಗನಹಳ್ಳಿ ಗ್ರಾಮದ ಶ್ರೀ ಮಂಗಮ್ಮದೇವಿ ಪ್ರೌಢಶಾಲೆಯಲ್ಲಿ ನಡೆದ ಶಿಬಿರವನ್ನು ಶಶಿ ಬಿದರಿ ಉದ್ಘಾಟಿಸಿದರು.ಈ ಶಿಬಿರದಲ್ಲಿ ಪ್ರಸೂತಿ ಮತ್ತು ಸ್ರೀ ರೋಗ ವಿಭಾಗದ ಡಾ. ಶೋಭಾ ಶಿರಗೂರ ಮತ್ತು ಚಿಕ್ಕ ಮಕ್ಕಳ ವೈದ್ಯಕೀಯ ವಿಭಾಗದ ಡಾ. ಎಚ್. ಆರ್. ಬಿಜಾಪುರೆ ಅವರು ಒಟ್ಟು 187 ಜನರ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೇ, 13 ಜನರಿಗೆ ಹೆಚ್ಚಿನ ತಪಾಸಣೆಗೆ ವಿಜಯಪುರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಿದರು.ದೇವರಗೆಣ್ಣೂರ ಗ್ರಾಮದ ಮಹಲಕ್ಷ್ಷಿ ದೇವಸ್ಥಾನದ ಬಳಿ ಇರುವ ಯಾತ್ರಿ ನಿವಾಸದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಪ್ರಸೂತಿ ಮತ್ತು ಸ್ರೀ ರೋಗ ವಿಭಾಗದ ಡಾ. ಶ್ರೀದೇವಿ ಕೋರಿ ಮತ್ತು…

Read More

ವಿಜಯಪುರ: ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ಡಾ. ಸಿ. ಆರ್. ಬಿದರಿ ಅವರ ಹೆಸರಿನಲ್ಲಿ ಚರ್ಮಕ್ಯಾನ್ಸರ್ ಕ್ಲಿನಿಕ್ ಪ್ರಾರಂಭಿಸಲಾಗುವುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸ್ಕಿಲ್ಸ್ ಲ್ಯಾಬೊರೇಟರಿ ಕಟ್ಟಡದಲ್ಲಿರುವ ಸೆಂಟ್ ಫಾರ್ ಅಡ್ವಾನ್ಸಡ್ ಮೆಡಿಕಲ್ ಎಜುಕೇಶನ್ ಆಂಡ್ ರಿಸರ್ಚ್ ವಿಭಾಗದಲ್ಲಿ ಡಾ. ಸಿ. ಆರ್. ಬಿದರಿ ಅವರ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾದ ಕ್ಯಾನ್ಸರ್ ಕುರಿತು ರಾಜ್ಯ ಮಟ್ಟದ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯ ಅಭಿವೃದ್ಧಿಗೆ ಮತ್ತು ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಡಾ. ಸಿ. ಆರ್. ಬಿದರಿ ಅವರ ಪಾತ್ರ ಅಮೂಲ್ಯವಾಗಿದೆ. ತಮ್ಮ ಸೇವೆ ಮೂಲಕ ಮಕ್ಕಳು ಮತ್ತು ಯುವಕರು ವೈದ್ಯಕೀಯ ಶಿಕ್ಷಣ ಪಡೆಯಲು ಅವರು ಸ್ಪೂರ್ತಿಯಾಗಿದ್ದರು. ವಿಜಯಪುರ ಜಿಲ್ಲೆಯ ಜನರ ಸೇವೆಗಾಗಿಯೇ ತಮ್ಮ ವೈದ್ಯವೃತ್ತಿ ಜೀವನವನ್ನು ಮುಡುಪಾಗಿಟ್ಟಿದ್ದರು. ಅಷ್ಟೇ ಅಲ್ಲ, ವೈದ್ಯವೃತ್ತಿಯಲ್ಲಿ ಬಿಡುವಿಲ್ಲದ ಸಮಯದ ಮಧ್ಯೆಯು ಕುಟುಂಬ…

Read More

ವಿಜಯಪುರ: ಅಂತಾರಾಷ್ಟ್ರೀಯ ಖ್ಯಾತಿಯ ಅಥ್ಲೀಟ್ ಮತ್ತು ಖ್ಯಾತ ವೈದ್ಯ ದಿ. ಡಾ. ಸಿ. ಆರ್. ಬಿದರಿಯವರ ಪುಣ್ಯಸ್ಮರಣೆ ಅಂಗವಾಗಿ ಫೆಬ್ರುವರಿ 4 ರಂದು ರವಿವಾರ ಬಿ. ಎಲ್. ಡಿ. ಇ ಸಂಸ್ಥೆಯ ಅಂತರ ಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಆಯೋಜಿಸಲಾಗಿದ್ದು, ಬಿ.ಎಲ್.ಡಿ. ಸಂಸ್ಥೆಯ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯೂ ಆಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ ಆಟಗಾರ್ತಿ ರಾಜೇಶ್ವರ ಗಾಯಕವಾಡ ಉದ್ಘಾಟಿಸಲಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಮತ್ತು ಕ್ರೀಡಾ ನಿರ್ದೇಶಕ ಪ್ರೊ. ಎಸ್. ಎಸ್. ಕೋರಿ, ಫೆಬ್ರವರಿ 4 ರಂದು ಬೆಳಿಗ್ಗೆ 9 ಗಂಟೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆಯಲಿರುವ ಈ ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಹಿಳಾ…

Read More