Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾ|| ಬ್ರಿಜೇಶಕುಮಾರ ನೇತೃತ್ವದ ೨ನೇ ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು ೫೧೯.೬೦ಮೀ ದಿಂದ ೫೨೪.೨೫೬ಮೀಗೆ ನೀರು ನಿಲ್ಲಿಸಲು ಗೇಟ್ ಅಳವಡಿಸುವಂತೆ ಹಾಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವದು ನೀರಿನ ಹಂಚಿಕೆಯಲ್ಲಿ ಅವಳಿ ಜಿಲ್ಲೆಯ ರೈತರಿಗೆ ಆದ ಅನ್ಯಾಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ಮಹಾದೇವಪ್ಪ ತೇಲಿ ತಿಳಿಸಿದ್ದಾರೆ.ಗುರುವಾರದಂದು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕರೆದಿದ್ದ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ವಿಜಯಪುರ ಜಲ್ಲೆಯಲ್ಲಿ ಐದು ನದಿಗಳು ಹರಿದಿದ್ದು ಪಂಚನದಿಗಳ ಬೀಡು ೨ನೇ ಪಂಜಾಬ ಎಂದು ಕರೆಯಲಾಗುತ್ತಿದೆ. ಆದರೆ ಇದು ಕೇವಲ ಪ್ರತಿಷ್ಠೆಗೋಸ್ಕರ ಇದೊಂದು ವಿಷಯ ಹೇಳಿಕೊಳ್ಳಲು ಸುಲಭವಾಗಿದೆ. ಆದರೆ ವಾಸ್ತವಿಕವಾಗಿ ಜಿಲ್ಲೆಯ ಇನ್ನು ಕೆಲವು ಭಾಗಗಳಲ್ಲಿ ಕುಡಿಯಲು ಕೂಡಾ ನೀರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿಗೆ ನೀರು ಕೊಡುವುದಂತು ದೂರದ ಮಾತು, ಕುಡಿಯಲು ಹಾಗೂ ಬೆಳೆಗಳಿಗೆ…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ೨೦೨೬-೨೭ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳ ೬ನೇ ತರಗತಿಯಿಂದ ೯ನೇ ತರಗತಿಯವರೆಗೆ ಪ್ರವೇಶಾತಿಗಾಗಿ ಜೂನ್ ೭ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೧, ಕುಂಬಾರ ಗಲ್ಲಿ, ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆ ನಂ-೦೨, ಟೇಕಡೆ ಗಲ್ಲಿ, ಶಾಲೆಗಳಿಂದಲೇ ನೇರವಾಗಿ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದಾಗಿದೆ​ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕಲಾ ತಂಡಗಳು ಮತ್ತು ಕಲಾವಿದರನ್ನು ಎಂಪೆನ್ನೆಲ್ ಮಾಡುವ ಸಲುವಾಗಿ ಜಿಲ್ಲೆಯ ಕಲಾವಿದರು ನಿಗದಿತ ಅರ್ಜಿ ನಮೂನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಭಾರತೀಯ ಸಂಸ್ಕೃತಿ ಸಂಬಂಧಗಳ ಇಂಡಿಯನ್ ಕೌನ್ಸಿಲ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ,ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.ಹಾಗಾಗಿ ಐಸಿಸಿಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಕಲಾವಿದರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುವುದು. ಅದಕ್ಕಾಗಿ ಜಿಲ್ಲೆಯ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪೆನ್ನೆಲ್ ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಪ್ರಚುರಪಡಿಸಲಾಗುವುದು. ಹಾಗಾಗಿ ಜಿಲ್ಲೆಯ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರ…

Read More

ಎಸ್‌ಐಆರ್ ಪ್ರಕ್ರಿಯೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಸಕಲ ಸಿದ್ಧತೆ | ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಶೇ.೯೦ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ಎಸ್.ಐ.ಆರ್ ಪ್ರಕ್ರಿಯೆ ನಡೆಲಾಗುವುದು. ಅರ್ಹ ಯಾವೊಬ್ಬ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ೨೦೦೨ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು ಪ್ರಸ್ತುತ ಇರುವ ೨೦೨೫ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ ಎಂದರು.ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಎಚ್.ಡಿ.ಕೋಟೆ: ಮಣ್ಣು, ನೀರು, ರೈತ ಉಳಿಯಬೇಕು. ಮನುಷ್ಯನಿಗೆ ಉತ್ತಮ ಆರೋಗ್ಯ ಸಿಗಬೇಕೆಂಬ ನಿಟ್ಟಿನಲ್ಲಿ ಸಿರಿಧಾನ್ಯ ಪೌಡರ್ ನ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದೆವೆ ಎಂದು ಉದ್ಯಮಿ ಮಿಲ್ ನಾಗರಾಜ್ ಹೇಳಿದರು.ತಾಲೂಕಿನ ಪಡುಕೋಟೆಯಲ್ಲಿ (ಇಂದಿರಾನಗರ) ಸಮತಾ ಟ್ರಸ್ಟ್ (ರಿ), ನಂಬಿಕೆ ಫುಡ್ ಪ್ರಾಡಕ್ಟ್ ಪ್ರೈವೇಟ್ (ಲಿ), ಸ್ವಾರಲಯ ಮ್ಯೂಸಿಕಲ್ ಟ್ರಸ್ಟ್, ಗಾನವಿ ಮೆಡಿಕಲ್ ಅಂಡ್ ಜನರಲ್ ಇಂದಿರಾನಗರ ಸಂಯುಕ್ತಾಶ್ರಯದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ಹಾಗೂ ನಂಬಿಕೆ ಸಿರಿಧಾನ್ಯ ಪೌಡರ್ (ಬಾದಾಮಿ ಹಾಲು) ಮಹತ್ವವನ್ನು ಕುರಿತು ಮಾತನಾಡಿದರು.ಮನುಷ್ಯ ದಿನನಿತ್ಯ ಸೇವಿಸುತ್ತಿರುವ ಆಹಾರ ವಿಷಪೂರಿತವಾಗಿದ್ದು ಚಿಕ್ಕ ವಯಸ್ಸಿಗೆ ಹಲವಾರು ರೋಗಗಳು ಬರುತ್ತಿವೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಆಸೆಗಾಗಿ ಬಿತ್ತನೆ ಬೀಜಗಳಿಗೆ ರೈತರು ರಾಸಾಯನಿಕ ಗೊಬ್ಬರ ಹಾಗೂ ಔಷಧಿಗಳನ್ನು ಸಿಂಪಡಿಸುತ್ತಿದ್ದಾರೆ. ಆದರೆ ನಮ್ಮ ನಂಬಿಕೆ ಸಿರಿಧಾನ್ಯ ಪೌಡರ್ ನಲ್ಲಿ 9 ತರಹದ ನೈಸರ್ಗಿಕ ಧಾನ್ಯಗಳನ್ನ ಬಳಸಿ ಪೌಡರ್ ಅನ್ನು ತಯಾರಿಸುತ್ತಿದ್ದು ಇದು ಆರೋಗ್ಯದ…

Read More

ಚಡಚಣ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಕರೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ (ಕೆಕೆಎಂಪಿ) ಬೆಂಗಳೂರು, ವಿಜಯಪುರ ಜಿಲ್ಲಾ ಶಾಖೆಯ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತೋತ್ಸವ ಹಾಗೂ ಜಿಲ್ಲಾ ಸಮಾವೇಶವನ್ನು ಜೂನ್ 7ರಂದು ವಿಜಯಪುರ ನಗರದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವದು ಎಂದು ಚಡಚಣ ತಾಲೂಕು ಕೆಕೆಎಂಪಿ ಅಧ್ಯಕ್ಷ ಅಂಬಾದಾಸ ಸಿಂದಗಿ ಹೇಳಿದರು.ವಿಜಯಪುರ ನಗರದ ಆಶ್ರಮ ರಸ್ತೆಯ ಐಶ್ವರ್ಯ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಸುಸಜ್ಜಿತ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಮಂಜುನಾಥ ಭಾರತಿ ಸ್ವಾಮೀಜಿ, ಗೋಸಾಯಿ ಮಠ, ಗವಿಪುರಂ (ಬೆಂಗಳೂರು) ವಹಿಸಲಿದ್ದು, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯಾಧ್ಯಕ್ಷ ಸುರೇಶರಾವ್ ಎಸ್. ಸಾಠೆ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿವಿಧ ಜಿಲ್ಲೆಗಳ ಹಾಗೂ ತಾಲೂಕುಗಳ ಕೆಕೆಎಂಪಿ ಪದಾಧಿಕಾರಿಗಳು, ಸಮಾಜದ ಮುಖಂಡರು ಮತ್ತು ಗಣ್ಯರು…

Read More

ಯಾದಗಿರಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳವಳ ಯಾದಗಿರಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಕರ್ನಾಟಕದ ಯಾದಗಿರಿ ಜಿಲ್ಲೆಯ ಕಳಪೆ ಸಾಮಾಜಿಕ-ಆರ್ಥಿಕ ಸೂಚ್ಯಂಕಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಮಹಿಳಾ ಸಾಕ್ಷರತಾ ಪ್ರಮಾಣ ಕಡಿಮೆಯಾಗಿರುವುದು, ಬಹು ಆಯಾಮದ ಬಡತನದ ಪ್ರಮಾಣ ಹೆಚ್ಚಿರುವುದು, ರಾಜ್ಯದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕೊನೆಯ ಸ್ಥಾನದಲ್ಲಿರುವುದು ಹಾಗೂ ತಲಾ ಆದಾಯ ಅತಿ ಕಡಿಮೆ ಇರುವುದು ಆತಂಕಕಾರಿ ಸಂಗತಿಗಳಾಗಿವೆ ಎಂದು ಹೇಳಿದರು.ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿರುವ ಸೀತಾರಾಮನ್, ಯಾದಗಿರಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ತುರ್ತು ಮತ್ತು ವಿಶೇಷ ಗಮನದ ಅಗತ್ಯವಿದೆ ಎಂದು ಒತ್ತಿ ಹೇಳಿದರು.ಯಾದಗಿರಿಯಲ್ಲಿ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸುತ್ತಿರುವ ನಬಾರ್ಡ್ ನೆರವಿನ ಕಡಲೆಕಾಯಿ ಮೌಲ್ಯವರ್ಧನೆ ಘಟಕವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಯಾದಗಿರಿ ಹಾಗೂ ಪಕ್ಕದ ರಾಯಚೂರು ಜಿಲ್ಲೆಗಳನ್ನು “ಆಕಾಂಕ್ಷಿ ಜಿಲ್ಲೆಗಳು” (Aspirational Districts) ಎಂದು ಗುರುತಿಸಲಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಜನ್ಮದಿನ, ವಿಶ್ವ ಪರಿಸರ ದಿನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದ ಅಂಗವಾಗಿ ಶುಕ್ರವಾರ (ಜೂನ್ 5) ಬೆಳಿಗ್ಗೆ 11 ಗಂಟೆಗೆ ಪಟ್ಟಣದ ವಿಶ್ವ ಭಾರತಿ ವಿದ್ಯಾ ವರ್ಧಕ ಸಂಘದ ಯಲ್ಲಮ್ಮ ದೇವಿ ಸಿಬಿಎಸ್ಇ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಸೂಚನೆಯಂತೆ, ಅಭಿಮಾನಿಗಳು ಯಾವುದೇ ಆಡಂಬರಗಳನ್ನು ತೊರೆದು ಶಾಲು, ಹೂವುಗಳ ಬದಲು ಸಸಿಗಳನ್ನು ನೆಡುವ ಮೂಲಕ ಶುಭಾಶಯ ಕೋರಬೇಕು ಎಂದು ಎಸ್.ಕೆ. ಬೆಳ್ಳುಬ್ಬಿ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತವು ದೂರದೃಷ್ಟಿ, ಜನಪರ ಕಲ್ಯಾಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿಯಾಗಿದ್ದು, ಅವರ ಕಾಲದಲ್ಲಿ ರಾಜ್ಯವು ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನದಲ್ಲಿ ಭಾರತದಲ್ಲೇ ಮುಂಚೂಣಿಯಲ್ಲಿತ್ತು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ 142 ನೇ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರಸ್ತುತ ನಗರೀಕರಣದ ಸಮಸ್ಯೆಗಳು ಮತ್ತು ನೀರಿನ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ನಮಗೆ, ಶಿವನಸಮುದ್ರ ಜಲವಿದ್ಯುತ್ ಯೋಜನೆ ಮತ್ತು ಕನ್ನಂಬಾಡಿ ಅಣೆಕಟ್ಟು ನಿರ್ಮಾಣದ ಅವರ ದೂರದೃಷ್ಟಿ ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ ಎಂದು ಹೇಳಿದರು.ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ, ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಿದ ನಾಲ್ವಡಿ ಕೃಷ್ಣರಾಜರು ಇಂದಿನ ಆಧುನಿಕ ಕಾಲದ ಸಮಾನತೆಯ ಆಶಯಗಳನ್ನು ಅಂದೇ ಕಾರ್ಯರೂಪಕ್ಕೆ ತಂದು, ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದು ಹೇಳಿದರು.ಹಿರಿಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ,ಇಂದಿನ ಅಭಿವೃದ್ಧಿಶೀಲ ಭಾರತಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದ ಚಡಚಣ ತಾಲೂಕು ಗೋವಿಂದಪೂರ ಗ್ರಾಮದಲ್ಲಿ ನಡೆದ ಸಾಮೂಹಿಕ ಹತ್ಯೆ ಪ್ರಕರಣದಲ್ಲಿ ಗುರುವಾರ ಮತ್ತೆ ಆರು ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರೋಪಿ ನಂ. 1 :ಅಪ್ಪುಗೌಡ ತಂ. ಲಗಮನಗೌಡ @ ಲಕ್ಕನಗೌಡ ಪಾಟೀಲ (49 ವರ್ಷ), ಆರೋಪಿ ನಂ. 11 ಶಂಕ್ರೆಪ್ಪ ತಂ. ಮಾದೇವ ಅರಕೇರಿ ( 33 ವರ್ಷ), ಆರೋಪಿ ನಂ. 12 ಅಪ್ಪಾಸಾಬ @ ಕಿಶನ್‌ ತಂ. ಶಂಕರ ಭೋವಿ )56 ವರ್ಷ), ಆರೋಪಿ ನಂ. 22ಸತ್ಯೆಪ್ಪ ತಂ. ಜಕ್ಕಪ್ಪ ಬಿರಾದಾರ (46 ವರ್ಷ), ಆರೋಪಿ ನಂ. 23 ಸುಲ್ತಾನ ತಂ. ಮಾದೇವ ಬಿರಾದಾರ (24 ವರ್ಷ), ಆರೋಪಿ ನಂ. 24 ಮಹೇಶ ತಂ. ಬೆಳ್ಳೆಣ್ಣಿ ಬಿರಾದಾರ (25 ವರ್ಷ) ಆರೋಪಿಗಳನ್ನು ಬಂಧಿಸಲಾಗಿದ್ದು, ಈಗಾಗಲೇ ದಿನಾಂಕ: 01-06-2026 ರಂದು 12 ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೀಗೆ ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 18 ಜನ…

Read More