Author: editor.udayarashmi@gmail.com

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಜ.೨೬ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಹಸಿರು ನಿಶಾನೆ ತೋರುವ ಮೂಲಕ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಇಂದಿನಿಂದ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸಂವಿಧಾನದ ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಹೇಳಿದರು.ಇದೇ ಸಂದರ್ಭದಲ್ಲಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಎಸಿ ಮಲ್ಟಿ ಎಕ್ಸಲ್ ವೊಲ್ವೋ ಸ್ಲೀಪರ್ ಬಸ್ಸಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ,…

Read More

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಮಾಹಿತಿ ವಿವಿಧ ಕಂಪನಿಗಳಿಂದ ಬಂಡವಾಳ ಹೂಡಿಕೆ | ವಿವಿಧ ಕೈಗಾರಿಕೆಗಳ ಸ್ಥಾಪನೆ | ಐದು ಸಾವಿರ ಉದ್ಯೋಗ ಸೃಷ್ಠಿ ವಿಜಯಪುರ: ಜಿಲ್ಲೆಯಲ್ಲಿ ವಿದೇಶಿ ಸೇರಿದಂತೆ ವಿವಿಧ ಕಂಪನಿಗಳು ಬಂಡವಾಳ ಹೂಡಲು ಮುಂದಾಗಿದ್ದು, ಜಿಲ್ಲೆಯಲ್ಲಿ ವಿವಿಧ ಕೈಗಾರಿಕೆಗಳ ಸ್ಥಾಪನೆಯಿಂದಾಗಿ ಐದು ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ಅವರು ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜ.೨೬ರಂದು ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ವಿಜಯಪುರದಲ್ಲಿ ವಿವಿಧ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಮುಂದೆ ಬಂದಿದ್ದು, ಈ ಪೈಕಿ ಲುಲು ಕಂಪನಿ ವಿಜಯಪುರದಲ್ಲಿ ೩೦೦ ಕೋಟಿ ರೂ. ವೆಚ್ಚದಲ್ಲಿ ಹಣ್ಣು ಮತ್ತು ತರಕಾರಿ ಸಂಸ್ಕರಣ ಘಟಕವನ್ನು ತೆರೆಯಲು ಒಪ್ಪಿಕೊಂಡಿದೆ ಎಂದು ಹೇಳಿದರು.ಉತ್ತರಪ್ರದೇಶ ಮೂಲದ ಬಿ.ಎಲ್.…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ವಿಜಯಪುರ: ದೇಶದ ಏಳಿಗೆಗಾಗಿ ಶ್ರಮಿಸಬೇಕಾಗಿರುವಂಥದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ಬರಲು ಪ್ರತಿಯೊಬ್ಬರಿಗೂ ಸಂವಿಧಾನದ ಹಕ್ಕುಗಳು, ಕಾನೂನುಗಳು ಹಾಗೂ ಮೌಲ್ಯಗಳನ್ನು ಎತ್ತಿ ಹಿಡಿದು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದು ಪ್ರಾಚಾರ್ಯೆ ಡಾ.ಆರ್.ಎಮ್.ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ದೇಶದ ಉದ್ದಗಲಕ್ಕೂ ಪ್ರತಿ ಮೂಲೆಯಲ್ಲಿಯೂ ಈ ಸಂಭ್ರಮ ಆಚರಿಸುತ್ತಿದ್ದು ದೇಶದ ಸಂಸೃತಿಯನ್ನು ಬಿಂಬಿಸುವಂತಹ ಆಚರಣೆಯಾಗಿದೆ ಎಂದರು.ಪ್ರತಿಯೊಂದು ದೇಶವೂ ತನ್ನದೇ ಆದಂತಹ ಸಂವಿಧಾನವನ್ನು ಹೊಂದಿರುತ್ತದೆ. ಅದೇ ತೆರನಾಗಿ ಭಾರತವು ಕೂಡ ವಿವಿಧ ಗಣಗಳಿಂದ ಕೂಡಿದ ಅಖಂಡ ಭಾರತದ ಜನತೆಗೆ ಸ್ವಾತಂತ್ರ್ಯ, ಸಮಾನತೆ, ಭಾತೃತ್ವ, ಹಾಗೂ ಜಾತಾತೀತೆಯ ಮೌಲ್ಯಗಳನ್ನು ಭಾರತೀಯರಿಗೆ ಅವಕಾಶ ಕಲ್ಪಿಸಿದ ಸಂವಿಧಾನದ ಜಾರಿಯಾದ ಸುದಿನ ಎಂದು ಹೇಳಿದರು.ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಜಾತ್ಯಾತೀತ…

Read More

ಬಿಜೆಪಿಗೆ ಜೈ ಕಾಂಗ್ರೆಸ್ ಗೆ ಗುಡ್ ಬೈ ಎಂದ ಶೆಟ್ಟರ್ | ದೆಹಲಿಯಲ್ಲಿ ಪಕ್ಷ ಸೇರ್ಪಡೆ | ಕಾಂಗ್ರೆಸ್ಗೆ ಶಾಕ್! ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ವಾಪಸಾಗಿದ್ದಾರೆ.ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ​ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದರು.ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆಗೂ ಮುನ್ನ ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ…

Read More

ವಿಜಯಪುರ: ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಡೆಸಿರುವ ಭ್ರಷ್ಟಾಚಾರದ ಕುರಿತು ತನಿಖೆ ಕೈಗೊಂಡು ಅವರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಉಪ ನಿರ್ದೇಶಕರು, ಸಾ.ಶಿ.ಇ. ವಿಜಯಪುರ ಮುಖಾಂತರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಹೇಶ ನಾಯಕ ಮಾತನಾಡಿ, ಡಿ.ಬಿ.ಇ. ಪ್ರೌಢಶಾಲಾ ನಿಂಬಾಳ ಎಲ್.ಟಿಗೆ ಸಂಬಂಧಿಸಿದಂತೆ ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಅದಕ್ಕೆ ತಾವು ಇಂಡಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಲು ಆದಶಿಸಿದ್ದಿರಿ. ಆದರೆ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆ ನಡೆಸಿ, ಸ್ವಂತ ಜಾಗವಿಲ್ಲದ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಸಂಸ್ಥೆ ಎಂದು ಸ್ಪಷ್ಟವಾಗಿ ಕಂಡು ಬಂದ ಕಾರಣ ಅವರ ವೇತನ ಅನುದಾನವನ್ನು ಸಹ ಎರಡು ತಿಂಗಳು ತಡೆ ಹಿಡಿಯಲಾಗಿತ್ತು. ಆದರೆ ಈಗ ವೇತನ ಅನುದಾನ ಬಿಡುಗಡೆ ಮಾಡಿರುವದರಿಂದ ಇಲ್ಲಿ ಸ್ಪಷ್ಟವಾಗಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಂಡುಬರುತ್ತದೆ.ಆದ್ದರಿಂದ ಕೂಡಲೇ…

Read More

ಮುದ್ದೇಬಿಹಾಳ: ಅರ್ಹತೆ, ಧರ್ಮ, ಲಿಂಗ, ಜಾತಿ, ಜನಾಂಗ, ಶ್ರೀಮಂತ-ಬಡವ ಈ ಯಾವುದೇ ತಾರತಮ್ಯವಿಲ್ಲದೇ ಮತದಾನದ ಹಕ್ಕನ್ನು ಜನತೆಗೆ ಸಮಾನವಾಗಿ ನೀಡಲಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ ಈಡೇರಬೇಕಾದರೆ ಮತದಾನದ ಸದ್ಬಳಕೆ ಮಾಡಿಕೊಳ್ಳುವದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶಾ.ಎಸ್.ಪಿ ಓಸ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕು ಕನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಾ.ಎಸ್.ಪಿ.ಓಸ್ವಾಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ ತಹಶೀಲ್ದಾರ ಬಲರಾಮ ಕಟ್ಟಿಮನಿ,ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಕೊರಬು ವಿಶೇಷ ಉಪನ್ಯಾಸ ನೀಡಿದರು.ಸಹಾಯಕ ಸರಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರಕಾರಿ ವಕೀಲ ಎಚ್.ಎಲ್.ಸರೂರ, ತಾಲೂಕು ಪಂಚಾಯತ ನ ಸಹಾಯಕ…

Read More

ಮುದ್ದೇಬಿಹಾಳ: ಕಲ್ಬುರ್ಗಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಅಪಮಾನ ಮಾಡಿದವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರನ್ನು ವಜಾಗೊಳಿಸಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಮಕ್ಕಳ ಸಂಖ್ಯೆ ಹಾಗೂ ಸ್ವಂತ ಕಟ್ಟಡ ಇಲ್ಲದೇ ನಡೆಯುತ್ತಿರುವ ಅನುದಾನಿತ ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಗುರುವಾರ ತಹಶೀಲ್ದಾರ ಕಚೇರಿಯವರೆಗೆ ತಮಟೆ ಬಾರಿಸುವ ಮೂಲಕ ಪ್ರತಿಭಟಿಸುತ್ತ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ತಹಶೀಲ್ದಾರ ಕಚೇರಿಯ ಎದುರು ಹೋರಾಟಗಾರರಾದ ಹರೀಶ ನಾಟೆಕಾರ, ಬಸವರಾಜ ಸಿದ್ದಾಪೂರ ಮತ್ತು ರವಿ ನಾಯಕ ಮಾತನಾಡಿ, ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡಿದವರನ್ನು ಗಲ್ಲಿಗೇರಿಸುವಂತೆ ಮತ್ತು ಪಿಎಲ್‌ಡಿ ಬ್ಯಾಂಕ್ ನ ವ್ಯವಹಾರಗಳ ತನಿಖೆಗಾಗಿ ಮತ್ತು ಬಾಂಕ್ ನ ಅಧ್ಯಕ್ಷರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಲಾಗಿತ್ತು. ಬ್ಯಾಂಕ್ ನ ಮೇಲಾಧಿಕಾರಿಗಳು ವಿಜಯಪುರದಿಂದ ಬಂದು ಜ.೨೦ ರ ಒಳಗಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಗಡುವಿನ ಮೇಲೆ ಇವತ್ತಿಗೆ ೫…

Read More

ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಕರೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ದಿಯಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ೧೮ ವರ್ಷ ಪೂರೈಸಿದ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದ ಪ್ರತಿಯೊಬ್ಬರು ಮತದಾನದಿಂದ ದೂರ ಉಳಿಯದೇ ಮತ ಚಲಾಯಿಸಬೇಕು. ನಗರ ಪ್ರದೇಶದ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಮತದಾರರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮತದಾರರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ…

Read More

ಕಲಕೇರಿ: ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ೧೮ ವರ್ಷ ಪೂರೈಸಿದ ಎಲ್ಲರೂ ಇದರಲ್ಲಿ ಭಾಗಿಯಾಗಬೇಕು ಎಂದು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಬಸವಂತಪ್ಪ ಚನಗೊಂಡ ಕರೆ ನೀಡಿದರು.ಕಲಕೇರಿ ಗ್ರಾಮದ ಎಸ್‌ಎಂವಿವಿ ಸಂಘದ ಬಸವೇಶ್ವರ ಸಂಯುಕ್ತ ಪಪೂ ಕಾಲೇಜು ಹಾಗೂ ವಿವಿದ ಅಂಗಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿ ಅವರು ಮಾತನಾಡಿದರು.ಪ್ರಾಚಾರ್ಯ ಸಿ ಎಸ್ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಗುರು ಜಗದೀಶ ಗುಮಶೇಟ್ಟಿ, ಇ ಎಎಲ್ ಸಿ ಕ್ಲಬ್ ಚಂಚಾಲಕ ಬಸವರಾಜ್ ಕುಂಬಾರ, ಎಸ್ ಪಿ ರಾಣಗಟ್ಟಿ ಮಾತನಾಡಿರು.ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ. ಜಿ ಜಿ ಮೇಡೆದಾರ, ಎಸ್ ಎಸ್ ಕಲಶೇಟ್ಟಿ, ರವಿಕುಮಾರ ಗುಮಶೇಟ್ಟಿ, ಸುರೇಶ ಬಿರಾದಾರ, ಜಗದೀಶ ಕಾದಳ್ಳಿ, ರವಿ ಕುಲಕರ್ಣಿ, ಶಿವಾನಂದ ಹರಿಜನ್, ವಿಶ್ವನಾಥ ಸಿಂದಗಿ ಸೇರಿದಂತೆ ಇತರರು ಇದ್ದರು.

Read More