Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ೨೦೨೩-೨೪ ನೇ ಸಾಲಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಸರ್ಕಾರಿ ಉರ್ದು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ.ಸಿ .ಕೆರೂರ ಅವರನ್ನು ಆಯ್ಕೆ ಮಾಡಲಾಗಿದೆ.
ಜಾನಪದ ಸಮಾವೇಶ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಅಭಿಮತ ತಾಳಿಕೋಟಿ: ಎಲ್ಲ ಧರ್ಮ – ಜಾತಿಗಳ ತತ್ವಸಾರ ಜಾನಪದ ಕುಲುಮೆಯಲ್ಲಿಯೇ ಉದಯವಾಗಿವೆ. ಮಾನವೀಯ ಮೌಲ್ಯಗಳಾದ ಪ್ರೀತಿ, ಕರುಣೆ, ಸಮಾನತೆ, ಕಾಯಕ, ದಾಸೋಹದಂತಹ ಸಾರ್ವತ್ರಿಕ ಚಿಂತನೆಗಳು ಜಾನಪದ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ (ಕೂಚಬಾಳ) ಅಭಿಪ್ರಾಯಪಟ್ಟರು.ತಾಲೂಕಿನ ಮೂಕಿಹಾಳದ ದರ್ಗಾದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ಹಜರತ್ ಲಾಡ್ಲೆ ಮಶ್ಯಾಕ ದರ್ಗಾ ಕಮೀಟ ಸಹಯೋಗದಲ್ಲಿ ಹಜರತ್ ಲಾಡ್ಲೆ ಮಶ್ಯಾಕ ಉರುಸಿನ ಪ್ರಯುಕ್ತ ಹಮ್ಮಿಕೊಂಡಿದ್ದ ” ಜಿಲ್ಲಾ ಮಟ್ಟದ ಜಾನಪದ ಸಮಾವೇಶ” ಉದ್ಘಾಟಿಸಿ ಅವರು ಮಾತನಾಡಿದರು.ದರ್ಗಾ, ದೇವಾಲಯ, ಮಠ-ಮಂದಿರಗಳು ಭಾವೈಕ್ಯತೆ ಸಾರುತ್ತಾ ಆದರ್ಶ ಮೆರೆಯುತ್ತಿವೆ. ಇಂಥಹ ನೆಲದಲ್ಲಿ ಕಲಾವಿದರು, ಸಾಹಿತಿಗಳು ಮತ್ತು ಸಂಘಟಕರು ಸಮಾವೇಶಗೊಂಡಿರುವುದು ಸಾರ್ಥಕವಾಗಿದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜಯಪುರ ಜಿ ಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಾಳನಗೌಡ ಪಾಟೀಲರು ಜಾನಪದ ಪರಿಷತ್ ಅಧ್ಯಕ್ಷರಾದ ಮೇಲೆ ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿ ಜಾನಪದ…
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಸೇವಾ ಸಮಿತಿ ನೇತೃತ್ವದಲ್ಲಿ ವಿವಿಧ ಮುಖಂಡರು ಶುಕ್ರವಾರ ಸಂಜೆ ರಾಜ್ಯ ಸರ್ಕಾರ ರಾಜ್ಯದ ಸಾಂಸ್ಕ್ರತಿಕ ನಾಯಕ ಬಸವೇಶ್ವರರೆಂದು ನಿರ್ಣಯ ಮಾಡಿದ್ದನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದರು.ಈ ಸಂದರ್ಭದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಎಂ.ಜಿ.ಆದಿಗೊಂಡ, ಎಚ್.ಎಸ್.ಬಿರಾದಾರ ಮಾತನಾಡಿ, ಇಡೀ ಜಗತ್ತಿಗೆ ಸಾಂಸ್ಕ್ರತಿಕ, ಸಾಮಾಜಿಕ ಹಾಗೂ ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕನ್ನು ತೋರಿಸಿದ ವಚನ ಚಳವಳಿಯ ನಾಯಕತ್ವವನ್ನು ವಹಿಸಿದ್ದ ಬಸವೇಶ್ವರರನ್ನು ಕರ್ನಾಟಕ ರಾಜ್ಯದ ಸಾಂಸ್ಕ್ರತಿಕ ನಾಯಕರೆಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿರುವುದು ಸಮಸ್ತ ಬಸವಾಭಿಮಾನಿಗಳಿಗೆ ಹರ್ಷ ಉಂಟು ಮಾಡಿದೆ. ಇದರಿಂದಾಗಿ ಬಸವೇಶ್ವರರು ಜನಿಸಿದ ಬಸವನಬಾಗೇವಾಡಿಯ ಗರಿಮೆ ಹೆಚ್ಚಿದಂತಾಗಿದೆ. ಈ ನಿರ್ಣಯ ತೆಗೆದುಕೊಂಡ ರಾಜ್ಯದ ಸಿಎಂ ಸಿದ್ದರಾಮಯ್ಯನವವರು ಸೇರಿದಂತೆ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದ ಅವರು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರವು ಬಸವೇಶ್ವರರನ್ನು ದೇಶದ ಸಾಂಸ್ಕ್ರತಿಕ ರಾಯಭಾರಿಯನ್ನಾಗಿ ಘೋಷಣೆ ಮಾಡಬೇಕೆಂದು ಆಶಯ ವ್ಯಕ್ತಪಡಿಸಿದರು.ಸಂಭ್ರಮಾಚರಣೆಯಲ್ಲಿ ಎಸ್.ಆರ್.ಕಲ್ಲೂರ, ಬಸವರಾಜ ಹಾರಿವಾಳ, ಸಿ.ಎಸ್.ಪಾಟೀಲ, ಸುಭಾಸ ಚಿಕ್ಕೊಂಡ, ರವಿ ರಾಠೋಡ ಸಂಕನಗೌಡ ಪಾಟೀಲ,…
ಬಸವನಬಾಗೇವಾಡಿ: ಪಟ್ಟಣದ ತಾಲೂಕು ಆಸ್ಪತ್ರೆಗೆ ಕೇಂದ್ರ ಸರ್ಕಾರದ ೨೦೨೨ ನೇ ಸಾಲಿನ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಈ ಪ್ರಶಸ್ತಿಯನ್ನು ವಿಜಯಪುರದಲ್ಲಿ ಬುಧವಾರ ಜರುಗಿದ ಆರೋಗ್ಯ ಇಲಾಖೆಯ ಮಾಸಿಕ ಸಭೆಯಲ್ಲಿ ಡಿಎಚ್ಓ ಡಾ.ಬಸವರಾಜ ಹುಬ್ಬಳ್ಳಿ ಅವರು ತಾಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಾಬೀರ ಪಟೇಲ ಅವರಿಗೆ ಪ್ರದಾನ ಮಾಡಿ, ಆರೋಗ್ಯ ಇಲಾಖೆಯಿಂದ ಸನ್ಮಾನಿಸಲಾಯಿತು.ಡಿಎಚ್ಓ ಹುಬ್ಬಳ್ಳಿ ಮಾತನಾಡಿ, ಕೇಂದ್ರ ಸರ್ಕಾರ ಆಸ್ಪತ್ರೆಯ ಆಂತರಿಕ ಮತ್ತು ಬಾಹ್ಯವಾಗಿ ಸ್ವಚ್ಛತೆ, ಜೈವಿಕ ತ್ಯಾಜ್ಯ ಸಂಸ್ಕರಣಾ ಘಟಕ, ಇನ್ಪೆಕ್ಷನ್ ಕಂಟ್ರೋಲ್, ಪರಿಸರ ಸಂರಕ್ಷಣೆ, ಸಮಯ ಪಾಲನೆ ರೋಗಿಗಳ ಆರೈಕೆ, ಸಿಬ್ಬಂದಿಗಳ ಕಾರ್ಯಕ್ಷಮತೆ ಪರಿಗಣಿಸಿ ರಾಜ್ಯಕ್ಕೆ ಎರಡನೇ ಸ್ಥಾನದ ಕಾಯಕಲ್ಪ ಪ್ರಶಸ್ತಿಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ೨೦೨೩ ನೇ ಸಾಲಿನಲ್ಲಿ ರಾಜ್ಯ ಸರ್ಕಾರ ತಾಲೂಕು ಆಸ್ಪತ್ರೆಯನ್ನು ಈ ಮಾನದಂಡಗಳ ಅನ್ವಯ ರಾಜ್ಯಕ್ಕೆ ಪ್ರಥಮ ಸ್ಥಾನದ ಕಾಯಕಲ್ಪ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಮುಂಬರುವ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಆಸ್ಪತ್ರೆಗೆ…
ಬಸವನಬಾಗೇವಾಡಿ: ಸಮಸ್ತ ಭಾರತೀಯರಿಗೆ ಅಯೋಧ್ಯ ಭವ್ಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾನ ನಡೆಯುತ್ತಿರುವ ಸಂಗತಿ ಬಹಳ ಸಂತಸ, ಸಂಭ್ರಮ ತಂದುಕೊಟ್ಟಿದೆ. ಬಹಳ ದಿನಗಳ ಕನಸು ನನಸಾಗುತ್ತಿದೆ. ಇಡೀ ದೇಶವೇ ಸಂಭ್ರಮ ಪಡುತ್ತಿದೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿಯ ಸಹಯೋಗದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಜ.೨೨ ರಂದು ನಡೆಯುತ್ತಿರುವ ಶ್ರೀರಾಮ ದೇವರ ಮೂರ್ತಿ ಪ್ರತಿಷ್ಠಾಪನೆಯಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ರಾಮತಾರಕ ಹೋಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಬಹು ವರ್ಷಗಳ ಹಿಂದೆ ನಿರ್ಮಾಣವಾಗಬೇಕಿತ್ತು. ಕೆಲವರ ಕಾರಣದಿಂದಾಗಿ ಈ ಕಾರ್ಯ ನೆರವೇರಿರಲಿಲ್ಲ. ಇದೀಗ ಕಾನೂನು ಬದ್ಧವಾಗಿ ನಿರ್ಮಾಣ ಮಾಡಿದ್ದು ಸಂತೋಷದಾಯಕ ಸಂಗತಿ. ಈ ಮೊದಲು ಎಲ್ಲೆಡೆ ಬನಾಯೆಂಗೇ ಮಂದಿರ ಹಾಡು ಹಾಕಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಇದರ ಬದಲು ಬನ್ನಗಯಾ ಮಂದಿರ ಎಂಬ ಹಾಡು ಹಾಕಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜ.೨೨ ರಂದು ಶ್ರೀರಾಮ ಭಾವಚಿತ್ರ…
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದಿಂದ ಶುಕ್ರವಾರ ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾಯೋಗಿ ವೇಮನ ಅವರ ಜಯಂತಿ ಆಚರಿಸಲಾಯಿತು.ಮಹಾಯೋಗಿ ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರ ತತ್ವಾರ‍್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜವನ್ನು ಕಟ್ಟಬೇಕಾಗಿದೆ ಎಂದರು.ವಕೀಲ ಎಸ್.ಎಚ್.ಗುರಡ್ಡಿ ಮಾತನಾಡಿ, ಮಹಾಯೋಗಿ ವೇಮನ ಅವರು ತಮ್ಮ ಸಾಹಿತ್ಯ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢನಂಬಿಕೆ, ಸೋಗಲಾಡಿತನವನ್ನು ಪ್ರಶ್ನಿಸಿದರು. ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಮೂಲಕ ಸಮಾಜಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಮಹಾಯೋಗಿ ವೇಮನ ಅವರು ಲೋಕeನ ಹರಡಿದ್ದಾರೆ ಎಂದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಭವಾನಿ ಪಾಟೀಲ, ರೇಷ್ಮೆ ಇಲಾಖೆಯ ಎಸ್.ಐ.ಗೋಲಗೊಂಡ, ಖಜಾನೆ ಇಲಾಖೆಯ ಅಧಿಕಾರಿ ಮನೋಜ ಪಾಟೀಲ, ಭೂಮಾಪನಾ ಇಲಾಖೆಯ ವ್ಯವಸ್ಥಾಪಕ ಕಲಾದಗಿ, ಶಿರಸ್ತೇದಾರ ಬೋರಮ್ಮ ಪೋಲೇಶಿ, ತಹಸೀಲ್ದಾರ ಸಿಬ್ಬಂದಿಗಳಾದ ಮಂಜು ಹಳ್ಳೂರ,…
ಸಿಂದಗಿ: ಜಾತಿ ತಾರತಮ್ಯ, ಢಾಂಬಿಕ ಭಕ್ತಿ ಎಲ್ಲದರ ವಿರುದ್ಧ ತಿರುಗಿ ಬಿದ್ದಿದ್ದ ಬಸವಣ್ಣ, ತಮ್ಮದೇ ಆದ ರೀತಿಯಲ್ಲಿ ದಮನಕ್ಕೊಳಗಾದವರ ಧ್ವನಿಯಾಗಿ ನಿಂತಿದ್ದರು. ಇಷ್ಟಲಿಂಗ ಮೂರ್ತಿಯ ಪರಿಕಲ್ಪನೆಯನ್ನು ನೀಡಿ ದೇವರನ್ನು ಎಲ್ಲರ ಕರಸ್ಥಲಕ್ಕೆ ತಂದರು. ಕಾಯಕವೇ ಕೈಲಾಸ ಎಂದು ಹೇಳಿ, ಎಲ್ಲರಲ್ಲೂ ದುಡಿಯುವ ಛಲ ಹುಟ್ಟು ಹಾಕಿದರು ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಜರುಗಿದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲರೂ ವಿಚಾರ ವಿನಿಮಯ ಮಾಡಲು ವೇದಿಕೆ ಕಲ್ಪಿಸಿದರು. ಕೆಳ ಜಾತಿಗಳಿಂದಲೂ ಬಂದ ಶರಣರು ಇಲ್ಲಿ ತಮ್ಮ ಚಿಂತನೆಗಳನ್ನು ಮಂಡಿಸಿ ಮನುಕುಲಕ್ಕೆ ಆದರ್ಶವಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಸಿಎಂ ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿದರು.ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ, ದಸಂಸ ವಿದ್ಯಾರ್ಥಿ ಘಟಕದ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಹಿರಿಯ ಸಾಹಿತಿ ಡಾ.ಎಂ.ಎಂ.ಪಡಶೆಟ್ಟಿ, ಡಾ.ಚನ್ನಪ್ಪ ಕಟ್ಟಿ, ಗುರು ತಾರಾಪುರ, ಜಗದೀಶ ಕಲಬುರಗಿ, ವಿಶ್ವನಾಥ…
ಸಿಂದಗಿ: ತಾಲೂಕು ಮಟ್ಟದ ಜ.೨೬ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿದ ಆಚರಣೆ ಮಾಡಲೂ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕು ಆಡಳಿತ ಸೌಧದಲ್ಲಿ ಸಭಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸರಕಾರಿ ಕಚೇರಿ, ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಚತೆಯೊಂದಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಕಾರ್ಯಕ್ರಮ ಸ್ಥಳದ ಸ್ವಚ್ಚತೆ ಹಾಗೂ ಅತಿಥಿಗಳಿಗೆ ಆಸನದ, ಅಲ್ಪೋಪಹಾರದ ವ್ಯವಸ್ಥೆಗೆ ಕ್ರಮ ವಹಿಸಿಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರಿಗೆ ಸಮಯಕ್ಕಿಂತ ಮುಂಗಡವಾಗಿ ತಲುಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಮೂಲಭೂತ ಸೌಲಭ್ಯ ವ್ಯವಸ್ಥೆ, ವೇದಿಕೆ ನಿರ್ಮಾಣ ಸೇರಿದಂತೆ…
ಆಲಮೇಲ: ೧೨ನೇ ಶತಮಾನದ ಮಹಾನ್ ಶರಣ, ಜಗಜ್ಯೋತಿ ಅಣ್ಣ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡಿದ್ದು, ಮುಂಬರುವ ದಿನಗಳಲ್ಲಿ ಬಸವಣ್ಣನವರ ಆಶಯದಂತೆ ಸಮಾನತೆ ಕಾಲವು ಆದಷ್ಟು ಬೇಗ ಬರಲಿ ಎಂದು ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಜಿ ಹೇಳಿದರು.ಶುಕ್ರವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನನ್ನಾಗಿ ಮಾಡಿರುವ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಸವಣ್ಣನವರು ೧೨ನೇ ಶತಮಾನದಲ್ಲಿ ಮಹಾನ್ ಶರಣರಾದಂತವರು. ಅವರು ಇಂದು ಜಗತ್ತಿಗೆ ವಿಶ್ವಗುರುವಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಂಸ್ಕೃತಿಕ ನಾಯಕನ್ನಾಗಿ ಮಾಡಿರುವುದು ರಾಜ್ಯದ ಜನತೆಗೆ, ಶರಣರಿಗೆ ಹೆಮ್ಮೆಯ ವಿಷಯವಾಗಿದೆ. ಬಸವಣ್ಣನವರ ಆಶಯಂತೆ ಮುಂಬರುವ ದಿನಗಳಲ್ಲಿ ಸಮಾನತೆಯ ಸಾರುವ ಕೆಲಸ ಆಗಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕದ ಜನರು ನಾವು ಲಿಂಗಾಯತ ಧರ್ಮದವರು ಎಂದು ನಮೂದಿಸಬೇಕು ಎಂದು ಕರೆ ನೀಡಿದರು.ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ಬಸವಣ್ಣವರ ಬಗ್ಗೆ ಆಳವಾಗಿ ಅಧ್ಯಯನ ಮಾಡುತ್ತಿದ್ದಾರೆ ಹಿಂದಿನ ಯಾವ ಪ್ರಧಾನಿಯೂ ಮಾಡದಂತ…
ದೇವರಹಿಪ್ಪರಗಿ: ದಿ: ೨೦ ರಂದು ಶನಿವಾರ(ಇಂದು) ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
