Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲೋಕ ಕಲ್ಯಾಣ ಪ್ರಾಥಮಿಕ ಶಾಲೆ ಗೋಳಗುಮ್ಮಟ ಹಿಂದುಗಡೆ ಡಾಲರ್ಸ್ ಕಾಲನಿ ಹತ್ತಿರ ಇರುವ ಶಾಲೆಯ ಆವರಣದಲ್ಲಿ ಶಿಬಿರ ಮುಕ್ತಾಯವಾಯಿತು.ಈ ಶಿಬಿರದಲ್ಲಿ ಒಟ್ಟು ೧೫೦ ವಿದ್ಯಾರ್ಥಿಗಳಿಗೆ ಯೋಗ ಮತ್ತು ಕರಾಟೆ ತರಬೇತಿಯು ಕೊನೆಗೊಂಡಿತು.ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ದಾನಪ್ಪ ಸೂರಗೊಂಡ, ಆಡಳಿತಾಧಿಕಾರಿ ಪ್ರಭು ಕೋಟ್ಯಾಳ, ಮುಖ್ಯ ಗುರು ದಯಾಸಾಗರ ಸೂರಗೊಂಡ ಹಾಗೂ ದೈಹಿಕ ಶಿಕ್ಷಕಿ ಶ್ರೀಮತಿ ಅನಿತಾ ರಜಪುತ, ಶಿಕ್ಷಕರಾದ ಎ.ಎಸ್. ಬಾಸಿಂಗಿ, ಯೋಗ ಮತ್ತು ಕರಾಟೆ ತರಬೇತಿದಾರರಾದ ಬಸವರಾಜ ಎನ್ ಬಾಗೇವಾಡಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಮಕ್ಕಳೊಂದಿಗೆ ಹಾಜರಾಗಿದ್ದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ನಾಗಠಾಣ ಮತಕ್ಷೇತ್ರ ಅಭಿವೃದ್ಧಿ ಕ್ಷೇತ್ರ ವಾಗಬೇಕೆಂದರೆ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ ಅವರಿಗೆ ಸಚಿವ ಸ್ಥಾನದ ಅಧಿಕಾರ ಕೊಟ್ಟಾಗ ಮಾತ್ರ ಸಾಧ್ಯವಾಗಲಿದೆ, ಆ ನಿಟ್ಟಿನಲ್ಲಿ ಶಾಸಕ ವಿಠ್ಠಲ ಕಟಕಧೋಂಡ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನದ ಅವಕಾಶ ನೀಡಿ ಎಂದು ಕಾಂಗ್ರೆಸ್ ಧುರಿಣ ವಾಸಿಮ್ ಮುಲ್ಲಾ ಒತ್ತಾಯಿಸಿದ್ದಾರೆ.ನಾಗಠಾಣ ಮತಕ್ಷೇತ್ರಕ್ಕೆ ಇಲ್ಲಿಯ ವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ನೂತನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಅವರು ನಾಗಠಾಣ ಮತಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿದರೆ ಕರ್ನಾಟಕ ಹಾಗೂ ನಾಗಠಾಣ ಕ್ಷೇತ್ರದ ಇತಿಹಾಸದ ಪುಟದಲ್ಲಿ ನೀವು ಶಾಶ್ವತವಾಗಿ ಉಳಿಯಲಿದ್ದಿರಿ ಎಂದು ಚಡಚಣ ಪಟ್ಟಣದ ಕಾಂಗ್ರೆಸ್ ಧುರಿಣ ವಾಸಿಮ್ ಮುಲ್ಲಾ ಅವರು ಶಾಸಕ ವಿಠ್ಠಲ.ಧೋ ಕಟಕಧೋಂಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಹೈಕಮಾಂಡಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೂ ಮನವಿ ಮಾಡಿದ್ದಾರೆ.
ಹೈಕಮಾಂಡ ಮುಖಂಡರಿಗೆ ಸಚಿವ ಎಂ.ಬಿ.ಪಾಟೀಲ ಕೋರಿಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಿಜಯಪುರ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಬೇಡಿಕೆ ಇದ್ದು, ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ ಮುಖಂಡರಿಗೆ ವಿನಂತಿಸಿದ್ದೇನೆ ಎಂದು ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.ಸಚಿವರಾಗಿ ಪ್ರಮಾಣ ಸ್ವೀಕರಿಸುವ ಮುಂಚೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 6 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ ಮುಖಂಡರಿಗೆ ವೈಯಕ್ತಿಕವಾಗಿ ವಿನಂತಿಸಿದ್ದೇನೆ. ಮುಂದಿನ ಸಚಿವ ಸಂಪುಟದಲ್ಲಿ ಅದು ಈಡೇರಲಿದೆ ಎಂದರು.ಈ ಹಿಂದೆ 5 ವರ್ಷ ಜಲಸಂಪನ್ಮೂಲ ಸಚಿವನಾಗಿ, ಅಲ್ಪ ಅವಧಿಗೆ ಗೃಹ ಸಚಿವನಾಗಿ ಮತ್ತು ಮೂರು ವರ್ಷ ಕೈಗಾರಿಕೆ ಸಚಿವನಾಗಿ ಮಾಡಿದ ಕಾರ್ಯ ನನಗೆ ತೃಪ್ತಿ ತಂದಿದೆ. ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಆಶೀರ್ವಾದದಿಂದ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದೇನೆ. ವಿಜಯಪುರ ಜಿಲ್ಲೆಯ ಜನತೆಯ ಆಶೀರ್ವಾದದಿಂದ ಇದೀಗ…
ಉದಯರಶ್ಮಿ ದಿನಪತ್ರಿಕೆ ವರದಿ: ಬಸವರಾಜ ನಂದಿಹಾಳಬಸವನಬಾಗೇವಾಡಿ: ಮುಂಗಾರು ಹಂಗಾಮಿನ ಆರಂಭವಾಗುತ್ತಿದ್ದಂತೆ ರೈತ ಬಾಂಧವರು ಬಿತ್ತನೆ ಕಡೆಗೆ ಮುಖ ಮಾಡುತ್ತಿದ್ದಾರೆ. ರೈತ ಬಾಂಧವರು ಬಿತ್ತನೆಗೆ ಬೇಕಾದ ಬೀಜಗಳನ್ನು ಖರೀದಿಸುವುದರಲ್ಲಿ ತಲ್ಲೀನರಾಗಿದ್ದಾರೆ. ತಾಲೂಕಿನಲ್ಲಿ ಕಳೆದ ವಾರದಲ್ಲಿ 10.3 ಎಂ.ಎಂ. ಮಳೆಯಾಗಬೇಕಿತ್ತು. 3.8 ಎಂ.ಎಂ ಮಳೆ ಮಾತ್ರ ಆಗಿದೆ. ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಮಳೆಯ ನಿರೀಕ್ಷೆಯಲ್ಲಿ ರೈತ ಬಾಂಧವರು ಬಿತ್ತನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬುಧವಾರ ಮಧ್ಯಾನ್ಹ ವೇಳೆ ಪಟ್ಟಣ ಸೇರಿದಂತೆ ಕೆಲವೆಡೆ ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆರಂಭವಾದ ಮಳೆ ಕೆಲ ಹೊತ್ತು ಬಂದಿತ್ತು. ಬಿರು ಬಿಸಿಲಿನ ಧಗೆಯಿಂದ ತತ್ತರಿಸಿದ ಜನತೆಗೆ ಕೊಂಚ ತಂಪು ತಂದಿತ್ತು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರೈತರು ಬೀಜ ಪಡೆಯಲು ಸರದಿಯಲ್ಲಿ ನಿಂತು ಮೊದಲು ಟೋಕನ್ ಪಡೆದುಕೊಂಡ ನಂತರ ತಮ್ಮ ಆಧಾರ ಕಾರ್ಡ್ ನೀಡಿ ತಮಗೆ ಅಗತ್ಯವಿರುವ ಬೀಜಗಳಿಗೆ ರಸೀದಿ ಮಾಡಿಸಿಕೊಂಡು ಹಣ ಪಾವತಿ ಮಾಡಿದ ನಂತರ ಬೀಜ ವಿತರಣೆ ಕಾರ್ಯ ಮಾಡುತ್ತಿರುವದು ಕಂಡುಬಂದಿತ್ತು.ಬಸವನಬಾಗೇವಾಡಿ ತಾಲೂಕಿನಲ್ಲಿ ಮುಸಕಿನ ಜೋಳ ನೀರಾವರಿ ಮತ್ತು…
ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಇಟಗಿ ಗ್ರಾಮದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ನಿಡಗುಂದಿ ತಾಲೂಕು ನೂತನ ಅಧ್ಯಕ್ಷರಾಗಿ ನಂದು ಮಾಗಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಉಮೇಶ ವಾಲೀಕಾರ ತಿಳಿಸಿದ್ದಾರೆ.ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿ ಆದೇಶ ಪತ್ರ ನೀಡಿ ಮಾತನಾಡಿದ ಅವರು, “ಸಂಘದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ, ಸಂಘಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕತೆಯಿಂದ ಸಂಘಟನೆ ಮುನ್ನಡೆಸಬೇಕು. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಸೂಚಿಸಿದರು.
ಉದಯರಶ್ಮಿ ದಿನಪತ್ರಿಕೆ ಎಚ್ ಡಿ ಕೋಟೆ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಕೇಂದ್ರ ಸರ್ಕಾರವು 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕಾ ಅಭಿಯಾನವನ್ನು ರಾಷ್ಟ್ರವ್ಯಾಪಿಯಾಗಿ ಜಾರಿಗೆ ತಂದಿದೆ. ಈ ಲಸಿಕೆಯು ಕ್ಯಾನ್ಸರ್ ಉಂಟುಮಾಡುವ ವೈರಸ್‌ಗಳ ವಿರುದ್ಧ ಶೇಕಡಾ ೯೩-೧೦೦ ರಷ್ಟು ಪರಿಣಾಮಕಾರಿಯಾಗಿ ರಕ್ಷಣೆ ನೀಡುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಹೇಳಿದರು.ತಾಲೂಕಿನ ಹೀರೆಹಳ್ಳಿ ಬಿ ಕಾಲೋನಿಯ ಹಾಲು ಉತ್ಪಾದಕ ಕೇಂದ್ರದ ಆವರಣದಲ್ಲಿ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಎಚ್‌ಪಿವಿ ಲಸಿಕೆ ಆಧುನಿಕ ಜೈವಿಕ ತಂತ್ರಜ್ಞಾನದ ಮೆಡಿಕಲ್ ಡೋಸ್ ಎಂದು ಹೇಳಬಹುದಾಗಿದೆ. ಶಿಫಾರಸು ಮಾಡಿರುವ ವಯಸ್ಸಿನಲ್ಲಿ ಲಸಿಕೆಯನ್ನು ನೀಡಿದಾಗ, ವೈರಸ್ ದೇಹವನ್ನು ಪ್ರವೇಶಿಸುವ ಮೊದಲು, ಅಂದರೆ ಸೂಕ್ತ ವಯಸ್ಸಿನಲ್ಲಿ (ಪ್ರಮುಖವಾಗಿ 9 ರಿಂದ 14 ವರ್ಷದೊಳಗೆ) ಈ ಲಸಿಕೆಯನ್ನು ನೀಡಿದರೆ, ಶೇ. 90ರಷ್ಟು ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ. ಸದರಿ ಲಸಿಕೆಯ ಫಲಾನುಭವಿಗಳು 14 ವರ್ಷದ ಹೆಣ್ಣು ಮಕ್ಕಳಾಗಿದ್ದು. HPV ಲಸಿಕಾಕರಣವನ್ನು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಕೊಡಮಾಡುವ ಪರಿಸರ ರಕ್ಷಕ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.ಮಿಥುನ ನೇಮಪ್ಪ ಚವ್ಹಾಣ ಅಡವಿ ಹುಲಗಬಾಳ (ಪ್ರಾದೇಶಿಕ ಅರಣ್ಯ), ಸಂಗಪ್ಪ ನಂದಪ್ಪ ನಾಗಾವಿ ಕಾರಕೂರ (ಸಾಮಾಜಿಕ ಅರಣ್ಯ), ಮಾನಪ್ಪ ಸಂಜೀವಪ್ಪ ಕರಡಿ ಆನೇಹೊಸೂರ (ಕೆಬಿಜೆಎನ್ನೆಎಲ್ ಅರಣ್ಯ), ರಾಮಣ್ಣ ಪರಪ್ಪಗೋಳ (ಸಂತ ಕನಕದಾಸ ಶಾಲೆ ಮುದ್ದೇಬಿಹಾಳ) ಹಾಗೂ ತಂಗಡಗಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ವಿಠ್ಠಲ ತೆಗ್ಗಿ ಪ್ರಶಸ್ತಿಗೆ ಆಯ್ಕೆಯಾದವರು.ಜೂ.೭ ಬೆ೮ ಗಂಟೆಗೆ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಉದ್ಯಾನವನದಲ್ಲಿ ನಡೆಯುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಗುವದು ಎಂದು ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷರಾದ ಅಮರೇಶ ಗೂಳಿ, ಕಾರ್ಯದರ್ಶಿ ಬಸವರಾಜ ಬಿಜ್ಜೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಕ್ಸ್ಫರ್ಡ್ ಪಬ್ಲಿಕ್ ಸ್ಕೂಲ್ ಹಾಗೂ ಬಿ.ಎಂ. ಪಾಟೀಲ್ ಪ್ರೌಢಶಾಲೆ, ಗುಬ್ಬೇವಾಡ.ಇದು ಕೇವಲ ಶಾಲೆಯಲ್ಲ; ಗ್ರಾಮೀಣ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಮೂಡಿಸುವ ಶಿಕ್ಷಣ ದೇವಾಲಯ ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣವು ಪ್ರತಿಯೊಬ್ಬ ಮಗುವಿನ ಹಕ್ಕಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಕ್ಸ್ಫರ್ಡ್ ಪಬ್ಲಿಕ್ ಸ್ಕೂಲ್ ಹಾಗೂ ಬಿ.ಎಂ. ಪಾಟೀಲ್ ಪ್ರೌಢಶಾಲೆ ಗ್ರಾಮೀಣ ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ.ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಈ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ.ಸಂಸ್ಥೆಯು ಶಿಕ್ಷಣವನ್ನು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತಗೊಳಿಸದೆ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಪಾಲಕರ ಆರ್ಥಿಕ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ಅವರ ಮಕ್ಕಳಿಗೆ ನಗರ ಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಹಲವು ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದೆ.ಸಂಸ್ಥೆಯ ಸ್ಥಾಪನೆ ಮತ್ತು…
ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಮಾನವರಾದ ನಮ್ಮ ಜೀವನದಲ್ಲಿ ಎಲ್ಲದರಲ್ಲಿಯೂ ಯಶಸ್ವಿ ಕಾಣಬೇಕಾದರೆ ಮೊದಲು ದೇಹ ಬಲಿಷ್ಠವಾಗಿರಬೇಕು, ಅಂದರೆ ಮನಸ್ಸು ಕೂಡಾ ಬಲಿಷ್ಠವಾಗಿರುತ್ತದೆ ಎಂದು ಸ್ಥಳೀಯ ಪೋಲೀಸ್‌ಠಾಣೆಯ ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್ ಅವರು ನುಡಿದರು.ಮಂಗಳವಾರ ಸ್ಥಳೀಯ ಶ್ರೀ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗದೇವರ ಜನ್ಮೋತ್ಸವ ಅಂಗವಾಗಿ ಸ್ಥಳೀಯ ಕ್ರೀಡಾ ಯುವ ಘಟಕ ಸಂಘಟನೆಯ ವತಿಯಿಂದ ಎಸ್‌ಕೆ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಲಾದ ಸಿದ್ದಲಿಂಗದೇವರ ಪ್ರಿಮಿಯರ್ ಲೀಗ್ ಸಿಸನ್ ೧(ಎಸ್‌ಪಿಎಲ್೧) ಕ್ರಿಕೇಟ್ ಪಂದ್ಯಾವಳಿಯನ್ನು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ತಾಳಿಕೋಟೆಯ ಶ್ರೀ ಖಾಸ್ಗತೇಶ್ವರ ಮಠವು ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿದ್ದು ಶ್ರೀ ಮಠದ ಶ್ರೇಯಸ್ಸು ಘನತೆಯನ್ನು ಹೆಚ್ಚಿಸುತ್ತಾ ಸಾಗಿದ ಮಠದ ಪೀಠಾದಿಪತಿ ಸಿದ್ದಲಿಂಗದೇವರ ಜನ್ಮದಿನೋತ್ಸವ ಅಂಗವಾಗಿ ಇಂದು ಏರ್ಪಡಿಸಲಾದ ಕ್ರೀಕೆಟ್ ಕ್ರೀಡಾಕೂಟವು ಜನಮನ ರಂಜಿಸುವಂತಾಗಲಿ ಎಂದು ಶುಭಹಾರೈಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತೀಯ ಜನತಾಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ(ಕೂಚಬಾಳ) ಅವರು ಮಾತನಾಡಿ, ಭಾರತ ದೇಶವು ಜ್ಞಾನ ವಿಜ್ಞಾನವನ್ನು…
