Author: editor.udayarashmi@gmail.com

ಬಸವನಬಾಗೇವಾಡಿ: ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುವುದರೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು ಅಗತ್ಯವಿರುವ ಮೌಲ್ಯಗಳನ್ನು ತಿಳಿಸಿಕೊಡುತ್ತವೆ. ಪುರಾಣ, ಪ್ರವಚನದಂತಹ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಬಬಲೇಶ್ವರದ ಜಗದ್ಗುರು ಡಾ.ಮಹದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಬುಧವಾರ ಸಂಜೆ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 11ನೇ ಪುಣ್ಯರಾಧನೆ ಹಾಗೂ ವಿವಿಧ ಕಾರ್ಯಕ್ರಮಯಂಗವಾಗಿ ಜ.17 ರಿಂದ ಫೆ.2 ರವರೆಗೆ ಹಮ್ಮಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯರು ಐವತ್ತು ವರ್ಷದಲ್ಲಿ ಮಾಡುವಂತಹ ಕೆಲಸವನ್ನು ಹತ್ತೇ ವರ್ಷದಲ್ಲಿ ಮಾಡಿದ್ದಾರೆ. ಭಕ್ತರ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಜಿಲ್ಲೆಯ ಕ್ರಿಯಾಶೀಲ ಪೂಜ್ಯರು ಎನಿಸಿಕೊಂಡಿದ್ದಾರೆ ಎಂದು ಹೇಳಿದರು.ಯರನಾಳ ವಿರಕ್ತಮಠದ ಗುರು ಸಂಗನಬಸವ ಸ್ವಾಮೀಜಿ ಮಾತನಾಡಿದರು.ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನಗೂಳಿ ಹಿರೇಮಠದ ಹಿಂದಿನ ಪೂಜ್ಯರು ಈ ಮಠದ ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಭಕ್ತರಿಗೆ ನಿರಂತರವಾಗಿ…

Read More

ಕಸಾಪ ಗೆ ಕೆಲಸ ಮಾಡುವವರು ಬೇಕಿದೆ, ಟೀಕೆ ಮಾಡುವವರಲ್ಲ :ಹಾಸಿಂಪೀರ ವಾಲೀಕಾರ ಬಸವನಬಾಗೇವಾಡಿ: ಕನ್ನಡ ಸಾಹಿತ್ಯ ಪರಿಷತ್ತಿನ ಹುದ್ದೆಗಳನ್ನು ಪಡೆದುಕೊಂಡ ನಂತರ ಸುಮ್ಮನೆ ಕುಳಿತುಕೊಳ್ಳದೇ ನಿರಂತರವಾಗಿ ಕನ್ನಡ ತಾಯಿ ಸೇವೆ ಮಾಡಬೇಕು. ಜಿಲ್ಲೆಯ ಆರು ತಾಲೂಕುಗಳಲ್ಲಿ ತಾಲೂಕು ಅಧ್ಯಕ್ಷರು ನಿಷ್ಕ್ರಿಯವಾದ ಕಾರಣದಿಂದಾಗಿ ಅವರನ್ನು ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಹೇಳಿದರು.ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಕಸಾಪ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆಲಸ ಮಾಡುವವರು ಬೇಕು, ಟೀಕೆ ಮಾಡುವವರು ಬೇಕಿಲ್ಲ. ಪರಿಷತ್ತಿನಿಂದ ದಂಪತಿ ಸಮೇತರಾಗಿ ಸನ್ಮಾನ ಸ್ವೀಕರಿಸಿಕೊಂಡು ಟೀಕೆ ಮಾಡುವುದು ಎಷ್ಟು ಸರಿ? ಟೀಕೆ ಮಾಡುವವರು ವೇದಿಕೆಗೆ ಬನ್ನಿ…

Read More

ವೀಣಾಂತರಂಗ’*- ವೀಣಾ ಹೇಮಂತ್ ಗೌಡ ಪಾಟೀಲ್* ಮುಂಡರಗಿ-ಗದಗ ರಸ್ತೆಯ ತಿರುವಿನಲ್ಲಿ ಕೈಕಾಲು ಗಟ್ಟಿಮುಟ್ಟಾಗಿದ್ದ ಓರ್ವ ಮನುಷ್ಯ ಭಿಕ್ಷೆ ಬೇಡುತ್ತಿದ್ದ. ಭಿಕ್ಷೆ ಹಾಕದೆ ಮುಂದೆ ಹೋಗುತ್ತಿದ್ದ ಜನರನ್ನು ಹೀಯಾಳಿಸುತ್ತಾ, ಈ ಜಗತ್ತನ್ನು ಪಾಪಿಗಳ ಲೋಕವೆಂದು ಕೊಂಚ ಮಾತ್ರದ ಕನಿಕರವೂ ಇಲ್ಲದ ಜನರೆಂದು ಎಲ್ಲರನ್ನೂ ದೂಷಿಸುತ್ತಾ ಗೊಣಗುತ್ತ ಕುಳಿತಿದ್ದನು. ತನ್ನನ್ನು ತಾನು ಕನಿಕರದ, ಅಪಹಾಸ್ಯದ, ಅವಜ್ಞೆಯ ವಸ್ತುವನ್ನಾಗಿಸಿಕೊಂಡು ಭಿಕ್ಷೆ ಬೇಡುತ್ತಿದ್ದ ಆತನದು ಹೀನಾಯ ಪರಿಸ್ಥಿತಿ. ಸ್ವಯಂಕೃತ ಅಪರಾಧ,!! ಪರೀಕ್ಷೆಗೆ ಚೆನ್ನಾಗಿ ತಯಾರಿ ಮಾಡಿಕೊಳ್ಳದ ಮಗುವೊಂದು ಪರೀಕ್ಷಾ ಮೇಲ್ವಿಚಾರಕರ ಮತ್ತು ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವ ಶಿಕ್ಷಕರ ಗುಂಪನ್ನು ಹೀಯಾಳಿಸುವುದು, ಶಾಲೆಯ ಸ್ಪರ್ಧೆಗಳಲ್ಲಿ ಮೊದಲ ಸ್ಥಾನ ಗಳಿಸದಿದ್ದರೆ ಶಾಲೆಯಲ್ಲಿ ಭೇದ ಭಾವ ಮಾಡುವರೆಂಬ ಆರೋಪ ಮಾಡುವ ಹಲವಾರು ಜನ ನಮ್ಮ ಸಮಾಜದಲ್ಲಿ ಇರುತ್ತಾರೆ. ಕೆಲವೊಮ್ಮೆ ಅವರ ಆಪಾದನೆಗಳು ನಿಜವಾದರೂ ಬಹಳಷ್ಟು ಬಾರಿ ಈ ಮಾತುಗಳಲ್ಲಿ ಹುರುಳಿರುವುದಿಲ್ಲ. ಅಂತಹವರಿಗೆ ನೀವೇನಾದರೂ ತಿಳಿಯಹೇಳಹೊರಟರೆ ನಿಮ್ಮಷ್ಟು ಮೂರ್ಖರು ಮತ್ತೊಬ್ಬರಿಲ್ಲ. ಅವರದು ಒಂದು ರೀತಿಯ ಅರೆಬೆಂದ ಪರಿಸ್ಥಿತಿ. ಪೂರ್ತಿ ತಿಳಿದವರಿಗೆ ಮತ್ತು ಏನೂ…

Read More

ಬುಧವಾರ 87 ಮಂದಿಗೆ ಪಾಸಿಟಿವ್ ಧೃಡ | ಒಬ್ಬರ ಸಾವು | ಸಕ್ರಿಯ ಪ್ರಕರಣಗಳು 672ಕ್ಕೆ ಇಳಿಕೆ ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 38 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 87 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಬುಧವಾರ ಕೋವಿಡ್ ನಿಂದ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,589 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.14ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಸೋಂಕಿತರಲ್ಲಿ 672 ಮಂದಿ ಮನೆ ಆರೈಕೆಗೆ ಒಳಗಾದರೆ, 24 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ಸೋಂಕಿತರು ತೀವ್ರ ನಿಗಾ…

Read More

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಸಿಎಂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಮಂಗಳವಾರ ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ.…

Read More

ಡಿಸಿಎಂ ಡಿ.ಕೆ.ಶಿವಕುಮಾರ ಸ್ಪಷ್ಠನೆ ಸಿಎಂ ಪುತ್ರ ಯತೀಂದ್ರ ಅವರ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತಿ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಿಎಂ ಪುತ್ರ ಯತೀಂದ್ರ ಅವರು ಹೇಳಿದ್ದು, ಈ ಹೇಳಿಕೆ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದರು.ನಮ್ಮ‌ ಸರ್ಕಾರ ಬಲಿಷ್ಠವಾಗಿದೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ. ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.ಸಿದ್ದರಾಮಯ್ಯ…

Read More

ವಿಜಯಪುರ: ಭಾರತ ಆಧ್ಯಾತ್ಮಿಕ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದ್ದು ಸ್ವಾಮಿ ವಿವೇಕಾನಂದರು. ಇಂದಿನ ಯುವ ಜನತೆ ವಿವೇಕಾನಂದರ ಜೀವನ ಅರಿಯುವದರ ಜೊತೆಗೆ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಬೊಮ್ಮನಹಳ್ಳಿ ಗವಿಮಠ ಗುರುಶಾಂತ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜಿಲ್ಲಾ ತಾಲೂಕು ಹಾಗೂ ನಗರ ಸಯುಕ್ತ ಘಟಕದ ಆಶ್ರಯದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಕುರಿತು ಚಿಂತನಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಮಸೂತಿ ಜಗದೀಶ್ವರ ಹಿರೇಮಠದ ಪ್ರಭು ಕುಮಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ, ಸ್ವಾಮಿ ವಿವೇಕಾನಂದರು ಜಗತ್ತಿಗೆ ವಿಕಾಸ ಸಂದೇಶ ಸಾರಿದರು. ಅವರು ಚಿಕ್ಯಾಗೋದಲ್ಲಿ ಮಾಡಿದ ಭಾಷಣ ವಿಶ್ವ ಭ್ರಾತೃತ್ವವನ್ನು ಅವರ ವಿಚಾರ ಶ್ರೇಷ್ಠತೆಯನ್ನು ಸಾರುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ಕೂಡ್ಗಿ ಸಹಕಾರ ಸಂಘದ ವ್ಯವಸ್ಥಾಪಕ ಸಂಗಮೇಶ ಬಿಜಾಪುರ ಮಾತನಾಡಿ, ವಿವೇಕಾನಂದರ ಜೀವನ ಸಂದೇಶವನ್ನು ಬಾಳಿನಲ್ಲಿ ಅಳವಡಿಸಿಕೊಳ್ಳಬೇಕೆಂದರು.ಹಸಿದವರ ಅಸಹಾಯಕರ ನಿರ್ಗತಿಕರ ಸೇವೆಯಲ್ಲಿ ದೇವರನ್ನು ಕಾಣಬೇಕು. ಅಮೇರಿಕಾ ದೇಶಕ್ಕೆ ವಿವೇಕಾನಂದರನ್ನು ಮೈಸೂರು ಒಡೆಯರು ಸಹಾಯ ಮಾಡಿದ್ದು ನಾಡಿನ ಹೆಮ್ಮೆ ವಿಷಯ ಎಂದರು.ಮುಖ್ಯ ಅತಿಥಿಗಳಾಗಿ…

Read More

ವಿಜಯಪುರ: ವಿಜಯಪುರ ತಾಲೂಕಿನ ಹೊನ್ನುಟಗಿ ಗ್ರಾಮದ ೫೫ ವರ್ಷದ ಪ್ರಕಾಶ ಸಂಗಪ್ಪ ಚೂರಿ ಎಂಬ ವ್ಯಕ್ತಿ ದಿನಾಂಕ : ೦೪-೦೫-೨೦೨೩ ರಿಂದ ಹೊನ್ನುಟಗಿಯಿಂದ ಕಾಣೆಯಾಗಿರುವ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿ ಪತ್ತೆಗೆ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾಗಿರುವ ವ್ಯಕ್ತಿಯು ೫.೮ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣ ಕೋಲುಮುಖ, ಉದ್ದ ಮೂಗು, ಕುರುಚಲು ಗಡ್ಡ ಬಿಟ್ಟಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಬಲ್ಲವನಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟೀ ಶರ್ಟ ಹಾಗೂ ಚಾಕಲೇಟ್ ಬಣ್ಣದ ಪ್ಯಾಂಟ್ ಧರಿಸಿದ್ದನು. ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಸಾರ್ವಜನಿಕರು ಪೊಲೀಸ್ ಅಧೀಕ್ಷಕರು ದೂ: ೦೮೩೫೨-೨೫೦೧೫೨, ಜಿಲ್ಲಾ ನಿಸ್ತಂತು ಕಚೇರಿ ದೂ: ೦೮೩೫೨-೨೫೦೮೪೪, ವಿಜಯಪುರ ಗ್ರಾಮೀಣ ಠಾಣೆ ದೂ: ೦೮೩೫೨-೨೫೦೯೨೩ ಸಂಖ್ಯೆಗೆ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ ೨೬ ರಂದು ಜರುಗುವ ಗಣರಾಜ್ಯೋತ್ಸವ ಅಂಗವಾಗಿ ೨೦೨೩-೨೪ನೇ ಸಾಲಿನಲ್ಲಿ ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ದಿನಾಂಕ : ೨೩-೦೧-೨೦೨೪ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫, ಮೊ: ೭೦೧೯೧೬೭೨೪೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More