Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಾದ್ಯಂತ ಜನರು ಸೋಮವಾರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.ರೈತ ಬಾಂಧವರು ತಮ್ಮ ಹೊಲದಲ್ಲಿ ಬೆಳೆದು ನಿಂತಿದ್ದ ಬೆಳೆಯಲ್ಲಿನ ಐದು ಜೋಳದ ತೆನೆ, ಗೋಧಿ ತೆನೆ, ಕಡಲೆ ಗಿಡ ಮಾರುಕಟ್ಟೆಯಲ್ಲಿ ಖರೀದಿಸಿದ್ದ ಬಾರಿಹಣ್ಣು ಸೇರಿದಂತೆ ವಿವಿಧ ಹಣ್ಣುಗಳನ್ನು ತಂದು ಮನೆಯಲ್ಲಿನ ದೇವರ ಜಗುಲಿ ಮೇಲೆ ಇಟ್ಟು ದೇವರ ಪೂಜೆಯೊಂದಿಗೆ ಬೆಳೆಗಳ ತೆನೆಗಳಿಗೆ ಪೂಜೆ ಸಲ್ಲಿಸಿದರು. ಹಬ್ಬಕ್ಕಾಗಿ ತಯಾರಿಸಿದ ವಿವಿಧ ಖಾದ್ಯದೊಂದಿಗೆ ಎಳ್ಳು, ಬೆಲ್ಲದೊಂದಿಗೆ ಮನೆಯ ದೇವರಿಗೆ ನೈವೇದ್ಯ ಅರ್ಪಿಸಿದರು.ಸಂಜೆ ಕುಟುಂಬ ಸದಸ್ಯರು ಎಳ್ಳು, ಬೆಲ್ಲ, ಕಾಯಿ ಕರ್ಪೂರದೊಂದಿಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರು, ಸಂಬಂಧಿಕರು, ಹಿರಿಯರು, ಸ್ನೇಹಿತರಿಗೆ ಪರಸ್ಪರ ಎಳ್ಳು ಬೆಲ್ಲ (ಕುಸುರೆಳ್ಳು) ವಿನಿಮಯ ಮಾಡಿಕೊಂಡು ಹಬ್ಬದ ಶುಭಾಶಯ ಕೋರಿದರು.ಲಕ್ಷ್ಮೀ ನಗರದಲ್ಲಿ ವಿಶಿಷ್ಟ ಆಚರಣೆ : ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳು ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದು ಗಮನ ಸೆಳೆಯಿತು. ಮಹಿಳೆಯರು ಬಡಾವಣೆಯ ವಿಶಾಲ ಜಾಗೆಯನ್ನು ಸ್ವಚ್ಛಗೊಳಿಸಿ, ನೀರು ಸಿಂಪಡಿಸಿ ರಂಗವಲ್ಲಿ…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಎಸ್.ಆರ್.ಹೈಸ್ಕೂಲನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಜ.17 ರಂದು ಮಧ್ಯಾಹ್ನ 3 ಗಂಟೆಗೆ ಲಿಂ.ಬಿ.ಎಸ್.ಪಾಟೀಲ ಮಹಾರಾಜರು, ಲಿಂ.ಶ್ರೀಶೈಲಪ್ಪ ಧನಶೆಟ್ಟಿ, ಲಿಂ.ಮುರಿಗೆವ್ವ ಲಿಂ.ಮಲಕಾಜಪ್ಪ ಅಳ್ಳಗಿ ಇವರ ಸ್ಮರಣಾರ್ಥ ದತ್ತಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವಿ.ಬಿ.ಮರ್ತುರ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ವಿದ್ಯಾವರ್ಧಕ ಸಂಘದ ನಿರ್ದೇಶಕ ಕೈಲಾಸ ಗುರಪ್ಪ ಸಜ್ಜನ ಕಾರ್ಯಕ್ರಮ ಉದ್ಘಾಟಿಸುವರು. ವಿಜಯಪುರದ ಫ.ಗು.ಹಳಕಟ್ಟಿ ಇಂಜನಿಯರಿಂಗ್ ಕಾಲೇಜಿನ ಪ್ರೊ.ಎಂ.ಐ.ಸಕ್ಕರಿ ಉಪನ್ಯಾಸ ನೀಡುವರು. ಮುಖ್ಯಶಿಕ್ಷಕ ಬಿ.ಬಿ.ಪಾಟೀಲ, ನಿವೃತ್ತ ಶಿಕ್ಷಕ ಆರ್.ಜಿ.ಅಳ್ಳಗಿ, ಎಸ್.ಬಿ.ಐ ನಿವೃತ್ತ ವ್ಯವಸ್ಥಾಪಕ ವೀರೇಶ ಕುಂಟೋಜಿ, ಕದಳಿ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ, ಯುವ ಘಟಕದ ಅಧ್ಯಕ್ಷ ಶರಣು ಬಸ್ತಾಳ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.2023-24ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ವೆಬಸೈಟ್www.schooleducation.kar.nic.inಮೂಲಕ ಫೆ.6 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ ಮುಖ್ಯಶಿಕ್ಷಕ ಸುಭಾಸ ಹರಿಜನ (9880789382) ಹಾಗೂ ಚಿತ್ರಕಲಾ ಶಿಕ್ಷಕ ಸಿ.ಜಿ.ಬಾಗೇವಾಡಿ (9481573922) ಅವರನ್ನು ಸಂಪರ್ಕಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ತಾಲೂಕಿನ ನಾಗೂರ ಗ್ರಾಮದ ಯಮನೂರೇಶ್ವರ ದೇವಸ್ಥಾನ ಆವರಣದಲ್ಲಿ ಜ.೧೭ ರಂದು ಸಂಜೆ ೬ ಗಂಟೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಚನ್ನಬಸವಸ್ವಾಮೀಜಿ, ಸಿದ್ದರಾಮ ಸ್ವಾಮೀಜಿ, ಡಾ.ಸಿದ್ದಲಿಂಗ ಸ್ವಾಮೀಜಿ, ಗುರುಸಂಗನಬಸವ ಸ್ವಾಮೀಜಿ, ವೀರರುದ್ರಮುನಿ ಶಿವಾಚಾರ್ಯರು, ಅಭಿನವ ಸಂಗನಬಸವ ಶಿವಾಚಾರ್ಯರು, ಸಿದ್ದಲಿಂಗ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯರು, ಬೃಂಗೀಶ್ವರಲಿಂಗ ಶಿವಾಚಾರ್ಯರು, ಶಿವಕುಮಾರ ಸ್ವಾಮೀಜಿ, ಶಿವಪುತ್ರಯ್ಯ ಸ್ವಾಮೀಜಿ, ದಾಕ್ಷಾಯಣಿ ಅಮ್ಮನವರು ವಹಿಸವರು. ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಶಾಸಕ ರಾಜುಗೌಡ ಪಾಟೀಲ ಅವರು ನಾಡದೇವಿ ಭಾವಚಿತ್ರಕ್ಕೆ ಪುಷಾರ್ಚನೆಗೈಯುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ವಹಿಸುವರು. ತಾಲೂಕು ಕಸಾಪ ನೂತನ ಅಧ್ಯಕ್ಷ ಶಿವಾನಂದ ಡೋಣೂರ ಆಶಯ ನುಡಿಗಳನ್ನಾಡುವರು. ಮುಖ್ಯಅತಿಥಿಗಳಾಗಿ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಸಂಗನಗೌಡ ಚಿಕ್ಕೊಂಡ, ಶಿವನಗೌಡ ಬಿರಾದಾರ, ಭರತ ಅಗರವಾಲ, ಶಿವಾನಂದ ಮಂಗಾನವರ, ಚಂದ್ರೇಶೇಖರ…
ವಿಜಯಪುರ: ೨೦೨೪ ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಚಾಲನೆ ನೀಡಿದರು.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯ ರೂಪಿಸಲಾಗಿದೆ.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯವಾಗಿದೆ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಿ ವಿಶ್ರಾಂತಿ, ರಜೆಯನ್ನು ಪಡೆಯದೇ ಕೆಲಸ ಮಾಡುತ್ತಿರುವ ಮೋದಿಜಿ ಅವರಂತಹ ಪ್ರಧಾನಿಯನ್ನು ಪಡೆದಿದ್ದೆ ಒಂದು ಸುದೈವ ಎಂದರು.ಮೋದಿಜಿ ಅವರ ಕಾಲಘಟ್ಟದಲ್ಲಿ ಪ್ರಾಮಾಣಿಕ, ಜನಪರ ಹಾಗೂ ಪರಿಶುದ್ಧ ಆಡಳಿತ ಪ್ರತಿಯೊಬ್ಬ ಭಾರತೀಯರ ಮನಗೆದ್ದಿದೆ, ವಿದೇಶಿ ರಾಷ್ಟ್ರಗಳು ಸಹ ಮೋದಿಜಿ ನಾಯಕತ್ವಕ್ಕೆ ಮನಸೋತಿವೆ ಎಂದರು.ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಭವ್ಯ ರಾಮಮಂದಿರ ನಿರ್ಮಾಣ, ಕಪ್ಪು ಹಣದ ವಿರುದ್ದ ಸಮರ, ಉಜ್ವಲ ಯೋಜನೆ ಮೂಲಕ ಮನೆ ಮನೆಗೆ ಅಡುಗೆ…
ವಿಜಯಪುರ: ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಇರುವ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿಶ್ರೀ ನರೇಂದ್ರ ಮೋದಿಜೀ ಅವರ ಕರೆ ಮೇರೆಗೆ ವಿಜಯಪುರ ನಗರದ ವಾರ್ಡ್ ನಂಬರ್ 1 ರ ಅದೃಷ್ಟಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಕಾರಜೋಳ ಮಾತನಾಡಿ, ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆಯಾಗುತ್ತಿರುವುದು ಪ್ರತಿ ಭಾರತೀಯನ ಭಕ್ತಿಯ ಪ್ರತೀಕ, ರಾಮನ ಜನ್ಮಭೂಮಿಯಲ್ಲಿ ಭವ್ಯ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ, ಇದು ಪ್ರತಿಯೊಬ್ಬರು ಸಂತಸ ಪಡುವ ಸಂಗತಿ. ಮರ್ಯಾದಾ ಪುರಷೋತ್ತಮ ರಾಮ ಆದರ್ಶ ಆಡಳಿತದ ಪ್ರತಿರೂಪ ಕೂಡ ಹೌದು, ಹೀಗಾಗಿ ರಾಮ ಮಂದಿರ ಲೋಕಾರ್ಪಣೆಯನ್ನು ಜನಸೇವಾ ಕಾರ್ಯ, ಭಕ್ತಿ ಭಾವ ಮೂಡಿಸುವ ಮಂದಿರಗಳ ಸ್ವಚ್ಛ ತೆ ಕಾರ್ಯದ ಮೂಲಕ ಸೇವೆಯ ಮೂಲಕವೇ ಸಂಭ್ರಮಿಸಲಾಗುತ್ತಿದೆ, ಈ ಕಾರಣಕ್ಕೆ ಹೆಮ್ಮೆಯ ಪ್ರಧಾನಿ ಈ ಕರೆ ಕೊಟ್ಟಿದ್ದಾರೆ, ಎಲ್ಲರೂ ಸಹ ನಮ್ಮ ಭಕ್ತಿ ಕೇಂದ್ರಗಳ…
Udayarashmi kannada daily newspaper
– ಪ್ರೊ. ರಹಮತ್ ತರೀಕೆರೆ 2023ನೇ ಇಸವಿಯ ಮುಖ್ಯ ಘಟನೆಯೆಂದರೆ, ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದು ಮತ್ತು ರಾಜಕೀಯವಾಗಿ ದಕ್ಷಿಣ ಭಾರತವು ಅಡಳಿತದಲ್ಲಿ ಬಿಜೆಪಿ ಮುಕ್ತವಾಗಿದ್ದು. ಈ ಫಲಿತಾಂಶವು ಇಡೀ ಭಾರತದ ರಾಜಕಾರಣದ ದಿಕ್ಕನ್ನು ನಿರೂಪಿಸಬಹುದು ಎಂದು ಆಶಿಸಲಾಗಿತ್ತು. ಆದರೆ ಛತ್ತೀಸಗಢ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿಯ ಗೆಲುವು, ಕೌಬೆಲ್ಟ್ ಎನ್ನಲಾಗುವ ಉತ್ತರ ಭಾರತದ ಆಲೋಚನಾ ಕ್ರಮವು ಬೇರೆಯೇ ಇದೆ ಎಂಬುದನ್ನು ಸೂಚಿಸಿತು. ದಕ್ಷಿಣ ಭಾರತದಲ್ಲಿ ರಾಜಕೀಯವಾಗಿ ಬಿಜೆಪಿ ಸೋತರೂ, ಅದರ ಮತಗಳಿಕೆ ಕಡಿಮೆಯಾಗಿಲ್ಲ; ಸಮಾಜದಲ್ಲಿ ಸಂಘಪರಿವಾರವು ಬಿತ್ತಿದ ಆಲೋಚನೆಗಳು ಪ್ರಭಾವಶಾಲಿಯಾಗಿವೆ.ಈ ಮಿತಿಗಳಲ್ಲೂ 2023ನೇ ವರ್ಷದಲ್ಲಿ ನಡೆದ ಐದು ರಾಜ್ಯಗಳ ಚುನಾವಣೆಗಳು, ಉತ್ತರ-ದಕ್ಷಿಣಗಳಲ್ಲಿರುವ ಒಂದು ವ್ಯತ್ಯಾಸವನ್ನು ಸೂಚಿಸಿವೆ. ಅದೆಂದರೆ ಹಾರ್ದಿಕವಾದ ಸಾಮಾಜಿಕ ಸಂಬಂಧ ಮತ್ತು ಆರ್ಥಿಕ ಏಳಿಗೆಯ ಪ್ರಶ್ನೆಗಳಿಗಿಂತ ‘ಧಾರ್ಮಿಕ’ ಎನ್ನಲಾಗುವ ವಿಷಯಗಳಿಗೆ ಉತ್ತರದ ನೆಲದಲ್ಲಿ ಹೆಚ್ಚು ನೀರುಗೊಬ್ಬರಗಳಿವೆ ಎನ್ನುವುದು. ಈ ತರ್ಕದ ಮುಂದುವರಿಕೆ ಎಂಬಂತೆ, ಈಗ ಅಯೋಧ್ಯೆಯಲ್ಲಿ ರಾಮಮಂದಿರವು, ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಉದ್ಘಾಟನೆಯಾಗುತ್ತಿದೆ. ಇದರ ಬೆನ್ನಲ್ಲೇ 2024ನೇ ಇಸವಿಯ…
ಅಯೋಧ್ಯೆ ರಾಮ ಮಂದಿರದಲ್ಲಿ ಜ.22ರಂದು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಮೂರ್ತಿ ಪ್ರತಿಷ್ಠಾಪನೆ ಮೈಸೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಜ.22ರಂದು ನಡೆಯಲಿದೆ. ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀ ರಾಮನ ಪ್ರತಿಮೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಸಂಕ್ರಾಂತಿ ದಿನವಾದ ಸೋಮವಾರ ಈ ಕುರಿತು ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದೆ.ಅಯೋಧ್ಯೆಯ ಶ್ರೀ ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮಧ್ಯಾಹ್ನ 12.20ಕ್ಕೆ ಪ್ರಾಣ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮ ಲಲ್ಲಾ ಮೂರ್ತಿಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.…
ತಿಕೋಟಾ: ಭಾರತವು ಉನ್ನತ ಆದರ್ಶವಾದವನ್ನು ಹೊಂದಿತ್ತು, ಅದನ್ನು ಸ್ವಾಮೀಜಿ ಪಾಲಿಸಬೇಕೆಂದು ಬಯಸಿದ್ದರು, ಆದರೆ ಲಕ್ಷಾಂತರ ಜನರು ಹಸಿವಿನಿಂದ ಬಳಲುತ್ತಿರುವ ಆದರ್ಶವಾದವು ಅರ್ಥಹೀನವಾಗಿತ್ತು. ಹೀಗಾಗಿ, ಮನೆಗೆ ಹಿಂತಿರುಗಿ, ಅವರು ಉನ್ನತ ತತ್ವಶಾಸ್ತ್ರಕ್ಕಿಂತ ಸಾಮಾಜಿಕ ಸಮಸ್ಯೆಗಳ ಬಗ್ಗೆ ಹೆಚ್ಚು ಮಾತನಾಡಿದರು ಎಂದು ತೆಲಸಂಗದ ವಿರೇಶ್ವರ ದೇವರು ಮಾತನಾಡಿದರು.ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಹೋರಾಟ ದೊಡ್ಡದಾದಷ್ಟೂ ಗೆಲುವು ಅಮೋಘ. ಒಂದು ಸಮಯದಲ್ಲಿ ಒಂದು ಕೆಲಸವನ್ನು ಮಾಡಿ, ಮತ್ತು ಹಾಗೆ ಮಾಡುವಾಗ ನಿಮ್ಮ ಸಂಪೂರ್ಣ ಆತ್ಮವನ್ನು ಅದರಲ್ಲಿ ಇರಿಸಿ ಎಂದು ಅಧ್ಯಕ್ಷತೆ ವಹಿಸಿದ ಎಸ್ ಜಿ ಲಕ್ಕುಂಡಿಮಠ ಹೇಳಿದರು.ಅಧ್ಯಯನಕ್ಕೆ ಏಕಾಗ್ರತೆ ಅಗತ್ಯ, ಏಕಾಗ್ರತೆಗೆ ಧ್ಯಾನ ಅಗತ್ಯ ಎಂದ ಸ್ವಾಮಿಯವರು ಧಾರ್ಮಿಕ ಬೆಳವಣಿಗೆಯನ್ನು ಶಿಕ್ಷಣದ ಮುಖ್ಯ ಗುರಿಯಾಗಿ ಪರಿಗಣಿಸಿದ್ದರು ಎಂದು ರೇ ಸಿ ಪಾಟೀಲ ಹೇಳಿದರು.ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆಯಾದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬಾಲ ಪ್ರತಿಭಾ ಪುರಸ್ಕೃತರಾದ ಕು.ಅದ್ವಿತಾ ಬಡಿಗೇರ,…
