Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ನಿಸರ್ಗದ ಒಂದೊಂದು ಸಣ್ಣ ಅಂಶದಲ್ಲೂ ಜೀವನೋತ್ಸಾಹವನ್ನು ಕಾಣುವ ಕವಿ ಕುವೆಂಪು ಅವರು ಯುವ ಪ್ರತಿಭೆಗಳಿಗೆ ಆದರ್ಶ ಕವಿಯಾಗಿ ಇಂದಿಗೂ ಅವರ ಕೃತಿಗಳ ಮೂಲಕ ಜೀವಂತವಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಉಮದಿ ಸರ್ವೋದಯ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ ಸುರೇಖಾ ಹೊರ್ತಿಕರ್ ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಕನ್ನಡ ವಿಭಾಗ ಆಯೋಜಿಸಿದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ನಡೆದ ವಿಶ್ವಮಾನವ ದಿನಾಚರಣೆ, ಸಂದರ್ಭದಲ್ಲಿ ಕುವೆಂಪು ಅವರ ಸಾಹಿತ್ಯದಲ್ಲಿ ನಿಸರ್ಗ ಪ್ರೇಮ ಕುರಿತು ಅವರು ಮಾತನಾಡುತ್ತಾ ಕುವೆಂಪು ಅವರು ರಚಿಸಿದ ಕಥೆ, ಕಾದಂಬರಿ, ನಾಟಕ, ಕವಿತೆಯಂತಹ ಉತ್ಕೃಷ್ಟ ಸಾಹಿತ್ಯ ಇಂದಿಗೂ ಓದಿದ ಪ್ರತಿಯೊಬ್ಬರಿಗೂ ಜೀವನೋತ್ಸವ ತುಂಬುತ್ತಿದೆ. ಅದರಲ್ಲಿ ಬೆಳಗಿನ ಉಲ್ಲಾಸದ ವಾತಾವರಣ, ತರಂಗಗಳಲ್ಲಿ ನಿಸರ್ಗ ಪ್ರೇಮದಲ್ಲಿ ವಿಹಾರಿಸುವ ಕುರಿತು ಅದ್ಭುತವಾಗಿ ವರ್ಣಿಸಿದರು.ವಿಶ್ರಾಂತ ಪ್ರಾಚಾರ್ಯ ಎಸ್. ಜಿ. ಜಂಗಮಶೆಟ್ಟಿ ಮಾತನಾಡಿ ಕುವೆಂಪು ಅವರು ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶವನ್ನು ಪ್ರಸ್ತುತಪಡಿಸಿದ್ದು, ಮಾನವ…
Udayarashmi kannada daily newspaper
ವಿಜಯಪುರ: ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಷ್ರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷದ ೧೩೯ನೇ ಸಂಸ್ಥಾಪನಾ ದಿನಾಚರಣೆ ಇಂದಾಗಿದೆ. ಸ್ವಾತಂತ್ರ್ಯಾ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಓದಿ ಸ್ವೀಕರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರಅಹ್ಮದ ಬಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆರತಿ ಶಹಾಪೂರ, ಅಬ್ದುಲ್‌ರಜಾಕ ಹೊರ್ತಿ, ದಿನೇಶ ಹಳ್ಳಿ, ಕಾಂಗ್ರೆಸ್ ಮುಖಂಡರಾದ ಬಲರಾಮ ನಾಯಕ, ಜಿಲ್ಲಾ…
ಸಿಎಂ ಸಿದ್ದರಾಮಯ್ಯ ಘೋಷಣೆ | ಫೆ.28 ರವರೆಗೆ ಗಡುವು | ಕಾನೂನು ಸುವ್ಯವಸ್ಥೆ ಕಾಪಾಡಲು ಮನವಿ ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ.60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಗುರುವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದರು.ಈ…
ವಿಜಯಪುರ: ಶ್ರೀ ಸಿದ್ಧೇಶ್ವರ ಅಪ್ಪನವರ ನಡೆ ಮತ್ತು ನುಡಿ ನಮ್ಮೆಲ್ಲರಿಗೂ ಸ್ಪೂರ್ತಿ. ಜೀವನದಲ್ಲಿ ಏನು ಅಪೇಕ್ಷೆ ಪಡೆಯದೆ ಆಶಯಗಳು ಇಲ್ಲದ ಬದುಕನ್ನು ನಮಗ್ಯಾರಾದರು ಕಲಿಸಿದ್ದಾರೆ ಎಂದಾದರೆ ಅದು ಪೂಜ್ಯ ಸಿದ್ಧೇಶ್ವರ ಮಹಾ ಸ್ವಾಮೀಜಿಯವರು ಎಂದು ಜವಳಿ ಮತ್ತು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ “ಗ್ರಾಮೀಣ ಜನರ ಬದುಕು” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ೬ನೇ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಈಗ ಎಲ್ಲಿಂದಲೋ ಜನ ಗೋಳಗುಮ್ಮಟ ನೋಡುವ ಬದಲು ಜ್ಞಾನ ಗುಮ್ಮಟವನ್ನು ನೋಡಲು ವಿಜಯಪುರಕ್ಕೆ ಬರುತ್ತಿದ್ದರು ಎಂದರೆ ಅವರ ವ್ಯಕ್ತಿತ್ವದ ಶಕ್ತಿ ನಮಗೆ ಅರ್ಥವಾಗುತ್ತದೆ. ಅವರು ಬದುಕು ಇಡೀ ಜಗತ್ತಿಗೆ ಒಂದು ಮಾರ್ಗದರ್ಶಕ ಎಂದರೆ ತಪ್ಪಾಗಲಾರದು. ಎಲ್ಲ ತತ್ವಜ್ಞಾನಿಗಳನ್ನು ನಾವು ನೋಡಲು ಸಾಧ್ಯವಾಗಲಿಲ್ಲ. ಬದಲಿಗೆ ಎಲ್ಲ ತತ್ವಜ್ಞಾನಿಗಳ ಕುರಿತು ಶ್ರೀ ಸಿದ್ಧೇಶ್ವರ ಅಪ್ಪನವರ ಮಾತಿನ ಮೂಲಕ ನಾವು ಕಂಡಿದ್ದೇವೆ ಎಂದು…
ತಲೆನೋವಾದ ಪಾರ್ಕಿಂಗ್ ಸಮಸ್ಯೆ | ಹೆಚ್ಚುತ್ತಿರುವ ವಸತಿ ವ್ಯವಸ್ಥೆ | ಹೆಚ್ಚುವರಿ ಸಂಗೀತ ಕಾರಂಜಿ ಪ್ರದರ್ಶನ *- ಸಂಪದಾ ಹಿರೇಮಠ*ಆಲಮಟ್ಟಿ: ಕಳೆದ ೧೫ ದಿನಗಳಿಂದ ಆಲಮಟ್ಟಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ನಿತ್ಯವೂ ಹೆಚ್ಚುತ್ತಿದೆ.ನಿತ್ಯವೂ ೫ ಸಾವಿರಕ್ಕೂ ಅಧಿಕ ಪ್ರವಾಸಿಗರು ಆಲಮಟ್ಟಿಯ ವಿವಿಧ ಉದ್ಯಾನ ವೀಕ್ಷಣೆಗೆ ಆಗಮಿಸುತ್ತಿದ್ದು, ವಾಹನಗಳ ಪಾರ್ಕಿಂಗ್ ದೊಡ್ಡ ತಲೆನೋವಾಗಿದೆ. ವಾಹನಗಳ ಸಮರ್ಪಕ ಹೋಗಲು ಹರಸಾಹಸ ಪಡಬೇಕಾಗಿದೆ. ರಾಜ್ಯದ ನಾನಾ ಕಡೆಯಿಂದ ಬೆಳಿಗ್ಗೆಯಿಂದಲೇ ಆಲಮಟ್ಟಿಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ. ಸಂಜೆ ೪ ರ ನಂತರವಂತೂ ಆ ಸಂಖ್ಯೆ ಇನ್ನೂ ದುಪ್ಪಟ್ಟಾಗುತ್ತದೆ. ಸಂಗೀತ ಕಾರಂಜಿ, ಮೊಘಲ್ ಉದ್ಯಾನ, ಲೇಸರ್ ಫೌಂಟೇನ್, ವಿಜ್ಞಾನ ಪಾಕರ್uಟಿಜeಜಿiಟಿeಜ ಒಳಗೊಂಡ ೭೭ ಎಕರೆ ಪ್ರವಾಸಿ ಸಮುಚ್ಛಯದ ಉದ್ಯಾನಕ್ಕೆ ಭೇಟಿ ನೀಡುವವರ ಸಂಖ್ಯೆಯಂತೂ ಹೆಚ್ಚಿದೆ.ರಾಕ್ ಉದ್ಯಾನ, ಸಂಗೀತ ಕಾರಂಜಿ ಬಳಿ ಉದ್ಯಾನದ ಪ್ರವೇಶ ದರದ ಟಿಕೇಟ್ ಪಡೆಯಲು ಹರಸಾಹಸ ಪಡಬೇಕಾಗಿದೆ. ಅದಕ್ಕಾಗಿ ಹೆಚ್ಚಿನ ಟಿಕೆಟ್ ಕೌಂಟರ್ ವ್ಯವಸ್ಥೆಯಿದ್ದರೂ, ನಿಯಂತ್ರಣಕ್ಕೆ ಬರುತ್ತಿಲ್ಲ.ನಿತ್ಯ ೩ ಲೇಸರ್ ಪ್ರದರ್ಶನ:೧೦೦೦ ಜನ ವೀಕ್ಷಿಸುವ ಅವಕಾಶವಿರುವ ಲೇಸರ್ ಫೌಂಟೇನ್…
ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜನವರಿ ೦೬ ರಿಂದ ೧೨ ರವರೆಗೆ ಜರುಗುವ ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ-೧ ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ದೂ:೦೮೩೫೨-೨೫೧೩೪೪ ಹಾಗೂ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ಥಳೀಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ : ಕಲ್ಯಾಣ ಕರ್ನಾಟಕ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಿ.೨೯ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ವಿಶೇಷ ಉಪನ್ಯಾಸಕರಾಗಿ ಶ್ರೀಮತಿ ಪೂಜಾ ಕೆ.ಎಸ್. ಹಾಗೂ ಕುಮಾರಿ ರಕ್ಷಂದಾ…
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ವತಿಯಿಂದ ಡಾ.ಅಂಬೇಡ್ಕರ್ ಓದು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಕುರಿತು ವಿಶೇಷ ಡಿ.೨೮ರಂದು ನಗರದ ದರಬಾರ ಶಾಲೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾವರ್ಧಕ ಸಂಘದ ಸಂಯೋಜನಾಧಿಕಾರಿ ಡಾ.ವಿ.ಬಿ.ಗ್ರಾಮಪುರೋಹಿತ ಅವರು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಡಾ.ಅಂಬೇಡ್ಕರ್ ಅವರಲ್ಲಿನ ಓದಿನ ಹಂಬಲ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಟಿ.ಆರ್.ಕುಲಕರ್ಣಿ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಈ ಸಂವಿಧಾನಕ್ಕನುಗುಣವಾಗಿ ನಡೆಯುವ ಮೂಲಕ ದೇಶವನ್ನು ಅಭಿವೃದ್ದಿಪಥದತ್ತ ಕೊಂಡೊಯ್ಯೋಣ ಎಂದು ಅವರು ಹೇಳಿದರು.ವಿಶೇಷ ಉಪನ್ಯಾಸ ನೀಡಿದ ಎ.ನಾಗರಾಜ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ಮಾತನಾಡಿ ಸ್ವಾಗತಿಸಿದರು. ವಿ.ಬಿ.ಕುಲಕರ್ಣಿ ವಂದಿಸಿದರು. ಜಿ.ಬಿ.ಕುಲಕರ್ಣಿ ನಿರೂಪಿಸಿದರು.
ವಿಜಯಪುರ: ಜಿಲ್ಲೆಯ ೧೧೦/೧೧ ಕೆವ್ಹಿ ಮಟ್ಟಿಹಾಳ ಟ್ಯಾಪ್ ಮಾರ್ಗದ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗೆ ಪ್ರಸ್ತುತ ೧೧೦ ಕೆವ್ಹಿ ಮಲಘಾಣ-ಮಟ್ಟಿಹಾಳ-ರೋಣಿಹಾಳ ಮಾರ್ಗದ ಮುಕ್ತತೆ ಅವಶ್ಯಕತೆ ಇರುವುದರಿಂದ ೧೧೦/೧೧ ಕೆವ್ಹಿ ಮಟ್ಟಿಹಾಳ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಬರುವ ಎಲ್ಲಾ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ೩೩ಕೆವ್ಹಿ ವಿಜಯಪುರ ನಗರ ಕುಡಿಯುವ ನೀರಿನ ಸ್ಥಾವರಗಳಿಗೆ & ೩೩ ಕೆವ್ಹಿ ಕಾರಜೋಳ ಎಲ್.ಆಯ್.ಎಸ್. ಮಾರ್ಗಗಳಿಗೆ ಡಿ.೨೯ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
