Author: editor.udayarashmi@gmail.com

ಹಡಗಿನಾಳದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ನಾಡಗೌಡ ಸ್ಪಷ್ಠನೆ ತಾಳಿಕೋಟಿ: ಮತಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಮೂಲಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ ಸಮರ್ಪಕ ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣವನ್ನು ಒದಗಿಸಲು ಆದ್ಯತೆಯೊಂದಿಗೆ ಕೆಲಸ ಮಾಡಲಾಗುವುದು ಎಂದು ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಬುಧವಾರ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂತನ ಹಡಗಿನಾಳ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ವಿಜಯಪುರ ತಾಲೂಕು ಪಂಚಾಯತ್ ತಾಳಿಕೋಟೆ ಹಾಗೂ ಮೂಕಿಹಾಳ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಜನಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಗ್ರಾಮಸ್ಥರಿಂದ ಗ್ರಾಮದಲ್ಲಿರುವ ಸಮಸ್ಯೆಗಳ ಕುರಿತು ಅವರು ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ಹಡಗಿನಾಳ ಗ್ರಾಮವು ಸ್ಥಳಾಂತರಗೊಂಡ ನೂತನ ಗ್ರಾಮವಾಗಿರುವುದರಿಂದ ಇಲ್ಲಿ ಹಲವಾರು ಸಮಸ್ಯೆಗಳು ಇರುವುದು ನಿಜ. ಮೂಲವಾಗಿ ಶುದ್ಧ ಕುಡಿಯುವ ನೀರಿನ ತೊಂದರೆ ಇದ್ದು ಲಭ್ಯ ಇರುವ ನೀರು ಫ್ಲೋರೈಡ್ನಿಂದ ಕೂಡಿದೆ. ಇದಕ್ಕಾಗಿ ಇಲ್ಲೊಂದು ಆರ್ ಒ ಪ್ಲಾಂಟ್ ಘಟಕ ಸ್ಥಾಪಿಸುವುದು ಅಗತ್ಯವಾಗಿದೆ.…

Read More

ತಾಳಿಕೋಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒಂದು ಸಮಯದಲ್ಲಿ ಇಡೀ ಜಿಲ್ಲೆಯಲ್ಲಿಯೇ ಒಂದು ಮಾದರಿ ಕೇಂದ್ರವಾಗಿತ್ತು. ಆದರೆ ಇಂದು ಅದರ ವರ್ಚಸ್ಸು ಕ್ಷೀಣಿಸುತ್ತಿದೆ ಸರ್ಕಾರಿ ಆಸ್ಪತ್ರೆಗಳು ಬಡ ರೋಗಿಗಳ ಸೇವಾ ಕೇಂದ್ರಗಳಾಗಿವೆ ಹೊರತು ವ್ಯಾಪಾರಿ ಕೇಂದ್ರಗಳಲ್ಲ ಎಂದು ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಲ್ಲಿಯ ವ್ಯವಸ್ಥೆಯನ್ನು ಪರಿಶೀಲಿಸಿ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಆಸ್ಪತ್ರೆಯಲ್ಲಿಯ ಸೌಕರ್ಯಗಳ ಕುರಿತು ತಾಲೂಕು ಆರೋಗ್ಯ ಅಧಿಕಾರಿ ಡಾ. ಸತೀಶ ತಿವಾರಿ ಹಾಗೂ ಆಡಳಿತ ಅಧಿಕಾರಿ ಡಾ. ಶ್ರೀಶೈಲ ಹುಕ್ಕೇರಿ ಇವರಿಂದ ಮಾಹಿತಿ ಪಡೆದರು. ಕೆಲವು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ನಡೆದ ಅಹಿತಕರ ಘಟನೆಗಳ ಕುರಿತು ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿದ ಅವರು ಯಾವ ಕಾರಣಕ್ಕೂ ಆಸ್ಪತ್ರೆಯ ಸೇವೆಯನ್ನು ನಿಲ್ಲಿಸಬೇಡಿ, ಇಲ್ಲಿಗೆ ಬರುವವರು ಬಡವರು ಹಾಗೂ ಗ್ರಾಮೀಣ ಭಾಗದ ಜನರು ಇದರಿಂದ ಅವರಿಗೆ ತುಂಬಾ ತೊಂದರೆಯಾಗುತ್ತದೆ ಎಂದರು. ಇತ್ತೀಚಿಗೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ…

Read More

ಚಡಚಣ: ಸಮೀಪದ ಶಿರಾಡೋಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರದಂದು ಡಿಡಿಪಿಐ ಎನ್.ಎಚ್.ನಾಗೂರ ಮತ್ತು ವಿಷಯ ಪರಿವೀಕ್ಷಕರಾದ ಶ್ರೀಮತಿ ಎಸ್.ಎ.ಅಳಗಿಯವರು ಭೇಟಿ ನೀಡಿದರು.ಶಾಲಾ ಗುಣಮಟ್ಟ, ಆಂಗ್ಲ ಮಾಧ್ಯಮ ತರಗತಿಗಳು, ಶಾಲೆಯ ಪ್ರಾಯೋಗಿಕ ಕೋಠಡಿ, ಆಟದ ಕೋಠಡಿ, ಶಾಲಾ ಭೌತಿಕ ಸೌಲಬೈಗಳನ್ನು ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಿಡಿಪಿಐ ಎನ್.ಎಚ್.ನಾಗೂರರವರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸುವ, ಅಧ್ಯಾತ್ಮಿಕವಾಗಿ, ದೈಹಿಕವಾಗಿ ಮತ್ತು ಶೈಕ್ಷಣಿಕವಾಗಿ, ಸೃಜನಾತ್ಮಕ ಕೌಶಲ್ಯಗಳು, ಸಾಮಾಜಿಕ ಮತ್ತು ಭಾವನಾತ್ಮಕ ಕೌಶಲ್ಯಗಳು, ರಾಷ್ಟçದ ಮೇಲಿನ ಪ್ರೀತಿ ಮತ್ತು ಪ್ರಕೃತಿಯ ಬಗ್ಗೆ ಕಾಳಜಿಯನ್ನು ಬೆಳೆಸುವುದು. ಶಾಲೆಯ ಸಮರ್ಪಿತ ಶಿಕ್ಷಣತಜ್ಞರು ಸ್ವಾಭಿಮಾನ. ಸಹಿಷ್ಣುತೆ ಮತ್ತು ಒಳನೋಟವನ್ನು ಹೊಂದಿರುವ ಕ್ರಿಯಾತ್ಮಕ ವ್ಯಕ್ತಿಗಳನ್ನು ಶಿಲ್ಪಕಲೆ ಮಾಡುವಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ಮತ್ತು ಸಕ್ರಿಯವಾದ, ಉತ್ತಮ ಗುಣಮಟ್ಟದ, ಆಧುನಿಕ ತಂತ್ರಜ್ಞಾನದ ಕಲಿಕೆ ಮತ್ತು ಅರ್ಥಮಾಡಿಕೊಳ್ಳವ ಚೌಕಟ್ಟಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಅಂತರ್ಗತ ಸಕಾರಾತ್ಮಕ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಹೊರಹಾಕಲು ಈ ಶಾಲೆಯು ಪ್ರಯತ್ನಿಸುತ್ತಿದೆ ಎಂದು ಶಾಲೆಯ ಸರ್ವತೋಮುಖ ಬೆಳವಣಿಗೆಯ ಬಗ್ಗೆ…

Read More

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ಎರಡನೇ ವರ್ಷದ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಖೋ ಖೋ ಕ್ರೀಡೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಯುನಿವರ್ಸಿಟಿ ಬ್ಲ್ಯೂ ಸಾಧನೆ ಮಾಡಿದ್ದಾರೆ.ಬೆಂಗಳೂರಿನಲ್ಲಿ ನಡೆಯಲಿರುವ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಅವರು ವಿವಿಯನ್ನು ಪ್ರತಿನಿಧಿಸುತ್ತಿದ್ದಾರೆ. ತಮಿಳುನಾಡಿನ ತಿರುವೂರಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 30ರ ವರೆಗೆ ಮಹಿಳಾ ಖೋ ಖೋ ಪಂದ್ಯಾವಳಿ ನಡೆಯುತ್ತಿದ್ದು, ಈ ಪಂದ್ಯಾವಳಿಯಲ್ಲಿ ರಾಜೇಶ್ವರಿ ಅಗಸರ ಕರ್ನಾಟಕದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾರೆ.ಈ ಮಧ್ಯೆ, ವಿವಿ ತಂಡಕ್ಕೆ ಆಯ್ಕೆಯಾದ ರಾಜೇಶ್ವರಿ ಅಗಸರ ಅವರಿಗೆ ವಿವಿ ಕುಲಪತಿ ಡಾ. ಎಂ. ಕೆ. ರಮೇಶ ಶುಭ ಹಾರೈಸಿದ್ದಾರೆ. ಅಲ್ಲದೇ, ಉಪಕುಲಸಚಿವ ಡಾ. ವಸಂತ ಶೆಟ್ಟಿ ಅವರು ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.ತಿಕೋಟಾ ನರ್ಸಿಂಗ್ ಕಾಲೇಜೀನ ವಿದ್ಯಾರ್ಥಿನಿ ರಾಜೇಶ್ವರಿ ಅಗಸರ ಅವರ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ…

Read More

ಸ್ವಪಕ್ಷೀಯರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ | ಪಕ್ಷದಿಂದ ಉಚ್ಚಾಟಿಸಿದರೆ ದಾಖಲೆ ಬಿಡುಗಡೆ ಎಚ್ಚರಿಕೆ ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ ಸವಾಲು ಹಾಕಿದ್ದಾರೆ.45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ…

Read More

ಕೊಲ್ಹಾರ: ಪದೇ ಪದೇ ರೈತರಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಸಚಿವ ಶಿವಾನಂದ ಪಾಟೀಲ ಅವರ ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣವೇ ಪಡೆದು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಸಚಿವ ಎಸ.ಕೆ.ಬೆಳ್ಳುಬ್ಬಿ ಒತ್ತಾಯಿಸಿದರು.ಈ ಕುರಿತು ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನದ ಆವರಣದಲ್ಲಿ ಪತ್ರಿಕಾಗೋಷ್ಟಿಯನ್ನು ನಡೆಸಿ ಮಾತನಾಡಿದ ಅವರು, ಒಕ್ಕಲುತನದ ಕೃಷಿ ಚಟುವಟಿಕೆಯ ಗಂಧ ಗಾಳಿ ಗೊತ್ತಿಲ್ಲದ ಹೊಲದಲ್ಲಿ ಬೆವರು ಸುರಿಸಿ ರೈತಾಪಿ ವರ್ಗದವರು ಮಾಡುವ ಕೆಲಸಗಳನ್ನು ಅರಿಯದೇ ಇರುವ ಸಚಿವ ಶಿವಾನಂದ ಪಾಟೀಲ ರೈತನೇ ಅಲ್ಲ. ಅದಕ್ಕಾಗಿಯೇ ರೈತರ ಸಂಕಷ್ಟ ತಿಳಿಯದ ರೈತರಲ್ಲದವರು ಅಧಿಕಾರ ನಡೆಸಿದರೆ ಇಂಥಹ ಹೇಳಿಕೆಗಳನ್ನು ನಾಡಿನ ರೈತ ಬಾಂಧವರು, ಜನತೆ ಪದೆ ಪದೆ ಕೇಳುವಂತಾಗುತ್ತದೆ ಆದ್ದರಿಂದ ಭಾರತೀಯ ಜನತಾಪಕ್ಷ ಮುಂದಿನ ದಿನಮಾನಗಳಲ್ಲಿ ರಾಜ್ಯ ಅಧ್ಯಕ್ಷರ, ಕಾರ್ಯಕರ್ತರ ಸಂಘಟನೆಯೊಂದಿಗೆ ಸಚಿವರ ವಿರುದ್ದ ಬೀದಿಗಿಳಿದು ರಾಜ್ಯಾದ್ಯಾಂತ ಉಗ್ರ ಹೋರಾಟ ಮಾಡುವ ಪರಿಸ್ಥಿತಿ ಬರಬಹುದು ಎಂದರು.ಈ ವರ್ಷದಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮಿನ ಮಳೆ ಕೈಕೊಟ್ಟಿದ್ದರಿಂದ ರಾಜ್ಯಾದ್ಯಂತ ಭೀಕರವಾದ ಬರಗಾಲದ ಛಾಯೆ…

Read More

ಇಂಡಿ: ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚನೆ ಮಾಡಿ ಘೋಷಣೆ ಮಾಡಬೇಕು ಹಾಗೂ ಮುಂದುವರೆದು ಸಂವಿಧಾನದ ವಿಧಿ 371 (ಜೆ)ಗೆ ಸೇರ್ಪಡೆಗೆ ಹಕ್ಕೊತ್ತಾಯಕ್ಕೆ ಆಗ್ರಹಿಸಿ ಇಂಡಿ ಜಿಲ್ಲಾ ಹೋರಾಟ ಸಮಿತಿ ಮತ್ತು ತಳವಾರ ಪರಿವಾರ ಸಮಾಜ ಸೇವಾ ಸಂಘದಿಂದ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟಿಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ಮುಖ್ಯ ಮಂತ್ರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಿಂದ ಹಲಗೆ ಬಾರಿಸುತ್ತಾ ಘೊಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೂಲಕ ಡಾ. ಬಿ ಆರ್ ಅಂಬೇಡ್ಕರ್ ವೃತಕ್ಕೆ ತೆರಳಿ ತದನಂತರ ಹೃದಯಭಾಗದ ಬಸವೇಶ್ವರ ವೃತದ ಮೂಲಕ ಹಾದು ಆಡಳಿತ ಸೌಧಕ್ಕೆ ಆಗಮಿಸಿ ಕೆಲಕಾಲ ಪ್ರತಿಭಟಿಸಿ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಜೆಟ್ಟಪ್ಪ ರವಳಿ, ಭೀಮಣ್ಣ ಕವಲಗಿ, ಪ್ರಶಾಂತ ಕಾಳೆ, ನಿರ್ಮಲಾ ತಳಕೇರಿ, ಇಲಿಯಾಸ್ ಬೋರಾಮಣಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ್ ಮೋಮಿನ ಹಾಗೂ ಮತ್ತಿತರರು ಮಾತನಾಡಿ, ಈಗಾಗಲೆ ಜಿಲ್ಲಾ ಮಟ್ಟದ ಕೆಲವು ಇಲಾಖೆಗಳು…

Read More

ದೇವರ ದರ್ಶನ ಪಡೆದ ಸಹಸ್ರಾರು ಭಕ್ತ ಸಮೂಹ | ವಿವಿಧೆಡೆ ಅನ್ನ ಸಂತರ್ಪಣೆ | ಭಜಿ-ಜಿಲೇಬಿ ಸವಿದ ಜನತೆ ಕಲಕೇರಿ: ಉತ್ತರಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದಾದ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಆರಾಧ್ಯ ಧೈವವಾದ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ನಸುಕಿನ ಜಾವ ೪:೩೦ ಗಂಟೆಗೆ ಅಗ್ಗಿ ಉತ್ಸವ ಹಾಗೂ ಸಂಜೆ ೪:೩೦ ಘಂಟೆಗೆ ಮೃಘಶಿರ ನಕ್ಷತ್ರದಲ್ಲಿ ಭಾರಿ ಜನಸ್ತೋಮದ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ಅದ್ದೂರಿಯಾಗಿ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವವು ನಡೆಯಿತು.ಮಂಗಳವಾರ ನಸುಕಿನ ಜಾವ ವೇ.ಮೂ.ಮಲ್ಲಯ್ಯಮುತ್ಯಾ ಗದ್ದಿಗೆಮಠ ಅವರ ನೇತೃತ್ವದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ವಿವಿಧ ವಾಧ್ಯಮೇಳ ಕಳಸಾರತಿಯೊಂದಿಗೆ ಐದು ಸುತ್ತು ಪೂಜಾ ಕೈಂಕರ್ಯವನ್ನು ನಡೆಸಿ ನಂತರ ಅಗ್ಗಿಯನ್ನು ಹಾಯಲಾಯಿತು. ನಂತರ ಉಚ್ಚಾಯಿ ಉತ್ಸವ, ವೀರಂಘಂಟೈ ಮಡಿವಾಳೇಶ್ವರರ ಕರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು, ಬೆಳ್ಳಿಗ್ಗೆ ೯ ಗಂಟೆಯಿಂದ ಗ್ರಾಮದ ಸಾವಿರಾರು ಯುವಪಡೆಯ ಭಕ್ತ ಸಮೂಹ ಹಿರಿಯರ ಮಾರ್ಗದರ್ಶನದಲ್ಲಿ ಪದ್ದತಿಯಂತೆ ರಥಕ್ಕೆ ಎಣ್ಣೆಯನ್ನು ಹಚ್ಚಿ…

Read More

ಆಲಮಟ್ಟಿ: ಇಲ್ಲಿನ ಎಸ್.ವಿ.ವಿ.ಸಂಸ್ಥೆಯ ಮಂಜಪ್ಪ ಹರ್ಡೇಕರ ಸ್ಮಾರಕ ಸಂಯುಕ್ತ ಪಪೂ ಕಾಲೇಜು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂತೋಷ ಗೋನಾಳ ಜಿಲ್ಲಾ ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈಚೆಗೆ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ವಿಜಯಪುರ ಮತ್ತು ತಿಕೋಟಾದ ಶ್ರೀ ಶಾರದಾಂಬಾ ಎಜುಕೇಶನ್ ಟ್ರಸ್ಟ್ ಇವರ ಸಹಯೋಗದಲ್ಲಿ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲಾ ಉತ್ಸವ-೨೦೨೩-೨೪ ಕಾರ್ಯಕ್ರಮದ ಮಿಮಿಕ್ರಿ ಸ್ಪರ್ಧೆಯಲ್ಲಿ ಸಂತೋಷ ಗೋನಾಳ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾನೆ. ಈ ಪ್ರತಿಭಾವಂತ ಬಾಲಕ ಎರಡು ಬಾರಿ ಜಿಲ್ಲಾ ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ವಿಜಯಶಾಲಿಯಾಗಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತನ್ನ ಮಿಮಿಕ್ರಿ ಕಲಾ ಕೌಶಲ್ಯ ಪ್ರದರ್ಶಿಸಿದ್ದು ವಿಶೇಷ. ಈ ಬಾರಿಯೂ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡು ಶಾಲೆಗೆ ಕೀರ್ತಿ ತಂದಿರುವ ಸಂತೋಷ…

Read More