Author: editor.udayarashmi@gmail.com

ಚಡಚಣ: ತಾಲೂಕಿನ ಲೋಣಿ (ಬಿ. ಕೆ.) ಗ್ರಾಮದ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ಡಿ.24 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಬಿ ಎಂ ಕೋರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಮ್ಮ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಅಧ್ಯಯನ ಮಾಡಿರುವ (1974-2023) ರವರೆಗಿನ ಎಲ್ಲಾ ಹಿರಿಯ ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ಸಲಹೆ ಸೂಚನೆಗಳು ಮತ್ತು ಮಾರ್ಗದರ್ಶನ ನೀಡಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Read More

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವಿಜಯಪುರದಲ್ಲಿ ಸಮಾವೇಶ | ಮುಖಂಡ ಉಮೇಶ ಕಾರಜೋಳ ಮನವಿ ವಿಜಯಪುರ: ರಾಜ್ಯದೆಲ್ಲೆಡೆ ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶವು ವಿವಿಧಜಿಲ್ಲೆಗಳಲ್ಲಿ ನಡೆಯುತ್ತಿದ್ದು, ಅದರಂತೆ ವಿಜಯಪುರ ಜಿಲ್ಲಾ ಸಮಾವೇಶವನ್ನು ನಗರದ ಇಟಗಿ ಪೆಟ್ರೋಲ ಪಂಪ ಹತ್ತಿರದಸಾಯಿ ಗಾರ್ಡನ್ ನಲ್ಲಿ ಡಿ.24 ಭಾನುವಾರ ಬೆಳಗ್ಗೆ 10:30ಕ್ಕೆ ಜಿಲ್ಲಾ ಸಮಾವೇಶ ಆಯೋಜಿಸಿದೆ ಎಂದು ಮುಖಂಡ ಉಮೇಶ ಕಾರಜೋಳ ಹೇಳಿದರು.ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ಈ ಸಮಾವೇಶದಲ್ಲಿ ಜಿಲ್ಲೆಯ ಸಮಸ್ತಮಾದಿಗ, ಸಮಗಾರ, ಮೋಚಿ, ಡೋರ, ಭಂಗಿ, ಇತ್ಯಾದಿ ಮಾದಿಗ ಸಂಬಂಧಿತ ಜಾತಿಗಳಯುವಕರು ಬುದ್ದಿಜೀವಿಗಳು, ನೌಕರರು, ಹೋರಾಟಗಾರರು, ಹಾಗೂ ವಿದ್ಯಾರ್ಥಿ ಸಮೂಹ ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.ಈಗಾಗಲೆ ಒಳಮೀಸಲಾತಿ ಶಿಫಾರಸ್ಸು ಮಾಡಿ ಕೇಂದ್ರಕ್ಕೆಕಳುಹಿಸಿರುವದರಿಂದ ಕೇಂದ್ರ ಸರ್ಕಾರವು ಕೂಡಲೇ ಒಳ ಮೀಸಲಾತಿ ಜಾರಿಗೆ ಕ್ರಮ ವಹಿಸಲುಆಗ್ರಹಿಸಿ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ಸಮುದಾಯದ ಸ್ವಾಭಿಮಾನದ ಸಂಕೇತವಾಗಿ ಬಸವಮೂರ್ತಿ ಮಾದರ ಚೆನ್ನಯ್ಯ, ಸ್ವಾಮಿಜಿಗಳು ಚಿತ್ರದುರ್ಗ ಇವರ ಸಾನಿಧ್ಯದಲ್ಲಿ ನಡೆಯುವ ಸಮಾವೇಶಕ್ಕೆ…

Read More

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎಂಎಲ್ಸಿ ಸುನೀಲಗೌಡ ಪಾಟೀಲ ಮನವಿ ವಿಜಯಪುರ: ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ತಲಾ 100 ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ಬಿ.ಜಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿ ನಾನಾ ವಸತಿ ಯೋಜನೆಗಳಡಿ ನಿರ್ಮಿಸಲಾದ ಮನೆಗಳ ಬಗ್ಗೆ ನಾನು ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದೆ. ಅಲ್ಲದೇ, ಚರ್ಚೆಯ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ 50 ಕ್ಕಿಂತ ಕಡಿಮೆ ಮನೆಗಳನ್ನು ನೀಡಲಾಗಿದೆ. ಅಲ್ಲದೇ, ವಸತಿ ರಹಿತರಿಗೆ ನಿವೇಶನ ನೀಡುವ ಕೆಲಸವಾಗಿಲ್ಲ ಎಂದು ಸಚಿವರ ಗಮನ ಸೆಳೆದಿದ್ದೆ. ಈ ಆರ್ಥಿಕ ವರ್ಷದಲ್ಲಿ ಕನಿಷ್ಠ ತಲಾ 100 ಮನೆಗಳನ್ನು ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ಮಂಜೂರು ಮಾಡುವಂತೆ ಆಗ್ರಹಿಸಿದ್ದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಶೀಘ್ರವೇ…

Read More

ಉಭಯ ಸದನಗಳ ೧೪೬ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ವಿಜಯಪುರ: ಲೋಕಸಭೆ ಹಾಗೂ ರಾಜ್ಯಸಭೆಯ ಉಭಯ ಸದನಗಳ ೧೪೬ ಸಂಸದರನ್ನು ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಶುಕ್ರವಾರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ|| ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಪ್ರಜಾಪ್ರಭುತ್ವ ವಿರೋಧಿ, ಜನವಿರೋಧಿ ಕೇಂದ್ರ ಬಿಜೆಪಿ ಸರಕಾರದ ಧೋರಣೆಯನ್ನು ಬಲವಾಗಿ ಖಂಡಿಸಲಾಯಿತು.ಈ ಸಂದರ್ಭ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂವಿಧಾನ ವಿರೋಧಿಯಾಗಿದ್ದು, ಇವರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ. ಹಾಗೂ ರಾಷ್ಟ್ರದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಈ ಸರಕಾರ ವಿರೋಧ ಪಕ್ಷಗಳ ಮೇಲೆ ಗದಾಪ್ರಹಾರ ಮಾಡುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಸಭಾಪತಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ವಿರೋಧ ಪಕ್ಷಗಳನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಇವರ ಜನವಿರೋಧಿ ನೀತಿಗಳನ್ನು…

Read More

ನಮ್ಮ ನೆರೆ ದೇಶ ಚಂದ್ರನನ್ನು ತಲುಪಿದೆ, ಆದರೆ ಪಾಕ್ ಭೂಮಿಯಿಂದ ಮೇಲೇಳುತ್ತಿಲ್ಲ ಇಸ್ಲಾಮಾಬಾದ್: ನಮ್ಮ ನೆರೆ ದೇಶಗಳು ಚಂದ್ರನನ್ನು ತಲುಪಿವೆ. ಆದರೆ ಪಾಕಿಸ್ತಾನಕ್ಕೆ ಇನ್ನೂ ಭೂಮಿಯಿಂದ ‘ಎದ್ದೇಳಲು’ ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತೊಮ್ಮೆ ಭಾರತವನ್ನು ಹೊಗಳಿದ್ದಾರೆ.ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಕೇಡರ್ ಅನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ದೇಶದ ಭೀಕರ ಆರ್ಥಿಕ ಸ್ಥಿತಿಯನ್ನು ಸೂಚಿಸಿದ ಪಿಎಂಎಲ್-ಎನ್ ಮುಖ್ಯಸ್ಥರು, ಅದರ ಅವನತಿಗೆ ಪಾಕಿಸ್ತಾನವೇ ಕಾರಣ ಎಂದು ಹೇಳಿದರು.ನಮ್ಮ ನೆರೆಹೊರೆಯವರು ಚಂದ್ರನನ್ನು ತಲುಪಿದ್ದಾರೆ. ಆದರೆ ನಾವು ಇನ್ನೂ ನೆಲದಿಂದ ಮೇಲೇರಲು ಸಹ ಸಾಧ್ಯವಾಗಿಲ್ಲ. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ಅವನತಿಗೆ ನಾವೇ ಕಾರಣ, ಇಲ್ಲದಿದ್ದರೆ ಈ ದೇಶ ಬೇರೆಯದೇ ಸ್ಥಿತಿಗೆ ತಲುಪುತ್ತಿತ್ತು ಎಂದರು.ನಾಲ್ಕನೇ ಬಾರಿಗೆ ಪಾಕಿಸ್ತಾನದ ಪ್ರಧಾನಿ ಹುದ್ದೆಗೆ ಸ್ಪರ್ಧಿಸುತ್ತಿರುವ ನವಾಜ್ ಷರೀಫ್ ಇಂದು ತಮ್ಮ ಭಾಷಣದಲ್ಲಿ, 2013ರಲ್ಲಿ ನಾವು ಭಾರಿ ವಿದ್ಯುತ್ ಕಡಿತವನ್ನು ಎದುರಿಸಿದ್ದೇವು. ನಾನು ಬಂದು ಅದನ್ನು ಕೊನೆಗೊಳಿಸಿದ್ದೇ, ಇಡೀ…

Read More

ವಿಜಯಪುರ: ಗುಮ್ಮಟ ನಗರಿಯಲ್ಲಿ ಡಿಸೆಂಬರ್ 24 ರಂದು ರವಿವಾರ ನಡೆಯಲಿರುವ ವೃಕ್ಷೊಥಾನ್ ಹೆರಿಟೇಜ್ ರನ್-2023ಕ್ಕೆ ಎರಡೇ ದಿನ ಬಾಕಿ ಉಳಿದಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈಗಾಗಲೇ ಪ್ರಶಸ್ತಿ ಮೊತ್ತ, ಮಾರ್ಗ, ಪದಕಗಳನ್ನು ಅಂತಿಮಗೊಳಿಸಲಾಗಿದ್ದು, ಶನಿವಾರ ಬಿಬ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು.ಈ ಬಾರಿ ಒಟ್ಟು ರೂ. 10 ಲಕ್ಷ ಬಹುಮಾನ ನಿಗದಿ ಪಡಿಸಲಾಗಿದ್ದು, ನಾಲ್ಕು ಕೆಟೆಗರಿಯಲ್ಲಿ ಒಟ್ಟು ತಲಾ 38 ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್- 2023 ಕೋರ್ ಕಮಿಟಿ ಪದಕ, ರೂಟ್, ನೋಂದಣಿ ಸಮಿತಿಯ ರಘು ಸಾಲೋಟಗಿ, ಸಂಕೇತ ಬಗಲಿ, ಸೋಮಶೇಖರ ಸ್ವಾಮಿ, ವೀರೇಂದ್ರ ಗುಚ್ಚೆಟ್ಟಿ, ಡಾ. ರಾಜು ಯಲಗೊಂಡ ಹಾಗೂ ಸಂತೋಷ ಔರಸಂಗ ತಿಳಿಸಿದ್ದಾರೆ *ನಾನಾ ವಿಭಾಗಗಳಲ್ಲಿ ಪುರುಷ ಮತ್ತು ಮಹಿಳಾ ಓಟಗಾರರಿಗೆ ನಿಗದಿ ಪಡಿಸಲಾಗಿರುವ ಕೆಟಗರಿ, ವಿಭಾಗಗಳು ಮತ್ತು ನಿಗದಿ ಪಡಿಸಲಾಗಿರುವ ಬಹುಮಾದ ಮೊತ್ತ ಇಲ್ಲಿದೆ.**21 ಕಿ. ಮೀ. ಪುರುಷರು ಮತ್ತು ಮಹಿಳೆಯರ ವಯೋಮಾನ ವಿಭಾಗ ಮತ್ತು ಪ್ರಶಸ್ತಿ…

Read More

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ ವಿನ್ಸೆಂಟ್ ಡಿಸೋಜಾ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಕಡಿಮೆ ಫಲಿತಾಂಶ ಬಂದ ಶಾಲೆಗಳನ್ನು ಗುರುತಿಸಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಸಕ್ತ ಸಾಲಿನ ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ರಿಚರ್ಡ ವಿನ್ಸೆಂಟ್ ಡಿಸೋಜಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಜಿಲ್ಲೆಯಾದ್ಯಂತ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಂಡು ಕಡಿಮೆ ಫಲಿತಾಂಶ ಬಂದ ಶಾಲೆಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ, ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು. ಈಗಾಗಲೇ ದತ್ತು ಪಡೆದುಕೊಂಡ ಶಾಲೆಗಳಿಗೆ ಕಡ್ಡಾಯವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ಮಾಹೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಆ…

Read More

ವಿಜಯಪುರ ಸಹಕಾರಿ ಸಂಘಗಳ ಉಪನಿಬಂಧಕರ ಲಿಖಿತ ಭರವಸೆ ಮುದ್ದೇಬಿಹಾಳ: ಇಲ್ಲಿನ ಪಿಎಲ್‌ಡಿ ಬ್ಯಾಂಕ್ ನಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ಬ್ಯಾಂಕಿನ ಅಧ್ಯಕ್ಷ ಮತ್ತು ಹಿರಿಯ ಅಧಿಕಾರಿಗಳ ದುರ್ನಡತೆ ಎಂದು ಆರೋಪಿಸಿ ಮತ್ತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಬ್ಯಾಂಕ್ ಎದುರು ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಧರಣಿ ವಿಜಯಪುರದ ಸಹಕಾರಿ ಸಂಘಗಳ ಉಪನಿಬಂಧಕರ ಲಿಖಿತ ಭರವಸೆಯ ಮೇರೆಗೆ ಗುರುವಾರ ತಾತ್ಕಾಲಿಕ ಅಂತ್ಯ ಕಂಡಿದೆ.ಸೋಮುವಾರದಿಂದ ಶುರುವಾದ ಧರಣಿ ಸ್ಥಳಕ್ಕೆ ಬ್ಯಾಂಕ್ ನ ಅಧ್ಯಕ್ಷ, ಸ್ಥಳೀಯ ಅಧಿಕಾರಿಗಳು ಧರಣಿ ನಿರತರ ಮನವೊಲಿಸಲು ಸಕಷ್ಟು ಪ್ರಯತ್ನಿಸಿದರೂ ಧರಣಿ ನಿರತರು ತಮ್ಮ ಪಟ್ಟು ಬಿಡದೇ ಹೋರಾಟವನ್ನು ಹಂತ ಹಂತವಾಗಿ ಉಗ್ರವಾಗಿಸಿದ್ದರು. ಗುರುವಾರ ಬೆಳಿಗ್ಗೆ ಬ್ಯಾಂಕ್ ಎದುರಿನ ರಸ್ತೆಯಿಂದ ಆವರಣದಲ್ಲೆಲ್ಲ ಉರುಳುವ ಮೂಲಕ ಪ್ರತಿಭಟಿಸಿ ನಂತರ ತಲೆಯ ಮೇಲೆ ಕಲ್ಲು ಹೊತ್ತು ಧರಣಿ ಮುಂದುವರೆಸಿದ್ದರು. ಧರಣಿ ಸ್ಥಳಕ್ಕೆ ಸಂಜೆ ಆಗಮಿಸಿದ ಅಧಿಕಾರಿ ಭಾಗ್ಯಶ್ರೀ ಎಸ್.ಕೆ ಮತ್ತು ಸಹಾಯಕ ನಿಬಂಧಕ…

Read More

ಸಿಂದಗಿ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಸ್ಥಳಿಯ ಮಕ್ಕಳ ಬಳಗ ಸಿಂದಗಿ ಇವರು ಸರಕಾರಿ ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಡಿ.೨೨ ರಂದು ಮುಂಜಾನೆ ೧೦ ಗಂಟೆಗೆ ಚಿಣ್ಣರ ನುಡಿ ಸಿರಿ-೪೭ ಕಾರ್ಯಕ್ರಮ ಆಯೋಜಿಸಿದ್ದಾರೆ.ಉದ್ಘಾಟನೆ: ಶಾಸಕ ಅಶೋಕ ಮನಗೂಳಿ ಅವರು ೪೭ನೇ ಚಿಣ್ಣರ ನುಡಿ ಸಿರಿ ಕಾರ್ಯಕ್ರಮದ ಜ್ಯೋತಿ ಬೆಳಗಿಸುವರು. ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವರ್ಷಿಣಿ ನಾಯಕ ಸಸಿಗೆ ನೀರುಣಿಸುವರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿ ಬಮ್ಮಣ್ಣಿ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಶಾಲೆಯ ವಿದ್ಯಾರ್ಥಿನಿ ಶರಧಿ ಹಿರೇಮಠ, ವಿಜಯಪುರದ ರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿನಿ ದಾನೇಶ್ವರಿ ಆಲಾಳ ಆಗಮಿಸುವರು.ಗೋಷ್ಠಿ-೧: ಹಳೆಬೇರು ಹೊಸ ಚಿಗುರು.ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯಾದ್ಯಾಪಕ ಎಸ್.ಕೆ. ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ ಆಗಮಿಸುವರು. ಮಕ್ಕಳ ಬಳಗದ ಸಂಚಾಲಕ ಹ.ಮ. ಪೂಜಾರ ಉಪಸ್ಥಿತರಿರುವರು. ವಿದ್ಯಾರ್ಥಿನಿ ವೈಷ್ಣವಿ ಲಕ್ಷಾನಟ್ಟಿ ಅವರು ನಾನು ಓದಿದ ಕವನ ಸಂಕಲನ ಕುರಿತು, ವಿದ್ಯಾರ್ಥಿನಿ ಶ್ರೀನಿಧಿ ಹುಲಗಬಾಳ ಅವರು ನಾನು…

Read More