Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಪಟ್ಟಣದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ. ಮತ್ತು ಅದರಿಂದ ಸಾರ್ವಜನಿಕರಿಗೆ ಅನೇಕ ತೊಂದರೆಗಳು ಉಂಟಾಗುತ್ತಿದೆ. ಹಾಗೂ ಅವುಗಳಿಂದ ಸ್ವಚ್ಛತೆ ಕೊರತೆಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಹಂದಿಗಳ ಸಾಕಾಣಿಕೆಯ ಮಾಲೀಕರು ತಮ್ಮ ತಮ್ಮ ಹಂದಿಗಳನ್ನು ಬೇರೆಡೆಗೆ ಸಾಗಿಸಬೇಕು. ಅಥವಾ ನಿಮ್ಮ ಮನೆಯಲ್ಲಿ ಬೇರೆ ಜಾಗ ಮಾಡಿ ಕೂಡಿಹಾಕಿಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಒಂದು ವೇಳೆ ಹಂದಿಗಳನ್ನು ಕಟ್ಟಿಹಾಕದೇ ಇದ್ದರೆ ಅಥವಾ ಬೇರೆಕಡೆಗೆ ಸಾಗಿಸದೇ ಹೋದಲ್ಲಿ ಪುರಸಭೆ ಕಾಯ್ದೆ ೧೯೬೪ ಕಲಂ, ೨೨೩,೨೩೯,೨೪೨ರ ಪ್ರಕಾರ ಕ್ರಮ ಜರುಗಿಸಲಾಗುವದು ಎಂದು ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.
ಮುದ್ದೇಬಿಹಾಳ: ವಕೀಲ ವೃತ್ತಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಇದೆ. ವಕೀಲರು ನಿರಂತರ ಅಧ್ಯಯನ ಮಾಡುವ ಮೂಲಕ ತಮ್ಮ ಪಕ್ಷಗಾರರಿಗೆ ನ್ಯಾಯ ಒದಗಿಸುತ್ತಾ ಸಂವಿಧಾನದ ಆಶಯ ಹಾಗೂ ಹಕ್ಕುಗಳಿಗೆ ಧಕ್ಕೆ ತರದಂತೆ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಹಿರಿಯ ವಕೀಲರು ಕಿರಿಯ ವಕೀಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಕಿರಿಯ ವಕೀಲರು ನಿರಂತರ ಕಲಾಪಗಳಲ್ಲಿ ಭಾಗಿಯಾಗಬೇಕು. ಯಾವ ಕಾರಣಕ್ಕಾಗಿ ಸಮಯ ತೆದುಕೊಳ್ಳುತ್ತಿದ್ದೇವೆ ಎಂಬುದನ್ನ ಮೊದಲು ತಿಳಿದಿರಬೇಕು. ಕಲಾಪಗಳಲ್ಲಿ ಭಾಗಿಯಾಗುವ ಮುನ್ನ ಪ್ರಕರಣವನ್ನು ತಿಳಿದುಕೊಳ್ಳಬೇಕು. ಪ್ರಕರಣದ ಹಂತಗಳ ಬಗ್ಗೆ ಅಭ್ಯಾಸ ಮಾಡಬೇಕು. ಪ್ರಕರಣಗಳಲ್ಲಿ ಸಲ್ಲಿಸ ಬಹುದಾದ ಅರ್ಜಿಗಳನ್ನು ಸ್ವತಃ ನೀವೆ ಟೈಪ್ ಮಾಡಿದಲ್ಲಿ ಬೇಗನೆ ವೃತ್ತಿಯಲ್ಲಿ ನಿಪುಣತೆ ಪಡೆಯಬಹುದು ಎಂದು ಕಿವಿ ಮಾತು ಹೇಳಿದರು.ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಮಾತನಾಡಿ, ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದು. ವಕೀಲರು ಎಷ್ಟೇ ಅಧ್ಯಯನ ಮಾಡಿದರೂ ಕಡಿಮೆ ಎಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ…
ಕೊರೋನಾ ಸಕ್ರಿಯ ಪ್ರಕರಣಗಳು 105ಕ್ಕೆ ಏರಿಕೆ | ಆಕ್ಸಿಜನ್-ವೆಂಟಿಲೇಟರ್‌ಗೆ ಕೊರತೆಯಾಗದಂತೆ ಕ್ರಮ ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.…
ನವದೆಹಲಿ: ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷವು ಎನ್‌ಡಿಎ ಮೈತ್ರಿಕೂಟದ ಜತೆಗೆ ಅಧಿಕೃತವಾಗಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಭಾರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ರರ ಜತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.ನವ ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಮೋದಿಯನ್ನು ಭೇಟಿ ಮಾಡಲಾಗಿದ್ದು, ದೇವೇಗೌಡರ ಜತೆಗೆ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು.ಜೆಡಿಎಸ್ ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ, ವಿಷಯಗಳ ಕುರಿತು ಅವರ ಆಲೋಚನೆ ಹಾಗೂ ಒಳನೋಟ ದೂರದೃಷ್ಠಿಯಿಂದ ಕೂಡಿದೆ’ ಎಂದು ಬರೆದುಕೊಂಡಿದ್ದಾರೆ.ಪ್ರಧಾನಿ ಭೇಟಿ ಕುರಿತು ಸಂಸತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ…
ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಮಹಾವಿದ್ಯಾಲಯದ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಶ್ಯೆಕ್ಷಣಿಕ ವರ್ಷ ೨೦೨೨-೨೩ ನೇ ಸಾಲಿನಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ಪ್ರಥಮ ಸ್ಥಾನವನ್ನು ಕುಮಾರಿ. ವಿಜಯಲಕ್ಷೀ ಸಿದ್ದಾ (೯೧.೫೫), ದ್ವಿತೀಯ ಸ್ಥಾನವನ್ನು ಕುಮಾರಿ. ಐಶ್ವರ್ಯ ಅವಟಿ(೮೯.೩೪), ತೃತೀಯ ಸ್ಥಾನವನ್ನು ಕುಮಾರಿ. ವರ್ಷಾ ಖಜ್ಜೂರಗಿ(೮೮.೦೦), ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸಿ ಸಾಧನೆಗೈದಿದ್ದಾರೆ.ಈ ವಿದ್ಯಾರ್ಥಿಗಳ ಸಾಧನೆಗೆ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಪ್ರಾರ್ಚಾಯರು ಮತ್ತು ಪ್ರಾಧ್ಯಾಪಕರು, ಬಿಸಿಎ ವಿಭಾಗದ ಮುಖ್ಯಸ್ಥರು, ಹಾಗೂ ಭೋಧಕೇತರ ಸಿಬ್ಬಂದಿ ವೃಂದ ಹರ್ಷ ವ್ಯಕ್ತಪಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
ಮುದ್ದೇಬಿಹಾಳ: ಡಿ.೨೨ ರಂದು ಸಂಜೆ ೫ಗಂಟೆಗೆ ಪಟ್ಟಣದ ಬಸವ ನಗರ ವ್ಯಾಪ್ತಿಯ ಬಸವ ಗಾರ್ಡನ್ ನಲ್ಲಿ ಭಗವದ್ಗೀತಾ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕು ಎಂದು ಅಭಿಯಾನದ ಸಂಚಾಲಕರಾದ ರಾಮಚಂದ್ರ ಹೆಗಡೆ ಮನವಿ ಮಾಡಿಕೊಂಡಿದ್ದಾರೆ.
ವಿಜಯಪುರ: ಸಾಮಾಜಿಕ ಭಧ್ರತಾ ಯೋಜನೆಯಡಿಯ ಜಿಲ್ಲೆಯ ಪಿಂಚಣಿದಾರರು ತಮ್ಮ ಕುಂದುಕೊರತೆಗಳನ್ನು ನೊಂದಾಯಿಸಲು, ಪಿಂಚಣಿ ಕುರಿತು ಮಾಹಿತಿ ಪಡೆಯಲು ಡಿ.೨೭ ರಂದು ಜಿಲ್ಲೆಯ ೧೩ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದ ಪಿಂಚಣಿ ಅದಾಲಯತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ತಾಲೂಕಿನ ಹೊನ್ನುಟಗಿ ಗ್ರಾಮ ಪಮಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಬಬಲೇಶ್ವರ ತಾಲೂಕಿನ ಕಾರಜೊಳ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್-೧ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ನಿಡಗುಂದಿ ತಾಲೂಕಿನ ಚಿಮ್ಮಲಗಿ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ಕೊಲ್ಹಾರ ತಾಲೂಕಿನ ಹಣಮಾಪುರ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೧ ತಹಶೀಲ್ದಾರ ಅವರು, ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತ್‌ನಲ್ಲಿ ಗ್ರೇಡ್-೨ ತಹಶೀಲ್ದಾರ ಅವರು, ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಗ್ರೇಡ್-೨ತಹಶೀಲ್ದಾರ ಅವರು, ಇಂಡಿ…
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಕುವೆಂಪು ಜನ್ಮದಿನದ ಅಂಗವಾಗಿ ಡಿ.೨೯ ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಸಭಾಂಗಣದಲ್ಲಿ ಚುನಾವಣಾ ತಹಶೀಲ್ದಾರ್ ಪ್ರೇಮಸಿಂಗ್ ಪವಾರ ಅವರ ಅದ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.೨೯ರಂದು ಕುವೆಂಪು ಜನ್ಮ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಅದರಂತೆ ಜನವರಿ ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆ ಚಾಲನೆ, ನಂತರ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಕಾರ್ಯಕ್ರಮ ಅಚ್ಚು ಕಟ್ಟಾಗಿ ಆಯೋಜಿಸಲು ಸಮಾಜದ ಮುಖಂಡರು ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಂಡು ಎರಡೂ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ…
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ೨೦೨೩-೨೪ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ ೧೦ ಸಾವಿರ ರೂ. ಗರಿಷ್ಠ ೩ ವರ್ಷಗಳ ಅವಧಿಗೆ ವ್ಯಾಸಂಗ ವೇತನ-ಫೆಲೋಶಿಪ್‌ನ್ನು ಪ್ರವರ್ಗವಾರು ಮೀಸಲಾತಿ, ಮೆರಿಟ್ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಹಾಗೂ ನಿಯಮಾನುಸಾರ ಅರ್ಹ ಅಭ್ಯರ್ಥಿಗಳಿಗೆ ನೀಡಲಾಗುವುದು.ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ (೨ ಭಾವಚಿತ್ರ ಒಳಗೊಂಡ)ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳು, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಿಎಚ್‌ಡಿ ಅಧ್ಯಯನಕ್ಕಾಗಿ ನೊಂದಣಿ ಮಾಡಿರುವ ಬಗ್ಗೆ ವಿಶ್ವವಿದ್ಯಾಲಯ-ಅಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ, ಇತರೆ ಯಾವುದೇ ಮೂಲಗಳಿಂದ ವ್ಯಾಸಂಗ ವೇತನಕ್ಕೆ ಆಯ್ಕೆಯಾಗದಿರುವ ಬಗ್ಗೆ ಶಿಕ್ಷಣ ಸಂಸ್ಥೆ, ಕಾಲೇಜ್ ಅಥವಾ ವಿಶ್ವವಿದ್ಯಾಲಯ ಅಧಿಕೃತ…
ವಿಜಯಪುರ: ಅಲ್ಪಸಂಖ್ಯಾತ ಸಮುದಾಯದ ೧ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೊರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೩೧-೧೨-೨೦೨೩ ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ಪೂರ್ವ ಆನ್‌ಲೈನ್ ವೆಬ್‌ಸೈಟ್ https://ssp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https:dom.karnataka.gov.in ನಲ್ಲಿ ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
