Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪುರಸಭೆಯ ಸಾಮನ್ಯ ಸಭೆಯು ಪ್ರಮುಖ ನಿರ್ಧಾರ ಕೈಗೊಳ್ಳುವ ವೇದಿಕೆಯಾಗಿದೆ. ಪಟ್ಟಣದ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ. ಪ್ರತಿ ವಾರ್ಡ್ನಲ್ಲಿರುವ ಸಮಸ್ಯೆಗಳ ಬಗ್ಗೆ ಎಲ್ಲಾ ಸದಸ್ಯರು ಪ್ರಸ್ತಾವನೆ ಸಲ್ಲಿಸಿ ಚರ್ಚೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷೆ ಪ್ರೀಯಾ ರಾಮನಗೌಡ ಪೋಲೀಸ್ ಪಾಟೀಲ್ ಹೇಳಿದರು.ಬುಧವಾರ ಜರುಗಿದ ಪುರಸಭೆ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಶೌಚಾಲಯಗಳ ಬಗ್ಗೆ, ಪಟ್ಟಣದ ಅಭಿವೃದ್ಧಿ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿವೆ, ಹಲವಾರು ಕಡೆ ಚರಂಡಿ ಸಮಸ್ಯೆ, ನೀರಿನ ಸಮಸ್ಯೆ ಇದ್ದು. ಪುರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ದೂರುಗಳ ಬರದಂತೆ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದವರು. ಆಯಾಯ ವಾರ್ಡ್‌ಗಳಿಂದ ಚುನಾಯಿತರಾದ ಪ್ರತಿನಿಧಿಗಳು ತಮ್ಮ ವಾರ್ಡ್‌ನ ಸಮಸ್ಯೆಗಳನ್ನು ಮಂಡಿಸಬೇಕು. ಸಭೆಯ ಕಾರ್ಯದರ್ಶಿ ಪುರಸಭೆ ಮುಖ್ಯಾಧಿಕಾರಿಗಳು, ನಿರ್ಣಯಗಳ ಕೈಗೊಳ್ಳುವು ಮೂಲಕ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಮುಖ್ಯಾಧಿಕಾರಿ, ಪುರಸಭೆ ಸಿಬ್ಬಂದಿಗಳು, ಸೇರಿದಂತೆ ಇಂಜಿನಿಯರ್…
ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪಿ.ಜೆ.ಪಿ. ನಾಯಕರು ಪಿತೂರಿ ಮಾಡುತ್ತಿರುವ ಕಾನೂನು ಬಾಹಿರ ಪ್ರಕರಣ ಎಂಬುದಾಗಿ ಸಾಬೀತ ಆದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ಜರುಗಿಸಲಾಯಿತು. ಹೊಟೇಲ್ ಗೋದಾವರಿ ಎದುರಿಗೆ ಇರುವ ಡಾ. ಬಾಬು ಜಗಜೀವನರಾಂ ವೃತ್ತದಿಂದ ವಿಜಯಪುರ ಜಿಲ್ಲಾ ಬಿ.ಜೆ.ಪಿ. ಕಚೇರಿವರೆಗೆ ತೆರಳಿ ಕಛೇರಿಯನ್ನು ಮುತ್ತಿಗೆ ಹಾಕಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡಿ ದಿಕ್ಕಾರ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮಾತನಾಡುತ್ತಾ, ನ್ಯಾಷನಲ್ ಹೆರಾಲ್ಡ (ಯಂಗ ಇಂಡಿಯಾ) ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ವಿರುದ್ಧ ದುರುದ್ದೇಶದಿಂದ ಕೇಂದ್ರ ಬಿ.ಜೆ.ಪಿ. ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿದೆ. ದೆಹಲಿಯ ನ್ಯಾಯಾಲಯವು ಈ ಪ್ರಕರಣವು ವಜಾಗೊಳಿಸಿದೆ. ಕಾಂಗ್ರೆಸ್ ನಾಯಕತ್ವವನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ, ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದುಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದಪ್ರಾಚಾರ್ಯ ಪ್ರೊ.ಎಮ್.ಬಿ.ರೆಬಿನಾಳ ಕರೆ ನೀಡಿದರು.ನಗರದ ಬಿ. ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್. ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿಗಳ ಸ್ಮಾರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಉಪನ್ಯಾಸ ನೀಡಿ ಮಾತನಾಡಿದ ಅವರುಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು, ಅವರು ಕಾಯಕ-ದಾಸೋಹ-ಭಕ್ತಿ -ಸಹಕಾರ-ಸಮಾನತೆ-ಐಕ್ಯತೆ ಗಳ ಮಹತ್ವವನ್ನು ವಚನಸಾಹಿತ್ಯದ ಹಿನ್ನೆಲೆಯಲ್ಲಿ ತಿಳಿಸಿಕೊಟ್ಟರು. ನಾನು ಸಹ ಇದೇ ಮಹಾವಿದ್ಯಾಲಯದ ಹೆಮ್ಮೆಯ ವಿದ್ಯಾರ್ಥಿ ಎಂದು ಹೇಳಿಕೊಂಡರು .ದತ್ತಿ ದಾಸೋಹಿಗಳಾದ ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರಸಂಯೋಜನಾಧಿಕಾರಿಗಳಾದ ಡಾ.ವಿ.ಡಿ. ಐಹೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯರ ಸ್ಮರಣಾರ್ಥ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಾರ್ಥಕ ವಾದ ಸಂಗತಿಯೆಂದು ತಿಳಿಸಿದರು. ಫ.ಗು.ಹಳಕಟ್ಟಿಯವರ ಮುಖ್ಯ ಆಶಯದಂತೆ ಪ್ರತಿಯೊಂದು ಕಾರ್ಯಕ್ರಮದ ಆರಂಭದಲ್ಲಿ ವಚನಗಾಯನ ಮಾಡಲು ತಿಳಿಸಿದರು.ಕಾರ್ಯಕ್ರಮ ದಲ್ಲಿ…
ಲೇಖನ*- *ಡಾ ಶಶಿಕಾಂತ ಪಟ್ಟಣ*ರಾಮದುರ್ಗ – ಪುಣೆ ಉದಯರಶ್ಮಿ ದಿನಪತ್ರಿಕೆ ಮಹಿಳಾ ಸಾಹಿತ್ಯದ ಚರಿತ್ರೆ ಎಂದರೆ ಮಹಿಳೆಯರು ತಮ್ಮ ಅನುಭವಗಳು, ಸಮಾಜದ ಸ್ಥಿತಿ, ರಾಜಕೀಯ ಅಭಿಪ್ರಾಯಗಳನ್ನು ಸಾಹಿತ್ಯದ ಮೂಲಕ ವ್ಯಕ್ತಪಡಿಸಿದ ಪಯಣವಾಗಿದ್ದು, ಇದು ಪ್ರಾಚೀನ ಕಾಲದಿಂದಲೂ ಇದ್ದು, ಅಮೇರಿಕಾದ ಕ್ರಾಂತಿಯಂತಹ ಸಂದರ್ಭಗಳಲ್ಲಿ ತೀವ್ರಗೊಂಡಿತು; ಇವರು ಮನೆ, ಸಮಾಜ ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳನ್ನು ಕಾದಂಬರಿ, ಕವಿತೆಗಳ ಮೂಲಕ ನಿರೂಪಿಸಿ, ಮಹಿಳೆಯರ ಸ್ಥಾನಮಾನದ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ, ಇದು ಮುಖ್ಯವಾಗಿ ಸ್ತ್ರೀವಾದಿ ಚಿಂತನೆಗಳನ್ನು ಜಗತ್ತಿಗೆ ಪರಿಚಯಿಸಿದೆ.ಮಹಿಳಾಪರ ಚಿಂತನೆ ಆಲೋಚನೆಗಳು ಕಥೆ ಕಾದಂಬರಿ ಕಾವ್ಯ ಸಾಹಿತ್ಯ ರಚನೆಯಲ್ಲಿ ಮುಕ್ತವಾಗಿ ಬರೆಯಲು ಆರಂಭಿಸಿದರು ಕನ್ನಡತಿಯರು. 12 ನೆಯ ಶತಮಾನದ ಶ್ರೇಷ್ಠ ವಚನಕಾರ್ತಿಯರು ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜ ಕಟ್ಟಿದರು.ನವ್ಯ ನವೋದಯ ಪ್ರಗತಿಶೀಲ ಬಂಡಾಯ ದಲಿತ ಸಾಹಿತ್ಯ ಹೀಗೆ ಎಲ್ಲಾ ಘಟ್ಟಗಳಲ್ಲಿವಚನ ಸಾಹಿತ್ಯ ಮತ್ತು ಶರಣೆಯರ ಸಾಹಿತಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಗಳನ್ನು ಮರೆಯಲಾಗದು. ಕನ್ನಡ ಸಾಹಿತ್ಯದಲ್ಲಿ ಜಯದೇವಿ ತಾಯಿ ಲಿಗಾಡೆ ನಂತರ ಉತ್ತರ…
ಉದಯರಶ್ಮಿ ದಿನಪತ್ರಿಕೆ ಇಂಡಿ: ವ್ಯವಸಾಯ ಮಾಡುವ ರೈತರಿಗೆ ಹೆಚ್ಚಿನ ಆದಾಯ ಬೇಕು ಎಂದರೆ ಕುರಿ ಮೇಕೆ ಸಾಕಾಣಿಕೆ ಒಳ್ಳೆಯ ಆಯ್ಕೆ. ರೈತರು ಮಾತ್ರವಲ್ಲ ಸಾಮಾನ್ಯ ಜನರು ಕೂಡ ಕುರಿ ಸಾಗಾಣಿಕೆ ಮಾಡಬಹುದು. ಇದರಿಂದ ಲಾಭ ಕೂಡ ಚೆನ್ನಾಗಿ ಬರುತ್ತದೆ. ಆದರೆ ಯಾವ ತಳಿಯ ಕುರಿ ಆಯ್ಕೆ ಮಾಡಬೇಕು ಎಂಬುದು ಬಹಳ ಮುಖ್ಯ ಎಂದು ನಬಾರ್ಡ ಪ್ರಬಂದಕ ವಿಕಾಸ ರಾಠೋಡ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇವರ ನಿಂಬರಗಿ ಗ್ರಾಮದ ೩೦ ಮಹಿಳೆಯರಿಗೆ ಮಹಿಳಾ ಗುಂಪುಗಳಿಗೆ ಕುರಿ ಸಾಗಾಣಿಕೆ ಕುರಿತು ಸಾಲ ಸೌಲಭ್ಯ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕುರಿ ಗಳಿಗೆ ಔಷದೋಪಚಾರ, ಆಹಾರ, ಬೆಳವಣೆಗೆ ಮತ್ತು ಮಾರುಕಟ್ಟೆ ಕುರಿತು ಮಾತನಾಡಿದರು.ನಬಾರ್ಡದ ಕಾರ್ಯದರ್ಶಿ ಸಿ.ಆರ್.ಡಿ ಎಸ್ ಜಿ.ಎಂ ಬಿರಾದಾರ ಮಾತನಾಡಿ, ಕುರಿ ಸಾಗಾಣಿಕೆಯಲ್ಲಿ ಉಸ್ಮಾನಾಬಾದಿ ತಳಿ ಆಯ್ಕೆ ಮಾಡಿದರೆ ಅಥವಾ ಉತ್ತಮ ತಳಿ ಆಯ್ಕೆ ಮಾಡಿದರೆ ಇವುಗಳ ಮೌಂಸಕ್ಕೆ ಹೆಚ್ಚು ಬೇಡಿಕೆ ಇದೆ ಎಂದರು.ವಿಜ್ಞಾನಿಗಳಾದ ಪ್ರಸಾದ, ಡಾ. ಪ್ರಕಾಶ, ಡಾ. ವೀಣಾ ಚಂದಾವರಿ, ಮಾಜೀದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜನನಿ, ಜನ್ಮಭೂಮಿ ಸ್ವರ್ಗಕ್ಕಿಂತಲೂ ಶ್ರೇಷ್ಠ ಎಂಬ ಮಾತಿನಲ್ಲಿ ಸತ್ಯವಿದೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಭಗವತ್ಪಾದರು ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ಧರ್ಮಸಭೆಯ ಸಾನಿಧ್ಯ ವಹಿಸಿ ಮಾತನಾಡಿದರು.ನಮ್ಮ ಆಚಾರ, ವಿಚಾರ, ಸಂಸ್ಕಾರ, ಸಂಸ್ಕೃತಿಗೆ ಮೂಲ ಕಾರಣವೇ ನಮ್ಮ ಜನ್ಮಭೂಮಿ. ಭಾರತೀಯ ಪರಂಪರೆಯಲ್ಲಿ ಪಂಚ ಪೀಠಗಳು ಹಾಗೂ ಶಂಕರಾಚಾರ್ಯರಿಂದ ಸ್ಥಾಪಿತವಾದ ನಾಲ್ಕು ಮಠಗಳಿಗೆ ವಿಶೇಷ ಸ್ಥಾನಮಾನಗಳಿವೆ ಎಂದು ಧರ್ಮ, ಪೀಠ, ಮಠಗಳ ಕುರಿತು ವ್ಯಾಖ್ಯಾನಿಸಿ, ಜೀವನದಲ್ಲಿ ಮಾತನಾಡುವುದಕ್ಕಿಂತ ಕಾರ್ಯ ಮಾಡುವುದೇ ಮುಖ್ಯ ಎಂದರು.ಹಂಪಿಸಾವಿರದೇವರಮಠದ ವಾಮದೇವಶ್ರೀಗಳು ಮಾತನಾಡಿ, ಪುಣ್ಯ ಅಧ್ಯಯನದಿಂದ ಬರಲಾರದು, ಇದು ಮಹಾತ್ಮರ ದರ್ಶನದಿಂದ ಬರಬಲ್ಲದು. ಪಂಚ ತತ್ವಗಳ ಆಧಾರದ ಮೇಲೆ ಹುಟ್ಟಿದ ಪೀಠಗಳು ಮಾನವ ಕಲ್ಯಾಣ ಬಯಸುತ್ತವೆ. ಆಧ್ಯಾತ್ಮೀಕ ವಿಚಾರಗಳನ್ನು ಅರಿತು ನಾವು ಅಂತರಂಗದಿಂದ ಬದಲಾಗಬೇಕು ಎಂದರು.ಆಲಮೇಲ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರಶ್ರೀ ಹಾಗೂ ಸ್ಥಳೀಯ ಜಡಿಮಠದ ಜಡಿಸಿದ್ಧೇಶ್ವರಶ್ರೀ ಮಾತನಾಡಿದರು.ಧರ್ಮಸಭೆಗೆ ಆರಂಭಕ್ಕೂ ಮುನ್ನ ಕೇದಾರ ಜಗದ್ಗರುಗಳನ್ನು ಮೆರವಣಿಗೆ ಕುಂಭ ಕಳಶ ಹೊತ್ತ ಮುತೈದೆಯರೊಂದಿಗೆ ಪಂಚಾಚಾರ್ಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ವಂದಾಲ ಗ್ರಾಮದ ಮಡಿವಾಳಪ್ಪ ಹಂದಿಗನೂರ ಕುಟುಂಬಕ್ಕೆ ಸೇರಿದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದು ಸುಮಾರು ೨ ಎಕರೆ ಕಬ್ಬು ಸುಟ್ಟು ಭಸ್ಮವಾದ ಘಟನೆ ಬುಧವಾರ ಜರುಗಿದೆ.ಗ್ರಾಮದ ಸರ್ವೇ ನಂ.೬೭/೨ಬಿ ರಲ್ಲಿ ೩ ಎಕರೆಯಲ್ಲಿ ಬೆಳೆಯಲಾದ ಕಬ್ಬು ಬೆಳೆಯಲ್ಲಿ ೨ ಎಕರೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಹಾನಿಗೀಡಾಗಿದೆ. ಕಬ್ಬು ಬೆಳೆಗೆ ಬೆಂಕಿ ತಗುಲಿದ ಸುದ್ದಿ ತಿಳಿದು ಸುತ್ತಮುತ್ತಲಿನ ಜಮೀನುಗಳ ರೈತರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಪ್ರಯತ್ನ ಫಲಿಸದೇ ಇದ್ದು ಕೊನೆಗೆ ತಾಳಿಕೋಟೆ ಪಟ್ಟಣದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಉಳಿದ ಕಬ್ಬನ್ನು ಉಳಿಸಿದರು. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಬ್ಬು ಕಟಾವಿಗೆ ಬಂದು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ಹೀಗಾಗಿ ವರ್ಷದ ರೈತರ ಆದಾಯಕ್ಕೆ ಕೊಳ್ಳಿ ಇಟ್ಟಂತಾಗಿದೆ. ತಾಲ್ಲೂಕಿನಾದ್ಯಂತ ಕಳೆದ ಮೂರು ವರ್ಷದಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ ಸುಟ್ಟು ಹೋಗುತ್ತಿದೆ. ಇದರಿಂದ ರೈತರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ,ಮುದ್ದೇಬಿಹಾಳ ತಹಶೀಲ್ದಾರ, ಪರಿಸರ ಅಧಿಕಾರಿ ವಿವೇಕ ಅವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.೧೮ ಹಾಗೂ ೧೯ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ ೧೦ ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ವಹಿಸಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಸಕ್ತ ಸಾಲಿನ ತೋಟಗಾರಿಕೆ ಮೇಳವನ್ನು ಡಿ. ೨೧ರಿಂದ ೨೩ರವರೆಗೆ ಆಯೋಜಿಸಲಾಗಿದೆ. ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳ ನಡೆಯಲಿದ್ದು, ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೧೮೦೦-೪೨೫-೭೯೧೦ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರದ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
