Author: editor.udayarashmi@gmail.com

ಮುಸ್ಲಿಮರ ಕಲ್ಯಾಣಕ್ಕೆ ರೂ.10,000 ಕೋಟಿ ಘೋಷಣೆ | ಆಡಳಿತ-ವಿರೋಧ ಪಕ್ಷದ ಸದಸ್ಯರ ತೀವ್ರ ವಾಕ್ಸಮರ | ಬಿಜೆಪಿ ಸದಸ್ಯರಿಂದ ಸಭಾತ್ಯಾಗ | ಬೆಳಗಾವಿ: ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂ.10 ಸಾವಿರ ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬುಧವಾರ ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿತು.ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು, ಅಧಿವೇಶನ ನಡೆಯುವಾಗ ಸಿಎಂ ಈ ರೀತಿ ಅನುದಾನ ಘೋಷಣೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಮುಖ್ಯಮಂತ್ರಿಗಳು ವಿವರಣೆ ನೀಡಬೇಕು ಎಂದು ಆಗ್ರಹಿಸಿದರು.ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು, ಮುಸ್ಲಿಂ ಸಮಾವೇಶದಲ್ಲಿ ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ. ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು.ರೈತರಿಗೆ…

Read More

ವಿಜಯಪುರ: ದೇವರ ಹಿಪ್ಪರಗಿ ತಾಲೂಕಿನ ನಿವಾಳಖೇಡ ಗ್ರಾಮದ ನಿವಾಸಿ ೨೨ ವರ್ಷ ವಯಸ್ಸಿನ ಶೃತಿ ತಂದೆ ಹಣಮಂತ ಮೇಲಿನಮನಿ ಎಂಬ ಮಹಿಳೆ ದಿನಾಂಕ:೨೪-೧೧-೨೦೨೩ ರಿಂದ ಕಾಣೆಯಾಗಿರುವ ಕುರಿತು ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ ಮಾಡಿಕೊಳ್ಳಲಾಗಿದೆ.ಕಾಣೆಯಾದ ಮಹಿಳೆಯು ೪ ಫೂಟ್ ೪ ಇಂಚು ಎತ್ತರ, ಕೋಲು ಮುಖ, ಚೂಪು ಮೂಗು, ಮೈಯಿಂದ ಸಾಧಾರಣ, ಸಾದಗೆಂಪು ಮೈ ಬಣ್ಣ,ಕರಿ ಕೂದಲು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಿದ್ದು, ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಚೂಡಿದಾರ ಟಾಪ ಹಾಗೂ ಬಿಳಿ ಬಣ್ಣದ ಲೆಗಿನ್ಸ್ ಧರಿಸಿರುತ್ತಾಳೆ. ಈ ಚಹರೆಪಟ್ಟಿಯುಳ್ಳ ಮಹಿಳೆ ಪತ್ತೆಯಾದಲ್ಲಿ ಸಾರ್ವಜನಿಕರು ಸಿ.ಪಿ.ಐ ವಿಜಯಪುರ ಗ್ರಾಮೀಣ ವೃತ್ತ ದೂ: ೦೮೩೫೨-೨೫೧೨೧೭, ದೇವರ ಹಿಪ್ಪರಗಿ ಪೊಲೀಸ್ ಠಾಣೆ ಸಂಖ್ಯೆ: ೦೮೪೨೪೨೮೩೦೩೩ ಕಂಟ್ರೋಲ್ ರೂಂ ನಂ.೦೮೩೫೨೨೫೦೮೪೪ ಸಂಖ್ಯೆಗೆ ಮಾಹಿತಿ ನೀಡುವಂತೆ ಠಾಣೆಯ ಪೊಲೀಸ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಿ.೮ ರಿಂದ ೧೪ರವರೆಗೆ ಜರುಗುವ ಅರಕೇರಿಯ ಶ್ರೀ ಅಮೋಘಸಿದ್ದ ದೇವರ ಜಾತ್ರೆ ಹಾಗೂ ಗುಡ್ಡಾಪುರದ ಶ್ರೀ ದಾನಮ್ಮದೇವಿ ಜಾತ್ರೆಗೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಅರಕೇರಿ ಹಾಗೂ ಗುಡ್ಡಾಪುರಕ್ಕೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ-೧ ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ವಿಜಯಪುರ-೩ ಮೊ: ೭೭೬೦೯೧೪೦೦೮, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ದೂ:೦೮೩೫೨-೨೫೧೩೪೪ ಹಾಗೂ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸುವಂತೆ…

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿಜಯಪುರ ನಗರದ ಅಲ್ಲಾಪುರ ತಾಂಡಾ ಹತ್ತಿರ ಸಿಂದಗಿ ರಸ್ತೆ (ಉಕ್ಕಲಿಗೆ ಹೋಗುವ ರಸ್ತೆ)ಯ ವೃತ್ತಕ್ಕೆ ಶ್ರೀ ಸೇವಾಲಾ ಮಹಾರಾಜ ವೃತ್ತವೆಂದು ನಾಮಕರಣ ಮಾಡಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಲಾಗಿದೆ.ಸದರಿ ಠರಾವಿನ ಕುರಿತು ಸಾರ್ವಜನಿಕರಲ್ಲಿ ಆಕ್ಷೇಪಣೆಗಳಿದ್ದಲ್ಲಿ ಈ ಪ್ರಕಟಣೆಯ ೩೦ ದಿನಗಳೊಳಗಾಗಿ ತಮ್ಮ ಆಕ್ಷೇಪಣೆಗಳನ್ನು ಮಹಾನಗರ ಪಾಲಿಕೆಗೆ ಸಲ್ಲಿಸುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮುಖಂಡರು ಭಾಗವಹಿಸಿದ್ದರು.

Read More

ವಿಜಯಪುರ: ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ೨೦೨೪ರ ಅಂಗವಾಗಿ ವಿಜಯಪುರ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರ,ಹಿಟ್ನಳ್ಳಿ ಫಾರ್ಮದಲ್ಲಿ ಡಿಸೆಂಬರ್ ೧೪ ರಂದು ಏರ್ಪಡಿಸಲಾಗಿದೆ.ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕಾಗಿ ಜಿಲ್ಲೆಯಿಂದ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಸಿರಿ ಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಡಿಸೆಂಬರ್ ೧೩ರೊಳಗಾಗಿ ವಿಜಯಪುರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ದೂರವಾಣಿ ೯೧೦೮೧೫೧೭೮೬ ಸಂಖ್ಯೆಗೆ ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಸಹಾಯಕ ನಿರ್ದೇಶಕರ ಕಚೇರಿಯಲ್ಲಿರುವ ಹಳೆಯ ನಿರುಪಯುಕ್ತ ಸಾಮಗ್ರಿಗಳು ಹಾಗೂ ಹಳೆಯ ದಿನಪತ್ರಿಕೆಗಳನ್ನು ವಿಲೇವಾರಿ ಮಾಡಲಾಗುತ್ತಿದೆ.ಆಸಕ್ತ ಸಂಸ್ಥೆಗಳು ದಿನಾಂಕ : ೧೧-೧೨-೨೦೨೩ರ ಸಂಜೆ ೫ ಗಂಟೆಯೊಳಗಾಗಿ ದರಪಟ್ಟಿಗಳನ್ನು ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಹಿಂಭಾಗ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಅವಶ್ಯಕತೆ ಇದೆ ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷರಾದ ಸುರೇಶ ದೇಸಾಯಿ ಅಭಿಪ್ರಾಯಪಟ್ಟರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ವಿವೇಕನಗರದ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ಆಯೋಜಿಸಿದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಬೆಳಕಿಗೆ ತರಲು ಶಿಕ್ಷಕರು ಹಾಗೂ ಪೋಷಕರು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ.ಬಿರಾದಾರ, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಇ.ಜಿ.ಬಿರಾದಾರ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎಲ್.ಬಿ.ಶೇಖ ಮಾಸ್ತರ ಭಾಗವಹಿಸಿದ್ದರು. ಪ್ರಾಸ್ತಾವಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಮಾತನಾಡಿ, ಸ್ವಾಗತಿಸಿದರು. ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ವಿಜಯಪುರದ ಕುಮಾರಿ ಸುಮಯ್ಯಾ ಶೇಖ ಇವರಿಂದ ಹಿಂದೂಸ್ತಾನಿ…

Read More

ಸಿಂದಗಿ: ಪಟ್ಟಣದ ಎಚ್.ಜಿ. ಪದವಿ-ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಚ್.ಜಿ. ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಭಾರತದ ಸಂವಿಧಾನ ನಿರ್ಮಾತೃ, ಭಾರತರತ್ನ, ಡಾ.ಬಿ.ಆರ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನವನ್ನು ಆಚರಣೆ ಮಾಡಲಾಯಿತು.ಈ ವೇಳೆ ಡಾ.ಅರವಿಂದ ಮನಗೂಳಿ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ. ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ. ಮಕ್ಕಳ ಸಾಹಿತಿ ರಾ.ಸಿ. ವಾಡೇದ, ದಲಿತ ಮುಖಂಡ ಅಶೋಕ ಸುಲ್ಪಿ. ಉಪನ್ಯಾಸಕಿ ಹೇಮಾ ಹಿರೇಮಠ, ಮುಕ್ತಾಯಕ್ಕ ಕತ್ತಿ, ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ, ಕೋಶಾಧ್ಯಕ್ಷ ಖಾದರ ವಾಲೀಕಾರ. ಪದಾಧಿಕಾರಿ ಶಾಂತಪ್ಪ ರಾಣಾಗೋಳ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More