Author: editor.udayarashmi@gmail.com

ಸಿಂದಗಿ: ಪಟ್ಟಣದ ಸಾರಂಗಮಠವು ನಿರಂತರವಾಗಿ ಸಮಾಜಕ್ಕೆ ಮಾದರಿಯಾಗುವ ಮತ್ತು ಸಂದೇಶ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರದಂದು ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ ಸಿಂದಗಿ ವತಿಯಿಂದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿಗಳ ೧೩೦ನೆಯ ಜಯಂತೋತ್ಸವ ನಿಮಿತ್ಯವಾಗಿ ಹಮ್ಮಿಕೊಂಡ ಶಿವಶರಣೆಯರ ಜೀವನ ವಚನಾಮೃತ ಪ್ರವಚನದಲ್ಲಿ ಶತಮಾನಕಂಡ ಸಿಂದಗಿ ಗಣ್ಯ ವರ್ತಕರಿಗೆ ಹಾಗೂ ಗಣ್ಯ ಹಿರಿಯರಿಗೆ ನಡೆದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರಂಗಮಠವು ಕಳೆದ ೫೦ ವರ್ಷಗಳಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಒಂದು ವ್ಯಾಪಾರವನ್ನು ಶತಮಾನದ ಅಂಚಿನವರೆಗೂ ತೆಗೆದುಕೊಂಡು ಹೋಗುವುದು ಎಂದರೆ ಕಷ್ಟ. ಆದರೆ ಸಿಂದಗಿ ನಗರದಲ್ಲಿ ವಾರದ, ಕುಲಕರ್ಣಿ, ಪೋರವಾಲ್, ಕಮತಗಿ ಹಾಗೂ ಗೋಲಾ ಕುಟುಂಬಗಳು ಶತಮಾನ ಕಂಡಿರುವುದು ಶ್ಲಾಘನೀಯ ಎಂದರು.ಈ ವೇಳೆ ಸನ್ಮಾನ ಸ್ವೀಕರಿಸಿದ ಗಣ್ಯವರ್ತಕ ನೆಹರೂ ಪೋರವಾಲ್ ಮಾತನಾಡಿದರು.ಬಳಿಕ ಅಶೋಕ ವಾರದ, ಶಿವಪ್ಪಗೌಡ ಬಿರಾದಾರ ಮಾತನಾಡಿದರು.ಈ ವೇಳೆ…

Read More

ವಿಜಯಪುರ: ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದು ಈ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಕುರಿತು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತವನ್ನು ಇಡೀ ದೇಶವೇ ಮೆಚ್ಚಿದೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಪ್ರತಿಪಕ್ಷಗಳು ಬಿಜೆಪಿ ಹಾಗೂ ಪ್ರದಾನಿ ಮೋದಿ ಕುರಿತು ಎಷ್ಟೇ ಅವಹೇಳನಕಾರಿಯಾಗಿ ಮಾತನಾಡಿದರೂ ಜನತೆ ಅದನ್ನು ಗಣನೆಗೆ ತೆಗೆದುಕೊಳ್ಳದೇ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು.ಈ ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಡಾ.ಗೌತಮ್ ಚೌಧರಿ ವ್ಯಕ್ತಪಡಿಸಿದರು.

Read More

ಇಂಡಿ: ಪಂಚ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂಡಿ ಮಂಡಲ ಬಿಜೆಪಿ ಕಾರ್ಯಕರ್ತರು ಭಾನುವಾರ ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸು ಗೌಡ ಬಿರಾದಾರ, ಬಿಜೆಪಿ ಮುಖಂಡ ಅನಿಲ ಜಮಾದಾರ ಮಾತನಾಡಿ, ಈ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ.ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಈ ಬಾರಿ ರಾಜ್ಯದ ಲೋಕಸಭೆ ಚುನಾವಣೆಯಲ್ಲಿಯೂ ಸಹ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ವಿಶ್ವದಲ್ಲಿಯೇ ಭಾರತ ದೇಶಕ್ಕೆ ಅತ್ಯುತ್ತಮ ಮನ್ನಣೆ ಸಿಕ್ಕಿದೆ ಇಂತಹ…

Read More

ಇಂಡಿ: ಆಟೋ, ಟಮ್ ಟಮ್ ನಿಲುಗಡೆಗೆ ಸ್ಥಳಾವಕಾಶವನ್ನು ಮಾಡಿಕೊಡಿ ಎಂದು ಅಟೋ ಚಾಲಕರ‌ ಮತ್ತು ಮಾಲಕರ ಸಂಘದವರು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಅಟೋ ಮತ್ತು ಟಮ್ ಟಮ್ ನಿಲುಗಡೆಗೆ ಎಲ್ಲಿಯೂ ಸ್ಥಳಾವಕಾಶವಿಲ್ಲ. ಆದ್ದರಿಂದ ಪ್ರತಿನಿತ್ಯ ಬರುವ ಸಾವಿರಾರು ಪ್ರಯಾಣಿಕರಿಗೆ ಮತ್ತು ಅಟೋ, ಟಮ್ ಟಮ್ ಚಾಲಕರಿಗೆ ಸಮಸ್ಯೆಯಾಗುತ್ತಿದೆ.ಜಿಲ್ಲೆ ಮತ್ತು ನೆರೆ ಮಹಾರಾಷ್ಟ್ರ ರಾಜ್ಯದಿಂದ ಬರುವ ನಿತ್ಯದ ಪ್ರಯಾಣಿಕರಿಗೆ ಜನಸ್ನೇಹಿಯಾಗಿ ಅವರ ಸ್ಥಳಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದೆವೆ. ಆದ್ದರಿಂದ ದೂರದ ಊರಿನ ಪ್ರಯಾಣಿಕರ ಸಹಕಾರಕ್ಕೆ ಮತ್ತು ವಾಹನ ಚಾಲಕರ ಸಮಸ್ಯೆ ತಪ್ಪಿಸಲು, ಪಟ್ಟಣದ ಬಸ್ ನಿಲ್ದಾಣ ಎದುರುಗಡೆ ಹಾಗೂ ಮಹಾವೀರ ವೃತದಲ್ಲಿ ಆಟೋ ಮತ್ತು ಟಮ್ ನಿಲುಗಡೆಗೆ ಸ್ಥಳಾವಕಾಶ ಮಾಡಕೊಡಬೇಕೆಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಅಟೋ ಚಾಲಕರ ಸಂಘದ ಅಧ್ಯಕ್ಷ ಖಾಜಾಸಾಹೇಬ ಬಾಗವಾನ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮದರಕಂಡಿ, ರೈಸ್ ಅಷ್ಟೇಕರ್, ಇಸಾಕ ಎಕ್ಕವಾಲೆ, ಸಿದ್ರಾಮ ಹೊಸಮನಿ, ನರಸಪ್ಪ ಬಜಂತ್ರಿ, ಮಹೇಶ…

Read More

ವಿಜಯಪುರ: ಬಿ.ಎಲ್.ಡಿ.ಇ ಡಿಯು- ಡೆಕಾ ಲೇಸರ್ ಅಕ್ಯಾಡೆಮಿಯನ್ನು ಅಂತಾರಾಷ್ಟ್ರೀಯ ಸಂಸ್ಥೆಯನ್ನಾಗಿ ಮಾಡಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ನಗರದ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ್ ನಲ್ಲಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಬಿ.ಎಲ್.ಡಿ.ಇ ಡಿಯು- ಡೆಕಾ ಲೇಸರ್ ಅಕ್ಯಾಡೆಮಿ ಉದ್ಘಾಟಿಸಿ ಅವರು ಮಾತನಾಡಿದರು.ಇಟಲಿ ಮೂಲದ ಡೆಕಾ ಲೇಸರ್ ಕಂಪನಿ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ಚರ್ಮರೋಗ ವಿಭಾಗದ ಸಹಯೋಗದಲ್ಲಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಈ ಅಕ್ಯಾಡೆಮಿ ಆರಂಭವಾಗಿದೆ. ಡಾ ಅರುಣ ಚಂ.ಇನಾಮದಾರ ಅವರು ಆರೋಗ್ಯ ಕ್ಷೇತ್ರದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿಯನ್ನು ವಿಶ್ವಕ್ಕೆ ಪಸರಿಸುವ ಕೆಲಸ ಮಾಡಿದ್ದಾರೆ. ಈ ಅಕ್ಯಾಡೆಮಿ ಸ್ಥಾಪನೆಯಿಂದ ಉಭಯ ದೇಶಗಳ ಮಧ್ಯೆ ಚರ್ಮರೋಗ ಮತ್ತು ಲೇಸರ್ ತಂತ್ರಜ್ಞಾನದ ಬಳಕೆಯ ಬಗ್ಗೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಹೊಸ ಸಂಶೋಧನೆಯ ಜೊತೆಗೆ ರೋಗಿಗಳಿಗೆ ಉಪಯುಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಇದರ ಕಾರ್ಯವ್ಯಾಪ್ತಿಯನ್ನು ಅಂತಾರಾಷ್ಟ್ರಿಯ…

Read More

ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ, ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.ಕಿಸಾನ್…

Read More

ನಿಡಗುಂದಿ: ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮ ಸಮಾಜವನ್ನು ನಿರ್ಮಿಸುವಲ್ಲಿ ನಾಟಕಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅಭಿಪ್ರಾಯಪಟ್ಟರು.ಪಟ್ಟಣದ ಆರಾಧ್ಯ ದೇವಿ ತಾಯಿ ಬನಶಂಕರಿ ದೇವಿ ಜಾತ್ರೆಯ ಅಂಗವಾಗಿ ಶನಿವಾರ ರಾತ್ರಿ ಬನಶಂಕರಿ ಯುವಕ ಮಂಡಳ ಹಮ್ಮಿಕೊಂಡಿದ್ದ “ತಾಳಿ ಹರಿಯಲಿಲ್ಲ, ಶೀಲ ಉಳಿಯಲಿಲ್ಲ’ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು.ಸಮ, ಶ್ರಮ ಸಂಸ್ಕೃತಿಯ ಹರಿಕಾರರು, ತಮ್ಮ ಬೆವರಿನ ಹನಿಯಿಂದಲೇ ಇಡೀ ಸಮಾಜದ ಜನರ ಮಾನ ಮುಚ್ಚುವ ಬಟ್ಟೆ ನೇಯ್ಗೆಯ ಕಾಯಕದ ದೇವಾಂಗ ಸಮಾಜದ ಕಾರ್ಯನಿಷ್ಠೆ ಶ್ಲಾಘನೀಯ ಎಂದರು. ಎರಡು ದಿನ ಪ್ರದರ್ಶನಗೊಳ್ಳುತ್ತಿರುವ ಈ ಸಾಮಾಜಿಕ ನಾಟಕದಲ್ಲಿ ಶಿಕ್ಷಕರೇ ಹೆಚ್ಚಿನ ಸಂಖ್ಯೆಯ ಪಾತ್ರಧಾರಿಯಾಗಿರುವುದು ಸಂತಸದ ಸಂಗತಿ ಎಂದರು.ನಾಟಕಗಳು ಮನರಂಜನೆಯಲ್ಲ, ಅಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತಿವೆ, ಆಧುನಿಕ ನಾಟಕಕಾರಗಳು ಬರೆದಿರುವ ನಾಟಕಗಳು ಕೂಡಾ ಗ್ರಾಮೀಣ ಭಾಗದಲ್ಲಿ ಕಲಾ ಆಸಕ್ತರು ಪ್ರಸಾರ ಮಾಡಿ ಕನ್ನಡತನದ ಶಕ್ತಿ ಇನ್ನಷ್ಟು ಹೆಚ್ಚಿಸಬೇಕು ಎಂದರು.ನಿಡಗುಂದಿಯ ರುದ್ರೇಶ್ವರ…

Read More

ಆಲಮಟ್ಟಿ: ಕ್ರಿಸ್ತಪೂರ್ವದಿಂದಲೂ ಅಸ್ತಿತ್ವದಲ್ಲಿದ್ದ ಸನಾತನ ಧರ್ಮದಲ್ಲಿ “ಮೇಲು-ಕೀಳು’ ಎಂಬ ಕೆಟ್ಟ ವ್ಯವಸ್ಥೆ ಇತ್ತು, ಮುಂದೆ ರಾಜರ ಕಾಲದಲ್ಲಿಯೂ ಒಂದೇ ಧರ್ಮ ಪೋಷಿಸಲ್ಪಟ್ಟಿತು, ಒಟ್ಟಾರೇ ಹಿಂದಿನ ಕಾಲದಲ್ಲಿ ದಲಿತ ಜನಾಂಗಕ್ಕೆ ಅತಿ ಹೆಚ್ಚಿನ ಅನ್ಯಾಯವಾಗಿದೆ, ಪ್ರಾಣಿಗಳಿಗಿಂತಲೂ ಕಡೆಯಾಗಿದ್ದು ಸುಳ್ಳಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಸ್.ಕೆ. ಬೆಳ್ಳುಬ್ಬಿ ಅಭಿಪ್ರಾಯಪಟ್ಟರು.ಇಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯ ರಾಜ್ಯ ಸಮಿತಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಜಾಗೃತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೇಲು-ಕೀಳು ಎಂಬ ಭಾವನೆ ತೊರೆಯುವಲ್ಲಿ ಹಾಗೂ ನಾನಾ ಅನಿಷ್ಠ ಪದ್ಧತಿಗಳನ್ನು ತೊಡೆಯಲು ಶ್ರಮಿಸಿದ ಗೌತಮ ಬುದ್ಧ, ಅಣ್ಣ ಬಸವಣ್ಣ, ರಾಜಾರಾಮ ಮೋಹನರಾಯ್, ಮಹಾತ್ಮಾ ಗಾಂಧೀಜಿ, ಡಾ ಬಿ.ಆರ್. ಅಂಬೇಡ್ಕರ, ಜ್ಯೋತಿಬಾ ಫುಲೆ ಅವರ ಕಾರ್ಯ ಇತಿಹಾಸದಲ್ಲಿ ಚಿರಸ್ಥಾಯಿ. ಅಂತಹ ಮಹಾನ್ ವ್ಯಕ್ತಿಗಳ ಚಿಂತನೆ, ಹೋರಾಟದ ಫಲವಾಗಿ ದಲಿತರು ಕೂಡಾ ಸಹಬಾಳ್ವೆ, ಸಮಾನತೆಯಿಂದ ಬದುಕುತ್ತಿದ್ದಾರೆ ಎಂದರು. ಬಿಜೆಪಿ ಎಂದೂ ಸಂವಿಧಾನದ ಬದಲಾವಣೆಯ ಚಿಂತನೆಯೂ ಮಾಡಿಲ್ಲ, ಯಾರೋ ಹೇಳಿದ್ದು,…

Read More

ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ | ಸಾರ್ವತ್ರಿಕ ಚುನಾವಣೆಯ ಸೆಮಿಫೈನಲ್ | ಬಿಜೆಪಿ, ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆ ಬೆಂಗಳೂರು: ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ಈ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಇದೆ. ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ ಎಂದು ಹೇಳಿವೆ.ಮಧ್ಯಪ್ರದೇಶದ 230, ಛತ್ತೀಸ್‌ಗಢದ 90, ತೆಲಂಗಾಣದ 119 ಮತ್ತು ರಾಜಸ್ಥಾನದ 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಭಾನುವಾರ ಬೆಳಗ್ಗೆ 8 ಗಂಟೆಗೆ ಬಿಗಿ…

Read More