Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಎಎ ಗೆ ಮಮತಾ ಬ್ಯಾನರ್ಜಿ ವಿರೋಧ | ಪೌರತ್ವ ತಿದ್ದುಪಡಿ ಕಾಯ್ದೆ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧ ಕೋಲ್ಕತ್ತಾದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಠನೆ ಬೆಂಗಳೂರು: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನುತರಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.ಇದಲ್ಲದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ, ಒಳ ನುಸುಳುವಿಕೆ ವಿಚಾರದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ.ಇಲ್ಲಿ ನೆರೆದಿರುವ ಜನಸ್ತೋಮವನ್ನು ನೋಡಿದರೆ ಇದು ಬಿಜೆಪಿಯ ಪರ ಜನರ ಒಲವನ್ನು ಸೂಚಿಸುತ್ತದೆ. 2026ರಲ್ಲಿ…
ಮುದ್ದೇಬಿಹಾಳ: ಪಟ್ಟಣದ ಹಳೆಯ ಕಾಯಿಪಲ್ಲೆ ಮಾರುಕಟ್ಟೆಯಲ್ಲಿರುವ ಖಾಸ್ಗತೇಶ್ವರ ಮಠದಲ್ಲಿ ನ.೩೦ ರಂದು ಸಂಜೆ ೫ಕ್ಕೆ ಕಾರ್ತಿಕ ಕಿರಣ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಜರುಗಲಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಇಂಗಳೆಶ್ವರದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದು, ಇಟಗಿಯ ಭೂಕೈಲಾಸ ಮೇಲ್ಗದ್ದುಗೆಯ ಡಾ.ಗುರುಶಾಂತವೀರ ಶಿವಾಚಾರ್ಯರು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಬಾಗೇವಾಡಿಯ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು, ಮುದ್ದೇಬಿಹಾಳದ ಖಾಸ್ಗತೇಶ್ವರ ಮಠದ ಸಂಗಯ್ಯ ಸ್ವಾಮಿಗಳು ವಹಿಸಲಿದ್ದು, ಉದ್ಘಾಟಕರಾಗಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಯಶಸ್ವಿನಿ ಸಾಮಾಜಿಕ ಮಹಿಳಾ ಸೇವಾ ಸಂಘದ ಸಿದ್ದಮ್ಮ ಒಣರೊಟ್ಟಿ ಆಗಮಿಸಲಿದ್ದು, ಅಕ್ಕನ ಬಳಗದ ಗೌರಮ್ಮ ನಿಡಗುಂದಿಮಠ, ಸಾಧನಾ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಬೋರಮ್ಮ ರಾಂಪೂರ ಉಪಸ್ಥಿತರಿರಲಿದ್ದಾರೆ.ಒಕ್ಕೂಟದ ಕಾರ್ಯದರ್ಶಿ ಶಶಿಕಲಾ ಕೆಂಧೂಳಿ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು..*ತಾಯಿ ಭಾಷೆಯ ಉಳಿವಿಗಾಗಿ..*ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು ಮಾಡಬಹುದಾದ ಕೆಲವು ಕರ್ತವ್ಯಗಳು ನನಗೆ ತಿಳಿದಂತೆ..೧) ಇನ್ನು ಮುಂದೆ ಕನ್ನಡದ ಯಾವುದೇ ಪೋಷಕರಿಗೆ ಹುಟ್ಟುವ ಮಕ್ಕಳಿಗೆ ಪರಂಪರಾನುಗತವಾಗಿ ಬೆಳೆದು ಬಂದ ಕನ್ನಡ ನೆಲಕ್ಕೆ ಹೆಚ್ಚು ಹತ್ತಿರದ ಮುದ್ದಾದ” ಹೆಸರುಗಳನ್ನು ” ಆಯ್ಕೆ ಮಾಡಿಕೊಂಡು ನಾಮಕರಣ ಮಾಡುವುದು. ಅದರಿಂದಾಗಿ ಕನ್ನಡದ ಘಮಲು ಸದಾ ಪಸರಿಸುತ್ತಿರುತ್ತದೆ..೨) ಒಂದು ವೇಳೆ ಅನಿವಾರ್ಯವಾಗಿ ಮತ್ತು ಅವಶ್ಯಕತೆಗಾಗಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು ಸಹ ಮನೆಯಲ್ಲಿ ಎಲ್ಲರೂ ಸಂಪೂರ್ಣ ಅಚ್ಚ ಕನ್ನಡದಲ್ಲಿ ಮಾತನಾಡುವುದು. ಏಕೆಂದರೆ ಈಗ ಭಾಷಾ…
ವಿಜಯಪುರ: ‘ವಿಶ್ವ ಏಡ್ಸ್’ ದಿನದ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಜಿಲ್ಲಾಸ್ಪತ್ರೆ , ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್ ಎಸ್ ಘಟಕಗಳು, ರೆಡ್ ರಿಬ್ಬನ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ನ.೩೦ರಂದು ಜಾಥಾ, ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯಗಳು ಮುನ್ನಡೆಯಲಿ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆನ.೩೦ರಂದು ಸಂಜೆ ೬ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತದವರೆಗೆ ದೀಪ ನಡಿಗೆ (ಕ್ಯಾಂಡಲ್ ಮಾರ್ಚ್) ಜಾಥಾ ಹಾಗೂ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು. ಡಿ.೧ರಂದು ಬೆಳಿಗ್ಗೆ ೮.೩೦ಕ್ಕೆ ಕೇಂದ್ರ ಬಸ್ ನಿಲ್ದಾಣದಿಂದ ಜೋಡ ಗುಮ್ಮಟ,ಮೀನಾಕ್ಷಿ ಚೌಕ,ಗಾಂಧಿ ವೃತ್ತ ಮಾರ್ಗವಾಗಿ ಸಂತ ಅನ್ನಮ್ಮಾ ದೇವಾಲಯ (ಚರ್ಚ್)ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂತ ಅನ್ನಮ್ಮಾ ದೇವಾಲಯ (ಚರ್ಚ್)ನಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.ಈ ಜಾಥಾ ಹಾಗೂ ಕಾರ್ಯಕ್ರಮದಲ್ಲಿ…
ವಿಜಯಪುರ: ವಿಜಯಪುರ ಜಿಲ್ಲೆಯು ೨೦೨೨ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾಗಿದ್ದ ಗುರಿಯನ್ನು ಸಾಧಿಸಿದ ಹಿನ್ನಲೆಯಲ್ಲಿ ಡಿಸೆಂಬರ್ ೭ ರಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳ ಟಿ.ಭೂಬಾಲನ್ ಅವರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೌರವಾನ್ವಿತ ರಾಜ್ಯಪಾಲರಿಂದ ಪ್ರೊತ್ಸಾಹಕ ಪಾರಿತೋಷಕ ಸ್ವೀಕರಿಸಲಿದ್ದಾರೆ.ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾದ ಗುರಿ ಸಾಧಿಸಿರುವುದರಿಂದ ಈ ನಿಧಿಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಅಮೂಲ್ಯ ನೆರವು ನೀಡಲಿದ್ದು, ಜಿಲ್ಲೆಯ ಕೊಡುಗೆಯನ್ನು ಪ್ರಶಂಸಿಸುವ ಉದ್ದೇಶದಿಂದ ಪ್ರೋತ್ಸಾಹಕ ಪಾರಿತೋಷಕವನ್ನು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
೨೪ ಗಂಟೆಯೊಳಗೆ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ವಹಿಸಿ | ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ರಾಜ್ಯಾದ್ಯಂತ ಬರಗಾಲ ಘೋಷಣೆಯಾಗಿದೆ. ವಿಜಯಪುರ ಜಿಲ್ಲೆಯ ೧೩ ತಾಲೂಕುಗಳನ್ನು ಬರ ಘೋಷಿಸಲಾಗಿದೆ. ಬರ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಸಮಸ್ಯೆ ಬಂದ ೨೪ ಗಂಟೆಯೊಳಗೆ ಕುಡಿಯುವ ನೀರು ಪೂರೈಸಲು ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಮೇವಿಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ೪೬ ಕೋಟಿ ರೂ. ಹಾಗೂ ತಹಶೀಲ್ದಾರ ಖಾತೆಯಲ್ಲಿ ೪.೫ ಕೊಟಿ ರೂ. ಒದಗಿಸಲಾಗಿದೆ. ಜಿಲ್ಲೆಯ ೬ ಕಡೆ ಟ್ಯಾಂಕರ್ ಮತ್ತು ಬಾಡಿಗೆ ಬೊರವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.ಸರ್ಕಾರ ತಾಲೂಕಾ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನೆಗೆ ಆದೇಶ ನೀಡಿದ್ದು, ಪಂಚಾಯತಿ ಮಟ್ಟದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಗ್ರಾಮಾಧಿಕಾರಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ…
ಸಿಂದಗಿ: ತಾಲೂಕಿನ ಪುರದಾಳ ಗ್ರಾಮದಲ್ಲಿ ಸದ್ಗುರು ಯಮನೂರೇಶ ಶರಣರ ಸ್ಥಾಪಿತ ಬ್ರಹ್ಮಜ್ಞಾನಿ ಶ್ರೀ ಭೀಮಾಶಂಕರ ಮಹಾರಾಜರ ೩೯ನೆಯ ಜಾತ್ರಾ ಮಹೋತ್ಸವ, ತತ್ವಪದ ಸಂಭ್ರಮ, ಧರ್ಮಸಭೆ, ಅನುಭಾವ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸಾಹಿತಿಗಳಾದ ಮೌಲಾಲಿ ಆಲಗೂರ, ಧರು ಕಕ್ಕಳಮೇಲಿ, ಮಲ್ಲಿಕಾರ್ಜುನ ಧರಿ ಅವರಿಗೆ ಸಾಹಿತ್ಯ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆ ವೇದಿಕೆಯ ಮೇಲೆ ಜಾನಪದ ವಿದ್ವಾಂಸಕ ಡಾ.ಎಂ.ಎಂ ಪಡಶೆಟ್ಟಿ, ಸಾಹಿತಿ ಮಲ್ಲಿಕಾರ್ಜುನ ಕಡಕೋಳ, ಸಾಹೇಬಗೌಡ ಬಿರಾದಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಿಂದಗಿ: ಶಿಕ್ಷಕನಾಗ ಬಯಸುವ ಪ್ರಶಿಕ್ಷಣಾರ್ಥಿಗಳಿಗೆ ತಾಳ್ಮೆ ಹಾಗೂ ಸಂಯಮ ಮುಖ್ಯ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದಾರೆ. ಅಂತಹ ಸ್ಥಾನದಲ್ಲಿರುವ ನಾವುಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನ ಎಂಬ ಬೆಳಕನ್ನು ಚೆಲ್ಲಬೇಕು ಎಂದು ಪದ್ಮರಾಜ ಬಿ.ಈಡಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆ.ಸಿ.ನಂದಿಕೋಲ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ೨೦೨೩-೨೪ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದೀಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿಯಿಂದ ಪದವಿಯವರೆಗೆ ಒಂದು ಕಲಿಕೆಯಾದರೆ ೨ ವರ್ಷದ ಈ ಬಿ.ಈಡಿ ತರಬೇತಿ ಶಿಕ್ಷಣವು ಭಿನ್ನ ಹಾಗೂ ಸೃಜನಾತ್ಮಕತೆಯಿಂದ ಕೂಡಿರುತ್ತದೆ. ವೃತ್ತಿ ಜೀವನ ಆರಂಭಿಸುವ ಪ್ರಶಿಕ್ಷಣಾರ್ಥಿಗಳು ಸಮಾಜದಲ್ಲಿ ಪ್ರೀತಿ ಮತ್ತು ಚಾರಿತ್ರ್ಯವನ್ನು ಕಾಯ್ದುಕೊಂಡರೆ ಕಾಯಕದ ಮಹತ್ವವನ್ನು ಗುರುತಿಸಿದಂತೆ. ಶಿಕ್ಷಕ ಎಂಬ ವೃತ್ತಿ ಒಂದು ಹುದ್ದೆಯಲ್ಲ ಸುಂದರ ಸಮಾಜದ ಸೃಷ್ಠಿಕರ್ತನ ಕಾಯಕ ಎಂದರು.ಈ ವೇಳೆ ಪ್ರಾಚಾರ್ಯ ಬಿ.ಎಮ್.ಹುರಕಡ್ಲಿ ಮಾತನಾಡಿ, ಶಿಕ್ಷಕನು ಓರ್ವ ಮಾರ್ಗದರ್ಶಕ ಆತನ ಕಲಿಕೆ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿನ ಆನ್‌ಲೈನ್ ಶಿಕ್ಷಣದಿಂದ ಬಹಳಷ್ಟು ತಾಪತ್ರಯವನ್ನು ಪ್ರಶಿಕ್ಷಾಣಾರ್ಥಿಗಳ…
ಸಿಂದಗಿ: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಬೇಕಾದರೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್. ಕೋರವಾರ ಹೇಳಿದರು.ಪಟ್ಟಣದ ಜೇವರಗಿ ರಸ್ತೆಯಲ್ಲಿರುವ ಲೋಯಲ್ ಶಾಲೆಯಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ವತಿಯಿಂದ ಹಮ್ಮಿಕೊಂಡ ಚಿಣ್ಣರ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ದೇಹ ಸದೃಡವಾಗಿರಬೇಕಾದರೆ ಅವರು ಪೌಷ್ಠಿಕ ಆಹಾರ ಪಡೆಯಬೇಕು. ಅಜ್ಜ ಅಜ್ಜಿ ಹೇಳುವ ಕಥೆಗಳನ್ನು ಕೇಳಬೇಕು. ಮಗುವಿಗೆ ೬ತಿಂಗಳಿಂದ ೩ವರ್ಷದವರೆಗೆ ಸಮಯಕ್ಕನುಸಾರವಾಗಿ ಚುಚ್ಚುಮದ್ದು ಲಸಿಕೆಯನ್ನು ಹಾಕಿಸಬೇಕು. ಅದರಿಂದ ಮಗುವಿನ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದರು.ಈ ವೇಳೆ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ ಪ್ರಾಸ್ತವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ನೀರಿಕ್ಷಕ ವಿಶ್ವನಾಥ ಕೊರವಾರ, ಮಲಕಪ್ಪ ಹಲಗಿ, ರಾಜೀವ ಕುರಿಮನಿ, ವಿಜಯ ಭಂಟನೂರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಸರಕಾರಿ ಶಾಲೆಯ ಮಕ್ಕಳು, ಸಂಸ್ಥೆಯ ಸಿಬ್ಬಂದಿ ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಇದ್ದರು.
ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಲ್ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ನಾನಾ ಕ್ಷೇತ್ರಗಳಲ್ಲಿ ವಿಶಿಷ್ಠವಾದ ಸೇವೆ ಸಲ್ಲಿಸಿದ ವಿಕಲಚೇತನ ವ್ಯಕ್ತಿ/ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಠ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ ವೈಯಕ್ತಿಕ ವಿಭಾಗದಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.ಡಾ. ಕುಶಾಲ್ ಕೆ. ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ.…
