Author: editor.udayarashmi@gmail.com

ಸಿಂದಗಿ: ಪೂಜ್ಯ ಶ್ರೀ ಚೆನ್ನವೀರಸ್ವಾಮಿ ಪ್ರತಿಷ್ಠಾನ ಸಾರಂಗಮಠ-ಗಚ್ಚಿನಮಠ ಶಿವಶರಣೆರ ಜೀವನ ಚರಿತಾಮೃತ ಪ್ರವಚನ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕರಾಟೆ ಮತ್ತು ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪದ್ಮರಾಜ ಪ್ರಾಥಮಿಕ ಶಾಲೆಯ ಆಯಿಷಾ ಇಂಗಳಗೇರಿ ವಿದ್ಯಾರ್ಥಿಗೆ ಶ್ರೀಮಠದ ವತಿಯಿಂದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸನ್ಮಾನಿಸಿ ಗೌರವಿಸಿದರು.ವಿದ್ಯಾರ್ಥಿನಿಯ ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ಶಿವಾನಂದ ಸಂಗಮ ಹಾಗೂ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ, ಮುಖ್ಯಗುರು ಎಸ್.ಎಮ್. ಬಿರಾದಾರ ಸೇರಿದಂತೆ ಶಾಲೆಯ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಸಿಂದಗಿ: ಸಂಸ್ಕಾರಯುತ ಶಿಕ್ಷಣವು ತಾಯಿ ಬೇರಾಗಿದ್ದು, ಮಕ್ಕಳು ಉತ್ತಮ ಸಂಸ್ಕಾರವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಆರಕ್ಷಕಿ, ಸಾಹಿತಿ ಶೈಲಶ್ರೀ ನ್ಯಾಮಣ್ಣವರ ಹೇಳಿದರು.ಪಟ್ಟಣದ ನಾಗೂರ ಬಡಾವಣೆಯಲ್ಲಿರುವ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಅಂಗ ಸಂಸ್ಥೆಯಾದ ವಿದ್ಯಾನಿಕೇತನ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸುವರ್ಣ ಸಂಭ್ರಮದ ನಿಮಿತ್ಯವಾಗಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಪ್ರೀತಿಯಿಂದ ಪಾಠ ಬೋಧಿಸುವ ಕಾರ್ಯದ ಜೊತೆಗೆ ಸ್ನೇಹ, ಪ್ರೀತಿ, ವಾತ್ಸಲ್ಯ ಮತ್ತು ಕರುಣೆಯನ್ನು ತೋರಿಸಿ ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕೆಂದರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅಧ್ಯಕ್ಷತೆ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ಮಕ್ಕಳು ಸತತ ಅಧ್ಯಯನ ಮಾಡುವ ಮೂಲಕ ಹೆಚ್ಚು ಅಂಕಗಳನ್ನು ಪಡೆದುಕೊಂಡು ಜ್ಞಾನವಂತರಾಗಿ ಪಾಲಕರಿಗೆ ಮತ್ತು ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತರಬೇಕೆಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ. ಬುಕ್ಕಾ, ವ್ಹಿ.ಕೆ.ಚವ್ಹಾಣ ಸತೀಶ ಕುಲಕರ್ಣಿ, ರಾಜೇಶ್ವರಿ ಪಕೀರಪುರ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಬೋಧಕ ಮತ್ತು…

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಡಿ.೩ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ದಿನಾಚರಣೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ…

Read More

ಕನ್ನಡ ಮತ್ತ ಸಂಸ್ಕೃತಿ ಇಲಾಖೆಯಿಂದ ಕರ್ನಾಟಕ ಸಂಭ್ರಮ-೫೦ ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ವಿಜಯಪುರ: ನಮ್ಮ ದೇಶವು ಭವ್ಯ ಪರಂಪರೆ ಇತಿಹಾಸ ಹೊಂದಿದ ದೇಶವಾಗಿದೆ. ಜಗತ್ಪಸಿದ್ಧಿಯಾದ ನಮ್ಮ ಸಂಸ್ಕೃತಿ, ಕಲೆ, ಸಾಹಿತ್ಯ, ಜಾನಪದ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಹೇಳಿದರು.ಇಂದು ನಗರದ ಬಾಲಕೀಯರ ಸರ್ಕಾರಿ ಪದವ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಸಂಭ್ರಮ-೫೦ ಅಂಗವಾಗಿ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದ ಅವರು, ಜನಪದರು ತಮ್ಮ ದೈನಂದಿನ ಬದುಕಿನಲ್ಲಿ ಜಾನಪದ ಸೊಗಡನ್ನು ಮೈಗೂಡಿಸಿಕೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ ಲಾವಣಿ, ಹಂತಿ ಪದ, ಸಂಪ್ರದಾಯ ಪದ ಸೇರಿದಂತೆ ಅನೇಕ ಜಾನಪದ ಕಲೆಗಳೊಂದಿಗೆ ಸ್ವಚ್ಛಂದದ ಬದುಕನ್ನು ರೂಪಿಸಿಕೊಂಡಿದ್ದಾರೆ. ನಮ್ಮ ಜನಪದರ ಇಂತಹ ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಇಂದಿನ ಯುವ ಜನತೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಗುರುತರ ಹಿರಿಯ ಜವಾಬ್ದಾರಿಯಾಗಿದೆ…

Read More

ವಿಶ್ವ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಸ್ಪಷ್ಠನೆ ವಿಜಯಪುರ: ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಪಠ್ಯ ಮತ್ತು…

Read More

ವಿಜಯಪುರ: ಕರ್ನಾಟಕ ಸರ್ಕಾರದ ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನವೆಂಬರ್ ೨೯ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ ೨೯ರಂದು ಬೆಳಿಗ್ಗೆ ೧೦-೩೦ಕ್ಕೆ ವಿಜಯಪುರ ಜಿಲ್ಲೆಗೆ ಆಗಮಿಸಿ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಕೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೪ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಉಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ದಿನಾಂಕ : ೧೦-೦೧-೨೦೨೪ ಕೊನೆಯ ದಿನವಾಗಿದ್ದು, ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆ ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ದೂ:೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ದೂ:೧೯೦೨ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದಲ್ಲಿ ವಿಜಯಪುರ ನಗರದ ಮರಾಠಾ ವಿದ್ಯಾಲಯ ಬಾಲಕಿಯರ ಪ್ರೌಢಶಾಲೆಯಲ್ಲಿ ಡಿಸೆಂಬರ್ ೨ ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಸ್ಪರ್ಧಾಳು ಶಿಕ್ಷಕರು ತಮ್ಮ ಹೆಸರನ್ನು ನೊಡಲ್ ಅಧಿಕಾರಿ ಶ್ರೀಮತಿ ಎಸ್.ಎ.ಅಳ್ಳಗಿ ಅವರಲ್ಲಿ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನವೆಂಬರ್ ೩೦ ರಂದು ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ,…

Read More

ವಿಜಯಪುರ: ಬೆನ್ನುಹುರಿ ಅಪಘಾತ ವಿಕಲಚೇತನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಸೂಕ್ತ ಚಿಕಿತ್ಸೆ ಪಡೆದು, ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅಲ್‌ಅಮಿನ್ ಮೆಡಿಕಲ್ ಕಾಲೇಜ್‌ನ ಡಾ.ಜಿಲಾನಿ ಅವಟಿ ಕರೆ ನೀಡಿದರು.ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಎಪಿಸಿ ಸಂಸ್ಥೆ ವಿಜಯಪುರ ಎಚ್ ಸಿ ಎಲ್ ಫೌಂಡೇಶನ್ ಅಲ್ ಅಮಿನ್ ಮೆಡಿಕಲ್ ಕಾಲೇಜ್, ಬೆನ್ನು ಹುರು ಅಪಘಾತ ವಿಕಲಚೇತನರ ಸಂಘ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ೩ ದಿನಗಳ ಬೆನ್ನುಹುರಿ ಅಪಘಾತಕ್ಕೊಳಗಾದ ವ್ಯಕ್ತಿಗಳಿಗೆ ಆರೋಗ್ಯ ತಪಾಸಣೆ ವ್ಯಾಯಾಮ ಮತ್ತು ಉದ್ಯಮಶೀಲತೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸರ್ಕಾರದೊಂದಿಗೆ ಕೈ ಜೋಡಿಸಿ ಸಂಘ ಸಂಸ್ಥೆಗಳು ವಿಕಲಚೇತನರ ಶ್ರೇಯೋಭಿವೃಧಿಗೆ ಶ್ರಮಿಸುತ್ತಿರುವದು ಸ್ತುತ್ತ್ಯಾರ್ಹ. ಮೂರು ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಇಲ್ಲಿ ನೀಡಿದ ಸಲಹೆ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿ ದೈಹಿಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

Read More